Surya ghar yojana- ಪಿಎಂ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆ, ಸಹಾಯಧನ ಎಷ್ಟು? ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಇಲ್ಲಿದೆ ಸಂಪೂರ್ಣ ವಿವರ

ದೇಶದಲ್ಲಿ ಒಂದು ಕೋಟಿ ಮನೆಗಳ ಮಲ್ಛಾವಣಿಯಲ್ಲಿ ಸೋಲಾರ್ ಫಲಕಗಳನ್ನು(Surya ghar yojana) ಅಳವಡಿಸುವ 'ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ'ಯನ್ನು ಅನುಷ್ಥಾನ ಮಾಡಲಾಗುತ್ತಿದ್ದು, ನಮ್ಮ ದೇಶದ ಬಡ ಹಾಗೂ ಮಧ್ಯಮ ವರ್ಗದವರ ವಿದ್ಯುತ್​ ಬಿಲ್​ ಕಡಿಮೆ ಮಾಡುವ ನಿಟ್ಟಿನಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. PM surya ghar scheme , PM surya ghar yojana, solar, solar subsidy yojana, solar subsidy, home solar, PM surya ghar application, PM surya ghar online application, PM surya ghar scheme benefits, PM surya ghar subsidy details, ಸೋಲಾರ್, ಉಚಿತ ವಿದ್ಯುತ್ ಯೋಜನೆ,

Surya ghar yojana- ಪಿಎಂ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆ, ಸಹಾಯಧನ ಎಷ್ಟು? ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಇಲ್ಲಿದೆ ಸಂಪೂರ್ಣ ವಿವರ
Surya ghar yojan application

ದೇಶದಲ್ಲಿ ಒಂದು ಕೋಟಿ ಮನೆಗಳ ಮಲ್ಛಾವಣಿಯಲ್ಲಿ ಸೋಲಾರ್ ಫಲಕಗಳನ್ನು(Surya ghar yojana) ಅಳವಡಿಸುವ 'ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ'ಯನ್ನು ಅನುಷ್ಥಾನ ಮಾಡಲಾಗುತ್ತಿದ್ದು, ನಮ್ಮ ದೇಶದ ಬಡ ಹಾಗೂ ಮಧ್ಯಮ ವರ್ಗದವರ ವಿದ್ಯುತ್​ ಬಿಲ್​ ಕಡಿಮೆ ಮಾಡುವ ನಿಟ್ಟಿನಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

ಪಿಎಂ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆಯಡಿ(PM surya ghar scheme)ಯಾರೆಲ್ಲ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆದುಕೊಳ್ಳಬಹುದು? ಸಹಾಯಧನ ಮೊತ್ತ ಎಷ್ಟು? ಅರ್ಜಿ ಸಲ್ಲಿಸಲು ಒದಗಿಸಬೇಕಾದ ದಾಖಲೆಗಳೇನು? ಅರ್ಜಿ ಸಲ್ಲಿಸುವ ವಿಧಾನ ಹೇಗಿರುತ್ತದೆ? ಇತ್ಯಾದಿ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

ಪಿಎಂ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆಯಡಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ ವಿದ್ಯುತ್ ಉಚಿತವಾಗಿ ದೊರೆಯುತ್ತದೆ.

ಇದನ್ನೂ ಓದಿ: Student scholarship-  ವಿದ್ಯಾರ್ಥಿ ವೇತನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

PM surya ghar scheme benefits- ಘಟಕವನ್ನು ಗ್ರಿಡ್ ಗೆ ಸಂಪರ್ಕ ಮಾಡುವುದರಿಂದ ಅಗುವ ಪ್ರಯೋಜನಗಳೇನು? 

ಮನೆಯ ರೂಫ್‌ ಟಾಪ್ ಸೋಲಾರ್‌ ವ್ಯವಸ್ಥೆಯನ್ನು ಗ್ರಿಡ್‌ ಜತೆಗೆ ಸಂಪರ್ಕಿಸುವುದರಿಂದ 25 ವರ್ಷಗಳ ಕಾಲ ವಿದ್ಯುತ್‌ ಬಿಲ್‌ ಪಾವತಿಸಬೇಕಿಲ್ಲ. ಮನೆಗಳ ಮೇಲ್ಛಾವಣೆಯಲ್ಲಿ ಅಳವಡಿಸುವುದರಿಂದ ಹೆಚ್ಚುವರಿ ಜಾಗದ ಅಗತ್ಯ ಇಲ್ಲ. ನಿರ್ವಹಣೆ ವೆಚ್ಚ ಕೂಡ ತೀರಾ ಕಡಿಮೆ. ಈ ಯೋಜನೆಯೂ 2 ಕಿಲೋ ವ್ಯಾಟ್ ಸಾಮರ್ಥ್ಯದವರೆಗಿನ ವ್ಯವಸ್ಥೆಗಳಿಗೆ ಸೌರ ಘಟಕದ ವೆಚ್ಚದ 60% ಮತ್ತು 2 ರಿಂದ 3 ಕಿಲೋ ವ್ಯಾಟ್ ಸಾಮರ್ಥ್ಯದ ನಡುವಿನ ವ್ಯವಸ್ಥೆಗಳಿಗೆ ಹೆಚ್ಚುವರಿ ಸಿಸ್ಟಮ್ ವೆಚ್ಚದ 40%ರಷ್ಟು ಸಹಾಯಧನ ನೀಡಲಾಗುತ್ತದೆ.

PM surya ghar subsidy details-ಪಿಎಂ ಸೂರ್ಯಘರ್ ಯೋಜನೆ ಸಹಾಯಧನ ಮೊತ್ತವೆಷ್ಟು?

ಪಿಎಂ ಸೂರ್ಯಘರ್ ಯೋಜನೆಯಡಿ ಸೋಲಾರ್ ವ್ಯವಸ್ಥೆಯನ್ನು ಸ್ಥಾಪನೆ ಮಾಡುವ ಫಲಾನುಭವಿಗಳಿಗೆ ಈ ಕೆಳಗೆ ತಿಳಿಸಿದ ರೀತಿಯಲ್ಲಿ ಸಬ್ಸಿಡಿಯನ್ನು ನೀಡಲಾಗುತ್ತದೆ.

A) 1 ಕಿಲೋ ವ್ಯಾಟ್‌ ಸಾಮರ್ಥ್ಯದ ವ್ಯವಸ್ಥೆಗೆ 30,000 ರೂ. ಸಬ್ಸಿಡಿ ನೀಡಲಾಗುತ್ತದೆ. 
B) 2 ಕಿಲೋ ವ್ಯಾಟ್‌ ಸಾಮರ್ಥ್ಯದ ವ್ಯವಸ್ಥೆಗೆ 60,000 ರೂ. ಸಬ್ಸಿಡಿ ನೀಡಲಾಗುತ್ತದೆ.
C) 3 ಕಿಲೋ ವ್ಯಾಟ್‌ ಮೇಲ್ಪಟ್ಟ ವ್ಯವಸ್ಥೆಗೆ ಗರಿಷ್ಠ ಸಬ್ಸಿಡಿ ಮಿತಿ 78,000 ರೂ. ನೀಡಲಾಗುತ್ತದೆ.

ಇದನ್ನೂ ಓದಿ: Mahila nigama yojanegalu-ಮಹಿಳಾ ನಿಗಮದ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ!

How can apply for PM surya ghar yojana-ಪಿಎಂ ಸೂರ್ಯಘರ್ ಯೋಜನೆ ಪ್ರಯೋಜನ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು?

1) ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸುವವರು ಭಾರತೀಯ ಪ್ರಜೆಯಾಗಿರಬೇಕು.

2) ಸೌರ ಫಲಕಗಳನ್ನು ಅಳವಡಿಸಲು ಸೂಕ್ತವಾದ ಮೇಲ್ಛಾವಣಿಯನ್ನು ಹೊಂದಿರುವ ಮನೆಯನ್ನು ಹೊಂದಿರಬೇಕು.

3) ಮನೆಯು ಮಾನ್ಯವಾದ ವಿದ್ಯುತ್ ಸಂಪರ್ಕವನ್ನು ಹೊಂದಿರಬೇಕು.

4) ಮನೆಯವರು ಸೋಲಾರ್ ಪ್ಯಾನೆಲ್‌ಗಳಿಗೆ ಬೇರೆ ಯಾವುದೇ ಸಬ್ಸಿಡಿಯನ್ನು ಪಡೆದಿರಬಾರದು.

ಇದನ್ನೂ ಓದಿ: Village Administrative Officer - 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಅರ್ಜಿ ಸಲ್ಲಿಕೆ ಮತ್ತೆ ಆರಂಭ!

PM surya ghar application process- ಸೂರ್ಯ ಘರ್ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ: 

ಕೇಂದ್ರ ಸರಕಾರದ ಅಧಿಕೃತ ಸೂರ್ಯ ಘರ್ ಯೋಜನೆಯ ವೆಬ್ಸೈಟ್ ಅನ್ನು ಭೇಟಿ ಮಾಡಿ ಈ ಕೆಳಗೆ ತಿಳಿಸಿರುವ ವಿಧಾನವನ್ನು ಅನುಸರಿಸಿ ಸಾರ್ವಜನಿಕರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

Step-1: ಮೊದಲು ಈ Apply Now  ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಜಾಲತಾಣವನ್ನು ಭೇಟಿ ಮಾಡಬೇಕು.

Step-2: ತದನಂತರ ಇಲ್ಲಿ "REGISTRATION" ಬಟನ್ ಮೇಲೆ ಕ್ಲಿಕ್ ಮಾಡಿ ರಾಜ್ಯ, ಜಿಲ್ಲೆ,ವಿದ್ಯುತ್ ಸರಬರಾಜು ಕಂಪನಿ, ಗ್ರಾಹಕರ ಖಾತೆ ಸಂಖ್ಯೆಯನ್ನು ನಮೂದಿಸಿ ಕ್ಯಾಪ್ಚ ಕೋಡ್ ಹಾಕಿ "NEXT" ಬಟನ್ ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ: Anganwadi worker-2024: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ! ಇಲ್ಲಿದೆ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್!

Step-3: ನೊಂದಣಿಯನ್ನು ಮಾಡಿಕೊಂಡ ಬಳಿಕ "Login" ಆಯ್ಕೆಯ ಮೇಲೆ ಕ್ಲಿಕ್  ಮಾಡಿ Apply ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬೇಕು.

Step-4: ಎಸ್ಕಾಂ ನಿಂದ ಅರ್ಜಿ ಪರಿಶೀಲನೆಗೊಂಡು ಅರ್ಹ ಫಲಾನುಭವಿಗಳಿಗೆ ಸಹಾಯಧನ ಮಂಜೂರು ಮಾಡಲಾಗುತ್ತದೆ. 

PM surya ghar website- ಅಧಿಕೃತ ವೆಬ್ಸೈಟ್: Click here

PM surya ghar yojana helpline number-ಸಹಾಯವಾಣಿ: 15555