ಕರ್ನಾಟಕ ರಾಜ್ಯ ಸರ್ಕಾರದಿಂದ ರೈತರಿಗೆ ಬೆಳೆಗಳನ್ನು ಬೆಳೆಯಲು ನೀರಾವರಿ ಸೌಲಭ್ಯವನ್ನು ತಮ್ಮ ಜಮೀನಿನಲ್ಲಿ ಅಳವಡಿಸಿಕೊಳ್ಳಲು ಸಣ್ಣ ನೀರಾವರಿ ಹಾಗೂ ಅಂತರ್ಜಲ ಅಭಿವೃದ್ಧಿ ಇಲಾಖೆ ಮೂಲಕ 4,923 ಕೊಳವೆ ಬಾವಿಗಳ ಕೊರೆಸಲು ಅಧಿಕೃತವಾಗಿ ಅನುಮತಿಯನ್ನು(Borewell permission) ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
2024-25 ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ(SCSP) 3,095 ಮತ್ತು ಬುಡಕಟ್ಟು ಉಪ ಯೋಜನೆಯಡಿ(TSP) 1,828 ಒಟ್ಟು ಎರಡು ಯೋಜನೆ ಸೇರಿ 4,923 ಕೊಳವೆ ಬಾವಿಗಳನ್ನು ಕೊರೆಸಲು ರೈತರ ಜಮೀನುಗಳಲ್ಲಿ(Borewell Subsidy Schemes in karnataka) ಕೊರೆಸಲು ಅನುಮತಿ ನೀಡಿರುವುದರ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಸರ್ಕಾರದಿಂದ ಮಾಹಿತಿ ಹಂಚಿಕೊಳ್ಳಲಾಗಿದೆ.
ಇದನ್ನೂ ಓದಿ: RTE Application-ಮಕ್ಕಳನ್ನು RTE ಸೀಟ್ ನಲ್ಲಿ ಶಾಲೆಯನ್ನು ದಾಖಲಿಸಲು ಅರ್ಜಿ ಸಲ್ಲಿಸಲು ಅವಕಾಶ!
ನೀರಾವರಿ ವ್ಯವಸ್ಥೆಯನ್ನು ಒದಗಿಸಲು ರಾಜ್ಯ ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿಯನ್ನು(Borewell Subsidy)ನೀಡಲಾಗಿದ್ದು, ಈ ಕುರಿತು ಒಂದಿಷ್ಟು ಉಪಯುಕ್ತವಾದ ಮತ್ತು ರೈತರಿಗೆ ಅವಶ್ಯವಿರುವ ಅಗತ್ಯ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದ್ದು ಮಾಹಿತಿಯು ಉಪಯುಕ್ತ ಅನಿಸಿದ್ದಲ್ಲಿ ತಪ್ಪದೇ ನಿಮ್ಮ ಬಳಿಯಿರುವ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ ಸಹಕರಿಸಿ.
Borewell Permission- 4,923 ಕೊಳವೆ ಬಾವಿ ಕೊರೆಸಲು ಅನುಮತಿ:
ದಿನೇ ದಿನೇ ಹೆಚ್ಚುತ್ತಿರುವ ತಾಪಮಾನಕ್ಕೆ ಅಂತರ್ಜಲ ಮಟ್ಟವು ರಾಜ್ಯದ ಅನೇಕ ಭಾಗಗಳಲ್ಲಿ ಕುಸಿಯುತ್ತಿದ್ದು ತೋಟಗಾರಿಕೆ ಮತ್ತು ಕೃಷಿ ಬೆಳೆಗಳಿಗೆ ಬೇಸಿಗೆ ಸಮಯದಲ್ಲಿ ನೀರನ್ನು ಒದಗಿಸಲು ರೈತರು ಹರಸಾಹಸ ಪಡುತ್ತಾರೆ.
ರೈತರಿಗೆ ಕೊಳವೆ ಬಾವಿಗಳನ್ನು ಕೊರೆಸಲು ಆರ್ಥಿಕವಾಗಿ ಸರ್ಕಾರದಿಂದ ನೆರವು ನೀಡಲು ರಾಜ್ಯ ಸರ್ಕಾರದಿಂದ ಹಲವು ಯೋಜನೆಗಳನ್ನು ಅನುಷ್ಥಾನ ಮಾಡಲಾಗುತ್ತಿದ್ದು ಒಟ್ಟು 2024-25 ನೇ ಸಾಲಿನಲ್ಲಿ 4,923 ಕೊಳವೆ ಬಾವಿಗಳನ್ನು ಕೊರೆಸಲು ಸಂಬಂಧಪಟ್ತ ಇಲಾಖೆಯಿಂದ ಅನುಮತಿಯನ್ನು ನೀಡಲಾಗಿರುತ್ತದೆ.
ಇದನ್ನೂ ಓದಿ: Gruhalakshmi Status-ಗೃಹಲಕ್ಷ್ಮಿ ಯೋಜನೆಯ 2 ತಿಂಗಳ ಹಣ ಬಿಡುಗಡೆ!

Karnataka Nigama List-ಕರ್ನಾಟಕದಲ್ಲಿ ಯಾವೆಲ್ಲ ನಿಗಮದಿಂದ ಕೊಳವೆ ಬಾವಿಯನ್ನು ಕೊರೆಸಲು ಸಹಾಯಧನ ಪಡೆಯಬಹುದು?
ನಮ್ಮ ರಾಜ್ಯದಲ್ಲಿ ರೈತರಿಗೆ ಕೊಳವೆ ಬಾವಿಯನ್ನು ಕೊರೆಸಲು ಗಂಗಾ ಕಲ್ಯಾಣ ಯೋಜನೆಯನ್ನು ಜಾರಿಗೆ ತರಲಾಗಿದ್ದು ಪ್ರಸ್ತುತ ಈ ಯೋಜನೆಯ ಅನುಷ್ಠಾನವನ್ನು ಈ ಕೆಳನ ಪಟ್ಟಿಯಲ್ಲಿರುವ ನಿಗಮಗಳ ಮೂಲಕ ಅನುಷ್ಥಾನ ಮಾಡಲಾಗುತ್ತದೆ.
1) ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ (Dr. B.R. Ambedkar Development Corporation)
2) ಮಹರ್ಷಿ ವಾಲ್ಮೀಕಿ ಆದಿವಾಸಿ ಅಭಿವೃದ್ಧಿ ನಿಗಮ (Maharshi Valmiki ST Development Corporation)
3) ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (D. Devaraj arasu Backward Classes Development Corporation)
4) ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ(Okalika abhivrudi nigama)
ಇದನ್ನೂ ಓದಿ: Sheep Farming-ಉಚಿತ ಕುರಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ! ಯಾವೆಲ್ಲ ಯೋಜನೆಯಡಿ ಸಬ್ಸಿಡಿ ಪಡೆಯಬಹುದು?
5) ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ(Ligayat nigama)
6) ಕರ್ನಾಟಕ ಉಪ್ಪರ ಅಭಿವೃದ್ಧಿ ನಿಗಮ (Karnataka Uppara Development Corporation)
7) ವಿಶ್ವಕರ್ಮಾ ಅಭಿವೃದ್ಧಿ ನಿಗಮ (Vishwakarma Development Corporation)
8) ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ (Karnataka Minorities Development Corporation Ltd – KMDC)
Application Timing-ಯಾವ ಸಮಯದಲ್ಲಿ ಅರ್ಜಿಯನ್ನು ಆಹ್ವಾನಿಸಲಾಗುತ್ತದೆ?
ಪ್ರತಿ ವರ್ಷವು ಸಹ ಗಂಗಾ ಕಲ್ಯಾಣ ಯೋಜನೆಯಡಿ ಅರ್ಹ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗುತ್ತದೆ ಸಾಮಾನ್ಯವಾಗಿ ಸೆಪ್ಟಂಬರ್ ರಿಂದ ನವೆಂಬರ್ ತಿಂಗಳ ಮಧ್ಯದಲ್ಲಿ ರೈತರಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗುತ್ತದೆ.
ಇದನ್ನೂ ಓದಿ: Free AI Training-ವಿದ್ಯಾರ್ಥಿಗಳಿಗೆ ₹15,000/- ರೂ ವಿದ್ಯಾರ್ಥಿವೇತನ ಸಹಿತ ಎಐ ಕುರಿತು ತರಬೇತಿಗೆ ಅರ್ಜಿ ಆಹ್ವಾನ!
Ganga Kalyana Yojane Subsidy-ಗಂಗಾ ಕಲ್ಯಾಣ ಯೋಜನೆಯಡಿ ಎಷ್ಟು ಸಬ್ಸಿಡಿ ನೀಡಲಾಗುತ್ತದೆ?
1) ವೈಯಕ್ತಿಕ ಕೊಳವೆ ಬಾವಿ ಯೋಜನೆಗೆ ಒಟ್ಟು ಘಟಕ ವೆಚ್ಚ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಿಗೆ ರೂ.4.75 ಲಕ್ಷ ಇದರಲ್ಲಿ ವಿದ್ಯುದ್ದೀಕರಣ ವೆಚ್ಚ ಪ್ರತಿ ಕೂಳವೆ ಬಾವಿಗೆ ರೂ.75,000/-ಗಳನ್ನು ಎಸ್ಕಾಂಗಳಿಗೆ ಪಾವತಿಸಲಾಗುತ್ತದೆ.
2) ಉಳಿದ ಜಿಲ್ಲೆಗಳಿಗೆ ರೂ.3.75 ಲಕ್ಷಗಳು ಇದರಲ್ಲಿ ವಿದ್ಯುದ್ದೀಕರಣ ವೆಚ್ಚ ಪ್ರತಿ ಕೊಳವೆ ಬಾವಿಗೆ ರೂ.75,000/-ಗಳನ್ನು ಎಸ್ಕಾಂಗಳಿಗೆ ಪಾವತಿಸಲಾಗುವುದು. ಘಟಕ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ ರೂ.50,000/-ಗಳ ಸಾಲವನ್ನು ಶೇ.4ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುತ್ತದೆ.
ಇದನ್ನೂ ಓದಿ: Khatha Details-ಆಸ್ತಿಗಳಿಗೆ ಎ-ಖಾತಾ ಮತ್ತು ಬಿ-ಖಾತಾ ಎಂದರೇನು? ಇದರ ವ್ಯತ್ಯಾಸಗಳೇನು? ಇಲ್ಲಿದೆ ಸಂಪೂರ್ಣ ವಿವರ!
Documents For Ganga Kalyana Scheme-ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು:
- ರೈತರ ಆಧಾರ್ ಕಾರ್ಡ ಜೆರಾಕ್ಸ್
- ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್.
- ಪೋಟೋ.
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ.
- ಜಮೀನಿನ ಪಹಣಿ/RTC.
- ರೇಶನ್ ಕಾರ್ಡ ಜೆರಾಕ್ಸ್
- ಹಿಡುವಳಿ ಪ್ರಮಾಣ ಪತ್ರ
- ಪ್ರಸ್ತುತ ಕೊಳವೆ ಬಾವಿ ಜಮೀನಿನಲ್ಲಿ ಇಲ್ಲದಿರುವ ಕುರಿತು ಪ್ರಮಾಣ ಪತ್ರ
How To Apply-ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು?
ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದ ಸಮಯದಲ್ಲಿ ಅರ್ಹ ರೈತರು ಅಗತ್ಯ ದಾಖಲಾತಿಗಳನ್ನು ಸಿದ್ದಪಡಿಸಿಕೊಂಡು ನಿಮ್ಮ ಹತ್ತಿರದ ಗ್ರಾಮ ಒನ್/ಬೆಂಗಳೂರು ಒನ್/ಕಂಪ್ಯೂಟರ್ ಸೆಂಟರ್ ಅನ್ನು ನೇರವಾಗಿ ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.