ಕರ್ನಾಟಕ ಸರ್ಕಾರ ಔಷಧ ನಿಯಂತ್ರಣ ಇಲಾಖೆ ಪರೀಕ್ಷಾ ಪ್ರಾಧಿಕಾರ ಮಂಡಳಿಯಿಂದ ಡಿ.ಫಾರ್ಮಸಿ(D.Pharmacy ) ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಔಷಧ ನಿಯಂತ್ರಣ ಇಲಾಖೆಯ ಪರೀಕ್ಷಾ ಪ್ರಾಧಿಕಾರ ಮಂಡಳಿಯಿಂದ(D.Pharm. Admission) 2024-25 ನೇ ಶೈಕ್ಷಣಿಕ ಸಾಲಿನ ಸರ್ಕಾರಿ ಔಷಧ ವಿಜ್ಞಾನ ಮಹಾವಿದ್ಯಾಲಯ, ಬೆಂಗಳೂರು ಮತ್ತು ಕರ್ನಾಟಕದ ಖಾಸಗಿ ಡಿ.ಫಾರ್ಮಸಿ ವಿದ್ಯಾಸಂಸ್ಥೆಗಳಲ್ಲಿರುವ ಸರ್ಕಾರಿ ಕೋಟದಡಿಯಲ್ಲಿ ಪ್ರಥಮ ಡಿ.ಫಾರ್ಮ ಕೋರ್ಸಿನ ಸೀಟುಗಳ ಪ್ರವೇಶಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ದಾಖಲೆಗಳು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, ಆನ್ಲೈನ್ ಮೂಲಕ ಅಧಿಕೃತ ಔಷಧ ನಿಯಂತ್ರಣ ಇಲಾಖೆಯ ಪರೀಕ್ಷಾ ಪ್ರಾಧಿಕಾರ ಮಂಡಳಿಯ ವೆಬ್ಸೈಟ್ ಅನ್ನು ಪ್ರವೇಶ ಮಾಡಿ ಅರ್ಜಿಯನ್ನು ಸಲ್ಲಿಸುವುದರ ಕುರಿತು ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: Colgate Scholarship 2024 – ಕೋಲ್ ಗೇಟ್ ಕಂಪನಿಯಿಂದ ವಿದ್ಯಾರ್ಥಿಗಳಿಗೆ 75 ಸಾವಿರ ವಿದ್ಯಾರ್ಥಿ ವೇತನ!
ಅರ್ಜಿ ಸಲ್ಲಿಸಲು ಅರ್ಹರು:
ಅರ್ಜಿದಾರ ಅಭ್ಯರ್ಥಿಯು ದ್ವಿತೀಯ ಪಿ.ಯು.ಸಿ. (ಪಿಸಿಎಂ/ಪಿಸಿಬಿ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
Last date for application- ಪ್ರಮುಖ ದಿನಾಂಕಗಳು:
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 14 ಅಕ್ಟೋಬರ್ 2024 ರಿಂದ ಅವಕಾಶ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 14 ರಿಂದ 30 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಸೀಟು ಹಂಚಿಕೆಯ ಪ್ರಕ್ರಿಯೆಯ ದಿನಾಂಕ ಮತ್ತು ಸಮಯವನ್ನು ವೈಬ್‍ಸೈಟ್ www.beadpharmacy.org ನಲ್ಲಿ ಪ್ರಕಟಿಸಲಾಗುತ್ತದೆ.
ಇದನ್ನೂ ಓದಿ: Gruhalakshmi Status-ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮಿ ಹಣ ಬಿಡುಗಡೆ! ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್!
Online application link-ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳ ಸಮೇತ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಕೊನೆಯ ದಿನಾಂಕದ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಥವಾ ನಿಮ್ಮ ಹತ್ತಿರದ ಗ್ರಾಮ ಒನ್/ಕರ್ನಾಟಕ ಒನ್/ಬೆಂಗಳೂರು ಒನ್ ಕೇಂದ್ರವನ್ನು ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
Documents-ಅರ್ಜಿ ಸಲ್ಲಿಸಲು ದಾಖಲೆಗಳು:
1) ಎಸ್.ಎಸ್.ಎಲ್.ಸಿ ಅಂಕಪಟ್ಟಿ/SSLC
2) ಪಿಯುಸಿ ಅಂಕಪಟ್ಟಿ/PUC
3) ವಿಳಾಸ ದೃಡೀಕರಣ ಪತ್ರ/Address Proof
4) ಆಧಾರ್ ಕಾರ್ಡ ಪ್ರತಿ/Aadhar card
5) ಜಾತಿ ಪ್ರಮಾಣ ಪತ್ರ/Caste Certificate
6) ಫೋಟೋ/Photo
ಇದನ್ನೂ ಓದಿ: Horticulture Diploma- ಡಿಪ್ಲೋಮಾ ತೋಟಗಾರಿಕೆ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ!
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:
ಕೆಳಗೆ ತಿಳಿಸಿರುವ ವಿಧಾನವನ್ನು ಅನುಸರಿಸಿ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
Step-1: ಪ್ರಥಮದಲ್ಲಿ ಈ Click here ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಜಾಲತಾಣವನ್ನು ಭೇಟಿ ಮಾಡಬೇಕು.
Step-2: ಇದಾದ ನಂತರ ಈ ವೆಬ್ಸೈಟ್ ಗೆ ಮೊದಲ ಬಾರಿಗೆ ಭೇಟಿಯಾಗುತ್ತಿರುವವರು ಮೊದಲು Login form ನಲ್ಲಿ “Register” ಬಟನ್ ಮೇಲೆ ಕ್ಲಿಕ್ ಮಾಡಿ ನೋಂದಣಿಯನ್ನು ಮಾಡಿಕೊಳ್ಳಬೇಕು.
ಇದನ್ನೂ ಓದಿ: Krishi honda subsidy-ಶೇ 80% ಸಬ್ಸಿಡಿಯಲ್ಲಿ ಕೃಷಿ ಹೊಂಡ ನಿರ್ಮಾಣ ಮಾಡಿಕೊಳ್ಳಲು ಅರ್ಜಿ!
Step-3: ಬಳಿಕ User Id ಮತ್ತು Password ಅನ್ನು ಹಾಕಿ “Login” ಬಟನ್ ಮೇಲೆ ಕ್ಲಿಕ್ ಮಾಡಿ ಅಭ್ಯರ್ಥಿಯ ಪೋಟೋ ಮತ್ತು ವೈಯಕ್ತಿಕ ವಿವರ ನಮೂದಿಸಿ ಶೈಕ್ಷಣಿಕ ವಿವರವನ್ನು ಹಾಕಿ ಕೊನೆಯಲ್ಲಿ ಎಲ್ಲಾ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಕೊನೆಯಲ್ಲಿ “Submit” ಬಟನ್ ಮೇಲೆ ಕ್ಲಿ ಮಾಡಿ ಅರ್ಜಿ ಸಲ್ಲಿಸಬೇಕು.
Online application link- Apply Now
Online application User manual- Download Now
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22270666 ಹಾಗೂ ಇ-ಮೇಲ್ [email protected], [email protected] ಗೆ ಸಂಪರ್ಕಿಸಬಹುದಾಗಿದೆ ಎಂದು ಔಷಧ ನಿಯಂತ್ರಣ ಇಲಾಖೆಯ ಪರೀಕ್ಷಾ ಪ್ರಾಧಿಕಾರ ಮಂಡಳಿಯ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.