ರೇಷನ್ ಕಾರ್ಡನಲ್ಲಿರುವ ಕುಟುಂಬದ ಮುಖ್ಯಸ್ಥರ ಹೆಸರು ಬದಲಾವಣೆ(Ration card correction) ಮತ್ತು ರೇಷನ್ ಕಾರ್ಡಗೆ ಹೊಸ ಸದಸ್ಯರ ಸೇರ್ಪಡೆಗೆ ಆಹಾರ ಇಲಾಖೆಯಿಂದ ಅವಕಾಶ ಮಾಡಿಕೊಡಲಾಗಿರುತ್ತದೆ ಅದರೆ ಹೊರ ರೇಷನ್ ಕಾರ್ಡ ಅನ್ನು ಮುಂದಿನ ಆದೇಶ ನೀಡುವವರೆಗೆ ಮಂಜೂರು ಮಾಡದಂತೆ ಆಹಾರ, ನಾಗರಿಕ ಸರಬರಾಜು ಇಲಾಖೆಯ ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನ ಶಾಸ್ತ್ರ ವಿಭಾಗದಿಂದ ನಿರ್ದೇಶನ ನೀಡಲಾಗಿದೆ.
ಪ್ರಸ್ತುತ ಪಡಿತರ ಚೀಟಿಯಲ್ಲಿನ ಫಲಾನುಭವಿಗಳ ಮಾಹಿತಿಯ ತಿದ್ದುಪಡಿ ಹಾಗೂ ಹೆಚ್ಚುವರಿ ಫಲಾನುಭವಿಗಳ ಹೆಸರನ್ನು ಸೇರ್ಪಡೆ ಮಾಡಲು ಅನುಮೋದನೆಯನ್ನು ನೀಡಲಾಗಿದೆ, ಮತ್ತು ಯಾವುದೇ ಹೊಸ ಪಡಿತರ ಚೀಟಿಯನ್ನು ಮಂಜೂರು ಮಾಡದಂತೆ ಆಹಾರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿರವರು ಆದೇಶ ಹೊರಡಿಸಿದ್ದಾರೆ. ಈ ಕುರಿತು ಹನುಮಂತರಾಯ, ಎ ಸರ್ಕಾರದ ಅಧೀನ ಕಾರ್ಯದರ್ಶಿ, ಆಹಾರ, ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನ ಶಾಸ್ತ್ರ, ವಿಭಾಗರವರ ಆದೇಶದಲ್ಲಿ ಉಲ್ಲೇಖಿಸಿದ್ಡಾರೆ.
Ration card correction- ತಿದ್ದುಪಡಿಗೆ 4 ದಿನ ಮಾತ್ರ ಅವಕಾಶ:
ರೇಷನ್ ಕಾರ್ಡನಲ್ಲಿ ಹೆಸರು ಸೇರ್ಪಡೆಗೆ ನಾಲ್ಕು ದಿನ ಮಾತ್ರ ಅವಕಾಶ ಮಾಡಿಕೊಡಲಾಗಿದ್ದು, ಅರ್ಜಿದಾರರು ದಿನಾಂಕ: 16 ಆಗಸ್ಟ್ 2023 ರಿಂದ 19 ಆಗಸ್ಟ್ 2023 ರವರೆಗೆ ನಡುವೆ ಅಗತ್ಯ ದಾಖಲೆಗಳ ಸಮೇತ ನಿಮ್ಮ ಹತ್ತಿರದ ಗ್ರಾಮ್ ಒನ್ , CSC ಕೇಂದ್ರ ಭೇಟಿ ಮಾಡಿ ಅರ್ಜಿ ಸಲ್ಲಿಸಿ ಸಲ್ಲಿಸಬವುದು.
ಗೃಹಲಕ್ಷ್ಮೀ ಯೋಜನೆಯಡಿ ಅರ್ಜಿ ಸಲ್ಲಿಸಲು ಮತ್ತು ಇತರೆ ಕಾರಣಗಳಿಂದ ಕುಟುಂಬದ ಯಜಮಾನಿಯ ಹೆಸರಿನ ತಿದ್ದುಪಡಿ ಮಾಡಿಕೊಳ್ಳಲು ಸಹ ಅವಕಾಶವಿದ್ದು ಈ ಮೇಲೆ ತಿಳಿಸಿರುವ ಕೇಂದ್ರಗಳನ್ನು ಭೇಟಿ ಮಾಡಿ ಹೆಸರು ಬದಲಾವಣೆ ಮತ್ತು ತಿದ್ದುಪಡಿ ಮಾಡಿಕೊಳ್ಳಬವುದು.
ಇದನ್ನೂ ಓದಿ: Annabhagya August amount: ಅನ್ನಭಾಗ್ಯ ಆಗಸ್ಟ್ ತಿಂಗಳ ಹಣ ವರ್ಗಾವಣೆ ಪ್ರಾರಂಭ! ನಿಮ್ಮ ಖಾತೆಗೆ ಹಣ ಬಂತಾ ಚೆಕ್ ಮಾಡಿ.
ನಿಮ್ಮ ರೇಷನ್ ಕಾರ್ಡ ಕುರಿತು ಸಂಪೂರ್ಣ ಮಾಹಿತಿ ಇಲ್ಲಿ ಲಭ್ಯ:
ಈ ಲಿಂಕ್ https://ahara.kar.nic.in/ ಮೇಲೆ ಕ್ಲಿಕ್ ಮಾಡಿ ಆಹಾರ ಇಲಾಖೆಯ ಅಧಿಕೃತ ಜಾಲತಾಣ ಭೇಟಿ ಮಾಡಿ ನಿಮ್ಮ ರೇಷನ್ ಕಾರ್ಡ ಕುರಿತು ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬವುದಾಗಿದೆ.
ರೇಷನ್ ಕಾರ್ಡ ಕುರಿತು ನಮ್ಮ ಪುಟದ ಇತರೆ ಅಂಕಣಗಳು ಹೀಗಿದೆ:
ಇದನ್ನೂ ಓದಿ: ರೇಷನ್ ಕಾರ್ಡಗೆ ಆಧಾರ್ ಕಾರ್ಡ ಲಿಂಕ್ ಮಾಡಲು ವೆಬ್ಸೈಟ್ ಲಿಂಕ್.
ಇದನ್ನೂ ಓದಿ: ಆಹಾರ ಇಲಾಖೆಯಿಂದ ರದ್ದಾದ ರೇಷನ್ ಕಾರ್ಡ ಪಟ್ಟಿ ಬಿಡುಗಡೆ
ಇದನ್ನೂ ಓದಿ: ರೇಷನ್ ಕಾರ್ಡ ಕಳೆದು ಹೋದರೆ ನಿಮ್ಮ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡುವುದು ಹೇಗೆ?
ಇದನ್ನೂ ಓದಿ: ರೇಷನ್ ಕಾರ್ಡನಲ್ಲಿ ಕುಟುಂಬದ ಮುಖ್ಯಸ್ಥರ ವಿವರ ಬದಲಾವಣೆ ಮಾಡುವುದೇಗೆ? ರೇಷನ್ ಕಾರ್ಡ್ ಕುರಿತು ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್.
ಸಧ್ಯಕ್ಕೆ ಹೊಸ ರೇಷನ್ ಕಾರ್ಡ ಮಂಜೂರು ಮಾಡುವುದನ್ನು ನಿಲ್ಲಿಸಲಾಗಿದೆ ಅದರೆ ಮುಂದಿನ ದಿನಗಳಲ್ಲಿ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಾಗ ಅರ್ಜಿ ಸಲ್ಲಿಸಲು ಈ ಕೆಳಗೆ ತಿಳಿಸಿದ ದಾಖಲೆಗಳನ್ನು ಒದಗಿಸಬೇಕಾಗುತ್ತದೆ.
New ration card application- ಹೊಸದಾಗಿ ರೇಷನ್ ಕಾರ್ಡ್ ಪಡೆಯಲು ಯಾವೆಲ್ಲ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ?
1)ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್
2) ಆರು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಹೊರತುಪಡಿಸಿ ಕುಟುಂಬದ ಎಲ್ಲಾ ಸದಸ್ಯರ ಬಯೋಮೆಟ್ರಿಕ್
3)ಕುಟುಂಬದಲ್ಲಿ ಯಾರಾದರೂ ಒಬ್ಬ ಸದಸ್ಯರ ಹೆಸರಿನಲ್ಲಿ ಆದಾಯ ಪ್ರಮಾಣ ಪತ್ರ
4)ಮನೆಯಲ್ಲಿ ಆರು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿದ್ದಲ್ಲಿ ಅವರ ಜನನ ಪ್ರಮಾಣ ಪತ್ರ
5)ಕುಟುಂಬದ ಸದಸ್ಯರೊಬ್ಬರ ಮೊಬೈಲ್ ಸಂಖ್ಯೆ / ಇ-ಮೇಲ್ ಐಡಿ