Agriculture officer recruitment-2024: ಕೃಷಿ ಇಲಾಖೆಯಲ್ಲಿ ಖಾಲಿ ಇರುವ 750 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮತಿ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

ಕೃಷಿ ಇಲಾಖೆಯಲ್ಲಿ ಖಾಲಿ ಇರುವ 750 ಹುದ್ದೆಗಳ ಆರ್ಥಿಕ ಇಲಾಖೆ ಭರ್ತಿಗೆ ಆರ್ಥಿಕ ಇಲಾಖೆ ಅನುಮತಿ(Agriculture department recruitment) ನೀಡಲಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಪತ್ರಿಕಾ ಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

Agriculture officer recruitment-2024: ಕೃಷಿ ಇಲಾಖೆಯಲ್ಲಿ ಖಾಲಿ ಇರುವ 750 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮತಿ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ
Agriculture department recruitment-2024

ಕೃಷಿ ಇಲಾಖೆಯಲ್ಲಿ ಖಾಲಿ ಇರುವ 750 ಹುದ್ದೆಗಳ ಆರ್ಥಿಕ ಇಲಾಖೆ ಭರ್ತಿಗೆ ಆರ್ಥಿಕ ಇಲಾಖೆ ಅನುಮತಿ(Agriculture department recruitment) ನೀಡಲಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಪತ್ರಿಕಾ ಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಈ ಕುರಿತು ಎನ್. ಚಲುವರಾಯಸ್ವಾಮಿ ಪತ್ರಿಕಾ ಗೋಷ್ಠಿಯಲ್ಲಿ ಕೃಷಿ ಇಲಾಖೆಯ ಖಾಲಿ ಹುದ್ದೆ ಭರ್ತಿ ಮತ್ತು ಹಾಲಿಯಿರುವ ಹುದ್ದೆಗಳಿಗೆ ಮುಂಬಡ್ತಿ ಹಾಗೂ 2024-25 ನೇ ಸಾಲಿನ ಕೃಷಿ ಇಲಾಖೆಯ ನೂತನ ಯೋಜನೆಗಳ ಕುರಿತು ಮಾಹಿತಿ ಹಂಚಿಕೊಂಡಿರುವ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ಪ್ರಕಟಿಸಲಾಗಿದೆ.

ಸರ್ಕಾರವು ಗ್ಯಾರಂಟಿ ಯೋಜನೆಗಳ ಜೊತೆಗೆ ಕೃಷಿಗೂ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದು, ಕೃಷಿ ಇಲಾಖೆಯ ಕಾರ್ಯಚಟುವಟಿಕೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಅನುಕೂಲವಾಗುವಂತೆ ಇಲಾಖೆಯಲ್ಲಿ ಖಾಲಿ ಇರುವ 750 ಹುದ್ದೆಗಳನ್ನು ಜೂನ್ ಮಾಹೆಯೊಳಗೆ ಭರ್ತಿ ಮಾಡಲಾಗುವುದು ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಇದನ್ನೂ ಓದಿ: Panchamitra Whatsapp Chat- ಪಂಚಮಿತ್ರ ವಾಟ್ಸಾಪ್ ಚಾಟ್ ಬೆರಳ ತುದಿಯಲ್ಲೇ ಅರ್ಜಿ ಸಲ್ಲಿಸಲು ವಾಟ್ಸಾಪ್ ಚಾಟ್ ಬಿಡುಗಡೆ!

ಅವರು ನಿನ್ನೆ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಕೃಷಿ ಇಲಾಖೆಯ 2023-24ನೇ ಸಾಲಿನಲ್ಲಿ ಇದುವರೆಗಿನ ಸಾಧನೆ ಕುರಿತು ಮಾಹಿತಿ ನೀಡಲು ಹಮ್ಮಿಕೊಂಡಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಖಾಲಿ ಹುದ್ದೆಯ ಭರ್ತಿಗೆ ಆರ್ಥಿಕ ಇಲಾಖೆಯು ಅಧಿಕೃತವಾಗಿ ಮಂಜೂರಾತಿ ನೀಡಿದೆ. 750 ಹುದ್ದೆಗಳಲ್ಲಿ 100 ಕೃಷಿ ಅಧಿಕಾರಿಗಳು ಮತ್ತು 650 ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಲೋಕಸೇವಾ ಆಯೋಗಕ್ಕೆ(KPSC) ಪತ್ರ ಬರೆಯಲಾಗುವುದು ಎಂದರು.

Agriculture department recruitment-2024: ಕೃಷಿ ಇಲಾಖೆಯಲ್ಲಿ ಖಾಲಿ ಇರುವ 750 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮತಿ:

  • ಕೃಷಿ ಅಧಿಕಾರಿಗಳು(Agriculture officer):- 100 ಹುದ್ದೆಗಳು
  • ಸಹಾಯಕ ಕೃಷಿ ಅಧಿಕಾರಿ(Assistant agriculture officer):- 650 ಹುದ್ದೆಗಳು

ಕಳೆದ 20 ವರ್ಷಗಳಿಂದ ಆಗದ ಮುಂಬಡ್ತಿಯನ್ನು ನಾವು ಅಧಿಕಾರಕ್ಕೆ ಬಂದ 10 ತಿಂಗಳಲ್ಲಿ 04 ಉಪ ಕೃಷಿ ನಿರ್ದೇಶಕರು, 292 ಸಹಾಯಕ ಕೃಷಿ ನಿರ್ದೇಶಕರು, 253 ಕೃಷಿ ಅಧಿಕಾರಿಗಳು, 33 ಸಿಬ್ಬಂದಿಗಳು ಸೇರಿದಂತೆ ಒಟ್ಟು 582 ಹುದ್ದೆಗಳಿಗೆ ಮುಂಬಡ್ತಿ ನೀಡಲಾಗಿದೆ. ಇನ್ನೂ ಎರಡು-ಮೂರು ವರ್ಷದೊಳಗೆ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಎಲ್ಲಾ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: KSRTC driver job-KSRTC ಯಲ್ಲಿ ಚಾಲಕರ ಹುದ್ದೆಗೆ ಅರ್ಜಿ ಆಹ್ವಾನ! ಇಲ್ಲಿದೆ ಅರ್ಜಿ ಸಲ್ಲಿಸಲು ಸಂಪೂರ್ಣ ಮಾಹಿತಿ!

ಬರಗಾಲವಿದ್ದು ರೈತರಿಗೆ ಅನೂಕೂಲ ಕಲ್ಪಿಸಿಕೊಡಬೇಕಾಗಿರುವುದರಿಂದ, ಯಾವ ಯಾವ ಇಲಾಖೆಯಲ್ಲಿ ರೈತರಿಗೆ ಅನೂಕೂಲ ಕಲ್ಪಿಸುವ ಯೋಜನೆಗಳಿದ್ದರೆ, ಅವುಗಳನ್ನು ತುರ್ತಾಗಿ ಅನುಷ್ಠಾನಗೊಳಿಸುವಂತೆ ಮಾನ್ಯ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಅದರಂತೆ ಕೃಷಿ ಇಲಾಖೆಯನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಈಗಾಗಲೇ ಮೂರು ಬಾರಿ ಸಭೆ ನಡೆಸಲಾಗಿದೆ. ಈಗಲೂ ಸಭೆ ನಡೆಸಿ ಮಾರ್ಚ್ ಅಂತ್ಯದೊಳಗೆ ಕೃಷಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಎಲ್ಲಾ ಕೃಷಿ ಇಲಾಖೆಯ ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ ಎಂದರು.

Agriculture Department schemes- 2024-25 ನೇ ಸಾಲಿನ ಕೃಷಿ ಇಲಾಖೆಯ ನೂತನ ಯೋಜನೆಗಳ ಕುರಿತು ಮಾಹಿತಿ:

ಇನ್ನೂ ಎರಡು-ಮೂರು ವರ್ಷದೊಳಗೆ ಕೃಷಿ ಇಲಾಖೆಯಲ್ಲಿ ಎಲ್ಲಾ ಖಾಲಿ ಹುದ್ದೆಗಳನ್ನು ಭರ್ತಿ: ಎನ್.ಚಲುವರಾಯಸ್ವಾಮಿ

ಕೃಷಿ ಇಲಾಖೆಯಿಂದ ಮುಂದಿನ ವರ್ಷ ಅಂದರೆ 2024-25 ಸಾಲಿನಲ್ಲಿ ಜಾರಿಗೆ ತರಲು ಇಚ್ಚಿಸಿರುವ ಯೋಜನೆಗಳ ಕುರಿತು ಕೃಷಿ ಸಚಿವರು ಹಂಚಿಕೊಂಡಿರುವ ಮಾಹಿತಿ ಈ ಕೆಳಗಿನಂತಿದೆ:

ಇದನ್ನೂ ಓದಿ: Agriculture machinery- ಕೃಷಿ ಇಲಾಖೆಯಿಂದ ಶೇ 90 ಸಹಾಯಧನದಲ್ಲಿ ವಿವಿಧ ಯಂತ್ರಗಳನ್ನು ಪಡೆಯಲು ಅರ್ಜಿ ಆಹ್ವಾನ!

1) ಕರ್ನಾಟಕ ರೈತ ಸಮೃದ್ಧಿ ಯೋಜನೆ.

ವಿವಿಧ ರೈತ ಪರ ಯೋಜನೆಗಳನ್ನು ಒಗ್ಗೂಡಿಸಿ ಕರ್ನಾಟಕ ರೈತ ಸಮೃದ್ಧಿ ಯೋಜನೆಯನ್ನು ಜಾರಿ ಮಾಡಲಾಗುವುದು. ಇದರಡಿ ಕೃಷಿ, ಪಶುಸಂಗೋಪನೆ, ಹೈನುಗಾರಿಕೆಗಳನ್ನು ಒಳಗೊಂಡಂತೆ ಸಮಗ್ರ ಕೃಷಿ ಕೈಗೊಳ್ಳುವ ಮೂಲಕ ಆದಾಯದಲ್ಲಿ ಸುಸ್ಥಿರತೆಯನ್ನು ಕಂಡುಕೊಳ್ಳಲು ಬೆಂಬಲ ನೀಡುವುದು. ಮಣ್ಣಿನ ಗುಣ ಹಾಗೂ ಮಾರುಕಟ್ಟೆ ಬೇಡಿಕೆಯನ್ನು ಆಧರಿಸಿ ಯಾವ ಬೆಳೆಯನ್ನು ಬೆಳೆಯಬೇಕೆಂಬುದರ ಕುರಿತು ರೈತರಿಗೆ ಮಾರ್ಗದರ್ಶನ ನೀಡಲಾಗುವುದು. ಮಣ್ಣು ಪರೀಕ್ಷೆ ಮತ್ತು ಗುಣಮಟ್ಟ ಕುರಿತು ಮಾಹಿತಿ ನೀಡಲಾಗುವುದು, ಹೊಸ ಕೃಷಿ ಪದ್ಧತಿ ಹಾಗೂ ತಂತ್ರಜ್ಞಾನಗಳ ಕುರಿತು ರೈತರಿಗೆ ಅರಿವು ಮೂಡಿಸಿ ಬೆಂಬಲ ನೀಡಲಾಗುವುದು.

2) ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ "ಕೃಷಿ ಅಭಿವೃದ್ಧಿ" ಪ್ರಾಧಿಕಾರದ ರಚನೆ.

ರೈತರಿಗೆ ಸಂಗ್ರಹಣೆ ಹಾಗೂ ಮೌಲ್ಯವರ್ಧನೆ ಕುರಿತು ಅರಿವು ಮೂಡಿಸುವುದು. ರೈತರು ಬೆಳೆದ ಬೆಳೆಗೆ ಉತ್ತಮ ಬೆಲೆ ಪಡೆಯಲು ಮಾರುಕಟ್ಟೆ ಸಂಪರ್ಕ ಕಲ್ಪಿಸುವುದು. ಕೃಷಿ ಮತ್ತು ಪೂರಕ ಚಟುವಟಿಕೆಗಳ ನೀತಿ ಮತ್ತು ಯೋಜನೆಗಳ ಸಂಯೋಜನೆ ಹಾಗೂ ಪರಿಣಾಮಕಾರಿ ಅನುಷ್ಟಾನಕ್ಕೆ ಅನುವಾಗುವಂತೆ ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಸಹಕಾರ, ಪಶುಸಂಗೋಪನೆ ಇಲಾಖೆಗಳ ನಡುವೆ ಸಂಪರ್ಕ ಸಾಧಿಸಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ "ಕೃಷಿ ಅಭಿವೃದ್ಧಿ" ಪ್ರಾಧಿಕಾರದ ರಚನೆ ಮಾಡಲಾಗುವುದು.

ಇದನ್ನೂ ಓದಿ: Yashaswini card last date- ಯಶಸ್ವಿನಿ ಕಾರ್ಡ ಪಡೆಯಲು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಮುಂದೂಡಿಕೆ!

3) ಬೀಜ ಬ್ಯಾಂಕ್‌ ಸ್ಥಾಪನೆ.

ಕಣ್ಮರೆಯಾಗುತ್ತಿರುವ ಹಾಗೂ ನಶಿಸಿ ಹೋಗುತ್ತಿರುವ ಸ್ಥಳೀಯ ಬೆಳೆಗಳ ತಳಿಗಳನ್ನು ಸಂಗ್ರಹಿಸಲು ಹಾಗೂ ಸಂರಕ್ಷಿಸುವ ಉದ್ದೇಶದಿಂದ ಒಂದು ಸಮುದಾಯ ಬೀಜ ಬ್ಯಾಂಕ್‌ನ್ನು ಸ್ಥಾಪಿಸಲಾಗುವುದು. ಪ್ರಗತಿಪರ ರೈತರು, ರೈತ ಉತ್ಪಾದಕ ಸಂಸ್ಥೆಗಳು, ರೈತ ಗುಂಪುಗಳು, ಪ್ರಾಂತೀಯ ಒಕ್ಕೂಟಗಳು ಹಾಗು ರಾಜ್ಯ ಕೃಷಿ ವಿಶ್ವವಿದ್ಯಾಲಯಗಳ ಮೂಲಕ ಉತ್ತಮ ದೇಸಿ ತಳಿಗಳ ಬಿಡುಗಡೆಗೆ ಕ್ರಮ ವಹಿಸಲಾಗುವುದು.

4) "ನಮ್ಮ ಮಿಲ್ಲೆಟ್" ಎಂಬ ಹೊಸ ಕಾರ್ಯಕ್ರಮ.

"ನಮ್ಮ ಮಿಲ್ಲೆಟ್" ಎಂಬ ಹೊಸ ಕಾರ್ಯಕ್ರಮವನ್ನು ಪ್ರಾರಂಭಿಸಿ, ಇದರಡಿ ಸಂಸ್ಕರಿಸಿದ ಸಿರಿಧಾನ್ಯಗಳು ಹಾಗೂ ಮೌಲ್ಯವರ್ಧಿತ ಸರಿಧಾನ್ಯ ಉತ್ಪನ್ನಗಳನ್ನು ಆಗಿ-ಟೆಕ್ ಕಂಪನಿಗಳು ಹಾಗೂ ರಿಟೇಲ್ ಜೈನ್‌ಗಳ ಸಹಭಾಗಿತ್ವದಲ್ಲಿ ಕೈಗೆಟುಕುವ ದರದಲ್ಲಿ ದೊರಕಿಸಲು ಅನುವು ಮಾಡಿಕೊಡಲಾಗುವುದು. ಇದರಿಂದಾಗಿ ರಾಜ್ಯದ 15 ಸಾವಯವ ಪ್ರಾಂತೀಯ ಒಕ್ಕೂಟಗಳು ಹೆಚ್ಚಿನ ಲಾಭಗಳಿಸುವಲ್ಲಿ ಉಪಯುಕ್ತವಾಗುತ್ತದೆ. ಮುಂದಿನ ದಿನಗಳಲ್ಲಿ ಮಕ್ಕಳ ಒಳಪಡಿಸುವಲ್ಲಿ ಯೋಜಿಸಲಾಗಿದೆ. 

5) "ಜ್ಞಾನ ಕೇಂದ್ರ"

ಬೆಂಗಳೂರಿನಲ್ಲಿರುವ ಕೃಷಿ ಇಲಾಖೆಯ ಆರ್.ಕೆ. ಶಾಲಾ ಕೃಷಿ ಕ್ಷೇತ್ರವನ್ನು ಕೃಷಿಗೆ ಸಂಬಂಧಿಸಿದ ತಾಂತ್ರಿಕತೆಗಳನ್ನು ಪಸರಿಸುವ "ಜ್ಞಾನ ಕೇಂದ್ರ"ವನ್ನಾಗಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲಾಗುವುದು. ಇದರಲ್ಲಿ ಸಾವಯವ ಕೃಷಿ. ಬೀಜೋತ್ಪಾದನೆ ಇತ್ಯಾದಿ ಚಟುವಟಿಕೆಗಳನ್ನು ಕೈಗೊಳ್ಳುವುದರ ಮೂಲಕ ಮಾದರಿ ಕ್ಷೇತ್ರವಾಗಿ ಅಭಿವೃದ್ಧಿಪಡಿಸಿ, ವಿಶೇಷವಾಗಿ ಯುವಕರು ಮತ್ತು ಶಾಲಾ ಮಕ್ಕಳಿಗೆ "ಕಲಿಕಾ ಕೇಂದ್ರ"ವನ್ನಾಗಿ ರೂಪಿಸಲಾಗುವುದು.

ಇದನ್ನೂ ಓದಿ: Aadhar update online-ಆಧಾರ್ ಕಾರ್ಡ್ ಅಪ್ ಡೇಟ್ ಮಾಡಿಕೊಳ್ಳಲು ವೆಬ್ಸೈಟ್ ಲಿಂಕ್ ಬಿಡುಗಡೆ! ಉಚಿತವಾಗಿ ನವೀಕರಣಕ್ಕೆ 14 ಮಾರ್ಚ 2024 ಕೊನೆಯ ದಿನ.

ರೈತರಿಗೆ ಕೀಟ, ರೋಗ ಮತ್ತು ಪೋಷಕಾಂಶ ನಿರ್ವಹಣೆಯ ಸಲಹೆಗಳನ್ನು ನೀಡಲು ಕೃಷಿ ವಿಶ್ವವಿದ್ಯಾಲಯ, ರಾಯಚೂರು ಇವರು ಅಭಿವೃದ್ಧಿ ಪಡಿಸಿರುವ ಇ-ಸ್ಯಾಫ್ ಅನ್ನು ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗುವುದು. ಇದರಿಂದಾಗಿ ಕೀಟ-ರೋಗಗಳ ಸಮಸ್ಯೆಗಳಿಗೆ ತ್ವರಿತ ಪರಿಹಾರ ನೀಡುವುದರ ಮೂಲಕ ಉತ್ಪಾಕತೆ ಮತ್ತು ರೈತರ ಆದಾಯ ಹೆಚ್ಚಿಸಬಹುದಾಗಿದೆ. ಮುಂದುವರೆದು, ಆಡಳಿತದಲ್ಲಿ ಡಿಸಿಷನ್ ಸಪೋರ್ಟ್ ಸಿಸ್ಟಮ್‌ ಆಗಿ ಕಾರ್ಯ ನಿರ್ವಹಿಸುತ್ತದೆ.

ಕೃಷಿ ನಾವಿನ್ಯತೆಯ ಯುಗದಲ್ಲಿ ಪ್ರಾರಂಪರಿಕ ಕೃಷಿ ಪದ್ಧತಿಯಲ್ಲಿ ಗಣನೀಯ ಬದಲಾವಣೆಯಾಗಿದ್ದು, ಉಪಗ್ರಹ ಚಿತ್ರ ಸೆನ್ಸ್‌ರ್‌ಗಳ ಬಳಕೆ ಮತ್ತು ಮೆಷಿನ್ ಲನಿರ್ಂಗ್ ನಂತಹ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಆಧರಿಸಿ ಬೆಳೆ ಉತ್ಪಾದಕತೆ ಮುನ್ಸೂಚನೆಯನ್ನು ಮಾಡಲು ಒಂದು ದತ್ತಾಂಶವನ್ನು ಅಭಿವೃದ್ಧಿಪಡಿಸಲಾಗುವುದು.

6) "ಆಹಾರ ಸಂಸ್ಕರಣಾ ಆಯುಕ್ತಾಲಯ ರಚನೆ

ಆಹಾರ ಸಂಸ್ಕರಣಾ ವಲಯವು ರೈತರ ಆದಾಯ ಹೆಚ್ಚಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತಿದೆ. ಕೃಷಿ ಉತ್ಪನ್ನಗಳು ವ್ಯರ್ಥವಾಗದಂತೆ ತಡೆಯಲು ಹಾಗೂ ಬೆಳೆಗಳಿಗೆ ಸಮರ್ಪಕ ಬೆಲೆ ದೊರಕಿಸುವ ಸಲುವಾಗಿ ಕೃಷಿ ಇಲಾಖೆಯ ಅಧೀನದಲ್ಲಿ ಪ್ರತ್ಯೇಕ "ಆಹಾರ ಸಂಸ್ಕರಣಾ ಆಯುಕ್ತಾಲಯ" ರಚಿಸಲಾಗುವುದು. ಇದರ ಮೂಲಕ ವಿವಿಧ ಇಲಾಖೆಗಳಡಿಯಲ್ಲಿರುವ ಆಹಾರ ಸಂಸ್ಕರಣೆಗೆ ರಾಜ್ಯದ ಬರಪೀಡಿತ ಮತ್ತು ಮಳೆಯಾಶ್ರಿತ ಪ್ರದೇಶಗಳಲ್ಲಿ ಸುಸ್ಥಿರ ಕೃಷಿ ಮಾಡಲು ಮಣ್ಣು ಮತ್ತು ನೀರಿನ ಸಂರಕ್ಷಣೆಗಾಗಿ ಪ್ರತಿ ವರ್ಷ ಒಂದು ಸಾವಿರಂತೆ ಒಟ್ಟು 5 ಸಾವಿರ ಸಣ್ಣ ಸರೋವರಗಳನ್ನು ನರೇಗಾ ಯೋಜನೆಯಡಿ ನಿರ್ಮಿಸಲಾಗುವುದು.

7) Start-up ಗಳಿಗೆ ಉತೇಜನ.

ರೈತ ಉತ್ಪಾದಕ ಸಂಸ್ಥೆಗಳನ್ನು (ಎಫ್.ಪಿ.ಓ) ಇನ್ನಷ್ಟು ಸದೃಢ ಮತ್ತು ಸುಸ್ಥಿರವಾಗಿ ಕಾರ್ಯನಿರ್ವಹಿಸಲು ಪೂರಕವಾದ ತರಬೇತಿ, ಮಾರ್ಗದರ್ಶನ ಹಾಗೂ we Agri Accelerator Platform ಮೂಲಕ ಕೃಷಿ ವಲಯದ Start-up ಗಳನ್ನು ಉತ್ತೇಜಿಸಲಾಗುವುದು.

8) ಆಹಾರ ಪಾರ್ಕ್‌ ಸ್ಥಾಪನೆ

ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತನ್ನು ಉತ್ತೇಜಿಸಲು ರಾಜ್ಯದಲ್ಲಿರುವ ವಿಮಾನ ನಿಲ್ದಾಣಗಳ ಹತ್ತಿರದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಆಹಾರ ಪಾರ್ಕ್‌ಗಳನ್ನು ಸ್ಥಾಪಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಶಿವಮೊಗ್ಗದ ಸೋಗಾನೆ. ವಿಜಯಪುರದ ಇಟ್ಟಂಗಿಹಾಳ ಮತ್ತು ಬೆಂಗಳೂರು ಗ್ರಾಮಾಂತರದ ಪೂಜೇನಹಳ್ಳಿಯಲ್ಲಿ ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ.