Anganawadi job notification-2024: ಅಂಗನವಾಡಿ ಕೇಂದ್ರಗಳಲ್ಲಿ 552 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ನೇಮಕಾತಿ!

October 3, 2024 | Siddesh
Anganawadi job notification-2024: ಅಂಗನವಾಡಿ ಕೇಂದ್ರಗಳಲ್ಲಿ 552 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ನೇಮಕಾತಿ!
Share Now:

10ನೇ ತರಗತಿ ಪಾಸಾದವರಿಗೆ ಹಾಗೂ ದ್ವಿತೀಯ ಪಿಯುಸಿ ಪಾಸಾದವರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

Anganawadi Recruitment 2024 - ಚಿಕ್ಕಬಳ್ಳಾಪುರ ಹಾಗೂ ಚಿಕ್ಕಮಂಗಳೂರು ಜಿಲ್ಲೆ ಸೇರಿ ಒಟ್ಟು 552 ಹುದ್ದೆಗಳು ಖಾಲಿ ಇರುತ್ತವೆ. ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ? ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು? ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿಯು ಕೆಳಗಿನ ಲೇಖನದಲ್ಲಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತರಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ಸಂಪೂರ್ಣ ಅರ್ಹತೆಗಳನ್ನು ತಿಳಿದುಕೊಂಡು ನೇಮಕಾತಿಗೆ ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿರಿ.

ಇದನ್ನೂ ಓದಿ: GKVK krishi mela-2024: ಬೆಂಗಳೂರು ಕೃಷಿ ಮೇಳಕ್ಕೆ ದಿನಾಂಕ ನಿಗದಿ! ಇಲ್ಲಿದೆ ಮೇಳದ ವಿಶೇಷತೆಗಳ ವಿವರ!

Anganawadi job notification-2024: ಹುದ್ದೆಗಳ ವಿವರ :

ಒಟ್ಟು 552 ಹುದ್ದೆಗಳ ಖಾಲಿ ಇದ್ದು, ಜಿಲ್ಲಾವಾರು ಹುದ್ದೆಗಳ ವಿಂಗಡಣೆಯು ಈ ಕೆಳಗಿನಂತಿದೆ.

ಚಿಕ್ಕಮಂಗಳೂರು ಜಿಲ್ಲೆಯಲ್ಲಿ - 267 ಹುದ್ದೆಗಳು

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ - 285 ಹುದ್ದೆಗಳು

Education-ಶೈಕ್ಷಣಿಕ ಮತ್ತು ವಯೋಮಿತಿ ಅರ್ಹತೆಗಳು :

ಈ ನೇಮಕಾತಿಯ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂಥವರು ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು.

ವಯೋಮಿತಿ ಅರ್ಹತೆಗಳನ್ನು ನೋಡುವುದಾದರೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 19 ವರ್ಷದಿಂದ 35 ವರ್ಷದ ವಯೋಮಿತಿಯಲ್ಲಿರಬೇಕು.

ಇದನ್ನೂ ಓದಿ: Horticulture Department-ತೋಟಗಾರಿಕೆ ಇಲಾಖೆಯಿಂದ ಈ ಯೋಜನೆಯಡಿ ಹಲವು ಸೌಲಭ್ಯ! ಇಲ್ಲಿದೆ ಅರ್ಜಿ ಸಲ್ಲಿಕೆ ವಿವರ!

ಇದನ್ನೂ ಓದಿ: Sukanya Samriddhi Yojana-2024: ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಹೂಡಿಕೆ ಮಾಡಿದ್ದರೆ ತಪ್ಪದೇ ಈ ಕೆಲಸ ಮಾಡಿ!

How to apply-ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹೇಗೆ?

ಅರ್ಹತೆ ಹೊಂದಿರುವ ಎಲ್ಲಾ ಅಭ್ಯರ್ಥಿಗಳು ಕೆಳಗೆ ನೀಡಿರುವಂತಹ ಅಧಿಕೃತ ವೆಬ್ಸೈಟ್ ಗೆ ನಿಗದಿತ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಭರ್ತಿ ಮಾಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿರಿ.

Last date for application-ನೇಮಕಾತಿಯ ಕೊನೆಯ ದಿನಾಂಕಗಳು :

ಚಿಕ್ಕಬಳ್ಳಾಪುರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು - ಅಕ್ಟೋಬರ್ 19, 2024

ಚಿಕ್ಕಮಗಳೂರು ಜಿಲ್ಲೆಯ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು - ಅಕ್ಟೋಬರ್ 12, 2024

Online application link-ಅರ್ಜಿ ಸಲ್ಲಿಸುವ ಲಿಂಕ್- Apply Now

ಅಧಿಕೃತ ಮಾರ್ಗಸೂಚಿ: Download Now

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: