Sunflower msp-2024: ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿಗೆ ಆದೇಶ!

ರೈತರಿಂದ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿಯನ್ನು(Sunflower msp) ಖರೀದಿ ಮಾಡಿಕೊಳ್ಳಲು ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ ಇದಕ್ಕೆ ಸಂಬಂಧಿಸಿದ ಆದೇಶದ ವಿವರವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. Sunflower msp-2024, Sunflower, suryakanti , bembala bele, msp price, Sunflower msp price, Sunflower msp price-2024, suryakanti Kharidi kendra

Sunflower msp-2024: ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿಗೆ ಆದೇಶ!
Sunflower msp-2024

ರೈತರಿಂದ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿಯನ್ನು(Sunflower msp) ಖರೀದಿ ಮಾಡಿಕೊಳ್ಳಲು ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ ಇದಕ್ಕೆ ಸಂಬಂಧಿಸಿದ ಆದೇಶದ ವಿವರವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

2024-25 ನೇ ಸಾಲಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಶೀಘ್ರದಲ್ಲಿಯೇ ಪ್ರಾರಂಭವಾಗಲಿದ್ದು ರಾಜ್ಯದ ಪ್ರಮುಖ ಜಿಲ್ಲೆಗಳಾದ ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು, ಗದಗ, ರಾಯಚೂರು, ಕೊಪ್ಪಳ, ಕಲಬುರಗಿ, ಯಾದಗಿರಿ, ಚಿತ್ರದುರ್ಗ, ಬಾಗಲಕೋಟೆ, ವಿಜಯಪುರ, ಬಳ್ಳಾರಿ, ವಿಜಯನಗರ, ಬೆಳಗಾವಿ ಜಿಲ್ಲೆಗಳ ವ್ಯಾಪ್ತಿಯಲ್ಲಿ,

ತೆರೆಯಲಾಗುವ ಖರೀದಿ ಕೇಂದ್ರಗಳಲ್ಲಿ, ಬೆಂಬಲ ಬೆಲೆ ಪ್ರತಿ ಕ್ವಿಂಟಲ್ ರೂ.7280 ರಂತೆ ಖರೀದಿಸಲಾಗುವುದು. ರೈತರು ಸೂರ್ಯಕಾಂತಿ ಮಾರಾಟ ಮಾಡಿ ಬೆಂಬಲ ಬೆಲೆ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಕೋರಲಾಗಿದೆ ಎಂದು  ಕೃಷಿ ಮಾರಾಟ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯಿಂದ ಪ್ರಕಟಣೆ ಹೊರಡಿಸಲಾಗಿದೆ.

ಇದನ್ನೂ ಓದಿ: Krishi honda-2024: ಈ ಜಿಲ್ಲೆಗಳಲ್ಲಿ ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣಕ್ಕೆ ಅರ್ಜಿ ಆಹ್ವಾನ!

Sunflower msp guidelines-ಸೂರ್ಯಕಾಂತಿ ಖರೀದಿಗೆ ಮಾರ್ಗಸೂಚಿಗಳು:

01) ಈ ಆದೇಶ ಹೊರಡಿಸಿದ ದಿನದಿಂದ ರೈತರ ನೋಂದಣಿ ಕಾಲಾವಧಿಯನ್ನು 45 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳವರೆಗೆ ನಿಗದಿಪಡಿಸಿದೆ. ನೋಂದಣಿ ಕಾರ್ಯದ ಜೊತೆಗೆ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸತಕ್ಕದ್ದು.

02) ಖರೀದಿ ಕೇಂದ್ರಗಳಲ್ಲಿ ಹೆಸರುಕಾಳನ್ನು ಖರೀದಿಸುವ ಪೂರ್ವದಲ್ಲಿ ರೈತರ ನೋಂದಣಿಯನ್ನು NIC ಸಂಸ್ಥೆಯು ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿ ಬೆಳೆಗಳ ಉತ್ಪನ್ನವನ್ನು ಖರೀದಿಸಲು ಸಿದ್ಧಪಡಿಸಿರುವ ತಂತ್ರಾಂಶವನ್ನು ಸೂಕ್ತವಾಗಿ ಉನ್ನತೀಕರಿಸಿ, ಬಯೋಮೆಟ್ರಿಕ್ ಮೂಲಕ ಹೆಸರುಕಾಳನ್ನು ಬೆಂಬಲ ಬೆಲೆ ಯೋಜನೆಯಡಿ ನೋಂದಾಯಿಸಲು ಬಳಸತಕ್ಕದ್ದು.

03) ಸದರಿ ವಿವರಗಳನ್ನು ಬೆಂಬಲ ಬೆಲೆ ಯೋಜನೆ ಯಡಿ ನೋಂದಣಿ ಮಾಡಲು ಸಿದ್ಧಪಡಿಸಿದ ತಂತ್ರಾಂಶಕ್ಕೆ ವಿದ್ಯುನ್ಮಾನ ರೀತಿಯಲ್ಲಿ ಒದಗಿಸಲಾಗುತ್ತದೆ. ಬೆಂಬಲ ಬೆಲೆ ಯೋಜನೆಯಡಿ ನೋಂದಣಿ ಮಾಡಿದ ನಂತರ NIC ತಂತ್ರಾಂಶದಿಂದ ನಾಫೆಡ್ ಹಾಗೂ ಎನ್.ಸಿ.ಸಿ.ಎಫ್ ಸಂಸ್ಥೆಯ ತಂತ್ರಾಂಶಕ್ಕೆ ರೈತರ ನೋಂದಣಿ ಮಾಹಿತಿಯನ್ನು ಒದಗಿಸಲಾಗುವುದು. 

ಇದನ್ನೂ ಓದಿ: Union Bank Recruitment 2024-ಯೂನಿಯನ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ!

04) ನಾಫೆಡ್ ಹಾಗೂ ಎನ್.ಸಿ.ಸಿ.ಎಫ್. ಸಂಸ್ಥೆಯ ತನ್ನ ತಂತ್ರಾಂಶದಲ್ಲಿ ಈ ಮಾಹಿತಿಯನ್ನು ಬಳಸಿ ರೈತರಿಂದ ಸೂರ್ಯಕಾಂತಿನ್ನು ಖರೀದಿ ಕೇಂದ್ರಗಳಿಂದ ಖರೀದಿಸತಕ್ಕದ್ದು.

05) ಖರೀದಿ ಸಂಸ್ಥೆಗಳು ಗ್ರಾಮೀಣ ಭಾಗದ ರೈತರಿಗೆ ಅನುಕೂಲವಾಗುವಂತೆ ನಾಫೆಡ್ ಹಾಗೂ ಎನ್.ಸಿ.ಸಿ.ಎಫ್. ಮಾರ್ಗಸೂಚಿಯನ್ವಯ ಹಾಗೂ ತಾಂತ್ರಿಕ ಮತ್ತು ವೈಜ್ಞಾನಿಕ ಸೌಲಭ್ಯದಿಂದ ಕೂಡಿರುವ ಗೋದಾಮುಗಳನ್ನು ಹೊಂದಿರುವ ಸದೃಡ PACS/VSSN/FPO/TAPCMS ಸಂಸ್ಥೆಗಳ ಮುಖಾಂತರ ಒಡಂಬಡಿಕೆ ಮಾಡಿಕೊಂಡು ಕ್ರಮವಹಿಸತಕ್ಕದ್ದು. ಕೇಂದ್ರಗಳನ್ನು ತೆರೆಯಲು

06) ಸೂರ್ಯಕಾಂತಿ ಖರೀದಿ ಪ್ರಕ್ರಿಯೆಯಲ್ಲಿ ಎಫ್‌ಎಕ್ಕೂ ಗುಣಮಟ್ಟದ ಪರಿಶೀಲನೆಗಾಗಿ ಜಿಲ್ಲಾಡಳಿತ ಮಟ್ಟದಲ್ಲಿ ಕೃಷಿ / ತೋಟಗಾರಿಕೆ ಇಲಾಖೆಗಳಲ್ಲಿ ಲಭ್ಯವಿರುವ ಅಧಿಕಾರಿ / ಸಿಬ್ಬಂದಿಗಳನ್ನು ಬಳಸಿಕೊಳ್ಳುವುದು, ತರಬೇತಿ ಅವಶ್ಯವಿದ್ದಲ್ಲಿ ಅಂತಹ ಸಿಬ್ಬಂದಿಗಳಿಗೆ ಸೂಕ್ತ ಎಫ್.ಎ.ಕ್ಯೂ. ಗ್ರೇಡಿಂಗ್ ತರಬೇತಿ ನೀಡಲು ಸಂಬಂಧಪಟ್ಟ ಖರೀದಿ ಸಂಸ್ಥೆಗಳು ಕ್ರಮವಹಿಸತಕ್ಕದ್ದು.

ಇದನ್ನೂ ಓದಿ: Pan card aadhar link-ಪಾನ್ ಕಾರ್ಡ್ ಸೆಪ್ಟೆಂಬರ್ ನಿಂದ ಹೊಸ ನಿಯಮ ಜಾರಿ!

07) ಬೆಂಬಲ ಬೆಲೆ ಯೋಜನೆಯ ಮಾರ್ಗಸೂಚಿಗಳಂತೆ, ರೈತರಿಗೆ ನಿಗದಿತ ಅವಧಿಯೊಳಗೆ ಖರೀದಿ ಪ್ರಮಾಣದ ಮೌಲ್ಯವನ್ನು DBT ಮೂಲಕ ಜಮೆ ಆಗುವಂತೆ ಪಾವತಿ ಮಾಡತಕ್ಕದ್ದು ಹಾಗೂ ಆವರ್ತನಿಧಿ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು.

08) ಸೂರ್ಯಕಾಂತಿ ಖರೀದಿ ಕೇಂದ್ರಗಳಲ್ಲಿ ರೈತರ ಹೆಸರಿನಲ್ಲಿ ವರ್ತಕರು ತರುವ ಸೂರ್ಯಕಾಂತಿ ಖರೀದಿಸದಂತೆ ಹಾಗೂ ಖರೀದಿ ಸಂಸ್ಥೆಗಳ ಯಾವುದೇ ರೀತಿಯ ದುರುಪಯೋಗ ಆಗದಂತೆ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸತಕ್ಕದ್ದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

09) ಪ್ರತಿ ಎಕರೆಗೆ 03 ಕ್ವಿಂಟಲ್ - ಗರಿಷ್ಠ 15 ಕ್ವಿಂಟಲ್ ವರೆಗೆ ಪ್ರತಿ ರೈತರಿಂದ ಖರೀದಿಸಲಾಗುವುದು.

10) ರೈತ ಬಾಂಧವರು ತಮ್ಮ ಹತ್ತಿರದ PACS/FPO/TAPCMS ಗಳಲ್ಲಿ ತಮ್ಮ ಎಫ್‌ ಐಡಿ ಸಂಖ್ಯೆ ನೀಡಿ ನೊಂದಣಿ ಮಾಡಿಕೊಂಡು ಸೂರ್ಯಕಾಂತಿ ಮಾರಾಟ ಮಾಡಬಹುದು.

ಇದನ್ನೂ ಓದಿ: ITBP ಕಾನ್ಸ್ಟೇಬಲ್ ಹುದ್ದೆಗಳ ಭರ್ತಿ : 819 ಹುದ್ದೆಗಳಲ್ಲಿ ಮಹಿಳೆಯರಿಗೆ 122 ಹುದ್ದೆಗಳು ಮೀಸಲು!

ಈ ಸಂಬಂಧ ಕೃಷಿ ಮಾರಾಟ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯಿಂದ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ.