ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನ ಒದಗಿಸಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ(Vidhya nidhi yojane) ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸುವ ವಿಧಾನ ಹೇಗಿರುತ್ತದೆ? ಇತರೆ ವಿವರವನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.
ವಿದ್ಯಾನಿಧಿ ಯೋಜನೆಯಡಿ ಪಿಯುಸಿ, ಡಿಪ್ಲೋಮಾ, ಪದವಿ, ಐಟಿಐ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಯೋಜನೆಯಡಿ ಅರ್ಜಿ ಸಲ್ಲಿಸಿ ರೂ 2,500/- ರಿಂದ ರೂ 5,500/- ರ ವರೆಗೆ ವಿದ್ಯಾರ್ಥಿ ವೇತನ ಪಡೆದುಕೊಳ್ಳಬಹುದು.
Vidyanidhi Documents-ಅರ್ಜಿ ಸಲ್ಲಿಸಲು ಒದಗಿಸಬೇಕಾದ ದಾಖಲೆಗಳು:
1) ಅರ್ಜಿದಾರ ಅಭ್ಯರ್ಥಿಯ ಆಧಾರ್ ಕಾರ್ಡ ಪ್ರತಿ.
2) ರೇಷನ್ ಕಾರ್ಡ ಪ್ರತಿ.
3) ಬ್ಯಾಡ್ಜ್ ಇರುವ ವಾಹನದ ಡ್ರೈವಿಂಗ್ ಲೈಸೆನ್ಸ್
4) ಅಂಕಪಟ್ಟಿ.
ಇದನ್ನೂ ಓದಿ: Canara Bank Recruitment-2024: ಕೆನರಾ ಬ್ಯಾಂಕ್ ನಲ್ಲಿ 3000 ಹುದ್ದೆಗಳ ನೇಮಕಾತಿ!
ಇದನ್ನೂ ಓದಿ: Krishi pandita prashasti-2024: ಕೃಷಿ ಪಂಡಿತ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ!
How to Apply for vidyanidhi scholarship- ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳ ಸಮೇತ ನಿಮ್ಮ ಹತ್ತಿರದ ಗ್ರಾಮ ಒನ್ , ಕರ್ನಾಟಕ ಒನ್, ಬೆಂಗಳೂರು ಒನ್, ಕಂಪ್ಯೂಟರ್ ಸೆಂಟರ್ ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು ಅಥವಾ ಸೇವಾ ಸಿಂಧು ಪೋರ್ಟಲ್ ಪ್ರವೇಶ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
Who can apply for vidyanidhi scholarship-ಅರ್ಜಿ ಸಲ್ಲಿಸಲು ಅರ್ಹರು:
1) ಆಟೋ ಹಾಗೂ ಹಳದಿ ಬೋರ್ಡ್ ಟ್ಯಾಕ್ಸಿಗಳ ಚಾಲಕರ ಮಕ್ಕಳು ಈ ಯೋಜನೆಯಡಿ ಅರ್ಜಿ ಸಲ್ಲಿಸಿ ವಿದ್ಯಾರ್ಥಿ ವೇತನ ಪಡೆಯಬಹುದು.
2) ಪಿಯುಸಿ, ಡಿಪ್ಲೋಮಾ, ಪದವಿ, ಐಟಿಐ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಇದನ್ನೂ ಓದಿ: Krishi pumpset Adhar link- ಕೃಷಿ ಪಂಪ್ ಸೆಟ್ ಗೆ ಆಧಾರ್ ಲಿಂಕ್ ಮಹತ್ವದ ಪ್ರಕಟಣೆ!
scholarship amount- ವಿದ್ಯಾರ್ಥಿ ವೇತನದ ವಿವರ:
A) ಪಿಯುಸಿ/ಐಟಿಐ/ಡಿಪ್ಲೋಮಾ: ವಿದ್ಯಾರ್ಥಿಗಳಿಗೆ- ರೂ 2,500 ವಿದ್ಯಾರ್ಥಿನಿಯರಿಗೆ- ರೂ 3,000
B) ಪದವಿ(B.com,BBM, BCA,Bsc,BA ಇತರೆ ಪದವೀದರರು): ವಿದ್ಯಾರ್ಥಿಗಳಿಗೆ- ರೂ 5,000 ವಿದ್ಯಾರ್ಥಿನಿಯರಿಗೆ- ರೂ 5,500
ಇದನ್ನೂ ಓದಿ: AO and AAO Notification-2024: ಕೃಷಿ ಇಲಾಖೆಯಲ್ಲಿ ಭರ್ಜರಿ ನೇಮಕಾತಿ!
Online application link-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಅಭ್ಯರ್ಥಿಗಳು ಈ ಕೆಳಗೆ ವಿವರಿಸಿರುವ ವಿಧಾನವನ್ನು ಅನುಸರಿಸಿ ನಿಮ್ಮ ಮೊಬೈಲ್ ನಲ್ಲೇ ಸೇವಾ ಸಿಂಧು ಪೋರ್ಟಲ್ ಭೇಟಿ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
Step-1: ಮೊದಲಿಗೆ ಈ Apply Now ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಸೇವಾ ಸಿಂಧು ಪೋರ್ಟಲ್ ಅನ್ನು ಪ್ರವೇಶ ಮಾಡಬೇಕು.
ಇದನ್ನೂ ಓದಿ: Diploma agriculture-ಕೃಷಿ ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಂದೂಡಿಕೆ!
Step-2: ಇದಾದ ಬಳಿಕ ಲಾಗಿನ್ ಬಟನ್ ಮೇಲೆ ಕ್ಲಿಕ್ ಮಾಡಿ ಮೊಬೈಲ್ ನಂಬರ್ ಹಾಕಿ ನೋಂದಣಿಯನ್ನು ಮಾಡಿಕೊಳ್ಳಬೇಕು.
Step-3: ನೋಂದಣಿಯನ್ನು ಮಾಡಿಕೊಂಡು User name ಮತ್ತು password ಅನ್ನು ನಮೂದಿಸಿ Login ಮಾಡಿಕೊಂಡು ಅಗತ್ಯ ವಿವರವನ್ನು ಭರ್ತಿ ಕೊನೆಯಲ್ಲಿ Submit ಬಟನ್ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಅರ್ಜಿ ಯಶಸ್ವಿಯಾಗಿ ಸಲ್ಲಿಕೆಯಾಗುತ್ತದೆ.