Agri startup scheme-ಕೃಷಿ ಇಲಾಖೆಯಿಂದ ಕೃಷಿ ನವೋದ್ಯಮ ಯೋಜನೆಯಡಿ ಅರ್ಜಿ ಆಹ್ವಾನ! ಶೇ 50% ಸಹಾಯಧನ 50 ಲಕ್ಷದವರೆಗೆ.

Facebook
Twitter
Telegram
WhatsApp

ಕೃಷಿ ಪದವೀಧರರು, ವಿದ್ಯಾವಂತ ಯುವಕರು, ಆಸಕ್ತ ಪ್ರಗತಿಪರ ರೈತರು, ನವೋದ್ಯಮಿಗಳು ಮತ್ತು ಇತರೆ ಫಲಾನುಭವಿಗಳಿಗಾಗಿ ಕೃಷಿ ನವೋದ್ಯಮ(Krishi navodhyama yojana)ಯೋಜನೆಯಡಿ ಆರ್ಥಿಕ ಸೌಲಭ್ಯವನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಕೃಷಿ ಮಾರುಕಟ್ಟೆಗೆ ಸಂಬಂಧಿಸಿದ ವಲಯಗಳಲ್ಲಿ ನಾವೀನ್ಯತೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೃಷಿ ಉದ್ಯಮಗಳಿಗೆ ಉತ್ತೇಜನ ನೀಡಲು ‘ನವೋದ್ಯಮ'(startup) ಎಂಬ ಹೊಸ ಯೋಜನೆಯನ್ನು ಕೃಷಿ ಇಲಾಖೆಯಿಂದ ಜಾರಿಗೆ ತರಲಾಗಿದೆ.

ಆಹಾರ ಬೆಳೆಗಳ ಉತ್ಪಾದನೆಯಲ್ಲಿ ದೇಶವು ಸ್ವಾವಲಂಬನೆಯನ್ನು ಈಗಾಗಲೇ ಸಾಧಿಸಿದ್ದು ಉತ್ಪಾದಕತೆಯ ಹೆಚ್ಚಳ, ಸಂಪನ್ಮೂಲಗಳ ಸದ್ಬಳಕೆ, ಸುಧಾರಿತ ಕೃಷಿ ಜೊತೆಗೆ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ಮೌಲ್ಯವರ್ಧನೆಯಿಂದ ರೈತರ ಆದಾಯ ಹೆಚ್ಚಿಸುವಲ್ಲಿ ಕಾರ್ಯನಿರ್ವಹಿಸಬೇಕಾಗಿರುತ್ತದೆ. ಈಗಾಗಲೇ ಹಲವಾರು ರೈತರು ಉದ್ಯಮಿಗಳಾಗಿ ಸಂಸ್ಕರಣೆ ಹಾಗೂ ಮೌಲ್ಯವರ್ಧನೆಯಿಂದ ತಮ್ಮ ಉತ್ಪನ್ನವನ್ನು ಮಧ್ಯವರ್ತಿಗಳಿಲ್ಲದೆ ಮಾರಾಟ ಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.

ಇದನ್ನೂ ಓದಿ: New year-2024: ಹೊಸ ವರ್ಷ ಇಂದಿನಿಂದ ಯಾವೆಲ್ಲ ವಸ್ತುಗಳು ದುಬಾರಿ? ಯಾವೆಲ್ಲ ನಿಯಮದಲ್ಲಿ ಬದಲಾವಣೆ!

ಕೃಷಿ ಕ್ಷೇತ್ರದಲ್ಲಿ ಉದ್ಯಮಶೀಲತೆಯನ್ನು ಹೆಚ್ಚಿಸಲು ಹಾಗೂ ಗ್ರಾಮೀಣ ಭಾಗದ ಯುವಕರಿಗೆ ಉದ್ಯೋಗ ಸೃಜನೆಗಾಗಿ ಕೃಷಿಯಲ್ಲಿನ ನೂತನ ತಾಂತ್ರಿಕತೆಗಳು ಹಾಗೂ ನವೀನ ಪರಿಕಲ್ಪನೆಗಳ ವಾಣಿಜೀಕರಣವನ್ನು ಉತ್ತೇಜಿಸಲು ಕೃಷಿ ನವೋದ್ಯಮ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲಾಗುತ್ತಿದೆ.

ಗ್ರಾಮೀಣ ಪ್ರದೇಶದಲ್ಲಿ ವಿದ್ಯಾವಂತ ಯುವಕರು ಕೃಷಿಯಲ್ಲಿ ಉದ್ಯಮ ಕೈಗೊಳ್ಳುವುದರಿಂದ ಉದ್ಯೋಗ ಸೃಜನೆಯಾಗಿ ನಿರುದ್ಯೋಗದ ಸಮಸ್ಯೆಗೆ ಪರಿಹಾರ ದೊರಕಿದಂತಾಗುತ್ತದೆ. ಕೃಷಿ ಪದವೀಧರರು, ವಿದ್ಯಾವಂತ ಯುವಕರು, ಆಸಕ್ತ ಪ್ರಗತಿಪರ ರೈತರು ಕೃಷಿಯಲ್ಲಿನ ನವೀನ ತಾಂತ್ರಿಕತೆಗಳು ಹಾಗೂ ನೂತನ ಪರಿಕಲ್ಪನೆಗಳಿಂದ ಕೃಷಿಯಲ್ಲಿ ನವೋದ್ಯಮಗಳನ್ನು ಪ್ರಾರಂಭಿಸುವುದರಿಂದ ಗ್ರಾಮೀಣ ಪ್ರದೇಶದ ಆದಾಯ ಹೆಚ್ಚಿಸುವುದರ ಜೊತೆಗೆ ಜನರು ಗ್ರಾಮೀಣ ಪ್ರದೇಶಗಳಲ್ಲಿಯೇ ನೆಲೆಸುವಲ್ಲಿ ಈ ಯೋಜನೆಯು ಸಹಕಾರಿಯಾಗಲಿದೆ ಎಂದು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ.

Agri startup scheme in karnataka-ಕೃಷಿ ನವೋದ್ಯಮ  ಯೋಜನೆಯ ಗುರಿ ಮತ್ತು ಉದ್ದೇಶಗಳು:

ಗುರಿಗಳು:

ಕೃಷಿ ಕ್ಷೇತ್ರದಲ್ಲಿ ಉದ್ಯಮಶೀಲತೆಯನ್ನು ಹೆಚ್ಚಿಸಲು ಹಾಗೂ ಗ್ರಾಮೀಣ ಭಾಗದ ಯುವಕರಿಗೆ ಉದ್ಯೋಗ ಸೃಜನೆಗಾಗಿ ಕೃಷಿಯಲ್ಲಿನ ನೂತನ ತಾಂತ್ರಿಕತೆಗಳು ಹಾಗೂ ನವೀನ ಪರಿಕಲ್ಪನೆಗಳ ವಾಣಿಜ್ಯಕರಣವನ್ನು ಉತ್ತೇಜಿಸುವ ಗುರಿಯೊಂದಿಗೆ ಕೃಷಿ ನವೋದ್ಯಮ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಯೋಜಿಸಲಾಗಿದೆ.

ಇದನ್ನೂ ಓದಿ: LPG cylinder ekyc-ಎಲ್.ಪಿ.ಜಿ ಗ್ಯಾಸ್ ಇ-ಕೆವೈಸಿ ಕುರಿತು ಆಹಾರ ಇಲಾಖೆಯಿಂದ ಮತ್ತೊಂದು ಪ್ರಕಟಣೆ!

ಉದ್ದೇಶಗಳು:

1. ಕೃಷಿಯಲ್ಲಿನ ನವೀನ ತಾಂತ್ರಿಕತೆಗಳು ಹಾಗೂ ನೂತನ ಪರಿಕಲ್ಪನೆಗಳಿಂದ ಕೃಷಿಯಲ್ಲಿ ನವೋದ್ಯಮಗಳನ್ನು ಪ್ರಾರಂಭಿಸಿ ಕೃಷಿ ವಲಯದಲ್ಲಿ ಉದ್ಯಮಶೀಲತೆಯನ್ನು ಹೆಚ್ಚಿಸುವುದು.

2. ಕೃಷಿ ಪದವೀಧರರು, ವಿದ್ಯಾವಂತ ಯುವಕರು, ಆಸಕ್ತ ಪ್ರಗತಿಪರ ರೈತರು ಕೃಷಿಯಲ್ಲಿ ನವೋದ್ಯಮ ಆರಂಭಿಸಿಸಲು ಸಹಾಯ ನೀಡಿ ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಜನೆ ಮಾಡುವುದು.

3. ಕೃಷಿ ವಿಶ್ವ ವಿದ್ಯಾಲಯಗಳಲ್ಲಿ ಹಾಗೂ ಇತರ ಸಂಶೋದನಾ ಸಂಸ್ಥೆಗಳಲ್ಲಿ ಅಭಿವೃದ್ಧಿಪಡಿಸಲಾದ ನೂತನ ವಾಣಿಜ್ಯಕರಣವನ್ನು ಉತ್ತೇಜಿಸುವುದು.

Agri startup application- ಎಲ್ಲಿ ಅರ್ಜಿ ಸಲ್ಲಿಸಬೇಕು?

ಆಸಕ್ತ ಅಭ್ಯರ್ಥಿಗಳು ನಿಮ್ಮ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಅಥವಾ ನಿಮ್ಮ ಹೋಬಳಿಯ ರೈತ ಸಂಪರ್ಕ ಕೇಂದ್ರ ಭೇಟಿ ಮಾಡಿ ಅಗತ್ಯ ದಾಖಲಾತಿಗಳನ್ನು ಒದಗಿಸಿ ಅರ್ಜಿ ಸಲ್ಲಿಸಬವುದಾಗಿದೆ. 

ಇದನ್ನೂ ಓದಿ: free driving training-ಉಚಿತ ವಸತಿ ಊಟ ಸಹಿತ 30 ದಿನಗಳ ಲಘು ಮತ್ತು ಭಾರಿ ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ!

ಯೋಜನೆಯು ಈ ಕೆಳಕಂಡಂತೆ 3 ಪ್ರಮುಖ ಘಟಕಗಳನ್ನು ಒಳಗೊಂಡಿರುತ್ತದೆ:

A) ಹೊಸ ಕೃಷಿ ನವೋದ್ಯಮಗಳಿಗೆ (Startups at Incubation Stage)ಆರ್ಥಿಕನೆರವು: ಕೃಷಿ ಕ್ಷೇತ್ರದಲ್ಲಿ ನೂತನ ಪರಿಕಲ್ಪನೆಯೊಂದಿಗೆ ಆರಂಭಿಸುವ ಹೊಸ ಕೃಷಿ ನವೋದ್ಯಮಿಗಳಿಗೆ ಅನುಮೋದಿತ ಯೋಜನಾ ವರದಿಯ ಶೇಕಡ 50 ರಷ್ಟು ಸಹಾಯಧನವನ್ನು (ಕನಿಷ್ಟ-ರೂ. 5.00 ಲಕ್ಷದಿಂದ ಗರಿಷ್ಟರೂ. 20 ಲಕ್ಷಗಳವರೆಗೆ) ಬ್ಯಾಂಕ್ ಮುಖಾಂತರ(Backended subsidy) ನೀಡಲಾಗುವುದು. ಸಾಲದ

B) ಈಗಾಗಲೇ ಸ್ಥಾಪಿಸಲಾದ ನವೋದ್ಯಮಗಳ ವಿಸ್ತರಣೆ ಅಥವಾ ಮೇಲ್ದರ್ಜೆಗೇರಿಸಲು (Scale up of business/Expansion of established Startups)  ವಲಯದಲ್ಲಿ ಈಗಾಗಲೇ ಸ್ಥಾಪಿಸಲಾದ ನವೋದ್ಯಮಗಳ ವಿಸ್ತರಣೆಗಾಗಿ ಹಾಗೂ ‘ಉನ್ನತೀಕರಣಕ್ಕಾಗಿ ಯೋಜನಾ ವರದಿಯ ಶೇಕಡ 50 ರಷ್ಟು ಸಹಾಯಧನವನ್ನು (ಕನಿಷ್ಟ- ರೂ. 20 ಲಕ್ಷದಿಂದ ಗರಿಷ್ಟರೂ. 50 ಲಕ್ಷಗಳವರೆಗೆ) ಕೃಷಿವಲಯದ ನವೋದ್ಯಮಿಗಳಿಗೆ ಬ್ಯಾಂಕ್ ಸಾಲದ ಮುಖಾಂತರ (Backended subsidy) ನೀಡಲಾಗುವುದು.

ಇದನ್ನೂ ಓದಿ: Farm Pond application-ಶೇ 90 ಸಹಾಯಧನದಲ್ಲಿ ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ಮಾಡಿಕೊಳ್ಳಲು ರೈತರಿಂದ ಅರ್ಜಿ ಆಹ್ವಾನ!

C) ಕೃಷಿ ನವೋದ್ಯಮಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮ (Mentoring and Acceleration Programme -MAP):ಆಯ್ಕೆಯಾದ ನವೋದ್ಯಮಿಗಳ ಸಾಮರ್ಥ್ಯಾಭಿವೃದ್ಧಿಗೆ ធំ ប, ICAR, CFTRI, CSIR,C- CAMP, e ad e ಸಂಸ್ಥೆಗಳಾದ ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಡಿ ಸ್ಥಾಪಿತವಾಗಿರುವ ಕೃಷಿ ನಾವೀನ್ಯತೆಗಾಗಿ ಶ್ರೇಷ್ಠತೆಯ ಕೇಂದ್ರಗಳ ಮೂಲಕ ತರಬೇತಿಗಳನ್ನು ನೀಡಲಾಗುತ್ತದೆ.

karnataka Agriculture department website-ಇನ್ನು ಹೆಚ್ಚಿನ ಮಾಹಿತಿಗಾಗಿ:

ಕೃಷಿ ನವೋದ್ಯಮ ಯೋಜನೆಯ ಮಾರ್ಗಸೂಚಿ: Download Now
ಕೃಷಿ ಇಲಾಖೆ ವೆಬ್ಸೈಟ್: click here

Facebook
Twitter
Telegram
WhatsApp
Picture of siddesh

siddesh

Leave a Comment

Top Stories

land documents

agricultural land documents: ಜಮೀನನ್ನು ಖರೀದಿ ಮಾಡುವ ಮುನ್ನ ಯಾವೆಲ್ಲಾ ದಾಖಲೆಗಳನ್ನು ಚೆಕ್ ಮಾಡಬೇಕು?

ಕೃಷಿ ಭೂಮಿ ಖರೀದಿಸುವ ಮುಂಚೆ ಯಾವ ಯಾವ ದಾಖಲೆಗಳನ್ನು ಮುಖ್ಯವಾಗಿ ಚೆಕ್ ಮಾಡಬೇಕು ಮತ್ತು ಯಾವೆಲ್ಲ ಮಾಹಿತಿಯನ್ನು ಪರೀಶೀಲನೆ ಮಾಡಬೇಕು? ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಒಂದೊಮ್ಮೆ ನೀವು ಖರೀದಿ ಮಾಡುತ್ತಿರುವ ಜಮೀನಿನ ದಾಖಲೆಗಳು

sarakri yojane

sarakri yojane- ಸಂಚಾರಿ ಮಾರಾಟ ಮಳಿಗೆ ಖರೀದಿಗೆ ರೂ 5.00 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

ಡಾ ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದಿಂದ ವಿವಿಧ ಯೋಜನೆಯಡಿ ಸಬ್ಸಿಡಿಯ ಪ್ರಯೋಜನ ಪಡೆದುಕೊಳ್ಳಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 30-10-2024 ಕೊನೆಯ ದಿನಾಂಕವಾಗಿದೆ. ಕುಶಲಕಮಿಗಳ ಅಭಿವೃದ್ದಿಗೆ

Crop insurance

Rabi Crop Insurance-ಹಿಂಗಾರು ಬೆಳೆಗಳಿಗೆ ಬೆಳೆ ವಿಮೆ ಮಾಡಿಸಲು ಅರ್ಜಿ ಆಹ್ವಾನ!

ಪ್ರಸ್ತುತ ರಾಜ್ಯದಲ್ಲಿ ಮುಂಗಾರು ಹಂಗಾಮು ಮುಕ್ತಾಯವಾಗಿ ಹಿಂಗಾರು ಹಂಗಾಮು ಆರಂಭವಾಗುತ್ತಿದ್ದು ರೈತರು ತಮ್ಮ ಬೆಳೆಗಳಿಗೆ ವಿಮೆಯನ್ನು(Rabi Crop Insurance) ಮಾಡಿಸಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಮ್ಮ ಹಳ್ಳಿ ವ್ಯಾಪ್ತಿಯಲ್ಲಿ ಯಾವೆಲ್ಲ ಬೆಳೆಗಳಿಗೆ ವಿಮೆಯನ್ನು ಮಾಡಿಸಬಹುದು? ಅರ್ಜಿ