Business loan-ಸ್ವಯಂ-ಉದ್ಯೋಗ ನೇರಸಾಲ ಯೋಜನೆಯಡಿ 1 ಲಕ್ಷ ಸಾಲಕ್ಕೆ ಅರ್ಜಿ ಆಹ್ವಾನ!

Facebook
Twitter
Telegram
WhatsApp

ಸ್ವಯಂ-ಉದ್ಯೋಗ ನೇರಸಾಲ ಯೋಜನೆಯಡಿ(Business loan) ಸ್ವ-ಉದ್ಯೋಗ ಮಾಡಲು ಆಸಕ್ತಿಯಿರುವವರಿಗೆ 1 ಲಕ್ಷ ಸಾಲ ಮತ್ತು ಸಹಾಯಧನ ಪಡೆಯಲು ಅರ್ಹ ಅಭ್ಯರ್ಥಿಗಳಿಂದ  ಅರ್ಜಿ ಆಹ್ವಾನಿಸಲಾಗಿದೆ.

ಯಾರೆಲ್ಲ ಈ ಯೋಜನೆಯಡಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆದುಕೊಳ್ಳಬಹುದು? ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಎಲ್ಲಿ ಅರ್ಜಿ ಸಲ್ಲಿಸಬೇಕು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ವ್ಯಾಪಾರ ಚಟುವಟಿಕೆಗಳನ್ನು ಕೈಗೊಳ್ಳಲು ಸ್ವಯಂ-ಉದ್ಯೋಗ ನೇರಸಾಲ ಯೋಜನೆ(swaudyoga neera sala yojane) ಅಡಿಯಲ್ಲಿ ರೂ 1.00 ಲಕ್ಷಗಳ ಸಾಲ-ಸಹಾಯಧನ ಪಡೆಯಬಹುದು.

ಇದನ್ನೂ ಓದಿ: Gruhalakshmi Yojana-2024: ಗೃಹಲಕ್ಷ್ಮಿ ಯೋಜನೆಯಡಿ ಹಣ ಪಡೆಯಲು ಗುರುತಿನ ಚೀಟಿ ಪರಿಗಣಿಸಲು ಅನುಮೋದನೆ!

Business loan subsidy scheme-2024: ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ. 3,00,000/-ಗಳ ಮಿತಿ ಒಳಗಿರಬೇಕು.

ಅರ್ಜಿದಾರರು 18 ವರ್ಷ ಮೇಲ್ಪಟ್ಟು 55 ವರ್ಷದೊಳಗಿನವರಾಗಿರಬೇಕು.

ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದವರಾಗಿರಬೇಕು ಮತ್ತು ನಮೂನೆ-ಜಿ ನಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು.

ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು.

ಒಂದು ಕುಟುಂಬದಲ್ಲಿ ಒಂದು ಫಲಾನುಭವಿಯನ್ನು ಮಾತ್ರ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ: Bakery training-ಬೇಕರಿ ಬ್ಯುಸಿನೆಸ್ ಪ್ರಾರಂಭಿಸುವವರಿಗೆ ಇಲ್ಲಿದೆ ಉತ್ತಮ ಅವಕಾಶ!

Business loan Yojana-ಈ ಯೋಜನೆಯಡಿ ಎಷ್ಟು ಸಹಾಯಧನ ಪಡೆಯಬಹುದು?

  • ಈ ಯೋಜನೆಯಲ್ಲಿ ನಿಗಮವು ಸ್ವಯಂ ಉದ್ಯೋಗ ಕೈಗೊಳ್ಳಲು ಗರಿಷ್ಠ ರೂ.1,00,00/-ಗಳ ಆರ್ಥಿಕ ನೆರವು ಒದಗಿಸಲಾಗುತ್ತದೆ ಮತ್ತು ಈ ಮೊತ್ತದಲ್ಲಿ ಗರಿಷ್ಠ ರೂ.20,000/-ಗಳ ಸಹಾಯಧನ, ಬಾಕಿ ಉಳಿಕೆ ಮೊತ್ತವಾದ ಗರಿಷ್ಠ ರೂ.80,000/-ಗಳ ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುತ್ತದೆ.
  • ಘಟಕ ವೆಚ್ಚವು ಕನಿಷ್ಠ ರೂ.50,000/-ಗಳು ಹಾಗೂ ಈ ಮೊತ್ತಕ್ಕೆ ಸಹಾಯಧನವು ಕನಿಷ್ಠ ಅಂದರೆ ರೂ.10,000/-ಗಳು ಹಾಗೂ ಬಾಕಿ ಮೊತ್ತವಾದ ರೂ.40,000/-ಗಳಿಗೆ ಶೇ.4ರ ಬಡ್ಡಿ ದರದಲ್ಲಿ ಸಾಲ ಮಂಜೂರು ಮಾಡಲಾಗುತ್ತದೆ.
  • ಸ್ವಯಂ-ಉದ್ಯೋಗ ನೇರಸಾಲ ಯೋಜನೆಯಡಿ ಪಡೆದ ಸಾಲವನ್ನು 3 ವರ್ಷಗಳ ಅವಧಿಯಲ್ಲಿ 34 ಮಾಸಿಕ ಕಂತುಗಳಲ್ಲಿ ಅಸಲು ಮತ್ತು ಬಡ್ಡಿ ಸೇರಿಸಿ ಮರುಪಾವತಿಸಬೇಕು ಹಾಗೂ ಇದರಲ್ಲಿ 2 ತಿಂಗಳು ವಿರಾಮ ಅವಧಿ ಇರುತ್ತದೆ.

ಇದನ್ನೂ ಓದಿ: Education Loan-2024: ಅರಿವು ಯೋಜನೆಯಡಿ ರೂ. 5,00,000/- ವರೆಗೆ ವಿದ್ಯಾಭ್ಯಾಸ ಸಾಲ ಪಡೆಯಲು ಅರ್ಜಿ ಆಹ್ವಾನ!

Business loan application-ಅರ್ಜಿ ಸಲ್ಲಿಸುವ ವಿಧಾನ:

ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಅಗತ್ಯ ದಾಖಲಾತಿಗಳ ಸಮೇತ ಈ Apply Now ಲಿಂಕ್ ಮೇಲೆ ಕ್ಲಿಕ್ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

last date-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ 12 ಜುಲೈ 2024 ರಿಂದ ಪ್ರಾರಂಭವಾಗಲಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31 ಆಗಸ್ಟ್ 2024 ಅಗಿರುತ್ತದೆ.

ಇದನ್ನೂ ಓದಿ: Birth certificate-ಇನ್ನು ಮುಂದೆ ಜನನ-ಮರಣ ಪ್ರಮಾಣ ಪತ್ರ ಪಡೆಯುವುದು ಭಾರೀ ಸುಲಭ!

ವಿಷೇಶ ಸೂಚನೆಗಳ ಮಾಹಿತಿ ಹೀಗಿದೆ:

ಅರ್ಜಿದಾರರು ಆಧಾರ್ ಕಾರ್ಡ್ ಹೊಂದಿರಬೇಕು, ಮೊಬೈಲ್ ಸಂಖ್ಯೆಯು ಆಧಾರ್‌ಗೆ ಜೋಡಣೆಯಾಗಿರಬೇಕು ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಆಗಿರಬೇಕು.

ಅರ್ಹ ಫಲಾನುಭವಿಗಳನ್ನು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಧ್ಯಕ್ಷತೆಯಲ್ಲಿ ರಚಿಸಿರುವ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

website link-ಇನ್ನು ಹೆಚ್ಚಿನ ಮಾಹಿತಿ ಪಡೆಯಲು ನಿಗಮದ ವೆಬ್ಸೈಟ್: Click here
Helpline number-ಸಹಾಯವಾಣಿ: 9448451111

Facebook
Twitter
Telegram
WhatsApp
Picture of siddesh

siddesh

Leave a Comment

Top Stories

land documents

agricultural land documents: ಜಮೀನನ್ನು ಖರೀದಿ ಮಾಡುವ ಮುನ್ನ ಯಾವೆಲ್ಲಾ ದಾಖಲೆಗಳನ್ನು ಚೆಕ್ ಮಾಡಬೇಕು?

ಕೃಷಿ ಭೂಮಿ ಖರೀದಿಸುವ ಮುಂಚೆ ಯಾವ ಯಾವ ದಾಖಲೆಗಳನ್ನು ಮುಖ್ಯವಾಗಿ ಚೆಕ್ ಮಾಡಬೇಕು ಮತ್ತು ಯಾವೆಲ್ಲ ಮಾಹಿತಿಯನ್ನು ಪರೀಶೀಲನೆ ಮಾಡಬೇಕು? ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಒಂದೊಮ್ಮೆ ನೀವು ಖರೀದಿ ಮಾಡುತ್ತಿರುವ ಜಮೀನಿನ ದಾಖಲೆಗಳು

sarakri yojane

sarakri yojane- ಸಂಚಾರಿ ಮಾರಾಟ ಮಳಿಗೆ ಖರೀದಿಗೆ ರೂ 5.00 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

ಡಾ ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದಿಂದ ವಿವಿಧ ಯೋಜನೆಯಡಿ ಸಬ್ಸಿಡಿಯ ಪ್ರಯೋಜನ ಪಡೆದುಕೊಳ್ಳಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 30-10-2024 ಕೊನೆಯ ದಿನಾಂಕವಾಗಿದೆ. ಕುಶಲಕಮಿಗಳ ಅಭಿವೃದ್ದಿಗೆ

Crop insurance

Rabi Crop Insurance-ಹಿಂಗಾರು ಬೆಳೆಗಳಿಗೆ ಬೆಳೆ ವಿಮೆ ಮಾಡಿಸಲು ಅರ್ಜಿ ಆಹ್ವಾನ!

ಪ್ರಸ್ತುತ ರಾಜ್ಯದಲ್ಲಿ ಮುಂಗಾರು ಹಂಗಾಮು ಮುಕ್ತಾಯವಾಗಿ ಹಿಂಗಾರು ಹಂಗಾಮು ಆರಂಭವಾಗುತ್ತಿದ್ದು ರೈತರು ತಮ್ಮ ಬೆಳೆಗಳಿಗೆ ವಿಮೆಯನ್ನು(Rabi Crop Insurance) ಮಾಡಿಸಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಮ್ಮ ಹಳ್ಳಿ ವ್ಯಾಪ್ತಿಯಲ್ಲಿ ಯಾವೆಲ್ಲ ಬೆಳೆಗಳಿಗೆ ವಿಮೆಯನ್ನು ಮಾಡಿಸಬಹುದು? ಅರ್ಜಿ