2025-26ರ ವರ್ಷಕ್ಕೆ ಭಾರತೀಯ ಸೈನ್ಯಕ್ಕೆ ಅಗ್ನಿವೀರ್ ನೇಮಕಾತಿಗಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ – ಆನ್‍ಲೈನ್(Agniveer recruitment) ನೋಂದಣಿಯನ್ನು ಮಾಡಿಕೊಳ್ಳಲು ಅವಕಾಶವನ್ನು ನೀಡಲಾಗಿದ್ದು ಇದರ ಕುರಿತು ಸಂಬಂಧಪಟ್ಟ ಕಚೇರಿಯಿಂದ ಹೊರಡಿಸಿರುವ ಅಧಿಕೃತ ಪ್ರಕಟಣೆ ವಿವರವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ.
ಭಾರತೀಯ ಸೈನ್ಯದಲ್ಲಿ ಸೇವೆ ಸಲ್ಲಿಸಲು(Indian Army Agniveer) ಆಸಕ್ತರಿರುವ ಯುವಕ-ಯುವತಿಯರಿಗೆ ಸಿಹಿ ಸುದ್ದಿ! 2025-26ನೇ ಸಾಲಿನ ಅಗ್ನಿವೀರ್ ನೇಮಕಾತಿಯಲ್ಲಿ ಭಾಗವಹಿಸಲು ಸಾಮಾನ್ಯ ಪ್ರವೇಶ ಪರೀಕ್ಷೆ (CEE)ಗೆ ಆನ್‌ಲೈನ್ ನೋಂದಣಿಯನ್ನು ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.
ಇದನ್ನೂ ಓದಿ: Scholarship-SSLC ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ರೂ 15,000/- ಪ್ರೋತ್ಸಾಹ ಧನ!
ಕರ್ನಾಟಕದ ಎಲ್ಲಾ ಜಿಲ್ಲೆಗಳ ಅಭ್ಯರ್ಥಿಗಳಿಗೆ ಈ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದ್ದು, ಅರ್ಜಿ ಸಲ್ಲಿಸಿ ನೋಂದಣಿಯನ್ನು(Agniveer 8th pass job) ಮಾಡಿಕೊಳ್ಳಲು ಎಲ್ಲಿಯವರೆಗೆ ಅವಕಾಶ ನೀಡಲಾಗಿದೆ? ಯಾವೆಲ್ಲ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ? ಅರ್ಜಿಯನ್ನು ಹೇಗೆ ಸಲ್ಲಿಸಬೇಕು? ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನದ ಮಾಹಿತಿ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಯಾವುವು ಇತ್ಯಾದಿ ವಿವರವನ್ನು ಇಲ್ಲಿ ಪ್ರಕಟಿಸಲಾಗಿದೆ.
Agniveer 8th pass job 2025-ಅರ್ಜಿ ಸಲ್ಲಿಸಿ ನೋಂದಣಿಯನ್ನು ಮಾಡಿಕೊಳ್ಳಲು ಎಲ್ಲಿಯವರೆಗೆ ಅವಕಾಶ ನೀಡಲಾಗಿದೆ?
2025-26ರ ವರ್ಷದ ಅಗ್ನಿವೀರ್ ನೇಮಕಾತಿ ರ್ಯಾಲಿಗಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಆನ್‍ಲೈನ್ ನೋಂದಣಿ ಪ್ರಕ್ರಿಯೆಯು 2025ನೇ ಮಾರ್ಚ್ 12 ರಿಂದ ಪ್ರಾರಂಭವಾಗಿದ್ದು, ಏಪ್ರಿಲ್ 25 ರವರೆಗೆ ನೋಂದಣಿ ಮಾಡಿಕೊಳ್ಳಬಹುದು.
ಇದನ್ನೂ ಓದಿ: Car Subsidy Yojane-ಆಟೋ ಮತ್ತು ಕಾರು ಖರೀದಿಸಲು ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!
Agniveer online application-ಯಾವೆಲ್ಲ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ?
ಕರ್ನಾಟಕದ ಎಲ್ಲಾ ಜಿಲ್ಲೆಗಳ ಅಭ್ಯರ್ಥಿಗಳು ಅಗ್ನಿವೀರ್ ಜನರಲ್ ಡ್ಯೂಟಿ, ಅಗ್ನಿವೀರ್ ಟೆಕ್ನಿಕಲ್, ಅಗ್ನೀವೀರ್ ಕಚೇರಿ ಸಹಾಯಕ /ಸ್ಟೋರ್ ಕೀಪರ್ ತಾಂತ್ರಿಕ, ಅಗ್ನಿವೀರ್ ಟ್ರೇಡ್‍ಮನ್ ಗೆ 10 ತರಗತಿ ಪಾಸಾಗಿರಬೇಕು ಹಾಗೂ ಅಗ್ನಿವೀರ್ ಜನರಲ್ ಡ್ಯೂಟಿ (ಮಹಿಳಾ ಮಿಲಿಟರಿ ಪೋಲಿಸ್), ನಸಿರ್ಂಗ್ ಅಸಿಸ್ಟೆಂಟ್, ನಸಿರ್ಂಗ್ ಅಸಿಸ್ಟೆಂಟ್ ಪಶುವೈದ್ಯಕೀಯ ಮತ್ತು ಸಿಪಾಯ್ ಫಾರ್ಮಾ ಅಗ್ನಿವೀರ್ ಟ್ರೇಡ್‍ಮನ್ ಗೆ 8 ತರಗತಿ ಪಾಸಾಗಿರಬೇಕು ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ನೋಂದಾಯಿಸಿಕೊಳ್ಳಲು ಪ್ರತಿ ವರ್ಗದ ವಯಸ್ಸು, ಶೈಕ್ಷಣಿಕ ಅರ್ಹತೆಗಳು ಮತ್ತು ಇತರ ಮಾನದಂಡಗಳ ಬಗ್ಗೆ ವಿವರವಾದ ಮಾಹಿತಿಯನ್ನು www.joinindianarmy.nic.in ನಲ್ಲಿ ಅಪ್‍ಲೋಡ್ ಮಾಡಲಾಗಿರುವ ಅಧಿಸೂಚನೆಯಲ್ಲಿ ಲಭ್ಯವಿರುತ್ತದೆ.
ಇದನ್ನೂ ಓದಿ: Rain Forecast-ಕರ್ನಾಟಕ ಮಳೆ ಮುನ್ಸೂಚನೆ! ಜಿಲ್ಲಾವಾರು ತಾಪಮಾನ ಎಷ್ಟಿದೆ?

How to apply for Agniveer recruitment-ಅರ್ಜಿಯನ್ನು ಹೇಗೆ ಸಲ್ಲಿಸಬೇಕು?
ಆಸಕ್ತ ಅರ್ಹ ಅಭ್ಯರ್ಥಿಗಳು ಭಾರತೀಯ ಸೈನ್ಯದ ಅಧಿಕೃತ ವೆಬ್‍ಸೈಟ್ www.joinindianarmy.nic.in ಅನ್ನು ನೇರವಾಗಿ ಭೇಟಿ ಮಾಡಿ ಖಾತೆಯನ್ನು ರಚಿಸಬೇಕು ಮತ್ತು ಅಗತ್ಯ ವಿವರಗಳನ್ನು ಒದಗಿಸುವ ಮೂಲಕ ಅರ್ಜಿಯನ್ನು ಸಲ್ಲಿಸಿ ನೋಂದಣಿಯನ್ನು ಮಾಡಿಕೊಳ್ಳಬೇಕು.
Online Application Link Agniveer recruitment-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನದ ಮಾಹಿತಿ:
ಆಸಕ್ತ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳನ್ನು ಸಿದ್ದಪಡಿಸಿಕೊಂಡು ಈ ಕೆಳಗೆ ನೀಡಿರುವ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಿ ನಿಮ್ಮ ಮೊಬೈಲ್ ನಲ್ಲೇ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಇದನ್ನೂ ಓದಿ: Mobile Repair Training-ಉಚಿತ ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!
Step-1: ಮೊದಲಿಗೆ Apply Now ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ತಂತ್ರಾಂಶವನ್ನು ಪ್ರವೇಶ ಮಾಡಬೇಕು.
Step-2: ಇದಾದ ಬಳಿಕ ಇಲ್ಲಿ ಕಾಣುವ ಕ್ಯಾಪ್ಚ್ ಕೋಡ್ ಅನ್ನು ನಮೂದಿಸಿ ಅರ್ಜಿ ಸಲ್ಲಿಸುವ ವೆಬ್ಸೈಟ್ ಅನ್ನು ಪ್ರವೇಶ ಮಾಡಬೇಕು.
Step-3: ಇಲ್ಲಿ ಮುಖಪುಟದಲ್ಲಿ ಕಾಣುವ “Agnipath” ಆಯ್ಕೆಯ ಮೇಲೆ ಕ್ಲಿಕ್ ಮಾಡಿ “User Registration” ಬಟನ್ ಮೇಲೆ ಕ್ಲಿಕ್ ಮಾಡಿ “Continue” ಬಟನ್ ಮೇಲೆ ಕ್ಲಿಕ್ ಮಾಡಿ ಅಭ್ಯರ್ಥಿಯ ಅಧಾರ್ ಕಾರ್ಡ ವಿವರವನ್ನು ಸಲ್ಲಿಸಿ ಬಳಕೆದಾರ ನೋಂದಣಿಯನ್ನು ಮಾಡಿಕೊಂಡು ಲಾಗಿನ್ ಅಗಿ ಇಲ್ಲಿ ಕೇಳುವ ಎಲ್ಲ ಅಗತ್ಯ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ “Submit” ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.
ಇದನ್ನೂ ಓದಿ: Ration Card List-2025: ತಾಲೂಕುವಾರು ಅನರ್ಹರ ರೇಷನ್ ಕಾರ್ಡ್ ಪಟ್ಟಿ ಬಿಡುಗಡೆ!
Agniveer Documents-ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು:
1) ಅರ್ಜಿದಾರರ ಆಧಾರ್ ಕಾರ್ಡ ಪ್ರತಿ
2) ಪೋಟೋ
3) ವಿದ್ಯಾರ್ಹತೆ ಪ್ರಮಾಣ ಪತ್ರ
4) ನಿವಾಸ ದೃಡೀಕರಣ
5) ಅಂಕಪಟ್ಟಿ
6) ಬ್ಯಾಂಕ್ ಪಾಸ್ ಬುಕ್ ಪ್ರತಿ
7) ಮೊಬೈಲ್ ನಂಬರ್
ನೋಂದಣಿ ಪ್ರಕ್ರಿಯೆಯಲ್ಲಿ ಯಾವುದೇ ಸಮಸ್ಯೆಗಳ ಉದ್ಬವಿಸಿದಲ್ಲಿ ಈ ಕೆಳಗೆ ನೀಡಿರುವ ನೇಮಕಾತಿ ಕಚೇರಿ ದೂರವಾಣಿ ಸಂಖ್ಯೆಗೆ ಅಥವಾ ಮೇಲ್ ವಿಳಾಸಕ್ಕೆ ಸಂಪರ್ಕಿಸಿ ಮಾಹಿತಿಯನ್ನು ಪಡೆಯಬಹುದು.
1) ಬೆಂಗಳೂರು ನೇಮಕಾತಿ ಕಚೇರ
ಫೋನ್: 080-29516517
ಇಮೇಲ್: arobengaluru@gmail.com
2) ಮಂಗಳೂರು ನೇಮಕಾತಿ ಕಚೇರಿ
ಫೋನ್: 082-42951279
ಇಮೇಲ್: aromangalore@gmail.com
3) ಬೆಳಗಾವಿ ನೇಮಕಾತಿ ಕಚೇರಿ
ಫೋನ್: 0831-2950001
ಇಮೇಲ್: arobgm4@gmail.com