ರೈತರು ತಮ್ಮ ಬ್ಯಾಂಕ್ ಖಾತೆಗೆ ಬರ ಪರಿಹಾರ ಎಷ್ಟು ಜಮಾ ಅಗಿದೆ? ಯಾವ ಬ್ಯಾಂಕ್ ಖಾತೆಗೆ? ದಿನಾಂಕ, ಯು.ಟಿ.ಆರ್ ಸಂಖ್ಯೆ ಇತ್ಯಾದಿ ಸಂಪೂರ್ಣ ಮಾಹಿತಿ ಪಡೆಯಲು ಮೊಬೈಲ್ ಅಪ್ಲಿಕೇಶನ್(Bara parihara status check App) ಅನ್ನು ಬಿಡುಗಡೆ ಮಾಡಲಾಗಿದೆ.
ರೈತರಿಗೆ ತಮ್ಮ ಬ್ಯಾಂಕ್ ಖಾತೆಗೆ ಯಾವೆಲ್ಲ ಸರಕಾರಿ ಯೋಜನೆಯಡಿ ಎಷ್ಟು ಹಣ ಬಂದಿದೆ ಮತ್ತು ಯಾವ ಯೋಜನೆಯಡಿ ಎಷ್ಟು ಹಣ ಇತ್ಯಾದಿ ವಿವರವನ್ನು ಈ ಲೇಖನದಲ್ಲಿ ವಿವರಿಸಿರುವ ಮಾಹಿತಿಯನ್ನು ಅನುಸರಿಸಿ ನಿಮ್ಮ ಮೊಬೈಲ್ ನಲ್ಲಿ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಂಡು ಚೆಕ್ ಮಾಡಬಹುದು.
ಡಿಬಿಟಿ ಕರ್ನಾಟಕ ಮೊಬೈಲ್ ಅಪ್ಲಿಕೇಶನ್ ಅನ್ನು ಗೂಗಲ್ ಪ್ಲೇ ಸ್ಟೋರ್ ಭೇಟಿ ಮಾಡಿ ಡೌನ್ಲೋಡ್ ಮಾಡಿಕೊಂಡು ಪ್ರಸ್ತುತ ಜಾರಿಯಲ್ಲಿರುವ ಎಲ್ಲಾ ಸರಕಾರಿ ಯೋಜನೆಯಡಿ ಎಷ್ಟು ಅರ್ಥಿಕ ನೆರವು ಸಂದಾಯವಾಗಿದೆ ಎನ್ನುವ ಮಾಹಿತಿಯನ್ನು ತಿಳಿಯಬಹುದು.
ಇದನ್ನೂ ಓದಿ: Land survey chian- ನಿಮ್ಮ ಜಮೀನಿನ ಸರ್ವೆ ಮಾಡಲು ಬಳಕೆ ಮಾಡುವ ಚೈನಿನ ಕುರಿತು ಈ ಮಾಹಿತಿ ನಿಮಗೆ ಗೊತ್ತೇ?
Bara parihara status check App-2024: ಪರಿಹಾರ ಹಣದ ಜಮಾ ವಿವರ ಪಡೆಯಲು ಮೊಬೈಲ್ ಅಪ್ಲಿಕೇಶನ್:
ರೈತರು ಕೆಳಗಿನ ವಿಧಾನವನ್ನು ಅನುಸರಿಸಿ ಗೂಗಲ್ ಪ್ಲೇ ಸ್ಟೋರ್ ಪ್ರವೇಶ ಮಾಡಿ DBT Karnataka ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಂಡು ಹಣ ಸಂದಾಯದ ವಿವರವನ್ನು ಚೆಕ್ ಮಾಡಬಹುದು.
Step-1: ನಿಮ್ಮ ಮೊಬೈಲ್ ನಲ್ಲಿ ಮೊದಲಿಗೆ ಈ ಲಿಂಕ್ Download Now ಮೇಲೆ ಕ್ಲಿಕ್ ಮಾಡಿ ಗೂಗಲ್ ಪ್ಲೇ ಸ್ಟೋರ್ ಪ್ರವೇಶ ಮಾಡಿ ಅಧಿಕೃತ DBT Karnataka ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.
Step-2: ಇದಾದ ಬಳಿಕ ಅರ್ಜಿದಾರರು ತಮ್ಮ 12 ಅಂಕಿಯ ಆಧಾರ್ ಕಾರ್ಡ ನಂಬರ್ ಅನ್ನು ಹಾಕಿ ನಿಮ್ಮ ಆಧಾರ್ ನಲ್ಲಿರುವಂತೆ ಹೆಸರನ್ನು ನಮೂದಿಸಿ ನೊಂದಾಯಿತ ಮೊಬೈಲ್ ಸಂಖ್ಯೆಗೆ ಬರುವ 6 ಅಂಕಿಯ ಒಟಿಪಿಯನ್ನು ನಮೂದಿಸಿ ಮುಂದುವರೆಯಬೇಕು.
ಇದನ್ನೂ ಓದಿ: Parihara Payment Failed Cases-ರೈತರ ಖಾತೆಗೆ ಬರ ಪರಿಹಾರ ಜಮಾ ಅಗದಿರಲು ಕಾರಣಗಳ ಪಟ್ಟಿ ಬಿಡುಗಡೆ!
Step-3: ಒಟಿಪಿ ಅನ್ನು ಹಾಕಿದ ನಂತರ ನಿಮಗೆ ಸದಾ ನೆನಪಿನಲ್ಲಿ ಉಳಿಯುವ 4 ಅಂಕಿಯ ಪಾಸ್ವರ್ಡ್ ಅನ್ನು ರಚನೆ ಮಾಡಿಕೊಳ್ಳಬೇಕು. ಬಳಿಕ ಇಲ್ಲಿ ಅರ್ಜಿದಾರರ ಅಂದರೆ ನಿಮ್ಮ ವೈಯಕ್ತಿಕ ವಿವರ ತೋರಿಸುತ್ತದೆ ಕೊನೆಯ ಕಾಲಂ ನಲ್ಲಿ ನಿಮ್ಮ ಮೊಬೈಲ್ ನಂಬರ್ ಅನ್ನು ಹಾಕಿ “ಸರಿ” ಎಂದು ತೋರಿಸುವ ಆಯ್ಕೆಯ ಮೇಲೆ ಕ್ಲಿಕ್ ಮಾಡಬೇಕು.
Step-4: ಬಳಿಕ “ಲಾಗಿನ್/Login” ಬಟನ್ ಮೇಲೆ ಕ್ಲಿಕ್ ಮಾಡಿ ಈಗಾಗಲೇ ರಚನೆ ಮಾಡಿಕೊಂಡಿರುವ ಪಾಸ್ವರ್ಡ ಅನ್ನು ಹಾಕಿ ಲಾಗಿನ್ ಅಗಬೇಕು ಇಲ್ಲಿ “ಪಾವತಿ ಸ್ಥಿತಿ/Payment status” ಬಟನ್ ಮೇಲೆ ಕ್ಲಿಕ್ ಮಾಡಿ “ಬೆಳೆ ನಷ್ಟಕ್ಕೆ ಇನ್ಪುಟ್ ಸಬ್ಸಿಡಿ” ಬಟನ್ ಮೇಲೆ ಕ್ಲಿಕ್ ಮಾಡಿ ಬರ ಪರಿಹಾರದ ಹಣ ಎಷ್ಟು ಜಮಾ ಅಗಿದೆ? ಯು.ಟಿ.ಆರ್ ನಂಬರ್, ಬ್ಯಾಂಕಿನ ಹೆಸರು, ಬ್ಯಾಂಕ್ ಅಕೌಂಟಿನ ನಾಲ್ಕು ಸಂಖ್ಯೆ, ಬ್ಯಾಂಕ್ ಖಾತೆದಾರರ ಹೆಸರು, ಜಮಾ ಅದ ದಿನಾಂಕದ ವಿವರ ತೋರಿಸುತ್ತದೆ.
Parihara-ಬರ ಪರಿಹಾರ ಕುರಿತು ನಮ್ಮ ಪುಟದ ಇತರೆ ಉಪಯುಕ್ತ ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ: Click here
ಇದನ್ನೂ ಓದಿ: Monsoon update 2024-ರಾಜ್ಯದ ಈ ಜಿಲ್ಲೆಗಳಲ್ಲಿ ಉತ್ತಮ ಮಳೆ ಸಾಧ್ಯತೆ! ಇಲ್ಲಿದೆ ಮುಂಗಾರು ಪ್ರವೇಶ ದಿನಾಂಕ!