ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಡಿ ಬರುವ ನಿಗಮಗಳಲ್ಲಿ “ಸ್ವಾವಲಂಬಿ ಸಾರಥಿ” ಯೋಜನೆಯಡಿ ನಾಲ್ಕು ಚಕ್ರಗಳ ವಾಹನ ಖರೀದಿಗೆ ಪಡೆಯುವ ಸಾಲಕ್ಕೆ ಶೇ.50 ರಷ್ಟು ಅಥವಾ ಗರಿಷ್ಟ ರೂ.3.00 ಲಕ್ಷಗಳ ಸಹಾಯಧನ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬವುದು? ಆಯ್ಕೆ ವಿಧಾನ ಹೇಗಿರುತ್ತದೆ? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.
ಈ ಯೋಜನೆಯ ಕುರಿತು ರಾಜ್ಯ ಸರಕಾರದಡಿ ಕಾರ್ಯ ನಿರ್ವಹಿಸುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಹೊರಡಿಸಿರುವ ಮಾರ್ಗಸೂಚಿ ವಿವರವನ್ನು ಈ ಕೆಳಗೆ ವಿವರಿಸಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಡಿ ಬರುವ ನಿಗಮಗಳಿಗೆ ಒದಗಿಸಿರುವ ಅನುದಾನದ ಮಿತಿಯಲ್ಲಿಯೇ, ಸ್ವಾವಲಂಬಿ ಸಾರಥಿ ಯೋಜನೆಯಡಿ ಹಿಂದುಳಿದ ವರ್ಗಗಳ ನಿರುದ್ಯೋಗಿ ಯುವ ಜನರು ನಾಲ್ಕು ಚಕ್ರಗಳ ವಾಹನ ಖರೀದಿಗೆ ಪಡೆಯುವ ಸಾಲಕ್ಕೆ ಶೇ.50 ರಷ್ಟು ಅಥವಾ ಗರಿಷ್ಟ ರೂ.3.00 ಲಕ್ಷಗಳ ಸಹಾಯಧನ ಮಂಜೂರು ಮಾಡಲು ಸರ್ಕಾರದ ಅನುಮೋದನೆ ನೀಡಲಾಗಿದ್ದು ನಿಗಮಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ.
ನಿರುದ್ಯೋಗಿ ಯುವ ಜನರು ಸ್ವಯಂ ಉದ್ಯೋಗ ಕೈಗೊಳ್ಳಲು ನಾಲ್ಕು ಚಕ್ರ ವಾಹನ ಖರೀದಿಗೆ ಬ್ಯಾಂಕುಗಳಿಂದ ಪಡೆಯುವ ಸಾಲಕ್ಕೆ ಶೇ.50 ರಷ್ಟು ಅಥವಾ ಗರಿಷ್ಟ ರೂ.3.00 ಲಕ್ಷಗಳ ಸಹಾಯಧನ ನೀಡಲು ಸ್ವಾವಲಂಬಿ ಸಾರಥಿ ಯೋಜನೆಯಡಿ ಅವಕಾಶ ಮಾಡಿಕೊಡಲಾಗಿದೆ.
ಇದನ್ನೂ ಓದಿ: ಒಂದು ಭಾರಿಯು ಅನ್ನಭಾಗ್ಯ ಯೋಜನೆಯಡಿ ಹಣ ಜಮಾ ಅಗಿಲ್ಲವೇ? ಇಲ್ಲಿದೆ ಸೂಕ್ತ ಪರಿಹಾರ ಕ್ರಮಗಳು.
Swavalambi sarati yojana-2023: “ಸ್ವಾವಲಂಬಿ ಸಾರಥಿ” ಯೋಜನೆಯಲ್ಲಿ ಪುಯೋಜನ ಪಡೆಯಲು ಇರಬೇಕಾದ ಅರ್ಹತೆಗಳು:
1. ಈ ಯೋಜನೆಯಲ್ಲಿ ಸೌಲಭ್ಯ ಪಡೆಯುವ ಅಭ್ಯರ್ಥಿಯು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ಸಮುದಾಯಗಳಿಗೆ ಸೇರಿದವರಾಗಿರಬೇಕು.
2. ಈ ಯೋಜನೆಯಲ್ಲಿ ಆರ್ಥಿಕ ಸಹಾಯ ಪಡೆಯಲು ಇಚ್ಛಿಸುವ ಅರ್ಜಿದಾರರು ಲಘು ವಾಹನ ಚಾಲನಾ ಪರವಾನಗಿಯನ್ನು ಹೊಂದಿರಬೇಕು.
3. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮೀಣ ಪ್ರದೇಶದವರಿಗೆ ರೂ.98,000/- ಗಳು ನಗರ ಪ್ರದೇಶದವರಿಗೆ ರೂ.1,20,000/-ಗಳನ್ನು ಮೀರಿರಬಾರದು.
4. ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು .
5. ಅರ್ಜಿದಾರರ ವಯಸ್ಸು ಕನಿಷ್ಠ 21 ವರ್ಷಗಳು ಹಾಗೂ ಗರಿಷ್ಠ 45 ವರ್ಷಗಳ ಮಿತಿಯೊಳಗಿರಬೇಕು.
6. ಈ ಹಿಂದೆ ನಿಗಮದ ಯೋಜನೆಗಳಲ್ಲಿ ಅಥವಾ ಸರ್ಕಾರಿ ಇಲಾಖೆಗಳಲ್ಲಿ ಈ ಉದ್ದೇಶಕ್ಕೆ ಯಾವುದೇ ಯೋಜನೆಗಳಿಂದ ಸೌಲಭ್ಯ ಪಡೆದಿರಬಾರದು.
7. ಈ ಯೋಜನೆಯಲ್ಲಿ ಸವಲತ್ತು ಪಡೆಯಬಯಸುವ ಅರ್ಜಿದಾರರು ವಾಸಿಸುತ್ತಿರುವ ವ್ಯಾಪ್ತಿಗೆ ಬರುವ ರಾಷ್ಟ್ರೀಕೃತ ಬ್ಯಾಂಕ್ ಶಾಖೆಯಲ್ಲಿ ಸರ್ಕಾರದ ಸೌಲಭ್ಯ ಪಡೆಯುವ ಆಧಾರ್ ಸಂಯೋಜಿತ ಬ್ಯಾಂಕ್ ಖಾತೆ ಹೊಂದಿರಬೇಕು. ,
8. ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಸೌಲಭ್ಯ ಪಡೆಯತಕ್ಕದ್ದು
9. ಈ ಯೋಜನೆಯಲ್ಲಿ ಮಹಿಳೆಯರಿಗೆ ಆದ್ಯತೆ ನೀಡುವುದು.
10. ಈ ಯೋಜನೆಯಲ್ಲಿ ಮಂಗಳಮುಖಿಯರಿಗೂ ಸಹ ಆದ್ಯತೆ ನೀಡುವುದು.
11. ಈ ಯೋಜನೆಯಲ್ಲಿ ಸೌಲಭ್ಯ ಪಡೆಯುವ ಫಲಾನುಭವಿಯು ಸ್ವಯಂ ಟ್ಯಾಕ್ಸಿ ಚಾಲನೆ (Yellow Board) ಉದ್ದೇಶಕ್ಕೆ ವಾಹನವನ್ನು ನೋಂದಾಯಿಸತಕ್ಕದ್ದು.
ಸಹಾಯಧನದ ಮೊತ್ತ:
ಸ್ವಾವಲಂಬಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರಗಳ ವಾಹನವನ್ನು ಖರೀದಿಸಲು ರಾಷ್ಟ್ರೀಕೃತ ಬ್ಯಾಂಕ್/ಗ್ರಾಮೀಣ ಬ್ಯಾಂಕ್‌ಗಳು ಮಂಜೂರು ಮಾಡಿದ ಸಾಲಕ್ಕೆ ಶೇ.50ರಷ್ಟು ಅಥವಾ ಗರಿಷ್ಠ ರೂ.3.00 ಲಕ್ಷಗಳವರೆಗೆ ಇವುಗಳಲ್ಲಿ ಯಾವುದು ಕಡಿಮೆಯೋ ಅಷ್ಟು ಸಹಾಯಧನವನ್ನು ನಿಗಮದಿಂದ ಮಂಜೂರು ಮಾಡಲಾಗುವುದು.
ಬ್ಯಾಂಕ್ ಪಾಲಿನ ಸಾಲಕ್ಕೆ ಬ್ಯಾಂಕ್ ನಿಗಧಿಪಡಿಸುವ ಚಾಲ್ತಿ ದರದ ಬಡ್ಡಿಯೊಂದಿಗೆ ಸಾಲದ ಮೊತ್ತವನ್ನು ನಿಗದಿತ ಕಂತುಗಳಲ್ಲಿ ಮರು ಪಾವತಿಸಬೇಕು.
ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳು:-
ಅರ್ಜಿದಾರರು ಸೇವಾಸಿಂಧು ಪೋರ್ಟಲ್ ನಲ್ಲಿ ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಈ ಕೆಳಕಂಡ ಅಗತ್ಯ ದಾಖಲೆಗಳನ್ನು ಸಲ್ಲಿಸತಕ್ಕದ್ದು.
1. ಅರ್ಜಿದಾರರು ಹಿಂದುಳಿದ ವರ್ಗಗಳಿಗೆ ಸೇರಿರಬೇಕು ಹಾಗೂ ಸಂಬಂಧಿಸಿದ ತಾಲ್ಲೂಕು ತಹಶೀಲ್ದಾರರು/ಕಂದಾಯ ಅಧಿಕಾರಿಗಳಿಂದ ನಿಗಧಿತ ನಮೂನೆಯಲ್ಲಿ ಪಡೆದ ಜಾತಿ / ಕುಟುಂಬದ ವಾರ್ಷಿಕ ಆದಾಯ ಪ್ರಮಾಣ ಪತ್ರ.
2. ಅರ್ಜಿದಾರರ ವಾಸದ ಪುರಾವೆಗಾಗಿ ಸಕ್ಷಮ ಪ್ರಾಧಿಕಾರಗಳು ನೀಡಿದ ಆಧಾರ್ ಕಾರ್ಡ್/ ಚುನಾವಣಾ ಗುರುತಿನ ಚೀಟಿ/ ಪಡಿತರ ಚೀಟಿ 3. ಲಘು ವಾಹನ ಚಾಲನಾ ಪರವಾನಗಿಯ ದೃಢೀಕೃತ ಪ್ರತಿ.
4. ಅರ್ಜಿದಾರರ ಪಾಸ್ ಪೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರ. 5. ಅರ್ಜಿದಾರರು ನಿರುದ್ಯೋಗಿ ಆಗಿರಬೇಕು (ಸ್ವಯಂ ಘೋಷಣಾ ಪತ್ರ ಸಲ್ಲಿಸುವುದು).
ಇದನ್ನೂ ಓದಿ: ಗಂಗಾ ಕಲ್ಯಾಣ ಯೋಜನೆ ಸೇರಿದಂತೆ ಇತರೆ 6 ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಅಹ್ವಾನ!
ಅರ್ಜಿ ಎಲ್ಲಿ ಸಲ್ಲಿಸಬೇಕು?
ಅರ್ಜಿ ಸಲ್ಲಿಸಲು ಅರ್ಹ ಆಸಕ್ತ ಅಭ್ಯರ್ಥಿಗಳು ನಿಮ್ಮ ಹತ್ತಿರದ ಗ್ರಾಮ್ ಒನ್ , ಕರ್ನಾಟಕ ಒನ್ ಇತರೆ ಕಂಪ್ಯೂಟರ್ ಸೆಂಟರ್ ಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ: 30-10-2023 ರ ಒಳಗಾಗಿ ಭೇಟಿ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಫಲಾನುಭವಿಗಳ ಆಯ್ಕೆ ಮತ್ತು ಯೋಜನೆಗಳ ಅನುಷ್ಠಾನ:
ಕೆಲವು ನಿಗಮಗಳಿಂದ ಫಲಾನುಭವಿಗಳನ್ನು ಆಯ್ಕೆ ಮಾಡಲು ಆಯಾ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರ ಅಧ್ಯಕ್ಷತೆಯಲ್ಲಿ ಈ ಕೆಳಕಂಡಂತೆ ರಚಿಸಿರುವ ಆಯ್ಕೆ ಸಮಿತಿಯ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಇನ್ನುಳಿದ ನಿಗಮಗಳಿಂದ ಫಲಾನುಭವಿಗಳನ್ನು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಈ ಕೆಳಕಂಡಂತೆ ರಚಿಸಿರುವ ಸಮಿತಿಯ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಮೀಸಲಾತಿ:
ಈ ಯೋಜನೆಯಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಪವರ್ಗ-1 ಮತ್ತು 2ಎ ಗೆ ಶೇ.85 ರಷ್ಟು ಪ್ರವರ್ಗ-3ಎ ಮತ್ತು 3ಬಿ ಗೆ ಶೇ.15ರಷ್ಟು ಮೀಸಲಾತಿ ನಿಗಧಿಪಡಿಸಿದೆ. ಇನ್ನುಳಿದ ನಿಗಮಗಳಲ್ಲಿ ಆಯಾ ನಿಗಮದ ವ್ಯಾಪ್ತಿಗೆ ಬರುವ ಎಲ್ಲಾ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡಲಾಗುತ್ತದೆ.
ಸಾಲ ಮಂಜೂರಾತಿಯ ವಿಧಾನ:
ನಿಗಮಗಳಿಂದ ಈ ಯೋಜನೆಯಲ್ಲಿ ಸೌಲಭ್ಯ ಒದಗಿಸಲು ಅರ್ಜಿದಾರರಿಂದ ಸೇವಾ ಸಿಂಧು ಪೋರ್ಟಲ್ ಮುಖಾಂತರ ಆನ್ ಲೈನ್‌ನಲ್ಲಿ ಅರ್ಜಿಗಳನ್ನು ಸ್ವೀಕರಿಸಲು ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದ್ದು.
ಜಿಲ್ಲಾ ವ್ಯವಸ್ಯಾಪಕರು ಸ್ವೀಕೃತವಾದ ಅರ್ಜಿಗಳನ್ನು ಪರಿಶೀಲಿಸಿ ಮಾನ್ಯ ಶಾಸಕರು / ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಇವರುಗಳ ಅಧ್ಯಕ್ಷತೆಯಲ್ಲಿನ ಆಯ್ಕೆ ಸಮಿತಿಯ ಮುಂದೆ ಮಂಡಿಸಿ, ಆಯಾ ಜಿಲ್ಲೆಗೆ/ವಿಧಾನಸಭಾ ಕ್ಷೇತ್ರಕ್ಕೆ ನಿಗಧಿಪಡಿಸಿದ ಗುರಿಯಂತೆ ಆಯ್ಕೆ ಸಮಿತಿಯ ಮೂಲಕ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿ ಆಯ್ಕೆಯಾದ ಫಲಾನುಭವಿಗಳ ಅರ್ಜಿಗಳನ್ನು ವಾಹನ ಖರೀದಿಸುವ ದರಪಟ್ಟಿಯೊಂದಿಗೆ ಸಾಲ ಮಂಜೂರಾತಿಗಾಗಿ ರಾಷ್ಟ್ರೀಕೃತ ಬ್ಯಾಂಕ್/ಗ್ರಾಮೀಣ ಬ್ಯಾಂಕ್‌ಗಳಿಗೆ ಶಿಫಾರಸ್ಸು ಮಾಡಲಾಗುತ್ತದೆ.
ಇದನ್ನೂ ಓದಿ: ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮದಿಂದ ಗಂಗ ಕಲ್ಯಾಣ ಯೋಜನೆ ಸೇರಿ ಇತರೆ 6 ಯೋಜನೆಗಳಿಗೆ ಅರ್ಜಿ ಆಹ್ವಾನ!