2023-24ನೇ ಸಾಲಿನ ಬೆಳೆ ಸಮೀಕ್ಷೆ ಅಪ್ಲಿಕೇಶನ್ ಬಿಡುಗಡೆ! ರೈತರು ತಪ್ಪದೇ ಈ ಕೆಲಸ ಮಾಡಿ.

2023-24ನೇ ಸಾಲಿನ ಬೆಳೆ ಸಮೀಕ್ಷೆ ಕಾರ್ಯಕ್ರಮದ ಭಾಗವಾಗಿ ಮಾನ್ಯ ಕರ್ನಾಟಕ ಸರ್ಕಾರದ ಕೃಷಿ ಇಲಾಖೆಯು ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ರೈತರ ಬೆಳೆ ಸಮೀಕ್ಷೆ ಆ್ಯಪ್‌ ಅನ್ನು ಗೂಗಲ್ ಪ್ಲೇ ಸ್ಟೋರ್ ನಲ್ಲಿ ಬಿಡುಗಡೆ ಮಾಡಿರುತ್ತದೆ. 

ರೈತರು ತಾವು ಬೆಳೆದ ಬೆಳೆ ವಿವರಗಳನ್ನು ಬೆಳೆ ಸಮೀಕ್ಷೆ ಅಪ್ಲಿಕೇಶನ್ ನಲ್ಲಿ ಅಪ್ಲೋಡ್ ಮಾಡದಿದ್ದಲ್ಲಿ ಸರ್ಕಾರದ ವಿವಿಧ ಯೋಜನೆಗಳಿಂದ ದೊರೆಯುವ ಸವಲತ್ತುಗಳನ್ನ ಪಡೆಯುವುದರಿಂದ ವಂಚಿತರಾಗುವ ಸಂಭವವಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿರುತ್ತದೆ.

ಸದರಿ ಆ್ಯಪ್‌ ಅನ್ನು ಬಳಸಿಕೊಂಡು ಸ್ವತಃ ರೈತರೇ ತಮ್ಮ ಜಮೀನುಗಳಲ್ಲಿ ಬೆಳೆದಿರುವ ಬೆಳೆಗಳ ಸಮೀಕ್ಷೆಯನ್ನು ಮಾಡಿ ವಿವರಗಳನ್ನು ಅಪ್ಲೋಡ್ ಮಾಡಬಹುದಾಗಿದೆ.

ರೈತರು ತಮ್ಮ ಜಮೀನಿನಲ್ಲಿ ಬೀಜ ಬಿತ್ತನೆ ಮಾಡಿ ಬೆಳೆ ಪೋಟೋ ಹೊಡೆದಾಗ ಕಾಣುವ ಹಂತ ತಲುಪಿದ ನಂತರ ತಪ್ಪದೇ ಈ ಕೆಲಸವನ್ನು ಮಾಡಬೇಕು.

ಬೆಳೆ ಸಮೀಕ್ಷೆ ಪ್ರಯೋಜನಗಳ ವಿವರ:

1. ರೈತರ ಜಮೀನಿನಲ್ಲಿ ಬೆಳೆದಿರುವ ಬೆಳೆಗಳ ಮಾಹಿತಿಯನ್ನು ರೈತರೇ ನಿಖರವಾಗಿ ದಾಖಲಿಸಬಹುದು.

2. ಸದರಿ ಬೆಳ ಸಮೀಕ್ಷೆ ಮಾಹಿತಿಯನ್ನು ಬೆಳೆ ವಿಮೆ, ಬೆಳೆ ನಷ್ಟ ಪರಿಹಾರ, ಬೆಂಬಲ ಬೆಲೆ, ಕೃಷಿ ಸಾಲ ಸೌಲಭ್ಯ ಮತ್ತು ಸರ್ಕಾರದ ವಿವಿಧ ಯೋಜನೆಗಳಡಿ ಸವಲತ್ತುಗಳನ್ನು ರೈತರಿಗೆ ಒದಗಿಸಲು ಮತ್ತು RTC ಯಲ್ಲಿ ಬೆಳೆ ಮಾಹಿತಿ ಅಳವಡಿಸಲು ಬಳಸಲಾಗುತ್ತದೆ.

ಬೆಳೆ ಸಮೀಕ್ಷೆ ಮಾಡುವ ವಿಧಾನ: 

ರೈತರ ಪೂರ್ವ ಮುಂಗಾರು ಬೆಳೆ ಸಮೀಕ್ಷೆ 2023-24 ಆ್ಯಪ್‌ಅನ್ನು ಸಾರ್ವಜನಿಕರು ಗೂಗಲ್ ಪ್ಲೇ ಸ್ಟೋರ್ ನಲ್ಲಿ “ರೈತರ ಬೆಳೆ ಸಮೀಕ್ಷೆ 2023-24" ಎಂದು ಟೈಪ್ ಮಾಡಿ ಅಥವಾ ಈ ಮುಂದಿನ https://play.google.com/store/apps/details?id=com.csk.farmer23_24.cropsurvey ಡೌನ್ ಲೋಡ್ ಮಾಡಿಕೊಳ್ಳಬೇಕು. 

ನಂತರ ತಮ್ಮ ಆಧಾರ್ ಕಾರ್ಡ್ ನ ಮೂಲಕ EKYC ಪ್ರಕ್ರಿಯೆ ಪೂರ್ಣಗೊಳಿಸಿ ನೊಂದಾಯಿಸಿಕೊಂಡು ತಮ್ಮ ಜಮೀನಿನ ವಿವರಗಳನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು. ಆನಂತರ ತಮ್ಮ ಜಮೀನುಗಳಿಗೆ ತೆರಳಿ ಸಂಬಂಧಪಟ್ಟ ಸರ್ವೆ ನಂಬರ್ ನಲ್ಲಿ ಬೆಳೆದಿರುವ ಬೆಳೆಗಳ ಛಾಯಾಚಿತ್ರಗಳನ್ನು ತೆಗೆದು ಅಪ್ ಲೋಡ್ ಮಾಡಬೇಕು.

ಇದನ್ನೂ ಓದಿ: ಗ್ರಾಮ್ ಒನ್ ಸೇವಾ ಕೇಂದ್ರಗಳ ಮೂಲಕ ಯಾವೆಲ್ಲ ಯೋಜನೆಗೆ ಅರ್ಜಿ ಸಲ್ಲಿಸಬವುದು?

ಬೆಳೆ ಸಮೀಕ್ಷೆ ಮಾಡದಿದ್ದಲ್ಲಿ ಸರಕಾರದ ವಿವಿಧ ಯೋಜನೆಗಳಿಂದ ಸವಲತ್ತು ಸಿಗುವುದಿಲ್ಲ:

ರೈತರು ತಾವು ಬೆಳೆದ ಬೆಳೆ ವಿವರಗಳನ್ನು ಬೆಳೆ ಸಮೀಕ್ಷೆ ಅಪ್ಲಿಕೇಶನ್ ನಲ್ಲಿ ಅಪ್ಲೋಡ್ ಮಾಡದಿದ್ದಲ್ಲಿ ಸರ್ಕಾರದ ವಿವಿಧ ಯೋಜನೆಗಳಿಂದ ದೊರೆಯುವ ಸವಲತ್ತುಗಳನ್ನ ಪಡೆಯುವುದರಿಂದ ವಂಚಿತರಾಗುವ ಸಂಭವವಿರುತ್ತದೆ. 

ಆದ್ದರಿಂದ, ಎಲ್ಲಾ ರೈತ ಬಾಂಧವರು ಹೆಚ್ಚಿನ ಆಸಕ್ತಿಯೊಂದಿಗೆ ಪುಸಕ್ತ ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯದಲ್ಲಿ ಪಾಲ್ಗೊಂಡು ತಮ್ಮ ಜಮೀನಿನ ಬೆಳೆ ಮಾಹಿತಿಯನ್ನು ತಾವೇ ಖುದ್ದಾಗಿ ದಾಖಲಿಸಲು ಕೃಷಿ ಇಲಾಖೆಯಿಂದ ಪ್ರಕಟಣೆ ಹೊರಡಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ತೋಟಗಾರಿಕೆ, ರೇಷ್ಮೆ, ಕಂದಾಯ ಇಲಾಖೆ ಕಛೇರಿಗಳನ್ನು ಅಥವಾ ಆಯಾ ಗ್ರಾಮಗಳಿಗೆ ನಿಯೋಜಿಸಲಾಗಿರುವ ಖಾಸಗಿ ನಿವಾಸಿಗಳನ್ನು ಅಥವಾ ಬೆಳೆ ಸಮೀಕ್ಷೆ ಸಹಾಯವಾಣಿ ಸಂಖ್ಯೆ: 8448447715 ಅನ್ನು ಸಂಪರ್ಕಿಸುವುದು