ಅಡುಗೆ ಅನಿಲ ಸಂಪರ್ಕ (ಎಲ್.ಪಿ.ಜಿ ಗ್ಯಾಸ್) ಹೊಂದಿರುವ ಫಲಾನುಭವಿಗಳಿಗೆ ಎಲ್.ಪಿ.ಜಿ ಎಜನ್ಸಿಗಳಲ್ಲಿ ಇ-ಕೆವೈಸಿ ಮಾಡಿಸುವ ಕುರಿತು ಸ್ಪಷ್ಟನೆ ನೀಡುವ ಬಗ್ಗೆ ಈ ಕುರಿತು ಆಹಾರ ಇಲಾಖೆಯಿಂದ ಮತ್ತೊಂದು ಪ್ರಕಟಣೆ ಹೊರಡಿಸಲಾಗಿದೆ.
ದಿನಾಂಕ 31.12.2023 ರ ಒಳಗಾಗಿ ಗ್ಯಾಸ್ ಏಜನ್ಸಿಗಳಿಗೆ ಹೋಗಿ ಇ-ಕೆವೈಸಿ ಮಾಡಿಸಿದರೆ ಮಾತ್ರ ಸಬ್ಸಿಡಿ ಸಿಗುತ್ತದೆ ಮತ್ತು ಸಿಲೆಂಡರ್ ಸರಬರಾಜು ಮಾಡಲಾಗುತ್ತದೆ ಎನ್ನುವ ವದಂತಿಗಳಿಗೆ ಸಂಬಂದಿಸಿದಂತೆ ಈ ಕೆಳಕಂಡಂತೆ ಸ್ಪಷ್ಟಿಕರಣವನ್ನು ನೀಡಲಾಗಿದೆ:
1) ಇ-ಕೆವ್ಯಸಿ ಮಾಡಿಸಲು ಯಾವುದೇ ಕೊನೆಯ ದಿನಾಂಕ ನಿಗದಿಪಡಿಸಿರುವುದಿಲ್ಲ ಮತ್ತು ಸಾರ್ವಜನಿಕರು ತಮ್ಮ ಬಿಡುವಿನ ಸಮಯದಲ್ಲಿ ಇ-ಕೆವೈಸಿ ಮಾಡಿಸಬಹುದಾಗಿರುತ್ತದೆ.
2) ಇ-ಕೆವೈಸಿ ಪ್ರಕ್ರಿಯೆಯು ಉಚಿತವಾಗಿರುತ್ತದೆ.
ಇದನ್ನೂ ಓದಿ: free driving training-ಉಚಿತ ವಸತಿ ಊಟ ಸಹಿತ 30 ದಿನಗಳ ಲಘು ಮತ್ತು ಭಾರಿ ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ!
ಆದ್ದರಿಂದ ದಿನಾಂಕ 31.12.2023 ರ ಒಳಗಾಗಿ ಗ್ಯಾಸ್ ಏಜನ್ಸಿಗಳಿಗೆ ಹೋಗಿ ಇ-ಕೆವೈಸಿ ಮಾಡಿಸಬೇಕು ಎನ್ನುವ ಬಗ್ಗೆ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದೆಂದು ತಿಳುವಳಿಕೆಗಾಗಿ ಈ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.
ಪ್ರಕಟಣೆ ಪ್ರತಿ:
LPG cylinder ekyc- ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ:
ಅಡುಗೆ ಅನಿಲ ಸಂಪರ್ಕ ಹೊಂದಿದವರು ಡಿ.31 ರೊಳಗೆ E-KYC ಮಾಡಿಸಬೇಕೆಂಬ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಲಾಗಿರುತ್ತದೆ E-KYC ಮಾಡಿಸಲು ಯಾವುದೇ ಕೊನೆಯ ದಿನಾಂಕ ನಿಗದಿ ಮಾಡಿಲ್ಲ. ಬಿಡುವಿನ ಸಮಯದಲ್ಲಿ ಮಾಡಿಕೊಳ್ಳಬಹುದು,ಇದು ಉಚಿತವಾಗಿದ್ದು ಇದಕ್ಕಾಗಿ ಗ್ಯಾಸ್ ಏಜೆನ್ಸಿಗಳಿಗೆ ಹಣ ಪಾವತಿಸಬೇಕಿಲ್ಲ ಆಹಾರ ಇಲಾಖೆ ಸ್ಪಷ್ಟನೆ ನೀಡಲಾಗಿದೆ.
ಇದನ್ನೂ ಓದಿ: Farm Pond application-ಶೇ 90 ಸಹಾಯಧನದಲ್ಲಿ ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ಮಾಡಿಕೊಳ್ಳಲು ರೈತರಿಂದ ಅರ್ಜಿ ಆಹ್ವಾನ!
Cylinder e-KYC-ಇ-ಕೆವೈಸಿ ಅಗಿದಿಯೋ ಇಲ್ಲವೋ ಎಂದು ಚೆಕ್ ಮಾಡುವ ವಿಧಾನ:
ಗ್ರಾಹಕರು ಎಲ್ ಪಿ ಜಿ ಇ-ಕೆವೈಸಿ ಅಗಿದಿಯೋ ಇಲ್ಲವೋ ಎಂದು ತಮ್ಮ ಮೊಬೈಲ್ ನಲ್ಲೇ ಈ LPG e-KYC Status check ಲಿಂಕ್ ಮೇಲೆ ಕ್ಲಿಕ್ ಮಾಡಿ ನಮ್ಮ ಪುಟದ ಅಂಕಣದಲ್ಲಿ ವಿವರಿಸಿರುವ ಮಾಹಿತಿಯನ್ನು ತಿಳಿದುಕೊಂಡು ಇ-ಕೆವೈಸಿ ಅಗಿದಿಯೋ ಇಲ್ಲವೋ ಎಂದು ಖಚಿತಪಡಿಸಿಕೊಳ್ಳಬವುದು.
website link-ಪ್ರಮುಖ ಲಿಂಕ್ ಗಳು:
ಎಲ್ ಪಿ ಜಿ ಗ್ಯಾಸ್ ಅಧಿಕೃತ ವೆಬ್ಸೈಟ್ ಲಿಂಕ್: Click here
ನಮ್ಮ ಪುಟದ ಎಲ್ ಪಿ ಜಿ ಕುರಿತು ಉಪಯುಕ್ತ ಅಂಕಣಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ: Click here
ಇದನ್ನೂ ಓದಿ: Self Employment Loan: ಸ್ವಯಂ-ಉದ್ಯೋಗ ನೇರ ಸಾಲ ಯೋಜನೆಗೆ ಆಯ್ಕೆಯಾದ ಫಲಾನುಭವಿಗಳಿಗೆ 5 ಕೋಟಿ ನೇರ ನಗದು ವರ್ಗಾವಣೆ- ಸಚಿವ ಕೃಷ್ಣಬೈರೇಗೌಡ