Bakery training-ಬೇಕರಿ ಬ್ಯುಸಿನೆಸ್ ಪ್ರಾರಂಭಿಸುವವರಿಗೆ ಇಲ್ಲಿದೆ ಉತ್ತಮ ಅವಕಾಶ!

ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದಿಂದ ಬೇಕರಿ ಟೆಕ್ನಾಲಜಿ ಸರ್ಟಿಫಿಕೇಟ್ ಕೋರ್ಸ್‌ಗೆ(Bakery training) ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ ಬೇಕಿಂಗ್ ತಂತ್ರಜ್ಞಾನ ಮತ್ತು ಮೌಲ್ಯವರ್ಧನಾ ಸಂಸ್ಥೆಯಿಂದ “ಹದಿನಾಲ್ಕು(14) ವಾರಗಳ ಬೇಕರಿ ಟೆಕ್ನಾಲಜಿ ಸರ್ಟಿಫಿಕೇಟ್ ಕೋರ್ಸ್”ಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಬೇಕರಿ ತರಬೇತಿ ಪಡೆಯಲು ಆಸಕ್ತಿಯಿರುವ ಅಭ್ಯರ್ಥಿಗಳು ಈ ತರಬೇತಿಯ ಪ್ರಯೋಜನವನ್ನು ಪಡೆದುಕೊಂಡು ಸ್ವ-ಉದ್ಯೋಗವನ್ನು ಪ್ರಾರಂಭಿಸಬಹುದು, ತರಬೇತಿಯಲ್ಲಿ ಭಾಗವಹಿಸಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಎಷ್ಟು ದಿನ ತರಬೇತಿ ಇರುತ್ತದೆ ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ: Education Loan-2024: ಅರಿವು ಯೋಜನೆಯಡಿ ರೂ. 5,00,000/- ವರೆಗೆ ವಿದ್ಯಾಭ್ಯಾಸ ಸಾಲ ಪಡೆಯಲು ಅರ್ಜಿ ಆಹ್ವಾನ!

Bakery training application-ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು?

ಎಸ್.ಎಸ್.ಎಲ್.ಸಿ. ಉತ್ತೀರ್ಣ / ಅನುತ್ತೀರ್ಣ ಆಗಿರುವವರು ರೂ.10-00 ಸಂದಾಯಿಸಿ ಅರ್ಜಿ ಫಾರಂಗಳನ್ನು ಸಂಯೋಜಕರು ಮತ್ತು ಮುಖ್ಯಸ್ಥರು, ಬೇಕಿಂಗ್ ತಂತ್ರಜ್ಞಾನ ಮತ್ತು ಮೌಲ್ಯವರ್ಧನಾ ಸಂಸ್ಥೆ, ಕೃಷಿ ವಿಶ್ವ ವಿದ್ಯಾನಿಲಯ. ಜಿಕೆವಿಕೆ. ಬೆಂಗಳೂರು-560065 ಇವರಿಂದ ಪಡೆದುಕೊಂಡು, ಭರ್ತಿ ಮಾಡಿದ ಅರ್ಜಿಯನ್ನು ಜುಲೈ 9 ರ ಅಪರಾಹ್ನ 4.00 ಘಂಟೆಯ ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ ಉ0-23513370 ಗೆ ಸಂರ್ಪಕಿಸಬಹುದು ಎಂದು ಪ್ರಕಟಣೆ ತಿಳಿಸಲಾಗಿದೆ.

ಇದನ್ನೂ ಓದಿ: Borewell subsidy scheme-2024: ಸಹಾಯಧನದಲ್ಲಿ ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ!

Bakery training benifits-ಬೇಕರಿ ತರಬೇತಿಯ ಪ್ರಯೋಜನಗಳು:

ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ ಬೇಕಿಂಗ್ ತಂತ್ರಜ್ಞಾನ ಮತ್ತು ಮೌಲ್ಯವರ್ಧನಾ ಸಂಸ್ಥೆಯಿಂದ ತರಬೇತಿ ಪಡೆದ ಬಳಿಕ ಅಭ್ಯರ್ಥಿಗಳಿಗೆ ಸರ್ಟಿಫಿಕೇಟ್ ನೀಡಲಾಗುತ್ತದೆ.ಈ ಸರ್ಟಿಫಿಕೇಟ್ ನೀವು ಸ್ವ-ಉದ್ಯೋಗ ಮಾಡಲು ಬ್ಯಾಂಕ್ ಮೂಲಕ ಸಾಲ ಪಡೆಯಲು ಸಹಕಾರಿಯಾಗಿದೆ.

ಪ್ರಸ್ತುತ ಬೇಕರಿ ಉದ್ಯಮಕ್ಕೆ ಉತ್ತಮ ಅವಕಾಶವಿದ್ದು ಈ ಕ್ಷೇತ್ರದಲ್ಲಿ ಗುಣಮಟ್ಟದ ತರಬೇತಿ ಪಡೆಯಲು ಇದು ಉತ್ತಮ ಅವಕಾಶವಾಗಿದೆ.

ಇದನ್ನೂ ಓದಿ: Birth certificate-ಇನ್ನು ಮುಂದೆ ಜನನ-ಮರಣ ಪ್ರಮಾಣ ಪತ್ರ ಪಡೆಯುವುದು ಭಾರೀ ಸುಲಭ!

ಇನ್ನು ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ ಲಿಂಕ್: Click here