2023ರ ಮುಂಗಾರು ಹಂಗಾಮಿನ ಬರದ ಹಿನ್ನೆಲೆಯಲ್ಲಿ ರಾಜ್ಯದ ಸಣ್ಣ ಹಾಗೂ ಅತಿ ಸಣ್ಣ ರೈತ ಕುಟುಂಬಗಳಿಗೆ ಜೀವನೋಪಾಯ ನಷ್ಟ(Crop loss amount) ಪರಿಹಾರವಾಗಿ ಪ್ರತಿ ರೈತರಿಗೆ ತಲಾ ₹3,000 ನೀಡಲು ಸರಕಾರವು ನಿರ್ಧಾರ ಮಾಡಲಾಗಿದ್ದು ಈ ಕುರಿತು ಅಧಿಕೃತ ಮಾಹಿತಿಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಎಕ್ಸಾ ಖಾತೆಯಲ್ಲಿ ಪ್ರಕಟಣೆ ಹೊರಡಿಸಲಾಗಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಹೊರಡಿಸಿರುವ ಪ್ರಕಟಣೆ ವಿವರ ಮತ್ತು ಈ ಪರಿಹಾರವನ್ನು ಪಡೆಯಲು ಅರ್ಹರಿರುವ ರೈತರ ಪಟ್ಟಿಯನ್ನು ಮೊಬೈಲ್ ನಲ್ಲೆ ಹೇಗೆ ನೋಡುವುದು ಎನ್ನುವ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ.
ಕಳೆದ ವರ್ಷದ ಬರದ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಮಳೆಯಾಶ್ರಿತ ಮತ್ತು ನಾಲೆಗಳ ಕೊನೆಯ ಭಾಗದಲ್ಲಿರುವ ರೈತರಿಗೆ ಬೆಳೆ ನಷ್ಟ ಪರಿಹಾರವನ್ನು ನೀಡುವ ನಿಟ್ಟಿನಲ್ಲಿ ಈ ಕ್ರಮವನ್ನು ಅನುಸರಿಸಲಾಗುತ್ತಿದೆ ಎಂದು ಕೃಷ್ಣ ಬೈರೆಗೌಡ ಕಂದಾಯ ಇಲಾಖೆಯ ಸಚಿವರು ಮಾಹಿತಿ ಹಂಚಿಕೊಂಡಿದ್ದು ಇದರಿಂದ ಸುಮಾರು 7 ಲಕ್ಷ ರೈತರಿಗೆ ಪ್ರಯೋಜನವಾಗಲಿದೆ ಎಂದು ತಿಳಿಸಿದ್ದಾರೆ.
ಕೇಂದ್ರ ಸರಕಾರದಿಂದ ಮಾರ್ಗಸೂಚಿಯ ಪ್ರಕಾರ ರಾಜ್ಯಕ್ಕೆ ಒಟ್ಟು ₹3,457 ಕೋಟಿ ಬರಪರಿಹಾರ ಬಿಡುಗಡೆ ಮಾಡಲಾಗಿತ್ತು ಇದರಲ್ಲಿ 27.5 ಲಕ್ಷ ರೈತರಿಗೆ ಪರಿಹಾರವನ್ನು ನೀಡಲಾಗಿತ್ತು ಈಗ ಉಳಿದಿರುವ ₹808 ಕೋಟಿ ಹಣವನ್ನು 7 ಲಕ್ಷ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಜೀವನೋಪಾಯ ಪರಿಹಾರವಾಗಿ ನೀಡಲು ಸರಕಾರದಿಂದ ನಿರ್ಧರಿಸಲಾಗಿದೆ.
Bele nashta parihara-ಈ ಪಟ್ಟಿಯಲ್ಲಿರುವ ರೈತರಿಗೆ ಸಿಗಲಿದೆ 3,000/- ಜೀವನೋಪಾಯ ನಷ್ಟ ಪರಿಹಾರ:
ಕಂದಾಯ ಇಲಾಖೆಯಿಂದ ಅರ್ಹ ರೈತರಿಗೆ ಜೀವನೋಪಾಯ ಪರಿಹಾರವನ್ನು ಒಂದು ವಾರದಲ್ಲಿ ಫಲಾನುಭವಿಗಳಿಗೆ ವಿತರಿಸಲು ಅರ್ಹ ಪಟ್ಟಿಯನ್ನು ಸಿದ್ದಪಡಿಸಲಾಗುತ್ತಿದ್ದು, ಈ ಕೆಳಗೆ ವಿವರಿಸಿರುವ ವಿಧಾನವನ್ನು ಅನುಸರಿಸಿ Parihara ತಂತ್ರಾಂಶವನ್ನು ಭೇಟಿ ಮಾಡಿ ನಿಮ್ಮ ಹಳ್ಳಿಯ ಪಟ್ಟಿಯನ್ನು ನೋಡಬಹುದು ಈ ಪಟ್ಟಿಯಲ್ಲಿರುವ ಎಲ್ಲಾ ರೈತರಿಗೂ ಹಣ ಸಿಗುವುದಿಲ್ಲ ಪಟ್ಟಿಯಲ್ಲಿರುವ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಮಾತ್ರ ಹಣ ಜಮಾ ಅಗಲಿದೆ.
Step-1: ಪ್ರಥಮದಲ್ಲಿ ಈ Parihara Farmers list ಲಿಂಕ್ ಮೇಲೆ ಕ್ಲಿಕ್ ಮಾಡಿ ಪರಿಹಾರ ತಂತ್ರಾಂಶದ ಅಧಿಕೃತ ವೆಬ್ಸೈಟ್ ಅನ್ನು ಪ್ರವೇಶ ಮಾಡಬೇಕು. ತದನಂತರ ಮುಖಪುಟದಲ್ಲಿ ಕಾಣುವ “Village Wise List” ಬಟನ್ ಮೇಲೆ ಕ್ಲಿಕ್ ಮಾಡಿ.
ಇದನ್ನೂ ಓದಿ: PM-kisan amount date-17ನೇ ಕಂತಿನ ಕಿಸಾನ್ ಸಮ್ಮಾನ್ ಹಣ ಬಿಡುಗಡೆಗೆ ಅಧಿಕೃತ ದಿನಾಂಕ ಪ್ರಕಟ!
Step-2: ಇದಾದ ನಂತರ “ಇನ್‌ಪುಟ್ ಸಬ್ಸಿಡಿ ಪರಿಹಾರ ಹಣ ಸಂದಾಯದ ವಿವರಗಳು/Parihara Payment Report” ಎನ್ನುವ ಕಾಲಂ ತೋರಿಸುತ್ತದೆ ಇಲ್ಲಿ ನೀವು Select year/ವರ್ಷ- “2023-24”, “Select season/ಋತು- “ಮುಂಗಾರು”, Calamity Type/ವಿಪತ್ತಿನ ವಿಧ: “ಬರ” ನಂತರ ನಿಮ್ಮ District/ಜಿಲ್ಲೆ, Taluk/ತಾಲ್ಲೂಕು, Hobli/ಹೋಬಳಿ, Village/ಗ್ರಾಮ ಆಯ್ಕೆ ಮಾಡಿಕೊಂಡು “Get Report/ವರದಿ ಪಡೆಯಿರಿ” ಬಟನ್ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಹಳ್ಳಿಯ ಅರ್ಹ ರೈತರ ಪಟ್ಟಿ ತೋರಿಸುತ್ತದೆ.
ಈ ಪಟ್ಟಿಯಲ್ಲಿರುವ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಜೀವನೋಪಾಯ ಪರಿಹಾರದ ರೂ 3,000 ನೇರ ನಗದು ವರ್ಗಾವಣೆಯ(DBT) ಮೂಲಕ ಆಧಾರ್ ಕಾರ್ಡ ಲಿಂಕ್ ಇರುವ ಬ್ಯಾಂಕ್ ಖಾತೆಗೆ ಜಮಾ ಅಗಲಿದೆ.
ಇದನ್ನೂ ಓದಿ: fasal bima yojana-ಈ ಒಂದು ತಪ್ಪಿನಿಂದ ಅನೇಕ ರೈತರಿಗೆ ಬೆಳೆ ವಿಮೆ ಜಮಾ ಅಗಿಲ್ಲ! ಇಲ್ಲಿದೆ ಸೂಕ್ತ ಪರಿಹಾರ!
ಬೆಳೆ ಹಾನಿ ಪರಿಹಾರ ಪಡೆಯಲು ಅರ್ಹರಿರುವ ರೈತರ ಪಟ್ಟಿ: Parihara Farmers list