Village administrative officer-1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ!

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಗ್ರಾಮ ಆಡಳಿತ ಅಧಿಕಾರಿ/ಗ್ರಾಮ ಲೆಕ್ಕಾಧಿಕಾರಿ(Village administrative officer application) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿತ್ತು ಅದರೆ ಇನ್ನು ಅನೇಕ ಅಭ್ಯರ್ಥಿಗಳು ತಾಂತ್ರಿಕ ಕಾರಣದಿಂದ ಅರ್ಜಿ ಸಲ್ಲಿಸಲು ಅಗದಿರುವ ಕಾರಣ ಅರ್ಜಿ ಸಲ್ಲಿಸಲು ನಿಗಧಿಪಡಿಸಿರುವ ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ.

Village administrative officer-1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ!
Village administrative officer application last date-2024

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಗ್ರಾಮ ಆಡಳಿತ ಅಧಿಕಾರಿ/ಗ್ರಾಮ ಲೆಕ್ಕಾಧಿಕಾರಿ(Village administrative officer application) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿತ್ತು ಅದರೆ ಇನ್ನು ಅನೇಕ ಅಭ್ಯರ್ಥಿಗಳು ತಾಂತ್ರಿಕ ಕಾರಣದಿಂದ ಅರ್ಜಿ ಸಲ್ಲಿಸಲು ಅಗದಿರುವ ಕಾರಣ ಅರ್ಜಿ ಸಲ್ಲಿಸಲು ನಿಗಧಿಪಡಿಸಿರುವ ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ.

ಈ ಸಂಬಂಧ ಅಧಿಕೃತ ಪ್ರಕಟಣೆ  ಹೊರಡಿಸಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಇದರ ಸಂಪೂರ್ಣ ಮಾಹಿತಿಯನ್ನು ಮತ್ತು ಈ ಹುದ್ದೆಗೆ ಅರ್ಜಿ ಸಲ್ಲಿಕೆ ಕುರಿತು ಒಂದಿಷ್ಟು ವಿವರವನ್ನು ಈ ಲೇಖನದಲ್ಲಿ ತಿಳಿಸಲಾಗಿದ್ದು, ಈ ಮಾಹಿತಿ ಉಪಯುಕ್ತ ಅನಿಸಿದ್ದಲ್ಲಿ ತಪ್ಪದೇ ನಿಮ್ಮ ಬಳಿಯಿರುವ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ.

ಇದನ್ನೂ ಓದಿ: Milk incentive-2024: ಹಾಲಿನ ಪ್ರೋತ್ಸಾಹ ಧನ ಬಿಡುಗಡೆ! ನಿಮಗೆ ಬಂತಾ ಚೆಕ್ ಮಾಡಿ!

Village administrative officer application last date-ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ವಿವರ ಹೀಗಿದೆ:

ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ದಿನಾಂಕ 20.02.2024 ರಂದು ವಿವರವಾದ ಅಧಿಸೂಚನೆಯನ್ನು ಪ್ರಕಟಿಸಲಾಗಿರುತ್ತದೆ. 

ಪ್ರಾಧಿಕಾರದ ಅಧಿಸೂಚನೆಯಲ್ಲಿ ದಿನಾಂಕ 03.04.2024 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿರುತ್ತದೆ. ಆದರೆ ಆನ್‌ಲೈನ್ ಅರ್ಜಿಯಲ್ಲಿ ಕೆಲವು ಬದಲಾವಣೆಯ ಕಾರಣ ಅರ್ಜಿಯನ್ನು ಸಲ್ಲಿಸಲು ದಿನಾಂಕವನ್ನು ಮುಂದೂಡಿ, ದಿನಾಂಕ 04.05.2024 ರ ವರೆಗೆ ಅರ್ಜಿ ಸಲ್ಲಿಸಲು ಹಾಗೂ ದಿನಾಂಕ 07.05.2024 ರ ವರೆಗೆ ಶುಲ್ಕ ಪಾವತಿಸಲು ಅವಕಾಶ ನೀಡಲಗಿರುತ್ತದೆ. 

ಆದರೆ ಕೆಲವು ಅಭ್ಯರ್ಥಿಗಳು ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಿಸಲು ಕೋರಿದ್ದರಿಂದ ಈ ಕೆಳಗಿನಂತೆ ಅರ್ಜಿ ಸಲ್ಲಿಸಲು ದಿನಾಂಕವನ್ನು ವಿಸ್ತರಿಸಲಾಗಿದೆ.

ಇದನ್ನೂ ಓದಿ: RTC details- ಪೋಡಿ ಎಂದರೇನು? ಪೋಡಿ ಎಷ್ಟು ವಿಧ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!

application last date- ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ವಿವರಗಳು:

ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ವಿಸ್ತರಿಸಲಾದ ಕೊನೆಯ ದಿನಾಂಕ: 15 ಮೇ 2024 
ಶುಲ್ಕ ಪಾವತಿಸಲು ಕೊನೆಯ ದಿನಾಂಕ: 18 ಮೇ 2024(ಬ್ಯಾಂಕ್ ಕೆಲಸದ ವೇಳೆವರೆಗೆ)

Required Documents For VAO application- ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು ಮತ್ತು ಮಾಹಿತಿ:

1)ಆಧಾರ್‌ ಕಾರ್ಡ್
2)SSLC ಮಾರ್ಕ್ಸ್‌ ಕಾರ್ಡ್
3)ಫೋಟೊ ಮತ್ತು ಅಭ್ಯರ್ಥಿಯ ಸಹಿ
4)ಮೈಲ್‌ ಐಡಿ ಮತ್ತು ಮೊಬೈಲ್‌ ಫೋನ್ ನಂಬರ್
5)PUC ಮಾರ್ಕ್ಸ್‌ ಕಾರ್ಡ್
6)ಜಾತಿ ಮತ್ತು ಆದಾಯ ಪ್ರಮಾಣ ಪತ್ರ
7)ಕನ್ನಡ ಮಾದ್ಯಮ ವ್ಯಾಸಂಗ ಪ್ರಮಾಣ ಪತ್ರ (ಇದ್ದಲ್ಲಿ ಮಾತ್ರ)
8)ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ (ಇದ್ದಲ್ಲಿ ಮಾತ್ರ)

ಇದನ್ನೂ ಓದಿ: Parihara - 34 ಲಕ್ಷ ರೈತರ ಖಾತೆಗೆ ಈ ದಿನ ಜಮಾ ಅಗಲಿದೆ 2 ನೇ ಕಂತಿನ ಬರ ಪರಿಹಾರ!

Age limit-ವಯಸ್ಸಿನ ಮಿತಿ ವಿವರ:

ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ: 35 ವರ್ಷಗಳು
ಪ್ರವರ್ಗ 2ಎ,2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: 38 ವರ್ಷಗಳು
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 ಅಭ್ಯರ್ಥಿಗಳಿಗೆ: 40 ವರ್ಷಗಳು

Online application link- ಅರ್ಜಿ ಸಲ್ಲಿಸಲು ಲಿಂಕ್: Apply Now

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರು ಮತ್ತು ಇನ್ನು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ಅಧಿಕೃತ ಅಧಿಸೂಚನೆಯ ಪ್ರತಿಯನ್ನು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ: Download Now