ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದಿಂದ ಕೃಷಿ ಕ್ಷೇತ್ರದಲ್ಲಿ ಉತ್ತಮ ತಾಂತ್ರಿಕತೆ ಅಳವಡಿಕೆ ಮಾಡಿಕೊಂಡ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಆಸಕ್ತ ಪ್ರಕತಿಪರ ರೈತ ಮತ್ತು ರೈತ ಮಹಿಳೆ ಹಾಗೂ ಕೃಷಿ ವಿಭಾಗದಲ್ಲಿ ತಳ ಮಟ್ಟದಲ್ಲಿ ಉತ್ತಮವಾಗಿ ಕಾರ್ಯನಿರ್ಹಹಿಸುತ್ತಿರುವ ವಿಸ್ತರಣಾ ಕಾರ್ಯಕರ್ತರಿಂದ ವಿವಿಧ ಪ್ರಶಸ್ತಿಗಳಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಕುರಿತು ವಿ ಎಲ್ ಮಧು ಪ್ರಸಾದ್ ವಿಸ್ತರಣಾ ನಿರ್ದೇಶಕರು, ಕೃಷಿ ವಿಶ್ವವಿದ್ಯಾಲಯ ಬೆಂಗಳೂರು ಇವರು ಪ್ರಕಟಣೆ ಹೊರಡಿಸಿದ್ದಾರೆ.
ಪ್ರಶಸ್ತಿಗಳ ವಿವರ ಹೀಗಿದೆ:
ರಾಜ್ಯ ಮಟ್ಟದ ಪ್ರಶಸ್ತಿಗಳು (ರಾಜ್ಯ ವ್ಯಾಪ್ತಿ)
1. ಮಾಜಿ ಪ್ರಧಾನಮಂತ್ರಿ ಶ್ರೀ ಹೆಚ್.ಡಿ. ದೇವೇಗೌಡ ರಾಜ್ಯ ಮಟ್ಟದ ಅತ್ಯುತ್ತಮ ರೈತ / ರೈತ ಮಹಿಳೆ ಪ್ರಶಸ್ತಿ:
2. ಡಾ. ಎಂ.ಹೆಚ್, ಮರಿಗೌಡ ರಾಜ್ಯ ಮಟ್ಟದ ಅತ್ಯತ್ತಮ ತೋಟಗಾರಿಕಾ ರೈತ / ರೈತ ಮಹಿಳೆ ಪ್ರಶಸ್ತಿ.
ರಾಜ್ಯ ಮಟ್ಟದ ಪ್ರಶಸ್ತಿಗಳು (ಕೃವಿವಿ, ಬೆಂಗಳೂರಿನ ಆಡಳಿತ ವ್ಯಾಪ್ತಿಯ 10 ಜಿಲ್ಲೆಗಳು)
1. ಕೆನರಾ ಬ್ಯಾಂಕ್ ಪ್ರಯೋಜಿತ ಕ್ಯಾನ್ ಬ್ಯಾಂಕ್ ಆತ್ಯುತ್ತಮ ರೈತ ಮತ್ತು ರೈತ ಮಹಿಳೆ ಪ್ರಶಸ್ತಿ.
2. ಡಾ. ಆರ್. ದ್ವಾರಕೀನಾಥ್ ಅತ್ಯುತ್ತಮ ರೈತ ಮತ್ತು ರೈತ ಮಹಿಳೆ ಪ್ರಶಸ್ತಿ.
3. ಡಾ. ಆರ್. ದ್ವಾರಕೀನಾಥ್ ಅತ್ಯುತ್ತಮ ವಿಸ್ತರಣಾ ಕಾರ್ಯಕರ್ತ ಪ್ರಶಸ್ತಿ.
ಜಿಲ್ಲಾ ಮಟ್ಟದ ಪ್ರಶಸ್ತಿಗಳು (ಕೃವಿವಿ, ಬೆಂಗಳೂರಿನ ಆಡಳಿತ ವ್ಯಾಪ್ತಿಯ 10 ಜಿಲ್ಲೆಗಳು)
1. ಜಿಲ್ಲಾ ಮಟ್ಟದ ಅತ್ಯುತ್ತಮ ರೈತ ಪ್ರಶಸ್ತಿ.
2. ಜಿಲ್ಲಾ ಮಟ್ಟದ ಅತ್ಯುತ್ತಮ ರೈತ ಮಹಿಳೆ ಪ್ರಶಸ್ತಿ.
ತಾಲ್ಲೂಕು ಮಟ್ಟದ ಪ್ರಶಸ್ತಿಗಳು (ಕೃವಿದಿ, ಬೆಂಗಳೂರಿನ ಆಡಳಿತ ವ್ಯಾಪ್ತಿಯ 61 ತಾಲ್ಲೂಕುಗಳು )
1. ತಾಲೂಕು ಮಟ್ಟದ ಅತ್ಯುತ್ತಮ ಯುವ ರೈತ ಪ್ರಶಸ್ತಿ
2. ತಾಲ್ಲೂಕು ಮಟ್ಟದ ಅತ್ಯುತ್ತಮ ಯುವ ರೈತ ಮಹಿಳೆ ಪ್ರಶಸ್ತಿ.
ಇದನ್ನೂ ಓದಿ: ಕರೆಂಟ್ ಬಿಲ್‌ನಲ್ಲಿ ಹೆಸರು ಬದಲಾಯಿಸುವುದು ಹೇಗೆ? ಒದಗಿಸಬೇಕಾದ ಅಗತ್ಯ ದಾಖಲಾತಿಗಳೇನು?
ಮೇಲಿನ ಪ್ರಶಸ್ತಿಗಳನ್ನು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ಅಕ್ಟೋಬರ್ ತಿಂಗಳಲ್ಲಿ ಆಯೋಜಿಸಲಿರುವ ಕೃಷಿ ಮೇಳ-2023ರ ಸಂದರ್ಭದಲ್ಲಿ ನೀಡಲಾಗುತ್ತದೆ. ನಿಗದಿತ ಅರ್ಜಿ ನಮೂನೆಯ ಆಯಾ ಜಿಲ್ಲೆಗಳ ಜಂಟಿ ಕೃಷಿ ನಿರ್ದೇಶಕರವರ ಕಛೇರಿ, ವಿಸ್ತರಣಾ ನಿರ್ದೇಶಕರ ಕಛೇರಿ, ಜಿಕೆವಿಕೆ, ಬೆಂಗಳೂರು, ಕೃಷಿ ವಿಜ್ಞಾನ ಕೇಂದ್ರಗಳು (ಹಾಡೋನಹಳ್ಳಿ -ದೊಡ್ಡಬಳ್ಳಾಪುರ, ಚಂದುರಾಯನಹಳ್ಳಿ-ಮಾಗಡಿ, ಕಂದಲಿ–ಸನ, ಕೊನೇಹಳ್ಳಿ- ತಿಪಟೂರು ವಿ.ಸಿ.ಫಾರಂ-ಮಂಡ್ಯ, ಕುರುಬೂರು ಫಾರಂ-ಚಿಂತಾಮಣಿ ಮತ್ತು ಹರದನಹಳ್ಳಿ-ಚಾಮರಾಜನಗರ) ವಿಸ್ತರಣಾ ಶಿಕ್ಷಣ ಘಟಕ (ನಾಗನಹಳ್ಳಿ-ಮೈಸೂರು)ದಲ್ಲಿ ದೊರೆಯುತ್ತದೆ. ಅರ್ಜಿ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ವೆಬ್‌ಸೈಟ್‌ನಲ್ಲಿ (www.uasbangalore.edu.in) ಲಭ್ಯವಿರುತ್ತದೆ.
ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 31 ಜುಲೈ 2023.
ಹೆಚ್ಚಿನ ವಿವರಗಳಿಗೆ ವಿಸ್ತರಣಾ ನಿರ್ದೇಶಕರ ಕಛೇರಿ, ಕೃಷಿ ವಿಶ್ವವಿದ್ಯಾನಿಲಯ, ಜಿಕೆವಿಕೆ, ಬೆಂಗಳೂರು-560 065 ಇವರನ್ನು ಸಂಪರ್ಕಿಸಬಹುದು.
ದೂರವಾಣಿ ಸಂಖ್ಯೆ: 080-23330153
ಕೃಷಿ ವಿಶ್ವವಿದ್ಯಾನಿಲಯ ವೆಬ್ಸೈಟ್: www.uasbangalore.edu.in