Free beauty parlour training-30 ದಿನದ ಉಚಿತ ಬ್ಯೂಟಿ ಪಾರ್ಲರ್ ಮ್ಯಾನೇಜಮೆಂಟ್ ತರಬೇತಿಗೆ ಅರ್ಜಿ ಆಹ್ವಾನ!

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ,ಕುಮಟಾವತಿಯಿಂದ ಉಚಿತ ಊಟ ಮತ್ತು ವಸತಿ ಸಹಿತ 30 ದಿನದ ಬ್ಯೂಟಿ ಪಾರ್ಲರ್ ಮ್ಯಾನೇಜಮೆಂಟ್ ತರಬೇತಿ(Free beauty parlour training)ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Free beauty parlour training-30 ದಿನದ ಉಚಿತ ಬ್ಯೂಟಿ ಪಾರ್ಲರ್ ಮ್ಯಾನೇಜಮೆಂಟ್ ತರಬೇತಿಗೆ ಅರ್ಜಿ ಆಹ್ವಾನ!
Free beauty parlour training-2024

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ,ಕುಮಟಾವತಿಯಿಂದ ಉಚಿತ ಊಟ ಮತ್ತು ವಸತಿ ಸಹಿತ 30 ದಿನದ ಬ್ಯೂಟಿ ಪಾರ್ಲರ್ ಮ್ಯಾನೇಜಮೆಂಟ್ ತರಬೇತಿ(Free beauty parlour training)ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಎಲ್ಲಿ ಅರ್ಜಿ ಸಲ್ಲಿಸಬೇಕು? ಈ ತರಬೇತಿಯಲ್ಲಿ ಯಾರೆಲ್ಲ ಭಾಗವಹಿಸಬಹುದು? ತರಬೇತಿಯ(beauty parlour training)ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

ಸ್ವ-ಉದ್ಯೋಗ ಮಾಡಲು ಆಸಕ್ತಿಯಿರುವ ಗ್ರಾಮೀಣ ಭಾಗದ ಮಹಿಳೆಯರು ಈ ತರಬೇತಿಯ ಪ್ರಯೋಜನವನ್ನು ಪಡೆದುಕೊಳ್ಳಬಹುದು ತರಬೇತಿ ನೀಡುವುದರ ಜೊತೆಗೆ ಸ್ವತಃ ಉದ್ದಿಮೆ ಪ್ರಾರಂಭಿಸಲು ಬ್ಯಾಂಕ್ ಮೂಲಕ ಸಾಲವನ್ನು ಪಡೆಯಲು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಿಂದ ಅಭ್ಯರ್ಥಿಗಳಿಗೆ ನೆರವು ನೀಡಲಾಗುತ್ತದೆ.

ಇದನ್ನೂ ಓದಿ: Guarantee Yojana-2024: ಗೃಹಲಕ್ಷ್ಮಿ ಹಣ ಬಿಡುಗಡೆ ದಿನಾಂಕ ಪ್ರಕಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್!

How can apply-ತರಬೇತಿಗೆ ಯಾರೆಲ್ಲ ಅರ್ಜಿ ಸಲ್ಲಿಸಬಹುದು?

1) ಈ ತರಬೇತಿಯನ್ನು ಪಡೆಯಲು ಅರ್ಜಿದಾರರ ವಯಸ್ಸು 18 ರಿಂದ 45 ವರ್ಷದ ಒಳಗಿರಬೇಕು.

2) ಕನ್ನಡ ಓದು-ಬರಹ ಬಲ್ಲವರಾಗಿರಬೇಕು.

3) ಸ್ವ-ಉದ್ಯೋಗ ಪ್ರಾರಂಭಿಸಲು ಆಸಕ್ತರಿರಬೇಕು.

4) ಗ್ರಾಮಾಂತರ ಪ್ರದೇಶದವರಾಗಿದ್ದು ಬಿ.ಪಿ.ಎಲ್ ಕಾರ್ಡ ಹೊಂದಿರಬೇಕು.

Required Documents for application- ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:

ಅಭ್ಯರ್ಥಿಯ ನಾಲ್ಕು ಪಾಸ್ ಪೋರ್ಟ ಸೈಜ್ ಪೋಟೋ.
ಬ್ಯಾಂಕ್ ಪಾಸ್ ಬುಕ್ ಪ್ರತಿ.
ರೇಷನ್ ಕಾರ್ಡ ಪ್ರತಿ.
ಆಧಾರ್ ಕಾರ್ಡ ಪ್ರತಿ.

ಇದನ್ನೂ ಓದಿ: Crop insurance last date-ಈ ಬೆಳೆಗಳಿಗೆ ಬೆಳೆ ವಿಮೆ ಕಟ್ಟಲು ಇನ್ನು 15-30 ದಿನ ಮಾತ್ರ ಬಾಕಿ ಇದೆ!

Online application link- ಅರ್ಜಿ ಸಲ್ಲಿಸಲು ಲಿಂಕ್: 

ಆಸಕ್ತ ಅಭರ್ಥಿಗಳು ಈ ಲಿಂಕ್ Apply Now ಮೇಲೆ ಕ್ಲಿಕ್ ಮಾಡಿ ಗೂಗಲ್ ಪಾರ್ಮ್ ಅನ್ನು ಭರ್ತಿ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

Training Date-ತರಬೇತಿ ನಡೆಯುವ ದಿನಾಂಕ:

ಉಚಿತ ಬ್ಯೂಟಿ ಪಾರ್ಲರ್ ಮ್ಯಾನೇಜಮೆಂಟ್ ತರಬೇತಿಯು ದಿನಾಂಕ: 08 ಜುಲೈ 2024 ರಿಂದ ಪ್ರಾರಂಭವಾಗಿ 06 ಆಗಸ್ಟ್ 2024ಕ್ಕೆ ಮುಕ್ತಾಯವಾಗಲಿದೆ. ಒಟ್ಟು 30 ದಿನದ ತರಬೇತಿ ಇದಾಗಿರುತ್ತದೆ.

ಇದನ್ನೂ ಓದಿ: karnataka dam water level: ಕರ್ನಾಟಕ ಜಲಾಶಯಗಳ ನೀರಿನ ಮಟ್ಟ ಮತ್ತು ಸಂಗ್ರಹಣೆ ಮತ್ತು ಒಳ ಮತ್ತು ಹೊರ ಹರಿವು ಮಾಹಿತಿ!

Training Center Address- ತರಬೇತಿ ನಡೆಯುವ ಸ್ಥಳ:

ಇಂಡಿಸ್ಟ್ರೀಯಲ್ ಏರಿಯಾ, ಹೆಗಡೆ ರಸ್ತೆ, ಕುಮಟಾ, ಉತ್ತರಕನ್ನಡ ಜಿಲ್ಲೆ-581343

ಇನ್ನು ಹೆಚ್ಚಿನ ಮಾಹಿತಿಗಾಗಿ: 9449860007, 9538281989, 9916783825, 888044612