- Advertisment -
HomeGovt SchemesAdike Bele Parihara-ರೈತರಿಗೆ ₹104 ಕೋಟಿ ಬೆಳೆ ನಷ್ಟ ಪರಿಹಾರ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್

Adike Bele Parihara-ರೈತರಿಗೆ ₹104 ಕೋಟಿ ಬೆಳೆ ನಷ್ಟ ಪರಿಹಾರ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್

ಮೊನ್ನೆ ಬೆಂಗಳೂರಿನಲ್ಲಿ ಜರುಗಿದ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ವೇಳೆ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಎಸ್.ಎಸ್. ಮಲ್ಲಿಕಾರ್ಜುನ್ ಸಚಿವರು ಎಲೆ ಚುಕ್ಕೆ ರೋಗ ಹಾಗೂ ಹಳದಿ ರೋಗಗಳಿಂದ ಅಡಿಕೆ ಬೆಳೆಯಲ್ಲಿ ನಷ್ಟ ಅನುಭವಿಸಿದ(Adike Bele Parihara) ರೈತರಿಗೆ ಪರಿಹಾರ ನೀಡುವುದರ ಕುರಿತು ತಿಳಿಸಿರುವ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ.

ಪ್ರಕೃತಿ ವಿಕೋಪ ಮತ್ತು ರೋಗ-ಕೀಟ ಹಾವಳಿಯಿಂದ ಅಗುವ ಬೆಳೆ ನಷ್ಟಕ್ಕೆ(Bele Parihara) ರೈತರಿಗೆ ಆರ್ಥಿಕವಾಗಿ ನೆರವು ನೀಡಲು ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ NDRF ಮತ್ತು ಬೆಳೆ ವಿಮೆ ಯೋಜನೆಯಡಿ ರೈತರಿಗೆ ಬೆಳೆ ನಷ್ಟ ಪರಿಹಾರವನ್ನು ಒದಗಿಸಲಾಗುತ್ತಿದ್ದು ಈ ಕುರಿತು ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಹಂಚಿಕೊಂಡಿರುವ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ.

ಎಲೆ ಚುಕ್ಕೆ ರೋಗ ಹಾಗೂ ಹಳದಿ ರೋಗಗಳಿಂದ ತೊಂದರೆಗೆ ಒಳಗಾದ ರೈತರಿಗೆ ಅದಷ್ಟು ಶೀಘ್ರವಾಗಿ ಪರಿಹಾರ ಧನ ಬಿಡುಗಡೆ ಮಾಡಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್(S S Mallikarjun) ಅವರು ತಿಳಿಸಿದರು.

ಇದನ್ನೂ ಓದಿ: Bhagyalaxmi Bond-ಭಾಗ್ಯಲಕ್ಷ್ಮಿ ಬಾಂಡ್ 18 ವರ್ಷ ತುಂಬಿದ ಹೆಣ್ಣು ಮಕ್ಕಳಿಗೆ ₹1 ಲಕ್ಷ ಹಣ ಜಮಾ! ಯಾರಿಗೆಲ್ಲ ಸಿಗಲಿದೆ ಈ ಸೌಲಭ್ಯ?

ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, 2023-24ನೇ ಸಾಲಿನಲ್ಲಿ ರೈತರಿಗೆ ಪ್ರತಿ ಹೆಕ್ಟೇರ್ಗೆ ರೂ. 4000/- ಗಳಂತೆ 1.5 ಹೆಕ್ಟೇರ್ ವರೆಗೆ ಪ್ರತಿ ಫಲಾನುಭವಿಗೆ ಗರಿಷ್ಠ ರೂ 6000/- ಮೊತ್ತದ ಸಸ್ಯ ಸಂರಕ್ಷಣಾ ಔಷಧಿಗಳನ್ನು 6250 ಹೆಕ್ಟೇರ್ ಪ್ರದೇಶಕ್ಕೆ ವಿತರಿಸಿ ರೂ. 250.00 ಲಕ್ಷಗಳ ಅನುದಾನವನ್ನು 12,300 ಅಡಿಕೆ ಬೆಳೆಗಾರರಿಗೆ ನೀಡಲಾಗಿರುತ್ತದೆ ಎಂದು ತಿಳಿಸಿದರು.

ಅಡಿಕೆ(Adike) ಎಲೆ ಚುಕ್ಕೆ ರೋಗದ ನಿಯಂತ್ರಣಕ್ಕಾಗಿ ಹೆಕ್ಸೋಕೊನೋಜೋಲ್, ಟೆಬುಕೊನೊಜೋಲ್, ಪ್ರೋಪಿಕೊನೊಜೋಲ್ ಮತ್ತು ಪ್ರೋಪಿನೇಬ್ ಎಂಬ ಸಸ್ಯ ಸಂರಕ್ಷಣಾ ಔಧಿಗಳನ್ನು ತಜ್ಞರ ಶಿಫಾರಸಿನನ್ವಯ ಹಾನಿಯಾದ ಪ್ರದೇಶದ ರೈತರಿಗೆ ವಿತರಿಸಲಾಗುತ್ತಿದೆ. ಅಡಿಕೆ ಎಲೆ ಚುಕ್ಕೆ ರೋಗ ಹಾಗೂ ಹಳದಿ ಎಲೆ ರೋಗಗಳ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ನೇಮಿಸಿರುವ ವೈಜ್ಞನಿಕ ತಂಡದ ಸಮಿತಿಯು ಫೈಟೋಸ್ಯಾನಿಟರಿ ಕ್ರಮಗಳ ಅಳವಡಿಕೆ, ಪೋಷಕಾಂಶಗಳ ನಿರ್ವಹಣೆ, ಸಸ್ಯ ಸಂರಕ್ಷಣೆ ಔಷಧಿಗಳನ್ನು ತಜ್ಞರ ಶಿಫಾರಸ್ಸಿನನ್ವಯ ಹಾನಿಯಾದ ಪ್ರದೇಶದ ರೈತರಿಗೆ ವಿತರಿಸಲಾಗುತ್ತಿದೆ.

ಇದನ್ನೂ ಓದಿ: Property Registration-ಆಸ್ತಿ ನೋಂದಣಿ ನಿಯಮದಲ್ಲಿ ಮಹತ್ವದ ಬದಲಾವಣೆ!

adike thota

Arecanut Crop Loss Amount-ರೈತರಿಗೆ ₹104 ಕೋಟಿ ಬೆಳೆ ನಷ್ಟ ಪರಿಹಾರ:

ಅಡಿಕೆ ಎಲೆ ಚುಕ್ಕೆ ರೋಗದಿಂದ ಹಾನಿಯಾಗಿರುವ ಸುಮಾರು 53,977 ಹೆಕ್ಟೇರ್ ಪ್ರದೇಶಕ್ಕೆ ರೂ. 225.73 ಕೋಟಿಗಳ ಪ್ರಸ್ತಾವನೆಯನ್ನು ಸಿದ್ದಪಡಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿರುತ್ತದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನ 60:40ರ ಅನುಪಾತದಲ್ಲಿದ್ದು, ಈ ಕಾರ್ಯಕ್ರಮವು 2 ವರ್ಷಗಳ ಅವಧಿಯದ್ದಾಗಿರುತ್ತದೆ.

2024-25ನೇ ಸಾಲಿಗೆ ರೂ. 112.83 ಕೋಟಿಗಳಿಗೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. ಇದರಲ್ಲಿ ಕೇಂದ್ರ ಪಾಲಿನ ಅನುದಾನ ರೂ. 6771.75 ಲಕ್ಷಗಳಲ್ಲಿ 3700.00 ಲಕ್ಷಗಳನ್ನು ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರದ ಪಾಲನ್ನು ಸೇರಿಸಿ ಪರಿಹಾರ ಹಣವನ್ನು ಶೀಘ್ರದಲ್ಲೇ ರೈತರ ಖಾತೆ ಜಮಾ ಮಾಡಲಾಗುತ್ತದೆ ಎಂದು ಸಚಿವರು ಉತ್ತರದಲ್ಲಿ ಉಲೇಖಿಸಿದ್ದಾರೆ.

ಇದನ್ನೂ ಓದಿ: LPG Cylinder Price-ಈ ತಿಂಗಳಿನಿಂದ ಎಲ್ ಪಿ ಜಿ ಸಿಲಿಂಡರ್ ದರದಲ್ಲಿ ಏರಿಕೆ!

Adike Dhoti Subsidy-ಅಡಿಕೆ ದೋಟಿ ಖರೀದಿಗೆ ಶೇ.50 ರಂತೆ ಸಹಾಯಧನ:

ಅಡಿಕೆ ಬೆಳೆಗಾರರಿಗೆ ಅಡಿಕೆ ಬೆಳೆಯ ಕಟಾವು ಹಾಗೂ ಸಂಪರಣೆಗಾಗಿ (ದೋಟಿ) ಖರೀದಿಸಲು ಕೃಷಿ ಯಾಂತ್ರೀಕರಣ ಯೋಜನೆಯಡಿ ಸಾಮಾನ್ಯ ವರ್ಗದವರಿಗೆ ಶೇ. 40 ರಷ್ಟು ಹಾಗೂ ಪರಿಶಿಷ್ಟ ಜಾತಿ / ಪಂಗಡದವರಿಗೆ ಶೇ.50 ರಂತೆ ಸಹಾಯಧನ ನೀಡಲಾಗುತ್ತಿದೆ. 2023-24ನೇ ಸಾಲಿನಲ್ಲಿ 1201 ಫಲಾನುಭವಿಗಳಿಗೆ ರೂ 366.68 ಲಕ್ಷಗಳ ಸಹಾಯಧನ ನೀಡಲಾಗಿದೆ. ಅಡಿಕೆ ಎಲೆ ಚುಕ್ಕೆ ರೋಗದ ನಿಯಂತ್ರಣ ಕುರಿತು ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ತಜ್ಞರ ಸಹಯೋಗದೊಂದಿಗೆ ತರಬೇತಿ ಕಾಯಾಗಾರಗಳು ಹಾಗೂ ಪ್ರಾತ್ಯಕ್ಷಿಕೆಗಳನ್ನು ಏರ್ಪಡಿಸುವುದರ ಮೂಲಕ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ: Property Documents-ಜಿಲ್ಲಾವಾರು ಅಧಿಕೃತ ಮತ್ತು ಅನಧಿಕೃತ ಆಸ್ತಿಗಳ ವಿವರ ಬಿಡುಗಡೆ!

Bele Parihara

Eligibility Criteria For Bele Parihara-ಯಾವೆಲ್ಲ ರೈತರಿಗೆ ಈ ಪರಿಹಾರದ ಹಣ ಸಿಗಲಿದೆ:

ರೈತರ ಅಡಿಕೆ ಬೆಳೆಯುವ ಎಲೆ ಚುಕ್ಕೆ ರೋಗ ಹಾಗೂ ಹಳದಿ ರೋಗಗಳಿಂದ ತೋಟವು ಹಾನಿಗೊಳಲಾಗಿ ನಿಮ್ಮ ತಾಲ್ಲೂಕಿನ ತೋಟಗಾರಿಕೆ ಇಲಾಖೆಯ ಕಚೇರಿಯಲ್ಲಿ ಅಗತ್ಯ ದಾಖಲಾತಿಗಳನ್ನು ಸಲ್ಲಿಸಿ ಅರ್ಜಿಯನ್ನು ಸಲ್ಲಿಸಿದ ಅರ್ಹ ಫಲಾನುಭವಿ ರೈತರಿಗೆ ತಮ್ಮ ಬ್ಯಾಂಕ್ ಖಾತೆಗೆ ನೇರವಾಗಿ DBT ಮೂಲಕ ಈ ಬೆಳೆ ನಷ್ಟ ಪರಿಹಾರದ ಹಣ ಜಮಾ ಅಗಲಿದೆ. ಇದಕ್ಕಾಗಿ ಪ್ರಸ್ತುತ ಯಾವುದೇ ಬಗ್ಗೆಯ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

S S Mallikarjun-ಎಸ್.ಎಸ್. ಮಲ್ಲಿಕಾರ್ಜುನ್ ಸಚಿವರು ನೀಡಿರುವ ಉತ್ತರ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ- Download Now
Karnataka Horticulture Department-ತೋಟಗಾರಿಕೆ ಇಲಾಖೆಯ ಅಧಿಕೃತ ವೆಬ್ಸೈಟ್- CLICK HERE

- Advertisment -
LATEST ARTICLES

Related Articles

- Advertisment -

Most Popular

- Advertisment -