APL card cancellation- ರೇಷನ್ ಕಾರ್ಡ್ ರದ್ದತಿ ಕುರಿತು ಆಹಾರ ಇಲಾಖೆಯಿಂದ ಮಹತ್ವದ ಪ್ರಕಟಣೆ!

November 17, 2024 | Siddesh
APL card cancellation- ರೇಷನ್ ಕಾರ್ಡ್ ರದ್ದತಿ ಕುರಿತು ಆಹಾರ ಇಲಾಖೆಯಿಂದ ಮಹತ್ವದ ಪ್ರಕಟಣೆ!
Share Now:

ಆಹಾರ ಇಲಾಖೆಯಿಂದ ಎಪಿಎಲ್ ರೇಷನ್ ಕಾರ್ಡ ರದ್ದತಿ ಕುರಿತು ನೂತನ ಪ್ರಕಟಣೆಯನ್ನು ಹೊರಡಿಸಲಾಗಿದ್ದು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ರೇಷನ್ ಕಾರ್ಡ(APL card cancellation) ರದ್ದುಗೊಳಿಸಿರುವ ಕುರಿತು ಕೆಲವು ನ್ಯೂಸ್ ಚಾನಲ್ ಗಳು ಪ್ರಕಟಿಸಿರುವ ಮಾಹಿತಿಯ ಕುರಿತು ಸ್ಪಷ್ಟೀಕರಣ ನೀಡಲಾಗಿದೆ.

ಆಹಾರ ಇಲಾಖೆಯಿಂದ ರೇಷನ್ ಕಾರ್ಡ(APL Ration card) ಹೊಂದಿರುವ ಗ್ರಾಹಕರು ಕಡ್ದಾಯವಾಗಿ ಎಲ್ಲಾ ಸದಸ್ಯರು ಇ-ಕೆವೈಸಿಯನ್ನು ಮಾಡಿಕೊಳ್ಳಬೇಕು ಎಂದು ನಿಯಮವನ್ನು ಜಾರಿಗೆ ತರಲಾಗಿತ್ತು.

ಇದನ್ನೂ ಓದಿ: Mini tractor subsidy- ಶೇ 90% ಸಬ್ಸಿಡಿಯಲ್ಲಿ ಮಿನಿ ಟ್ರ್ಯಾಕ್ಟರ್ ಪಡೆಯಲು ಅರ್ಜಿ ಆಹ್ವಾನ!

ಈ ನಿಯಮದ ಅನ್ವಯ ಇಲ್ಲಿಯವರೆಗೆ ರೇಷನ್ ಕಾರ್ಡ ಹೊಂದಿರುವ ಗ್ರಾಹಕರು ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಯನ್ನು ಭೇಟಿ ಮಾಡಿ ಇ-ಕೆವೈಸಿ ಮಾಡಿಕೊಂಡಿಲ್ಲದಿದ್ದರೆ ಇಂತಹ ಎಪಿಎಲ್ ಕಾರ್ಡಗಳನ್ನು ರದ್ದು ಮಾಡಲಾಗಿದೆ ಎಂದು ಕೆಲವು ಡಿಜಿಟಲ್ ದಿನ ಪತ್ರಿಕೆಗಳು ವರದಿ ಮಾಡಿದ್ದುಈ ಕುರಿತು ಆಹಾರ ಇಲಾಖೆಯಿಂದ ಹೊರಡಿಸಿರುವ ಸ್ಪಷ್ಟೀಕರಣದ ಮಾಹಿತಿಯನ್ನು ಈ ಕೆಳಗೆ ತಿಳಿಸಲಾಗಿದೆ.

APL card cancellation- ರೇಷನ್ ಕಾರ್ಡ್ ರದ್ದತಿ ಕುರಿತು ಆಹಾರ ಇಲಾಖೆಯ ಪ್ರಕಟಣೆ ವಿವರ ಹೀಗಿದೆ:

ಆಹಾರ ಇಲಾಖೆಯ ಪ್ರಕಟಣೆಯಲ್ಲಿ ಎಪಿಎಲ್‌ ಕಾರ್ಡುಗಳ ರದ್ಧತಿಗೆ ಆಹಾರ ಇಲಾಖೆಯು ನಿರ್ದೇಶನ ನೀಡಿಲ್ಲ ಎಂದು ತಿಳಿಸಿದ್ದು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು ಎಪಿಎಲ್ ಕಾರ್ಡುಗಳ ರದ್ದತಿಗೆ ಯಾವುದೇ ಸೂಚನೆ ನೀಡಿಲ್ಲ ಮತ್ತು ಇಲ್ಲಿಯವರೆಗೆ ಯಾವುದೇ ಎಪಿಎಲ್ ಕಾರ್ಡುಗಳನ್ನು ರದ್ದುಗೊಳಿಸಿಲ್ಲ ಎಂದು ಮಾಹಿತಿಯನ್ನು ಪ್ರಕಟಿಸಿದೆ.

ರೇಷನ್ ಕಾರ್ಡ್ ರದ್ದತಿ ಕುರಿತು ಕೆಲವು ಡಿಜಿಟಲ್ ದಿನಪತ್ರಿಕೆಗಳಲ್ಲಿ ರೇಷನ್ ಕಾರ್ಡ ಇ - ಕೆವೈಸಿ(Ration card e-kyc) ಮಾಡಿಕೊಳ್ಳದೇ ಇರುವ ಎಪಿಎಲ್ ಕಾರ್ಡುಗಳನ್ನು ರದ್ದುಗೊಳಿಸಲಾಗುತ್ತಿದೆ ಎಂದು ವರದಿಯಾಗಿರುವುದು ಈ ಮಾಹಿತಿಯು ಸತ್ಯಕ್ಕೆ ದೂರವಾಗಿದೆ ಎಂದು ತಿಳಿಸಿದೆ.

ಇದನ್ನೂ ಓದಿ: Uchita holige yantra-ಕೇಂದ್ರದಿಂದ ಮಹಿಳೆಯರಿಗೆ ಸಿಹಿ ಸುದ್ದಿ! ಉಚಿತ ಹೊಲಿಗೆ ಯಂತ್ರ ಪಡೆಯಲು ಅವಕಾಶ!

Ration card

ರಾಜ್ಯದಲ್ಲಿ 2024ರ ಸೆಪ್ಟೆಂಬರ್ 2ರ ವರೆಗೆ 25,13,798 ಎಪಿಎಲ್ ಕಾರ್ಡುಗಳಿದ್ದವು. ನವೆಂಬರ್ 16 ರಂದು 25,62,566 ಕಾರ್ಡುಗಳಿವೆ. ಅನರ್ಹ ಬಿಪಿಎಲ್ ಕಾರ್ಡುಗಳನ್ನು ರದ್ದುಗೊಳಿಸುವ ಕಾರ್ಯ ಕೈಗೊಂಡ ಪರಿಣಾಮ ಕೆಲವು ಬಿಪಿಎಲ್ ಕಾರ್ಡುಗಳನ್ನು ಎಪಿಎಲ್ ಕಾರ್ಡುಗಳಾಗಿ ಪರಿವರ್ತಿಸಿರುವುದರಿಂದ 48,768 ಕಾರ್ಡುಗಳು ಹೆಚ್ಚಳವಾಗಿವೆ ಎಂದು ಅಧಿಕೃತ ಪ್ರಕಟಣೆಯಲ್ಲಿ ಉಲೇಖಿಸಲಾಗಿದೆ.

ರಾಜ್ಯದಲ್ಲಿ 22 ಲಕ್ಷ ಬಿಪಿಎಲ್ ಕಾರ್ಡುಗಳು ರದ್ದಾಗಿವೆ ಎಂದು ಸುದ್ದಿ ಪ್ರಕಟವಾಗಿರುವುದು ಸತ್ಯಕ್ಕೆ ದೂರವಾಗಿದ್ದು, ಈ ರೀತಿಯ ಕ್ರಮವನ್ನು ಈವರೆಗೆ ಕೈಗೊಂಡಿರುವುದಿಲ್ಲ ಎಂದು ಈ ಮೂಲಕ ಸ್ಪಷ್ಟೀಕರಿಸುತ್ತಿದ್ದೇವೆ ಎಂದು ಆಹಾರ ಇಲಾಖೆಯಿಂದ ಪ್ರಕಟಣೆ ಹೊರಡಿಸಲಾಗಿದೆ.

ಇದನ್ನೂ ಓದಿ: Bele vime amount-ಸರಕಾರದಿಂದ 2100 ಕೋಟಿ ಬೆಳೆ ವಿಮೆ ರೈತರ ಖಾತೆಗೆ DBT ಮೂಲಕ ವರ್ಗಾವಣೆ: ಕೃಷಿ ಸಚಿವ ಚೆಲುವರಾಯಸ್ವಾಮಿ!

Ration card Status- ಆನ್ಲೈನ್ ನಲ್ಲಿ ನಿಮ್ಮ ರೇಶನ್ ಕಾರ್ಡ ಸ್ಥಿತಿ ಚೆಕ್ ಮಾಡುವ ವಿಧಾನ:

ರೇಶನ್ ಕಾರ್ಡ ಹೊಂದಿರುವ ಗ್ರಾಹಕರು ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ ಅನ್ನು ಪ್ರವೇಶ ಮಾಡಿ ಈ ಕೆಳಗೆ ತಿಳಿಸಿರುವ ವಿಧಾನವನ್ನು ಅನುಸರಿಸಿ ತಮ್ಮ ಮೊಬೈಲ್ ನಲ್ಲೇ ನಿಮ್ಮ ಪ್ರಸ್ತುತ ಇರುವ ರೇಷನ್ ಕಾರ್ಡ/ಪಡಿತರ ಚೀಟಿಯ ನೈಜ ಸ್ಥಿತಿಯನ್ನು ಚೆಕ್ ಮಾಡಿಕೊಳ್ಳಬಹುದು.

Step-1: ಮೊದಲಿಗೆ Ration card Online Status Check ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಬೇಕು.

Step-2: ಇದಾದ ಬಳಿಕ ಇಲ್ಲಿ "e-Status"ಬಟನ್ ಮೇಲೆ ಕ್ಲಿಕ್ ಮಾಡಿ "New/Existing RC Request Status" ಬಟನ್ ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ: Bagar hukum-ಬಗರ್ ಹುಕುಂ ಸಾಗುವಳಿದಾರರಿಗೆ ಗುಡ್ ನ್ಯೂಸ್! ಸಾಗುವಳಿ ಚೀಟಿ ವಿತರಣೆಗೆ ದಿನಾಂಕ ನಿಗದಿ!

ration card

Step-3: ಇಲ್ಲಿ ಮೂರು(3) ಆಯ್ಕೆಗಳು ತೋರಿಸುತ್ತದೆ ಇಲ್ಲಿ ನಿಮ್ಮ ಜಿಲ್ಲೆಯ ಹೆಸರು ಕಾಣಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಮುಂದುವರೆಯಬೇಕು.

Step-4: ನಂತರ ಇಲ್ಲಿ "ಪಡಿತರ ಚೀಟಿ ಸ್ಥಿತಿ" ಆಯ್ಕೆಯ ಮೇಲೆ ಕ್ಲಿಕ್ ಮಾಡಿ ನಿಮ್ಮ ರೇಶನ್ ಕಾರ್ಡ ಸಂಖ್ಯೆಯನ್ನು ಹಾಕಿ ನಿಮ್ಮ ಪಡಿತರ ಚೀಟಿ/ರೇಶನ್ ಕಾರ್ಡ ಸ್ಥಿತಿಯನ್ನು ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳಬೇಕು.

Ration card e-kyc- ರೇಷನ್ ಕಾರ್ಡ ಇ-ಕೆವೈಸಿ ಮಾಡಿಸುವುದು ಹೇಗೆ?

ಇಲ್ಲಿಯವರೆಗೆ ರೇಷನ್ ಕಾರ್ಡ ಇ-ಕೆವೈಸಿ ಮಾಡಿಕೊಳ್ಳದವರು ನಿಮ್ಮ ರೇಶನ್ ಕಾರ್ಡ ಮತ್ತು ಅದಕ್ಕೆ ಲಿಂಕ್ ಇರುವ ಮೊಬೈಲ್ ಅನ್ನು ತೆಗೆದುಕೊಂಡು ಖುದ್ದು ರೇಶನ್ ಕಾರ್ಡನಲ್ಲಿರುವ ಸದಸ್ಯರು ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಯನ್ನು ಭೇಟಿ ಮಾಡಿ ಇ-ಕೆವೈಸಿಯನ್ನು ಮಾಡಿಕೊಳ್ಳಬೇಕು.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: