Diploma Agriculture Application-2024-25ನೇ ಸಾಲಿನ ಡಿಪ್ಲೊಮಾ(ಕೃಷಿ) ಕೋರ್ಸ್‌ಗೆ ಅರ್ಜಿ ಆಹ್ವಾನ!

2024-25ನೇ ಸಾಲಿನ ಡಿಪ್ಲೊಮಾ(ಕೃಷಿ) ಕೋರ್ಸ್‌ಗೆ ಅರ್ಜಿ ಆಹ್ವಾನಿಸಲಾಗಿದ್ದು ಅರ್ಹ ಆಸಕ್ತ ಅರ್ಜಿದಾರರು(Diploma Agriculture Application) ಈ ಲೇಖನದಲ್ಲಿ ವಿವರಿಸಿರುವ ಎಲ್ಲಾ ಮಾಹಿತಿಯನ್ನು ಸರಿಯಾಗಿ ತಿಳಿದುಕೊಂಡು ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬಹುದು.

ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರಿನ ಅಧೀನದಲ್ಲಿರುವ ಕೃಷಿ ಮಹಾವಿದ್ಯಾಲಯ, ವಿ.ಸಿ. ಫಾರಂ, ಮಂಡ್ಯ, ದಲ್ಲಿ 2024-25ನೇ ಶೈಕ್ಷಣಿಕ ವರ್ಷದಲ್ಲಿ ಎರಡು ವರ್ಷಗಳ ಡಿಪ್ಲೊಮಾ (ಕೃಷಿ) ಕೋರ್ಸ್‌ಗೆ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬೋಧನಾ ಕ್ರಮ ಮತ್ತು ಮಾಧ್ಯಮ: ಡಿಪ್ಲೊಮಾ (ಕೃಷಿ) ಯನ್ನು ಕನ್ನಡ ಮಾಧ್ಯಮದಲ್ಲಿ ಸೆಮಿಸ್ಟರ್ (4 ಸೆಮಿಸ್ಟರ್) ಪದ್ಧತಿಯಲ್ಲಿ ಬೋಧಿಸಲಾಗುತ್ತದೆ.

ಇದನ್ನೂ ಓದಿ: Ayushman card-2024: ನಿಮ್ಮ ಬಳಿ ಈ ಕಾರ್ಡ ಇದ್ದರೆ 5 ಲಕ್ಷದವರೆಗೆ ಉಚಿತ ಆರೋಗ್ಯ ಚಿಕಿತ್ಸೆ ಪಡೆಯಬಹುದು?

Eligibility for diploma agriculture-ಪ್ರವೇಶ ಅರ್ಹತೆ:

ಕೃಷಿ ವಿಶ್ವವಿದ್ಯಾನಿಲಯದಲ್ಲಿ ಡಿಪ್ಲೊಮಾ. (ಕೃಷಿ) ಕೋರ್ಸ್‌ಗೆ ಪ್ರವೇಶ ಕೋರುವ ಅಭ್ಯರ್ಥಿಗಳು ಎಸ್.ಎಸ್. ಎಲ್.ಸಿ. ಪರೀಕ್ಷೆಯಲ್ಲಿ ಕನ್ನಡ ಪಠ್ಯವನ್ನು ಭಾಷೆಯಾಗಿ ಅಭ್ಯಸಿಸಿ ಕನಿಷ್ಠ ಶೇ.45 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು (ಪ.ಜಾ./ಪ.ಪಂ./ಪ್ರವರ್ಗ-1 ರವರುಗಳಿಗೆ ಕನಿಷ್ಠ ಶೇ.40 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು).

ದಿನಾಂಕ: 30-06-2024 ರಂದು ಅಭ್ಯರ್ಥಿಗಳ ವಯಸ್ಸು 19 ವರ್ಷಗಳನ್ನು ಮೀರಿರಬಾರದು.

ರೈತರ ಹಾಗು ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ.50ರಷ್ಟು ಸೀಟುಗಳನ್ನು ಡಿಪ್ಲೊಮಾ (ಕೃಷಿ) ಪ್ರವೇಶಾತಿಗೆ ಮೀಸಲಿಡಲಾಗಿದೆ.

ಅರ್ಜಿ ಹಾಗೂ ಮಾಹಿತಿ ಪುಸ್ತಕವನ್ನು ಕೃಷಿ ವಿಶ್ವವಿದ್ಯಾನಿಲಯ ಜಿ.ಕೆ.ವಿ.ಕೆ., ಬೆಂಗಳೂರಿನ ವೆಬ್‌ಸೈಟ್ www.uasbangalore.edu.in ನಲ್ಲಿ 15-07-2024 ರಿಂದ 10-08-2024 ರವರೆಗೆ  ಡೌನ್ಲೋಡ್ ಮಾಡಬಹುದು. ಈ ರೀತಿ ವೆಬ್‌ಸೈಟ್ ಮುಖಾಂತರ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು, ಅರ್ಜಿಯ ನಿಗದಿತ ಶುಲ್ಕವನ್ನು ಡಿ.ಡಿ. ರೂಪದಲ್ಲಿ ಲಗತ್ತಿಸಿ, ದಿನಾಂಕ. 10-08-2024 ರೊಳಗೆ ಕಳುಹಿಸಿಕೊಡಬೇಕು. ದಿನಾಂಕ:11-08-2024ರ ನಂತರ ಡಿ.ಡಿ. ಯನ್ನು ಪಡೆದು ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Karnataka post office jobs-2024: ಕರ್ನಾಟಕ ಅಂಚೆ ಇಲಾಖೆಯಲ್ಲಿ 1900+ ಹುದ್ದೆಗಳ ಬೃಹತ್ ನೇಮಕಾತಿ!

Application Fee-ಅರ್ಜಿ ಶುಲ್ಕ:

• ಸಾಮಾನ್ಯ ವರ್ಗದವರಿಗೆ ರೂ.500/-ಪ.ಜಾ./ಪ.ಪಂ./ಪ್ರವರ್ಗ-1 ರವರಿಗೆ ರೂ. 250/-ಆಗಿದ್ದು, ರಾಷ್ಟ್ರೀಕೃತ ಬ್ಯಾಂಕ್‌ಗಳ (Nationalised Bank) ಮೂಲಕ ಡಿ.ಡಿಯನ್ನು Comptroller, UAS, GKVK, Bangalore-560065 ಇವರ ಹೆಸರಿನಲ್ಲಿ ಪಡೆದು ಎಲ್ಲಾ ಅಗತ್ಯ ಅಡಕಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಕುಲಸಚಿವರು, ಕೃಷಿ ವಿಶ್ವವಿದ್ಯಾನಿಲಯ, ಜಿ.ಕೆ.ವಿ.ಕೆ., ಬೆಂಗಳೂರು-560065 ಇಲ್ಲಿಗೆ ದಿನಾಂಕ 10-08-2024 ರ (ಸಂಜೆ 4.00 ಗಂಟೆ) ಒಳಗೆ ತಲುಪುವಂತೆ ಖುದ್ದಾಗಿ ಅಥವಾ ಅಂಚೆ ಮೂಲಕ ಕಳುಹಿಸಬಹುದು.

• ದಿನಾಂಕ: 11-08-2024 ರ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಉಲ್ಲೇಖಿಸಲಾಗಿದೆ.

Selection method-ಪ್ರವೇಶ ಮತ್ತು ಆಯ್ಕೆ ವಿಧಾನ :

ಸರ್ಕಾರದ ಆದೇಶಗಳ ಅನ್ವಯ ಸೀಟುಗಳನ್ನು ಭರ್ತಿ ಮಾಡಲಾಗುವುದು.

ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ರೋಸ್ಟರ್ ಪದ್ಧತಿಯನ್ನು ಅಳವಡಿಸಿ, ಪ್ರವೇಶಕ್ಕೆ ಆಯ್ಕೆ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ.

Website link-ಇನ್ನು ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ ಲಿಂಕ್: Click here