Yuva nidhi Scheme- ಯುವನಿಧಿ ಅರ್ಜಿ ಸಲ್ಲಿಕೆ ಕುರಿತು ಮಹತ್ವದ ಮಾಹಿತಿ ತಿಳಿಸಿದ ಸಚಿವ ಡಾ.ಶರಣಪ್ರಕಾಶ ಪಾಟೀಲ್!

Yuva nidhi Yojana- ರಾಜ್ಯ ಸರಕಾರದಿಂದ ಚುನಾವಣೆ ಪೂರ್ವದಲ್ಲಿ ಘೋಷಣೆ ಮಾಡಿದ 5 ಗ್ಯಾರಂಟಿ ಯೋಜನೆಗಳಲ್ಲಿ ಈಗಾಗಳೆ 4 ಯೋಜನೆಗಳನ್ನು ಅನುಷ್ಥಾನ ಮಾಡಲಾಗಿದ್ದು, "ಯುವನಿಧಿ" ಯೋಜನೆ ಜಾರಿಗೆ ತರುವುದು ಬಾಕಿ ಇರುತ್ತದೆ. ಈ ಯೋಜನೆ ಅರ್ಜಿ ಸಲ್ಲಿಕೆ ಇತ್ಯಾದಿ ಮಾಹಿತಿಯ ಕುರಿತು ಸಚಿವ ಡಾ.ಶರಣಪ್ರಕಾಶ ಪಾಟೀಲ್ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.

ರಾಜ್ಯ ಸರಕಾರದಿಂದ ಚುನಾವಣೆ ಪೂರ್ವದಲ್ಲಿ ಘೋಷಣೆ ಮಾಡಿದ 5 ಗ್ಯಾರಂಟಿ ಯೋಜನೆಗಳಲ್ಲಿ ಈಗಾಗಳೆ 4 ಯೋಜನೆಗಳನ್ನು ಅನುಷ್ಥಾನ ಮಾಡಲಾಗಿದ್ದು, "ಯುವನಿಧಿ" ಯೋಜನೆ ಜಾರಿಗೆ ತರುವುದು ಬಾಕಿ ಇರುತ್ತದೆ. ಈ ಯೋಜನೆ ಅರ್ಜಿ ಸಲ್ಲಿಕೆ ಇತ್ಯಾದಿ ಮಾಹಿತಿಯ ಕುರಿತು ಸಚಿವ ಡಾ.ಶರಣಪ್ರಕಾಶ ಪಾಟೀಲ್ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.

ಈ ಕುರಿತು ಇತೀಚೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಶರಣಪ್ರಕಾಶ ಪಾಟೀಲ್  ರಾಜ್ಯ ಸರ್ಕಾರದಿಂದ ಈಗಾಗಲೇ ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ ಹಾಗೂ ಗೃಹಲಕ್ಷ್ಮಿ ಯೋಜನೆ ಸೇರಿದಂತೆ 4 ಗ್ಯಾರಂಟಿಗಳನ್ನು ಜಾರಿಗೊಳಿಸಲಾಗಿದೆ. ಬಾಕಿ ಉಳಿದುಕೊಂಡಿರುವ Yuva nidhi Scheme ಯೋಜನೆಯನ್ನು ಸರಳವಾಗಿ ತಂತ್ರಜ್ಞಾನ ಬಳಸಿ ಜಾರಿಗೆ ತರಲು ಭರದ ಸಿದ್ಧತೆ ಸಾಗಿದೆ ಎಂದು ತಿಳಿಸಿದ್ದಾರೆ.

ಯುವನಿಧಿ ಯೋಜನೆ ಜಾರಿಗೊಳಿಸೋದಕ್ಕೆ ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಹಾಗೂ ಜೀವನೋಪಾಯ ಇಲಾಖೆ ಹೊಣೆ ಹೊತ್ತಿದ್ದು. ರಾಜ್ಯದಲ್ಲಿ ಪದವೀಧರರು, ಡಿಪ್ಲೋಮಾ ಪದವೀಧರರು ಸೇರಿದಂತೆ 5 ಲಕ್ಷ ಯುವಕರು ಆರಂಭದ ವರ್ಷ ಯೋಜನೆಯಡಿ ನೆರವು ಪಡೆಯಲು ಅರ್ಹರಾಗುವ ಅಂದಾಜಿದೆ. ಇದಕ್ಕಾಗಿ ಬಜೆಟ್ ನಲ್ಲಿ 250 ಕೋಟಿ ಹಣ ಮೀಸಲಿಡಲಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Gruhalakhsmi-2023: ಅರ್ಜಿ ಸಲ್ಲಿಸಿದರು ಗೃಹಲಕ್ಷ್ಮಿ ಹಣ ಜಮಾ ಅಗದಿರಲು ಕಾರಣವೇನು? ಇವರಿಗೆ ಹಣ ಯಾವಾಗ ಜಮಾ ಅಗಲಿದೆ!

Yuvanidhi Scheme application- ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಕೆ ವಿಧಾನ:

ಈ ಹಿಂದಿನ ಗ್ಯಾರಂಟಿ ಯೋಜನೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿತ್ತು ಇದೇ ಮಾದರಿಯಲ್ಲಿ
ಯುವನಿಧಿ ಯೋಜನೆಗೆ ಸೇವಾ ಸಿಂಧು ಪೋರ್ಟಲ್ ನಲ್ಲಿ ಹೆಸರು ನೋಂದಣಿಗೆ ಅವಕಾಶ ಕಲ್ಪಿಸುವ ಚಿಂತನೆ ಇದೆ. ಬಳಕೆದಾರ ಸ್ನೇಹಿಯಾಗಿ ಅರ್ಜಿ ಸಲ್ಲಿಸುವ ವಿಧಾನ ಇರಲಿದ್ದು ಅರ್ಹ ಎಲ್ಲಾರಿಗೂ ಈ ಯೋಜನೆಯನ್ನು ತಲುಪಿಸುವ ಗುರಿಯನ್ನು ಹೊಂದಿದ್ದೇವೆ. 

ಶೀಘ್ರವೇ ಈ ಕುರಿತು ಅಧಿಕೃತ ಅರ್ಜಿ ಸಲ್ಲಿಕೆ ಮಾರ್ಗಸೂಚಿ ರೂಪಿಸಿ ಪದವೀಧರರಿಗೆ ಪ್ರತಿ ತಿಂಗಳು 3,000 ಹಾಗೂ ಡಿಪ್ಲೋಮಾ ಪದವೀಧರರಿಗೆ 1,500 ನೀಡುವಂತ ಯುವನಿಧಿ ಯೋಜನೆ ಅನುಷ್ಠಾನಗೊಳಿಸಿ, ಜಾರಿಗೆ ತರಲಾಗುತ್ತದೆ ಎಂದು ತಿಳಿಸಿದ್ದಾರೆ.

How can apply for yuva nidhi yojana- ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರು?

ನಿರುದ್ಯೋಗಿ ಯುವಜನರ ಕನಸಿಗೆ ಆರ್ಥಿಕ ಬೆಂಬಲ  ನೀಡವ ದೆಸೆಯಲ್ಲಿ 2022-23ನೇ ಶೈಕ್ಷಣಿಕ ವರ್ಷದಲ್ಲಿ ವೃತ್ತಿಪರ ಕೋರ್ಸುಗಳೂ ಸೇರಿದಂತೆ ಎಲ್ಲಾ ವಿಧದ ಪದವೀಧರ ಯುವಕ-ಯುವತಿಯರು, ಡಿಪ್ಲೊಮಾ ಹೊಂದಿದವರಿಗೆ ಈ ಯೋಜನೆಯಡಿ ಅರ್ಥಿಕ ನೆರವು ಪಡೆಯಬವುದಾಗಿದೆ.
 
ಪದವಿ ಪಡೆದು 180 ದಿನಗಳಾದರೂ ಉದ್ಯೋಗ ದೊರೆಯದ ಪದವೀಧರರಿಗೆ 24 ತಿಂಗಳ ಅವಧಿಗೆ ಮಾಸಿಕ 3000 ರೂ. ಹಾಗೂ ಡಿಪ್ಲೊಮಾದಾರರಿಗೆ ಮಾಸಿಕ 1500 ರೂ. ನಿರುದ್ಯೋಗ ಭತ್ಯೆಯನ್ನು ಅರ್ಹ ಪಲಾನುಭವಿಗಳ ಖಾತೆಗೆ ವರ್ಗಾಹಿಸಲಾಗುತ್ತದೆ.
 
ಈ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬೇಕಾಗಿದ್ದು, ಲಿಂಗತ್ವ ಅಲ್ಪಸಂಖ್ಯಾತರಿಗೂ ಈ ಸೌಲಭ್ಯ ಒದಗಿಸಲಾಗುವುದು ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಗ್ಯಾರಂಟಿ ಯೋಜನೆಗಳ ಅಂಕಣಗಳು:

Gruhalakshmi amount- ಗೃಹಲಕ್ಷ್ಮಿ ಹಣ ನಿಮ್ಮ ಖಾತೆಗೆ ಬಂದಿರುವುದನ್ನು ಚೆಕ್ ಮಾಡುವುದು ಹೇಗೆ?

Anna bhagya DBT amount- 1.07 ಕೋಟಿ ಫಲಾನುಭವಿಗಳಿಗೆ ಆಗಸ್ಟ್ ತಿಂಗಳ ಅನ್ನಭಾಗ್ಯ ಹಣ ವರ್ಗಾವಣೆ! ನಿಮಗೆ ಬಂತಾ? ಚೆಕ್ ಮಾಡಿ.

Gruha Lakshmi : ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಈಗ ಮತ್ತಷ್ಟು ಸರಳ! ಅರ್ಜಿ ಸಲ್ಲಿಸಲು ಇನ್ನು ಮುಂದೆ ಮೇಸೆಜ್ ಗಾಗಿ ಕಾಯಬೇಕಿಲ್ಲ- ಸಚಿವೆ ಲಕ್ಷ್ಮಿ ಹೆಬ್ಬಾಲಕರ್.

Annabhagya August amount: ಅನ್ನಭಾಗ್ಯ  ಆಗಸ್ಟ್ ತಿಂಗಳ ಹಣ ವರ್ಗಾವಣೆ ಪ್ರಾರಂಭ! ನಿಮ್ಮ ಖಾತೆಗೆ ಹಣ ಬಂತಾ ಚೆಕ್ ಮಾಡಿ.

Electricity bill download: ಪ್ರತಿ ತಿಂಗಳ ಕರೆಂಟ್ ಬಿಲ್ ಅನ್ನು ನಿಮ್ಮ ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಿಕೊಳ್ಳಬವುದು! ಇಲ್ಲಿದೆ ವೆಬ್ಸೈಟ್ ಲಿಂಕ್.

ಆಹಾರ ಇಲಾಖೆಯಿಂದ ರದ್ದಾದ ರೇಷನ್  ಕಾರ್ಡ ಪಟ್ಟಿ ಬಿಡುಗಡೆ | Release of canceled ration card list by food department