- Advertisment -
HomeAgricultureBele Parihara-2025: 2.3 ಲಕ್ಷ ರೈತರ ಖಾತೆಗೆ ₹667.73 ಕೋಟಿ ಬೆಳೆ ಪರಿಹಾರ!

Bele Parihara-2025: 2.3 ಲಕ್ಷ ರೈತರ ಖಾತೆಗೆ ₹667.73 ಕೋಟಿ ಬೆಳೆ ಪರಿಹಾರ!

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಮತ್ತು ಬೆಳೆ ಹಾನಿ(Bele hani parihara) ಪರಿಹಾರ ಈ ಎರಡು ಯೋಜನೆಯಡಿಯಲ್ಲಿ ಇದೇ ಮೊದಲ ಬಾರಿಗೆ ದೊಡ್ಡ ಮೊತ್ತದ ಪರಿಹಾರದ ಹಣವನ್ನು(Crop Insurance Amount) ರೈತರ ಖಾತೆಗೆ ವರ್ಗಾವಣೆಯನ್ನು ಮಾಡಲು ರಾಜ್ಯ ಸರ್ಕಾರದಿಂದ ಕ್ರಮವನ್ನು ಕೈಗೊಳ್ಳಲಾಗುತ್ತಿದ್ದು ಇದಕ್ಕೆ ಸಂಬಂಧಪಟ್ಟಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಹಂಚಿಕೊಂಡಿರುವ ಮಾಹಿತಿಯನ್ನು ಇಲ್ಲಿ ವಿವರಿಸಲಾಗಿದೆ.

ರೈತರು ಬೆಳೆದ ಬೆಳೆಯು ಅತಿವೃಷ್ಥಿ ಅಥವಾ ಅನಾವೃಷ್ಠಿಯಿಂದ ಹಾನಿಯಾದ(Bele parihara) ಸಮಯದಲ್ಲಿ ಎರಡು ಯೋಜನೆಯಲ್ಲಿ ಪರಿಹಾರವನ್ನು ಪಡೆಯಲು ಅವಕಾಶವಿದ್ದು ಒಂದು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಇನ್ನೊಂದು ಪ್ರಕೃತಿ ವಿಕೋಪದಡಿ(NDRF Yojana) ಬೆಳೆ ಹಾನಿ ಪರಿಹಾರವನ್ನು ಪಡೆಯಲು ಅವಕಾಶವಿರುತ್ತದೆ. ಈ ಎರಡು ಯೋಜನೆಯಡಿಯಲ್ಲಿ ಅರ್ಹ ರೈತರಿಗೆ ಬೆಳೆ ಹಾನಿ ಪರಿಹಾರವನ್ನು ಒದಗಿಸಲಾಗಿತ್ತದೆ.

ಇದನ್ನೂ ಓದಿ: Scholarship Amount-ವಿದ್ಯಾರ್ಥಿಗಳಿಗೆ ₹5.16 ಕೋಟಿ ವಿದ್ಯಾರ್ಥಿ ವೇತನ ಬಿಡುಗಡೆ!

2024ರ ಮುಂಗಾರು ಹಂಗಾಮಿನಲ್ಲಿ ತಮ್ಮ ಬೆಳೆಗಳಿಗೆ ಪರಿಹಾರವನ್ನು(crop insurance) ಪಡೆಯಲು ರಾಜ್ಯದ ಎಲ್ಲಾ ಜಿಲ್ಲೆಗಳ ರೈತರು ಫಸಲ್ ಭೀಮಾ ಯೋಜನೆ ಮತ್ತು ಪ್ರಕೃತಿ ವಿಕೋಪದಡಿ(NDRF Scheme) ಬೆಳೆ ಹಾನಿ ಪರಿಹಾರವನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಿ ನೋಂದಣಿಯನ್ನು ಮಾಡಿಕೊಂಡಿದ್ದು ಕೆಲವು ಆಯ್ದ ಜಿಲ್ಲೆಗಳಲ್ಲಿ ರೈತರ ಖಾತೆಗೆ ಪರಿಹಾರವನ್ನು ಒದಗಿಸಲಾಗುತ್ತಿದೆ ಪ್ರಸ್ತುತ ಕಲಬುರಗಿ ಜಿಲ್ಲೆಯಲ್ಲಿ ಬೆಳೆ ವಿಮೆ ಹಾಗೂ ಬೆಳೆಹಾನಿ ಸೇರಿದಂತೆ 2,36,933 ರೈತರಿಗೆ ಒಟ್ಟು ₹667.73 ಕೋಟಿ ಪರಿಹಾರ ನೀಡಲಾಗುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ಸಚಿವರು ಮಾಹಿತಿ ತಿಳಿಸಿದ್ದಾರೆ.

ಈ ಅಂಕಣದಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಎಷ್ಟು ಮೊತ್ತದ ಬೆಳೆ ಹಾನಿ(Bele parihara Status) ಪರಿಹಾರವನ್ನು ರೈತರಿಗೆ ವರ್ಗಾವಣೆ ಮಾಡಲಾಗುತ್ತಿದೆ? ಬೆಳೆ ಹಾನಿ ಪರಿಹಾರದ ಹಣ ಜಮಾ ವಿವರವನ್ನು ರೈತರು ತಮ್ಮ ಮೊಬೈಲ್ ನಲ್ಲೇ ಹೇಗೆ ಚೆಕ್ ಮಾಡಿಕೊಳ್ಳಬಹುದು? ಹಾಗೂ ಬೆಳೆ ಹಾನಿ ಪರಿಹಾರ ಮತ್ತು ಬೆಳೆ ವಿಮೆ ಪರಿಹಾರಕ್ಕೂ ಇರುವ ವ್ಯತ್ಯಾಸವೇನು? ಇನ್ನಿತರ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ.

ಇದನ್ನೂ ಓದಿ: Gruhalakshmi Yojane-2025: ಒಂದೇ ಬಾರಿಗೆ ಎರಡು ಕಂತಿನ ಗೃಹಲಕ್ಷ್ಮಿ ಹಣ ವರ್ಗಾವಣೆಗೆ ದಿನಾಂಕ ನಿಗದಿ!

Crop Insurance-2025: 2.3 ಲಕ್ಷ ರೈತರ ಖಾತೆಗೆ ₹667.73 ಕೋಟಿ ಬೆಳೆ ಪರಿಹಾರ!

ಈಗಾಗಲೇ ಬಹುತೇಕ ಜಿಲ್ಲೆಗಳಲ್ಲಿ ಬೆಳೆ ಹಾನಿ ಪರಿಹಾರ ಪಡೆಯಲು ಅರ್ಹ ರೈತರನ್ನು ಗುರುತಿಸಲಾಗಿದ್ದು ಪ್ರಸ್ತುತ ಕಲಬುರಗಿ ಜಿಲ್ಲೆಯಲ್ಲಿ ಬೆಳೆ ವಿಮೆ(Bele Vime) ಹಾಗೂ ಬೆಳೆ ಹಾನಿ ಈ ಎರಡು ಯೋಜನೆಯಡಿ 2,36,933 ಅರ್ಹ ಫಲಾನುಭವಿ ರೈತರಿಗೆ ಒಟ್ಟು ₹667.73 ಕೋಟಿ ಬೆಳೆ ಪರಿಹಾರ ನೀಡಲಾಗುತ್ತಿದ್ದು, ರಾಜ್ಯ ಸರ್ಕಾರದಿಂದ ಜಿಲ್ಲೆಯ ರೈತರಿಗೆ ಇಷ್ಟು ದೊಡ್ಡ ಮೊತ್ತದ ಬೆಳೆ ವಿಮೆ ಪರಿಹಾರ ನೀಡುವ ಮೂಲಕ ನೂತನ ದಾಖಲೆ ಸೃಷ್ಟಿಸಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ಸಚಿವರು ಈ ಕುರಿತು ಮಾಹಿತಿಯನ್ನು ಹಂಚಿಕೊಂಡಿದ್ದಾರೆ ತಿಳಿಸಿದ್ದಾರೆ.

ಈ ವರ್ಷದ ಮುಂಗಾರು ಹಂಗಾಮಿನಲ್ಲಿ ತೊಗರಿ, ಹೆಸರು, ಉದ್ದು, ಸೋಯಾಬೀನ್, ಹತ್ತಿ ಹಾಗೂ ಇತರೆ ಬೆಳೆಗಳನ್ನು ಸೇರಿದಂತೆ ಕಲಬುರಗಿ ಜಿಲ್ಲೆಯ 2,04,073 ರೈತರು ಫಸಲ್ ಬೀಮಾ ಯೋಜನೆಯಡಿ ತಮ್ಮ ಬೆಳೆಗಳಿಗೆ ವಿಮೆ ಸೌಲಭ್ಯವನ್ನು ಪಡೆಯಲು ನೋಂದಣಿಯನ್ನು ಮಾಡಿಕೊಂಡಿದ್ದು, ಇದಕ್ಕೆ ಸಂಬಂಧಿಸಿದಂತೆ ₹575.194 ಕೋಟಿ ಬೆಳೆ ವಿಮೆ ಪರಿಹಾರ ಮಂಜೂರಾಗಿದೆ ಎಂದು ತಿಳಿಸಿದ್ದಾರೆ.

ಇದರ ಜೊತೆಯಲ್ಲಿ ಜಿಲ್ಲೆಯಲ್ಲಿ 4.36 ಲಕ್ಷ ರೈತರು ತೊಗರಿ, ಹೆಸರು, ಉದ್ದು, ಸೋಯಾಬೀನ್, ಹತ್ತಿ ಮತ್ತಿತರೆ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಈ ಪೈಕಿ ಸ್ಥಳೀಯ ಪ್ರಕೃತಿ ವಿಕೋಪದಡಿ ಬೆಳೆ ಹಾನಿ ಪರಿಹಾರವನ್ನು ಪಡೆಯಲು ಬೆಳೆ ಹಾನಿಯಾದ ಸಮಯದಲ್ಲಿ ವಿವಿಧ ಇಲಾಖೆಯ ಮೂಲಕ ಅರ್ಜಿಯನ್ನು ಸಲ್ಲಿಸಿದ 2,01,847 ರೈತರಿಗೆ ಮಧ್ಯಂತರ ಪರಿಹಾರವಾಗಿ ₹76.34 ಕೋಟಿ ಪರಿಹಾರ ಈಗಾಗಲೇ ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Voter ID-ವೋಟರ್ ಐಡಿ ಕುರಿತು ಮಹತ್ವದ ಮಾಹಿತಿ ಪ್ರಕಟ!

Bele Vime-ಬೆಳೆ ವಿಮೆ ಮತ್ತು ಬೆಳೆ ಹಾನಿ ಪರಿಹಾರ ಎರಡು ಬೇರೆ ಬೇರೆ:

ಬಹಳಷ್ಟು ರೈತರಿಗೆ ಈ ಮಾಹಿತಿ ತಿಳಿದಿರುವುದಿಲ್ಲ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿಯಲ್ಲಿ ಬೆಳೆ ವಿಮೆ ಪರಿಹಾರವನ್ನು ಒದಗಿಸಲಾಗುತ್ತದೆ. ಮತ್ತು ಪ್ರಕೃತಿ ವಿಕೋಪದಡಿ(NDRF Scheme) ಯೋಜನೆಯಡಿ ಬೆಳೆ ಹಾನಿ ಪರಿಹಾರವನ್ನು ರೈತರ ಖಾತೆಗೆ ಜಮಾ ಮಾಡಲಾಗುತ್ತದೆ.

1) ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ(Crop Insurance):

ರೈತರು ತಾವು ಬೆಳೆಯನ್ನು ಬೆಳೆಯಲು ಬಿತ್ತನೆಯನ್ನು ಮಾಡಿದ ತಕ್ಷಣ ಗ್ರಾಮ ಒನ್ ಕೇಂದ್ರವನ್ನು ಭೇಟಿ ಮಾಡಿ ಬೆಳೆಗಳಿಗೆ ವಿಮಾ ಸೌಲಭ್ಯವನ್ನು ಒದಗಿಸಲು ನಿಗದಿತ ಪ್ರಿಮಿಯಂ ಅನ್ನು ಪಾವತಿ ಮಾಡಿ ಬೆಳೆ ವಿಮೆ ಪರಿಹಾರವನ್ನು ಪಡೆಯಲು ರೈತರು ತಮ್ಮ ಹೆಸರನ್ನು ನೋಂದಣಿಯನ್ನು ಮಾಡಿಕೊಳ್ಳಬೇಕು,

ಆ ವರ್ಷದ ಕೊನೆಯಲ್ಲಿ ಸಮೀಕ್ಷೆಯನ್ನು ಆಧಾರಿಸಿ ಬೆಳೆ ಹಾನಿಯಾದ ಅರ್ಹ ರೈತರಿಗೆ ವಿಮಾ ಕಂಪನಿಯಿಂದ ಬೆಳೆ ವಿಮೆ ಪರಿಹಾರವನ್ನು ಒದಗಿಸಲಾಗುತ್ತದೆ. ಈ ಯೋಜನೆಯಡಿ ವೈಯಕ್ತಿಕವಾಗಿಯು ಸಹ ರೈತರು ತಮ್ಮ ಬೆಳೆ ಹಾನಿಯಾದ ಸಮಯದಲ್ಲಿ ಪರಿಹಾರವನ್ನು ಪಡೆಯಲು ಅವಕಾಶವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕೃಷಿ ಇಲಾಖೆಯನ್ನು ಭೇಟಿ ಮಾಡಿ.

ಇದನ್ನೂ ಓದಿ: Yashaswini Card-2025: ಯಶಸ್ವಿನಿ ಕಾರ್ಡ ಪಡೆಯಲು ಇನ್ನು 10 ದಿನ ಮಾತ್ರ ಅವಕಾಶ!

Bele Vime Status-ಬೆಳೆ ವಿಮೆ ಹಣ ಜಮಾ ವಿವರ ಮತ್ತು ಅರ್ಜಿ ಸ್ಥಿತಿಯನ್ನು ಮೊಬೈಲ್ ನಲ್ಲಿ ಚೆಕ್ ಮಾಡಿಕೊಳ್ಳುವ ವಿಧಾನ:

ರಾಜ್ಯ ಸರಕಾರದಿಂದ ಬೆಳೆ ವಿಮೆ ಯೋಜನೆಯ ಅರ್ಜಿ ವಿಲೇವಾರಿಯಲ್ಲಿ ಪಾರದರ್ಶಕ ವ್ಯವಸ್ಥೆಯನ್ನು ಜಾರಿಗೆ ತರಲು ಸಂರಕ್ಷಣೆ(Samrakshane) ತಂತ್ರಾಂಶವನ್ನು ಜಾರಿಗೆ ತರಲಾಗಿದ್ದು ರೈತರು ಈ ಕೆಳಗಿನ ವಿಧಾನವನ್ನು ಅನುಸರಿಸಿ ನಿಮ್ಮ ಮೊಬೈಲ್ ನಲ್ಲೇ ಬೆಳೆ ವಿಮೆ ಅರ್ಜಿಯ ಸ್ಥಿತಿಯನ್ನು ಚೆಕ್ ಮಾಡಿಕೊಳ್ಳಬಹುದು.

Step-1: ಇಲ್ಲಿ ಕ್ಲಿಕ್ Crop Insurance Status ಮಾಡಿ ಅಧಿಕೃತ ಬೆಳೆ ವಿಮೆ ಯೋಜನೆಯ ಸಂರಕ್ಷಣೆ ತಂತ್ರಾಂಶವನ್ನು ಪ್ರವೇಶ ಮಾಡಬೇಕು.

ಇದನ್ನೂ ಓದಿ: Land Conversion-ಗ್ರಾಮೀಣ ಭಾಗದಲ್ಲಿ ಮನೆ ಕಟ್ಟುವವರಿಗೆ ಸಿಹಿ ಸುದ್ದಿ: ಸಚಿವ ಕೃಷ್ಣಬೈರೇಗೌಡ

Bele vime

Step-2: ತದನಂತರ ಈ ಪುಟದಲ್ಲಿ ನಂತರದಲ್ಲಿ ಈ ಪೇಜ್ ನಲ್ಲಿ ವರ್ಷ/Year: “2024-25” ಎಂದು ಹಾಗೂ ಋತು/Select Insurance Season : ಮುಂಗಾರು/Kharif ಎಂದು ಆಯ್ದೆ ಮಾಡಿಕೊಂಡು ಕೆಳಗೆ ಕಾಣುವ “Farmers” ಕಾಲಂನಲ್ಲಿ “Crop Insurance Details On Survey no” ಆಯ್ಕೆಯ ಮೇಲೆ ಕ್ಲಿಕ್ ಮಾಡಬೇಕು.

Step-3: ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ, ಹಳ್ಳಿ, ಜಮೀನಿನ ಸರ್ವೆ ನಂಬರ್ ಅನ್ನು ಹಾಕಿ “Search” ಬಟನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಸರ್ವೆ ಸಂಬರ್ ನಲ್ಲಿ ಲಭ್ಯವಿರುವ ಹಿಸ್ಸಾ ನಂಬರ್ ಗಳು ಕಾಣಿಸುತ್ತವೆ ಇಲ್ಲಿ ಒಂದು ಸರ್ವೆ ನಂಬರ್ ಮೇಲೆ ಕ್ಲಿಕ್ ಮಾಡಿದಾಗ ಆ ಸರ್ವೆ ನಂಬರ್ ನ ಬೆಳೆ ವಿಮೆ ಅರ್ಜಿ ನಂಬರ್ ತೋರಿಸುತ್ತದೆ ಅದನ್ನು ಒಂದು ಕಡೆ ಬರೆದುಟ್ಟಿಕೊಳ್ಳಿ.

Step-4: ಬಳಿಕ ಅರ್ಜಿ ನಂಬರ್ ಅನ್ನು ತೆಗೆದುಕೊಂಡ ಇದೆ ಪುಟದಲ್ಲಿ ಮೇಲೆ ಬಲಬದಿಯಲ್ಲಿ ಕಾಣಿಸುವ “Home” ಬಟನ್ ಮೇಲೆ ಕ್ಲಿಕ್ ಮಾಡಿ ಮಾಡಿ ಈ ಪೇಜ್ ನಲ್ಲಿ “Farmers” ಕಾಲಂನಲ್ಲಿ “check status” ಬಟನ್ ಕ್ಲಿಕ್ ಮಾಡಿ

Step-5: ಅರ್ಜಿ ನಂಬರ್ ಅನ್ನು ತೆಗೆದುಕೊಂಡ ಬಳಿಕ ಇದೆ ಪುಟದಲ್ಲಿ ಮೇಲೆ ಬಲಬದಿಯಲ್ಲಿ ತೋರಿಸುವ “Home” ಆಯ್ಕೆಯನ್ನು ಕ್ಲಿಕ್ ಮಾಡಿ ಇಲ್ಲಿ “Farmers” ಕಾಲಂನಲ್ಲಿ “check status” ಆಯ್ಕೆಯ ಮೇಲೆ ಕ್ಲಿಕ್ ಮಾಡಿ ನೀವು ತೆಗೆದುಕೊಂಡಿರುವ ಅರ್ಜಿ ಸಂಖ್ಯೆ/Application no ಹಾಗೂ ಕ್ಯಾಪ್ಚರ್ ಕೋಡ್ ಹಾಕಿ “Search” ಬಟನ್ ಮೇಲೆ ಕ್ಲಿಕ್ ಮಾಡಿದರೆ ಕೆಳಗೆ ಅರ್ಜಿಯ ವಿವರ ಮತ್ತು ಬೆಳೆ ವಿಮೆ ಹಣ ಜಮಾ ವಿವರ ತೋರಿಸುತ್ತದೆ. ಇಲ್ಲಿದೆ ಎಷ್ಟು ಹಣ ಜಮಾ ಅಗಿದೆ? ಯಾವ ದಿನಾಂಕ? ಬ್ಯಾಂಕ್ ಖಾತೆ ವಿವರ UTR ಸಂಖ್ಯೆ ತೋರಿಸುತ್ತದೆ.

ಇದನ್ನೂ ಓದಿ: Diploma Certificate Courses-ಕೃಷಿ ವಿದ್ಯಾಲಯದಲ್ಲಿ ಸರ್ಟಿಫಿಕೇಟ್ ಕೋರ್ಸ್ ಮಾಡುವ ಅರ್ಜಿ ಆಹ್ವಾನ!

2) ಪ್ರಕೃತಿ ವಿಕೋಪದಡಿ(NDRF Scheme):

ರೈತರು ತಾವು ಬೆಳೆದ ಬೆಳೆಯು ಅತೀಯಾದ ಮಳೆ ಇನ್ನಿತರ ಪ್ರಕೃತಿ ವಿಕೋಪದಿಂದ ಹಾನಿಯಾದರೆ ಈ ಸಮಯದಲ್ಲಿ ಅಂದರೆ 48 ಗಂಟೆಯ ಒಳಗಾಗಿ ಕೃಷಿ ಇಲಾಖೆಯನ್ನು ಭೇಟಿ ಮಾಡಿ ಅಗತ್ಯ ದಾಖಲಾತಿಗಳನ್ನು ಒದಗಿಸಿ ಅರ್ಜಿಯನ್ನು ಸಲ್ಲಿಸಬೇಕು ಇಲಾಖೆ ಅಧಿಕಾರಿಗಳ ತಂಡ ನಿಮ್ಮ ಜಮೀನನ್ನು ಸಮೀಕ್ಷೆಯನ್ನು ಮಾಡಿ ಅರ್ಹ ರೈತರಿಗೆ ಪ್ರಕೃತಿ ವಿಕೋಪ(NDRF Scheme) ಯೋಜನೆಯಡಿ ನೇರ ನಗದು ವರ್ಗಾವಣೆ ಮೂಲಕ ಬೆಳೆ ಹಾನಿ ಪರಿಹಾರದ ಹಣವನ್ನು ಜಮಾ ಮಾಡಲಾಗುತ್ತದೆ.

Bele Parihara Status-ಬೆಳೆ ಹಾನಿ ಪರಿಹಾರದ ಹಣ ಜಮಾ ವಿವರ ಮತ್ತು ಅರ್ಜಿ ಸ್ಥಿತಿಯನ್ನು ಮೊಬೈಲ್ ನಲ್ಲಿ ಚೆಕ್ ಮಾಡಿಕೊಳ್ಳುವ ವಿಧಾನ:

ಬೆಳೆ ಹಾನಿ ಪರಿಹಾರದ(Parihara website) ಹಣ ಜಮಾ ವಿವರವನ್ನು ಮೊಬೈಲ್ ನಲ್ಲಿ ತಿಳಿಯಲು ಕಂದಾಯ ಇಲಾಖೆಯ ಪರಿಹಾರ ತಂತ್ರಾಂಶವನ್ನು ಭೇಟಿ ಮಾಡಿ ಈ ಕೆಳಗಿನ ಹಂತಗಳನ್ನು ಅನುಸರಿಸಿ.

Step-1: ಮೊಟ್ಟ ಮೊದಲಿಗೆ ಇಲ್ಲಿ ಕ್ಲಿಕ್ ಮಾಡಿ Bele Parihara Status Check ಪರಿಹಾರ ತಂತ್ರಾಂಶವನ್ನು ಭೇಟಿ ಮಾಡಿ.

Bele parihara

Step-2: ತದನಂತರ ಈ ವೆಬ್ಸೈಟ್ ಮುಖಪುಟದಲ್ಲಿ ಎಡಬದಿಯಲ್ಲಿ ಕೆಳಗೆ ಗೋಚರಿಸುವ “Village Wise List” ಬಟನ್ ಮೇಲೆ ಕ್ಲಿಕ್ ಮಾಡಿದರೆ “Parihara Payment Report” ಪೇಜ್ ಒಪನ್ ಅಗುತ್ತದೆ ಇಲ್ಲಿ ವರ್ಷ ಮತ್ತು ಋತು, ವಿಪತ್ತಿನ ವಿಧ, ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ, ಹಳ್ಳಿ ಹೆಸರನ್ನು ಆಯ್ಕೆ ಮಾಡಿಕೊಂಡು “Get Report/ವರದಿ ಪಡೆಯಿರಿ ಬಟನ್ ಮೇಲೆ ಕ್ಲಿಕ್ ಮಾಡಿದರೆ ಇಲ್ಲಿ ನಿಮ್ಮ ಹಳ್ಳಿಯಲ್ಲಿ ಯಾರಿಗೆಲ್ಲ ಬೆಳೆ ಹಾನಿ ಪರಿಹಾರದ ಹಣ ಜಮಾ ಅಗಿದೆ ಎನ್ನುವ ಸಂಪೂರ್ಣ ಮಾಹಿತಿ ತೋರಿಸುತ್ತದೆ.

ಇಲ್ಲಿ ತೋರಿಸುವ ಪಟ್ಟಿಯಲ್ಲಿ ರೈತರ ಹೆಸರು, ಹಾನಿಯಾದ ಜಮೀನಿನ ವಿವರ, ಪರಿಹಾರ ಜಮಾ ಅದ ದಿನಾಂಕ, ಎಷ್ಟು ಹಣ ಜಮಾ ಅಗಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಕಾಣಬಹುದು.

- Advertisment -
LATEST ARTICLES

Related Articles

- Advertisment -

Most Popular

- Advertisment -