Village Administrative Officer – 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಅರ್ಜಿ ಸಲ್ಲಿಕೆ ಮತ್ತೆ ಆರಂಭ!

September 18, 2024 | Siddesh
Village Administrative Officer – 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಅರ್ಜಿ ಸಲ್ಲಿಕೆ ಮತ್ತೆ ಆರಂಭ!
Share Now:

ಕಳೆದ ಫೆಬ್ರವರಿ ತಿಂಗಳಿನಲ್ಲಿ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ(Village Administrative Officer Application Extended) ಅಧಿಸೂಚನೆ ಪ್ರಕಟಿಸಿ ಅರ್ಜಿ ಆಹ್ವಾನಿಸಲಾಗಿತ್ತು. ಸರ್ಕಾರದ ನೇಮಕಾತಿಯಲ್ಲಿ ಆದ ನಿಯಮಗಳ ಬದಲಾವಣೆಗಳ ಸಂಬಂಧಿತ ಇದೀಗ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ನೇಮಕಾತಿ ಪ್ರಕ್ರಿಯೆಯಲ್ಲಿ ಏನೆಲ್ಲಾ ಬದಲಾವಣೆಗಳಾಗಿವೆ? ಅರ್ಜಿ ಸಲ್ಲಿಸಲು ಮತ್ತೆ ನಿಗದಿಪಡಿಸಿದ ದಿನಾಂಕಗಳು ಯಾವುವು? ಎಂಬ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ. 

ಕರ್ನಾಟಕ ಸರ್ಕಾರವು ಇತ್ತೀಚಿಗೆ ಹೊರಡಿಸಿದ ಮಹತ್ತರದ ಆದೇಶದ ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗಿದೆ. 

ಇದನ್ನೂ ಓದಿ:  Tour packages-ಸರ್ಕಾರದಿಂದ ರೂ 15,000 ಸಾವಿರ ಸಹಾಯಧನದಲ್ಲಿ ಯಾತ್ರೆ ಮಾಡಲು ಅರ್ಜಿ!

Village Administrative Officer : 3 ವರ್ಷಗಳ ವಯೋಮಿತಿ ಸಡಿಲಿಕೆ : 

ಹೌದು, ಕರ್ನಾಟಕ ಸರ್ಕಾರವು ಇದೀಗ ಒಂದು ಬಾರಿ ಅನ್ವಯವಾಗುವಂತೆ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯೋಮಿತಿ ಸಡಲಿಕೆ ಮಾಡಿದೆ. ಆದಕಾರಣದಿಂದಾಗಿ ಫೆಬ್ರವರಿ ತಿಂಗಳಲ್ಲಿ ಅರ್ಜಿ ಸಲ್ಲಿಸದೆ ಇರುವಂತಹ ಅಭ್ಯರ್ಥಿಗಳಿಗೆ ಇದೀಗ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ.

ಪುನಃ ಅರ್ಜಿ ಸಲ್ಲಿಕೆ ಆರಂಭ ಯಾವಾಗಿನಿಂದ?

ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದ್ದು, ಅರ್ಜಿ ಸಲ್ಲಿಸುವ ಲಿಂಕ್ ಸೆಪ್ಟೆಂಬರ್ 19, 2024 ರಿಂದ ಆರಂಭವಾಗಲಿದೆ. ಅದೇ ರೀತಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವು ಸೆಪ್ಟೆಂಬರ್ 28, 2024 ಆಗಿರುತ್ತದೆ. ಅರ್ಜಿ ಸಲ್ಲಿಸದೆ ಇರುವವರು ಇದರ ಸದುಪಯೋಗಪಡೆಸಿಕೊಳ್ಳಿ.

ಇದನ್ನೂ ಓದಿ: Anganwadi worker-2024: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ! ಇಲ್ಲಿದೆ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್!

Village Administrative Officer exam-ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆ ಯಾವಾಗ?

ಕಡ್ಡಾಯ ಕನ್ನಡ ಪರೀಕ್ಷೆಯನ್ನು ಅಕ್ಟೋಬರ್ 26, 2024 ರಂದು ನಡೆಸಲಾಗುತ್ತದೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಯನ್ನು 27 ಅಕ್ಟೋಬರ್ 2024 ರಂದು ನಡೆಸಲಾಗುತ್ತದೆ.

Age limit- ವಯೋಮಿತಿ ಸಡಿಲಿಕೆ ವಿವರ:

1) ಸಾಮಾನ್ಯ ವರ್ಗದವರಿಗೆ ಗರಿಷ್ಠ - 38 ವರ್ಷ
2) ಪ್ರವರ್ಗ 2ಎ, 2ಬಿ, 3ಎ, 3 ಬಿ ವರ್ಗದವರಿಗೆ ಗರಿಷ್ಠ 41 ವರ್ಷ
3) ಎಸ್ಸಿ, ಎಸ್ಟಿ ಹಾಗೂ ಪ್ರವರ್ಗ-1ರ ವರ್ಗದವರಿಗೆ ಗರಿಷ್ಠ 43 ವರ್ಷಗಳು

ಆದೇಶದಲ್ಲಿ ಉಲ್ಲೇಖಿಸಿರುವ ಅಂಶಗಳ ವಿವರ ಹೀಗಿದೆ:

ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್-ಸಿ ಮತ್ತು ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಲಾಗಿರುವ ಅಧಿಸೂಚನೆಗಳಿಗೆ ಹಾಗೂ ಮುಂದಿನ ಒಂದು ವರ್ಷದಲ್ಲಿ ಹೊರಡಿಸಲಿರುವ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ, ಎಲ್ಲಾ ಪವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ (one time measure) ಗರಿಷ್ಠ ವಯೋಮಿತಿಯಲ್ಲಿ 03 ವರ್ಷಗಳ ಸಡಿಲಿಕೆಯನ್ನು ನೀಡಿ ಆದೇಶ ಮಾಡಲಾಗಿದೆ.

ಇದನ್ನೂ ಓದಿ: PM Maandhan Yojana-2024: ಕೇಂದ್ರದ ಈ ಯೋಜನೆಯಡಿ ಪ್ರತಿ ತಿಂಗಳು ಸಿಗುತ್ತೆ ರೂ 3,000! ಇಲ್ಲಿದೆ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್!

ಪ್ರಮುಖ ಲಿಂಕ್ ಗಳು : 

• ಅಧಿಸೂಚನೆ - Download Now

• ಅರ್ಜಿ ಲಿಂಕ್ - Apply Now

Tags:
WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: