ಆಹಾರ ಇಲಾಖೆಯಿಂದ ಈಗಾಗಲೇ ಮಾರ್ಗಸೂಚಿಯ ಪ್ರಕಾರ ಅನರ್ಹರಿರುವ ಬಿಪಿಎಲ್ ಕಾರ್ಡಗಳನ್ನು(BPL Card) ರದ್ದುಪಡಿಸಿ ಎಪಿಎಲ್ ಕಾರ್ಡಗಳಾಗಿ ಬದಲಾವಣೆ ಮಾಡುವ ಕಾರ್ಯ ನಡೆಯುತ್ತಿದ್ದು, ಅರ್ಹ ಫಲಾನುಭವಿಗಳಿಗೆ ಬಿಪಿಎಲ್ ಕಾರ್ಡ ವಿತರಣೆಯನ್ನು ಸರಳಗೊಳಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೇ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್ ಕಾರ್ಡ ನೀಡಲು ರಾಜ್ಯ ಸರಕಾರದಿಂದ ಕ್ರಮ ಕೈಗೊಳ್ಳಲಾಗುತ್ತಿದೆ.
ಈ ಕುರಿತು ಬೆಳಗಾವಿಯಲ್ಲಿ ಈ ವರ್ಷದ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ(adhiveshana) ಮಾಹಿತಿ ಹಂಚಿಕೊಂಡಿರುವ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತ್ರ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ಗ್ರಾಮ ಪಂಚಾಯಿತಿ(Grama panchayat) ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್ ಪಡಿತರ ಕಾರ್ಡ್ ವಿತರಿಸು ಕಾರ್ಯಕ್ಕೆ ಚಾಲನೆ ನೀಡಲಾಗುವುದು ಹಾಗೂ ಇದರ ಜೊತೆಗೆ ಮಾರ್ಗಸೂಚಿತ ಪ್ರಕಾರ ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಗೊಳಿಸಲಾಗುವುದು ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: PM kisan-ಪಿಎಂ ಕಿಸಾನ್ ಯೋಜನೆಯ ಅನರ್ಹ ಫಲಾನುಭವಿಗಳಿಂದ 335 ಕೋಟಿ ರೂ ಹಣ ವಾಪಾಸ್! ಇಲ್ಲಿದೆ ಅಧಿಕೃತ ಪಟ್ಟಿ!
ಆಹಾರ ಇಲಾಖೆಯ ಅಧಿಕೃತ ಮಾಹಿತಿಯ ಪ್ರಕಾರ ರಾಜ್ಯದಲ್ಲಿ ಸುಮಾರು ಶೇಕಡ 65 ರಿಂದ 75ರಷ್ಟು ಜನಸಂಖ್ಯೆ ಬಡತನ ರೇಖೆಗಿಂತ ಕೆಳಗಿದ್ದಾರೆ ಎನ್ನುವ ಮಾಹಿತಿ ಇದೆ. ಬಡತನದಲ್ಲಿ ಇರುವ ಜನತೆಗೆ ಅನ್ಯಾಯ ಮಾಡಲು ಬಿಡುವುದಿಲ್ಲ. ಇನ್ನಷ್ಟು ಸಮಯ ಪಡೆದುಕೊಂಡು ಬಿಪಿಎಲ್(BPL) ಪಡಿತರದಾರರಿಗೆ ತೊಂದರೆಯಾಗದ ಹಾಗೆ ಎಪಿಎಲ್(APL card) ಕಾರ್ಡ್‌ಗೆ ಅರ್ಹ ಇರುವವರನ್ನು ಬಿಪಿಎಲ್‌ನಿಂದ ಬೇರ್ಪಡಿಸಲಾಗುವುದು ಎಂದು ತಿಳಿಸಿದರು.
Ineligible ration card-ಬಿಪಿಎಲ್ ಕಾರ್ಡ್‌ಗಳಲ್ಲಿ ಶೇಕಡ 20 ರಷ್ಟು ಎಪಿಎಲ್ ಕಾರ್ಡ್‌ದಾರರು:
ನಕಲಿ ದಾಖಲೆಗಳನ್ನು ಸಲ್ಲಿಸಿ ವಾರ್ಷಿಕ ಅಧಿಕ ಆದಾಯ ಇರುವವರು ಸಹ ಬಿಪಿಎಲ್ ಕಾರ್ಡ ನಲ್ಲಿ ಸೇರಿಕೊಂಡಿದ್ದು ಆಹಾರ ಇಲಾಖೆಯ ಅಂಕಿ-ಅಂಶದ ಪ್ರಕಾರ ಪ್ರಸ್ತುತ ಈಗಿರುವ ಬಿಪಿಎಲ್ ಕಾರ್ಡ್‌ಗಳಲ್ಲಿ ಶೇಕಡ 20 ರಷ್ಟು ಎಪಿಎಲ್ ಕಾರ್ಡ್‌ದಾರರು ಸೇರಿದ್ದಾರೆ ಎಂದು ಅಂದಾಜಿಸಲಾಗಿದ್ದು, ಇದನ್ನು ಅತೀ ಶೀಘ್ರದಲ್ಲಿ ಪರಿಷ್ಕರಿಸಿ ನಿಯಮಾನುಸಾರ ಕ್ರಮ ಕೈಗೊಳ್ಳುತ್ತೇವೆ.
ಅರ್ಹ ಬಿಪಿಎಲ್ ಕಾರ್ಡ್‌ಗಳು ಯಾವುದೇ ರೀತಿಯಲ್ಲಿ ರದ್ದಾಗದಂತೆ ಎಚ್ಚರಿಕೆ ವಹಿಸಲಾಗುವುದು. ಅರ್ಹರ ಬಿಪಿಎಲ್ ಕಾರ್ಡ್‌ಗಳು ರದ್ದಾಗಿದ್ದರೆ ಅಂಥವರಿಗೆ ಪುನಃ ಕಾರ್ಡ್ ದೊರಕಿಸಿಕೊಡಲಾಗುವುದು ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: Bagar hukum yojana- ರೈತರಿಗೆ ಭರ್ಜರಿ ಸಿಹಿ ಸುದ್ದಿ: ಬಗರ್ ಹುಕುಂ ಡಿಜಿಟಲ್ ಸಾಗವಳಿ ಚೀಟಿ ವಿತರಣೆ ಆರಂಭ!
Karnataka Food department-ಅಕ್ರಮ ಪಡಿತರ ವಿರುದ್ಧ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ:
ಅಕ್ರಮ ಪಡಿತರ ವಿರುದ್ಧ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ ಪ್ರಕ್ರಿಯೆಯು ಚಾಲ್ತಿಯಲ್ಲಿದೆ. ತಪ್ಪಿತಸ್ಥರೆಂದು ಸಾಬೀತಾದ ವ್ಯಕ್ತಿಗಳ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ(Ahara elake) ಹಾಗೂ ಕಾನೂನು ಮಾಪನಶಾಸ್ತ್ರ ಸಚಿವರಾದ ಕೆ.ಎಚ್.ಮುನಿಯಪ್ಪ(K H muniyappa) ಅವರು ಬೆಳಗಾವಿಯ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ರಾಜ್ಯಾದ್ಯಂತ ಜನವರಿ – 2021 ರಿಂದ ಮೇ 2023ರ ಅವಧಿಯಲ್ಲಿ 3,35,463 ಅನರ್ಹ ಆದ್ಯತಾ ಪಡಿತರ ಚೀಟಿಗಳನ್ನು ಪತ್ತೆ ಹಚ್ಚಲಾಗಿದ್ದು, ಇವರಿಗೆ ₹13.51 ಕೋಟಿ ದಂಡ ವಿಧಿಸಿ, ಅನರ್ಹರಿಗೆ ನೀಡಿದ ಸವಲತ್ತುಗಳಿಂದ ಉಂಟಾದ ನಷ್ಟವನ್ನು ಭರಿಸಲು ಸರ್ಕಾರ ಕ್ರಮವಹಿಸಿದೆ.
ಇದನ್ನೂ ಓದಿ: Free cylinder Scheme- ಮಹಿಳೆಯರು ಉಚಿತ ಗ್ಯಾಸ್ ಸಿಲಿಂಡರ್ ಪಡೆಯಲು ಅವಕಾಶ! ಇಲ್ಲಿದೆ ಅರ್ಜಿ ಸಲ್ಲಿಸುವ ವಿಧಾನ!
ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸುವ ಪಡಿತರ ಅಕ್ರಮ ಸಾಗಣೆ ಕಂಡುಬಂದಲ್ಲಿ ಕೂಡಲೇ ದಾಳಿ ನಡೆಸಿ, ಅಗತ್ಯ ವಸ್ತುಗಳ ಕಾಯ್ದೆ 1955 ರಡಿ ಪ್ರಕರಣ ದಾಖಲಿಸಿ, ಅಕ್ರಮ ಪಡಿತರ ದಾಸ್ತಾನು ಮುಟ್ಟುಗೋಲು ಹಾಕಿಕೊಂಡು, ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ, ಮುಟ್ಟುಗೋಲು ದಾಸ್ತಾನನ್ನು ವಿಲೇ ಮಾಡಿ, ವಿಲೇ ಪಡಿಸಿದ ಪಡಿತರ ಮೊತ್ತವನ್ನು ಸರ್ಕಾರಕ್ಕೆ ಜಮೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ರಾಜ್ಯಾದ್ಯಂತ 2024-25ನೇ ಸಾಲಿನಲ್ಲಿ 213 ಎಫ್‌ಐಆರ್ ದಾಖಲಿಸಿ ಒಟ್ಟು ₹2,68,07,872 ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡು, 238 ಆರೋಪಿಗಳನ್ನು ಬಂಧಿಸಲಾಗಿರುತ್ತದೆ. ಈ ಕುರಿತು ಪರಿಶೀಲಿಸಲು ಮೇಲ್ವಿಚಾರಣೆ ಮಾಡಲು ಇಲಾಖಾ ವತಿಯಿಂದ ನೋಡಲ್ ಅಧಿಕಾರಿಗಳನ್ನು ವಿಭಾಗವಾರು ನೇಮಕ ಮಾಡಲಾಗಿದೆ ಎಂದು ಮಾಹಿತಿ ತಿಳಿಸಿದ್ದಾರೆ.
ಈ ಹಿಂದೆ ಕೆಲವು ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹರಿದ್ದ ಫಲಾನುಭವಿಗಳು ಹಾಲಿ ಬಡತನ ರೇಖೆಗಿಂತ ಮೇಲೆ ಬಂದಿದ್ದು, ಸದರಿ ಪಡಿತರ ಚೀಟಿಗಳನ್ನು ಆದ್ಯತೇತರ ಪಡಿತರ ಚೀಟಿಗಳನ್ನಾಗಿ ಪರಿವರ್ತಿಸಲು ಕ್ರಮ ವಹಿಸಲಾಗುತ್ತಿದೆ. ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿದಾರರು, ಜಿಎಸ್‌ಟಿ ಅಥವಾ ಸಿಎಸ್‌ಟಿ ಪಾವತಿದಾರರ ವಿವರಗಳನ್ನು ಕುಟುಂಬ ತಂತ್ರಾಂಶದಿಂದ ಪಡೆದು ದಂಡ ವಸೂಲಿ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: Student Scholarship- ಈ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ರೂ 25,000 ಸಾವಿರ ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ!
ಪ್ರಸ್ತುತ ಆಹಾರ ಇಲಾಖೆಯಲ್ಲಿ(Food Department) ಬಳಸುವ ಸರ್ವರ್ ಹಳೆಯದಾಗಿದೆ. ಈ ಕಾರಣದಿಂದಾಗಿ ಎನ್‌ಐಸಿಯಿಂದ ಕೆಎಸ್‌ಡಿಸಿ ಗೆ ಆಹಾರ ತಂತ್ರಾಂಶದ ಮೈಗ್ರೇಶನ್ ಕಾರ್ಯ ಅಂತಿಮ ಹಂತದಲ್ಲಿದ್ದು, ಈ ಕಾರ್ಯ ಪೂರ್ಣವಾದ ನಂತರ ಆದ್ಯತಾ ಪಡಿತರ ಚೀಟಿ ನೀಡುವ ಕಾರ್ಯ ಹಾಗೂ ಪಡಿತರ ತಿದ್ದುಪಡಿ ಕಾರ್ಯ ನಿರಂತರವಾಗಿ ನಡೆಯಲಿದೆ ಮಾಹಿತಿ ಹಂಚಿಕೊಂಡಿದ್ದಾರೆ.
Ration card Status on mobile-ನಿಮ್ಮ ರೇಶನ್ ಕಾರ್ಡ ಕುರಿತು ಸಂಪೂರ್ಣ ಮಾಹಿತಿ ನಿಮ್ಮ ಮೊಬೈಲ್ ನಲ್ಲೇ ತಿಳಿಯಿರಿ:
ರೇಶನ್ ಕಾರ್ಡ ಹೊಂದಿರುವ ಗ್ರಾಹಕರು ತಮ್ಮ ರೇಷನ್ ಕಾರ್ಡ ಕುರಿತು ತಮ್ಮ ಮನೆಯಲ್ಲೇ ಕುಳಿತು ಸಂಪೂರ್ಣ ಮಾಹಿತಿಯನ್ನು ಬೆರಳ ತುದಿಯಲ್ಲೇ ಕೇವಲ ಒಂದೆರಡು ಕ್ಲಿಕ್ ನಲ್ಲಿ ಈ ಕೆಳಗೆ ನೀಡಿರುವ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಆಹಾರ ಇಲಾಖೆಯ ವೆಬ್ಸೈಟ್ ಅನ್ನು ಪ್ರವೇಶ ಮಾಡಿ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಬಹುದು.
Ahara elake website-ಅಧಿಕೃತ ವೆಬ್ಸೈಟ್ ಲಿಂಕ್: Click here