court job karnataka-ಪಿಯುಸಿ ಪಾಸ್ ಆದವರಿಗೆ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ!

ರಾಮನಗರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದ ಆಧೀನ ನ್ಯಾಯಾಲಯಗಳಲ್ಲಿ(court job karnataka) ಖಾಲಿ ಇರುವ ಶೀಘ್ರಲಿಪಿಕಾರರು ಗ್ರೇಡ್- III, ಬೆರಳಚ್ಚುಗಾರರು ಮತ್ತು ಬೆರಳಚ್ಚು ನಕಲುಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ರಾಮನಗರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದ ಆಧೀನ ನ್ಯಾಯಾಲಯಗಳಲ್ಲಿ(court job karnataka) ಖಾಲಿ ಇರುವ ಶೀಘ್ರಲಿಪಿಕಾರರು ಗ್ರೇಡ್- III, ಬೆರಳಚ್ಚುಗಾರರು ಮತ್ತು ಬೆರಳಚ್ಚು ನಕಲುಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಶೀಘ್ರಲಿಪಿಕಾರರು ಮತ್ತು ಬೆರಳಚ್ಚುಗಾರರು ಹುದ್ದೆ ಅರ್ಜಿ ಆಹ್ವಾನಿಸಲಾದ್ದು ಯಾರೆಲ್ಲ ಅರ್ಜಿ ಸಲ್ಲಿಸಬವುದು? ಎಲ್ಲಿ ಅರ್ಜಿ ಸಲ್ಲಿಸಬೇಕು ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ.

(1) Typist- ಶೀಘ್ರಲಿಪಿಕಾರರು ಗ್ರೇಡ್ - III :

ಈ ಹುದ್ದೆಗಳಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಅಥವಾ ಕರ್ನಾಟಕ ಸೆಕೆಂಡರಿ ಪ್ರೌಢ ಶಿಕ್ಷಣ ಪರೀಕ್ಷೆಗಳ ಮಂಡಳಿ ವತಿಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಬೆರಳಚ್ಚು ಪ್ರೌಢ ದರ್ಜೆ ಹಾಗೂ ಕನ್ನಡ ಹಾಗೂ ಆಂಗ್ಲ ಲಿಪಿ ಪ್ರೌಢ ದರ್ಜೆ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು. 

ಇದನ್ನೂ ಓದಿ: free driving training-ಉಚಿತ ವಸತಿ ಊಟ ಸಹಿತ 30 ದಿನಗಳ ಲಘು ಮತ್ತು ಭಾರಿ ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ!

ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಸೆಕ್ರೆಟ್ರಿಯಲ್ ಪ್ರಾಕ್ಟಿಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಹಾಗೂ ಆಂಗ್ಲ ಭಾಷೆಗಳ ಬೆರಳಚ್ಚು ಪ್ರೌಢ ದರ್ಜೆ ಹಾಗೂ ಶೀಘ್ರಲಿಪಿ ಪ್ರೌಢ ದರ್ಜೆ ವಿಷಯಗಳನ್ನು ಐಚ್ಛಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.

(2) ಬೆರಳಚ್ಚುಗಾರರು:

ಈ ಹುದ್ದೆಗಳಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಅಥವಾ ಕರ್ನಾಟಕ ಸೆಕೆಂಡರಿ ಪ್ರೌಢ ಶಿಕ್ಷಣ ಪರೀಕ್ಷೆಗಳ ಮಂಡಳಿ ವತಿಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಬೆರಳಚ್ಚು ಪ್ರೌಢ ದರ್ಜೆ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಸೆಕ್ರೆಟ್ರಿಯಲ್ ಪ್ರಾಕ್ಟಿಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಹಾಗೂ ಆಂಗ್ಲ ಭಾಷೆಗಳ ಬೆರಳಚ್ಚು ಪ್ರೌಢ ದರ್ಜೆ ವಿಷಯಗಳನ್ನು ಐಚ್ಛಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.

ಬೆರಳಚ್ಚು ನಕಲುಗಾರರ, ಹುದ್ದೆಗಳಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಅಥವಾ ಕರ್ನಾಟಕ ಸೆಕೆಂಡರಿ ಪ್ರೌಢ ಶಿಕ್ಷಣ ಪರೀಕ್ಷೆಗಳ ಮಂಡಳಿ ವತಿಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಬೆರಳಚ್ಚು ಕಿರಿಯ ದರ್ಜೆ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಸೆಕ್ರೆಟ್ರಿಯಲ್ ಪ್ರಾಕ್ಟಿಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಹಾಗೂ ಆಂಗ್ಲ ಭಾಷೆಗಳ ಬೆರಳಚ್ಚು ಕಿರಿಯ ದರ್ಜೆ ವಿಷಯಗಳನ್ನು ಐಚ್ಚಿಕ ವಿಷಯವಾಗಿ ಅಭ್ಯಸಿಸಿ. ಉತ್ತೀರ್ಣರಾಗಿರಬೇಕು.

ಇದನ್ನೂ ಓದಿ: Farm Pond application-ಶೇ 90 ಸಹಾಯಧನದಲ್ಲಿ ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ಮಾಡಿಕೊಳ್ಳಲು ರೈತರಿಂದ ಅರ್ಜಿ ಆಹ್ವಾನ!

Application last date-ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

ನಿಗದಿತ ಅರ್ಜಿ ಶುಲ್ಕ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.200/-, ಪ್ರವರ್ಗ 2ಎ, 2ಬಿ, 3ಎ, ಮತ್ತು 3 ಬಿಗೆ ಸೇರಿದ ಅಭ್ಯರ್ಥಿಗಳಿಗೆ ರೂ. 100/- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 22 ಕೊನೆಯ ದಿನಾಂಕವಾಗಿದ್ದು, ಆನ್‌ಲೈನ್‌ನಲ್ಲಿ ಶುಲ್ಕ ಪಾವತಿಸಲು 23 ಜನವರಿ 2024 ಕೊನೆಯ ದಿನಾಂಕವಾಗಿದೆ.

website link-ಪ್ರಮುಖ ಲಿಂಕ್ ಗಳು:

ಅರ್ಜಿ ಸಲ್ಲಿಸಲು ಲಿಂಕ್: click here
ಅಧಿಸೂಚನೆ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ: Download Now

ಅಭ್ಯರ್ಥಿಗಳು ONLINE ಮೂಲಕ ಅರ್ಜಿ ಭರ್ತಿ ಮಾಡುವ ಮೊದಲು ಕೆಳಕಂಡ ಸೂಚನೆಗಳನ್ನು ಕಡ್ಡಾಯವಾಗಿ ತಿಳಿದುಕೊಳ್ಳತಕ್ಕದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ:

1. ಅಭ್ಯರ್ಥಿಗಳು ಅರ್ಜಿಯನ್ನು ONLINE ಮೂಲಕ ಸಲ್ಲಿಸುವ ಮೊದಲು ಕೊಟ್ಟಿರುವ ಎಲ್ಲಾ ಸೂಚನೆಗಳನ್ನು ಗಮನವಿಟ್ಟು ಓದಿಕೊಳ್ಳಬೇಕು ಮತ್ತು ತಪ್ಪಾಗದಂತೆ ನೋಡಿಕೊಳ್ಳುವುದು, ಸರಿಯಾದ ಮಾಹಿತಿ ನೀಡದೇ ಇರುವ ಮತ್ತು ಅಪೂರ್ಣ ಮಾಹಿತಿಯುಳ್ಳ, ಅರ್ಜಿಗಳನ್ನು ತಿರಸ್ಕರಿಸಲಾಗುವುದು.

2. ಅಭ್ಯರ್ಥಿಯು ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸುವುದು ಹಾಗೂ ಇ-ಮೇಲ್ ಐಡಿಯನ್ನು ಹೊಂದಿದ್ದಲ್ಲಿ ನಮೂದಿಸುವುದು. ಒಂದು ವೇಳೆ SMS ಅಥವಾ ಇ-ಮೇಲ್ ಮಖಾಂತರ ತಮಗೆ ಸಂದೇಶ ತಲುಪದಿದ್ದಲ್ಲಿ ಈ ಪ್ರಾಧಿಕಾರ ಹೊಣೆಯಾಗಿರುವುದಿಲ್ಲ

3. ಅಭ್ಯರ್ಥಿಯ ಭಾವಚಿತ್ರ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಲು ಈ ಕೆಳಕಂಡ ನಿರ್ದೇಶನಗಳನ್ನು ಪಾಲಿಸತಕ್ಕದ್ದು.

ಇದನ್ನೂ ಓದಿ: Self Employment Loan: ಸ್ವಯಂ-ಉದ್ಯೋಗ ನೇರ ಸಾಲ ಯೋಜನೆಗೆ ಆಯ್ಕೆಯಾದ ಫಲಾನುಭವಿಗಳಿಗೆ 5 ಕೋಟಿ ನೇರ ನಗದು ವರ್ಗಾವಣೆ- ಸಚಿವ ಕೃಷ್ಣಬೈರೇಗೌಡ

A) ಬಣ್ಣದ ಭಾವಚಿತ್ರವು ಇತ್ತೀಚಿನದಾಗಿದ್ದು, ಅಳತೆಯಲ್ಲಿ.. 5 cm ಉದ್ದ x 3.6 cm ಅಗಲವುಳ್ಳದಾಗಿರಬೇಕು ಮತ್ತು 50kb ಅಳತೆಯದ್ದಾಗಿರಬೇಕು ಹಾಗೂ ಅದು jpg ನಮೂನೆಯಲಿರಬೇಕು. ಭಾವಚಿತ್ರದ ಹಿಂಬದಿಯು ಬಿಳಿಬಣ್ಣದಾಗಿರಬೇಕು,

B) ಭಾವಚಿತ್ರವನ್ನು ಸ್ಕ್ಯಾನ್ ಮಾಡಿ ಅರ್ಜಿಗೆ ಅಪ್‌ಲೋಡ್ ಮಾಡಬೇಕು (ಯಾವುದೇ ಕಾರಣಕ್ಕೂ ಭಾವಚಿತ್ರದ ಮೇಲೆ ಸಹಿ ಮಾಡಬಾರದು)

C) ಅಭ್ಯರ್ಥಿಯು ಕಪ್ಪು ಬಾಲ್‌ ಪಾಯಿಂಟ್ ಪೆನ್ನಿನಲ್ಲಿ ಬಿಳಿ ಹಾಳೆಯ ಮೇಲೆ ಸಹಿ ಮಾಡಿ (2.5 cmಉದ್ದ x 7.5 cm ಅಗಲವುಳ್ಳದಾಗಿರಬೇಕು ಮತ್ತು 25kb ಅಳತೆಯಾಗಿರಬೇಕು ಹಾಗೂ ಅದು .jpg ನಮೂನೆಯಲ್ಲಿರಬೇಕು) ಅಪ್‌ಲೋಡ್ ಮಾಡಬೇಕು.

4. ತದನಂತರ ಅಭ್ಯರ್ಥಿಯು ON-LINE ಅರ್ಜಿಯಲ್ಲಿ ಕೋರಲಾದ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ ನಿಗದಿತ ಶುಲ್ಕ ಪಾವತಿಸಲು ಅರ್ಜಿಯಲ್ಲಿ ತಿಳಿಸಿರುವಂತೆ ಕ್ರಮ ಕೈಗೊಳ್ಳುವುದು. ತದನಂತರ ಅರ್ಜಿಯನ್ನು ಹಾಗೂ ಶುಲ್ಕವನ್ನು ತುಂಬಿದ ಪ್ರತಿಯನ್ನು download ಮಾಡಿಕೊಂಡು ನೇಮಕಾತಿ ಪ್ರಕ್ರಿಯೆ ಮುಗಿಯುವವರೆಗೂ ತಮ್ಮ ಹತ್ತಿರ ಕಾಯ್ದಿರಿಸಿಕೊಳ್ಳತಕ್ಕದ್ದು ಹಾಗೂ ಅರ್ಹತಾ ಪರೀಕ್ಷೆಯ ಸಮಯದಲ್ಲಿ ಹಾಜರು ಪಡಿಸತಕ್ಕದ್ದು,

5. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದವರೆಗೂ ವಿಳಂಬ ಮಾಡದೇ ಮುಂಚಿತವಾಗಿ ಅರ್ಜಿಗಳನ್ನು ಸಲ್ಲಿಸತಕ್ಕದ್ದು. ಒಮ್ಮೆ ಶುಲ್ಕವನ್ನು ಪಾವತಿಸಿದ ನಂತರ ಅದನ್ನು ಯಾವುದೇ ಸಂದರ್ಭದಲ್ಲಿ ಹಿಂತಿರುಗಿಸಲಾಗುವುದಿಲ್ಲ ಎಂದು ತಿಳಿಸಲಾಗಿದೆ.

6. ನ್ಯಾಯಾಲಯದ ಅಧಿಕೃತ ವೆಬ್ಸೈಟ್ ಅನ್ನು  ಭೇಟಿ ಮಾಡಿ ಅನ್ಲೈನ್ ಮೂಲಕ 22-01-2024 ರಾತ್ರಿ 11:59 ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತದೆ.

ಇದನ್ನೂ ಓದಿ: Farm Pond application-ಶೇ 90 ಸಹಾಯಧನದಲ್ಲಿ ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ಮಾಡಿಕೊಳ್ಳಲು ರೈತರಿಂದ ಅರ್ಜಿ ಆಹ್ವಾನ!