ಪಶುಪಾಲನಾ ಇಲಾಖೆಯಿಂದ ಯಾವೆಲ್ಲ ಯೋಜನೆಯಡಿ ಸೌಲಭ್ಯ ಪಡೆಯಬಹುದು? ಪ್ರಸ್ತುತ ವರ್ಷದಲ್ಲಿ ಜಾರಿಯಲ್ಲಿರುವ ಯೋಜನೆಗಳ(Veterinary department schems-2024) ವಿವರ ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.
ಆಸಕ್ತ ಅರ್ಹ ರೈತರು ನಿಮ್ಮ ತಾಲ್ಲೂಕಿನ ಪಶುಪಾಲನಾ ಇಲಾಖೆಯನ್ನು ನೇರವಾಗಿ ಭೇಟಿ ಮಾಡಿ ಅಗತ್ಯ ದಾಖಲಾತಿಗಳನ್ನು ಓದಗಿಸಿ ಈ ಕೆಳಗೆ ತಿಳಿಸಿರುವ ಯೋಜನೆಗಳಿಗೆ ಅರ್ಜಿ ಸಲ್ಲಿಸಿ ಪ್ರಯೋಜನವನ್ನು ಪಡೆದುಕೊಳ್ಳಬಹುದು.
ಇದನ್ನೂ ಓದಿ: NLM ಯೋಜನೆಯಡಿ ರೂ 25 ಲಕ್ಷದವರೆಗೆ ಶೇ 50% ಸಬ್ಸಿಡಿಯಲ್ಲಿ ಸ್ವ-ಉದ್ಯೋಗ ಮಾಡಲು ಅವಕಾಶ! ಇಲ್ಲಿದೆ ಸಂಪೂರ್ಣ ಮಾಹಿತಿ!
Karnataka Veterinary department Yojana-ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಪ್ರಮುಖ ಯೋಜನೆಗಳು ಹೀಗಿವೆ:
1) ಹಾಲು ಉತ್ಪಾದಕರಿಗೆ ಪ್ರೋತ್ಸಾಹ!
ಕೆ.ಎಂ.ಎಪ್ ಡೈರಿಗಳಿಗೆ ಹಾಲನ್ನು ಹಾಕುವ ರೈತರಿಗೆ ಪ್ರತಿ ಲೀಟರ್ ಗೆ ರೂ 5/- ಅನ್ನು ಹೆಚ್ಚುವರಿಯಾಗಿ ಸಹಾಯಧನ ನೀಡಲಾಗುತ್ತದೆ. ಇದಲ್ಲದೇ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು/ಎಮ್ಮೆಯನ್ನು ಖರೀದಿ ಮಾಡಲು ರೈತರಿಗೆ ನೆರವು ನೀಡಲು ಮಹಿಳೆಯರಿಗೆ ಶೇ ರ ಬಡ್ಡಿ ಸಹಾಯಧನ ಒದಗಿಸಲಾಗುತ್ತದೆ.
2) ರಾಸುಗಳಿಗೆ ಲಸಿಕೆ ಹಾಕುವ ಕಾರ್ಯಕ್ರಮ:
ಕಾಲುಬಾಯಿ ರೋಗ, ಕಂದುರೋಗ, ಪಿ.ಪಿ,ಆರ್ ರೋಗ, ಹಂದಿಜ್ವರ, ಗಳಲೆ ರೋಗ, ಕರಳು ಬೇನೆ ರೋಗ, ಚರ್ಮಗಂಟು ರೋಗಗಳ ವಿರುದ್ದ ಉಚಿತವಾಗಿ ಈ ಯೋಜನೆಯಡಿಯಲ್ಲಿ ಲಸಿಕೆಯನ್ನು ಹಾಕಲಾಗುತ್ತದೆ.
3) ನಾಟಿ ಕೋಳಿ ಮರಿಗಳ ವಿತರಣೆ:
ಈ ಯೋಜನೆಯಡಿ ಆಯ್ದ ಮಹಿಳಾ ಸ್ವ-ಸಹಾಯ ಗುಂಪಿನ ಗ್ರಾಮೀಣ ಭಾಗದ ಸದಸ್ಯರಿಗೆ ತಲಾ 20 ಆರುವಾರದ ನಾಟಿ ಕೋಳಿ ಮರಿಗಳನ್ನು ನೀಡಲಾಗುತ್ತದೆ.
ಇದನ್ನೂ ಓದಿ: Diploma Agriculture Application-2024-25ನೇ ಸಾಲಿನ ಡಿಪ್ಲೊಮಾ(ಕೃಷಿ) ಕೋರ್ಸ್‌ಗೆ ಅರ್ಜಿ ಆಹ್ವಾನ!
4) ರಾಸುಗಳ ಆಕಸ್ಮಿಕ ಸಾವಿಗೆ ಪರಿಹಾರ ನೀಡುವ ಯೋಜನೆ:
ಈ ಯೋಜನೆಯಡಿ 6 ತಿಂಗಳ ಮೇಲ್ಪಟ್ಟ ಹಸು, ಎಮ್ಮೆ, ಎತ್ತು, ಕೋಣ, ಹೋರಿ ಆಕಸ್ಮಿಕವಾಗಿ ಸಾವನ್ನಪ್ಪಿದಲ್ಲಿ ಗರಿಷ್ಟ 1,00,00 ರೂ ವರೆಗೆ ಪರಿಹಾರವನ್ನು ಪಡೆಯಬಹುದು.
5) ಕುರಿಗಾರರಿಗೆ ಅನುಗ್ರಹ ಯೋಜನೆ:
6 ತಿಂಗಳು ಮೇಲ್ಪಟ್ಟ ಕುರಿ/ಮೇಕೆಗಳು ಆಕಸ್ಮಿಕವಾಗಿ ಮರಣ ಹೊಂದಿದ್ದಲ್ಲಿ ರೂ 5000 ಹಾಗೂ 3 ರಿಂದ 6 ತಿಂಗಳ ಕುರಿ/ಮೇಕೆಗಳಿಗೆ ರೂ 3500 ಪರಿಹಾರದ ನೆರವನ್ನು ನೀಡಲಾಗುತ್ತದೆ.
6) ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ:
ಈ ಯೋಜನೆಯ ಮೂಲಕ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ ಸದಸ್ಯರಿಗೆ 20-1 ಕುರಿ/ಮೇಕೆ ಘಟಕಗಳನ್ನು NCDC ಸಾಲ ಮತ್ತು ರಾಜ್ಯ ಸರಕಾರದ ಸಹಾಯಧನದೊಂದಿಗೆ ನೀಡಲಾಗುತ್ತದೆ.
ಇದನ್ನೂ ಓದಿ: Ayushman card-2024: ನಿಮ್ಮ ಬಳಿ ಈ ಕಾರ್ಡ ಇದ್ದರೆ 5 ಲಕ್ಷದವರೆಗೆ ಉಚಿತ ಆರೋಗ್ಯ ಚಿಕಿತ್ಸೆ ಪಡೆಯಬಹುದು?
7) ಮೇವಿನ ಬೀಜ ಕಿರು ಪೊಟ್ಟಣ ವಿತರಣೆ:
ಹೈನುಗಾರಿಕೆಯಲ್ಲಿ ತೊಡಗಿಕೊಂಡಿರುವ ರೈತರಿಗೆ ನೆರವಾಗಲು ಬರಗಾಲ ಸಮಯದಲ್ಲಿ ಮೇವನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲು ಉಚಿತವಾಗಿ ಮೇವಿನ ಬೀಜವನ್ನು ಈ ಯೋಜನೆಯಡಿ ವಿತರಣೆ ಮಾಡಲಾಗುತ್ತದೆ.
8) ಮೇವು ಕತ್ತರಿಸುವ ಯಂತ್ರ ವಿತರಣೆ:
ಇಲಾಖೆಯಿಂದ ಶೇ 50% ಸಹಾಯಧನದಲ್ಲಿ ಮೇವು ಕತ್ತರಿಸುವ ಯಂತ್ರವನ್ನು ಈ ಯೋಜನೆಯಡಿ ವಿತರಣೆ ಮಾಡಲಾಗುತ್ತದೆ.
9) ಲಿಂಗನಿರ್ಧರಿತ ಮೀರ್ಯನಳಿಕೆ ಬಳಕೆ:
ಹೆಣ್ಣು ಕರುಗಳ ಸಂತತ್ತಿಯನ್ನು ಹೆಚ್ಚಿಸಲು ಕೃತಕ ಗರ್ಭಧಾರಣೆಯನ್ನು ಲಿಂಗನಿರ್ಧರಿತ ಮೀರ್ಯನಳಿಕೆಗಳನ್ನು ಬಳಸಲಾಗುತದೆ.
10) ಸಂಚಾರಿ ಪಶು ಚಿಕಿತ್ಸಾ ಘಟಕ:
ಸಂಚಾರಿ ಪಶುಚಿಕಿತ್ಸಾ ವಾಹನಗಳ ಮೂಲಕ ಜಾನುವಾರುಗಳಿಗೆ ಅಗತ್ಯವಿರುವ ತುರ್ತು ಪಶುವೈದ್ಯಕೀಯ ಸೇವೆಗಳನ್ನು ರೈತರ ಮನೆ ಬಾಗಿಲಿಗೆ ನೀಡಲಾಗುತ್ತದೆ ರೈತರು ಈ “1962” ಸಹಾಯವಾಣಿಗೆ ಕರೆ ಮಾಡಿ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು.
ಇದನ್ನೂ ಓದಿ: UPSC Pre-examination: ಕರ್ನಾಟಕ ಸರ್ಕಾರದಿಂದ ಪದವಿ ಶಿಕ್ಷಣದೊಂದಿಗೆ UPSC ತಯಾರಿಗೆ ಅರ್ಜಿ ಅಹ್ವಾನ!
How to apply-ಎಲ್ಲಿ ಅರ್ಜಿ ಸಲ್ಲಿಸಬೇಕು?
ಈ ಮೇಲೆ ತಿಳಿಸಿರುವ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ಅರ್ಹ ರೈತರು ನಿಮ್ಮ ತಾಲ್ಲೂಕಿನ ಪಶುಪಾಲನಾ ಇಲಾಖೆಯನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆದುಕೊಳ್ಳಬಹುದು.
Veterinary department website-ಇನ್ನು ಹೆಚ್ಚಿನ ಮಾಹಿತಿಗಾಗಿ:
ಪಶುಪಾಲನಾ ಇಲಾಖೆಯ ಅಧಿಕೃತ ವೆಬ್ಸೈಟ್: click here
Helpline number- ಸಹಾಯವಾಣಿ: 8277200300