Drip irrigation Subsidy-ಶೇ 90% ಸಬ್ಸಿಡಿಯಲ್ಲಿ ಹನಿ ನೀರಾವರಿ ಆಳಡಿಸಿಕೊಳ್ಳಲು ಅರ್ಜಿ ಅಹ್ವಾನ!

2024-25 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿಯನ್ನು(Drip irrigation Subsidy) ಅಳವಡಿಸಿಕೊಳ್ಳಲು ಎಲ್ಲಾ ವರ್ಗದ ರೈತರಿಗೆ ತೋಟಗಾರಿಕೆ ಬೆಳೆಗಳಿಗೆ ನೀರಾವರಿ ಸೌಲಭ್ಯವನ್ನು ಒದಗಿಸಲು ಶೇಕಡ 90% ರಷ್ಟು ಸಹಾಯಧನ ಪಡೆಯಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅರ್ಹರು ಯಾರು? ಎಲ್ಲಿ ಅರ್ಜಿ ಸಲ್ಲಿಸಬೇಕು? ಯಾವ ಯೋಜನೆಯಡಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಕುರಿತು ಮಾಹಿತಿ ಸೇರಿದಂತೆ ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Package trip-ಸರಕಾರದಿಂದ ಸಹಾಯಧನ ಪಡೆದು ಅಯೋಧ್ಯೆ ಮತ್ತು ಕನ್ಯಾಕುಮಾರಿ ಯಾತ್ರೆ ಕೈಗೊಳ್ಳಲು ಅರ್ಜಿ!

Pradhan Mantri Krishi Sinchai Yojana-ಯೋಜನೆಯ ಉದ್ದೇಶಗಳು:

1) ಸೂಕ್ಷ್ಮ ನೀರಾವರಿ ಪದ್ಧತಿಯನ್ನು ಬಳಸಿ ಜಲಸಂಪನ್ಮೂಲವನ್ನು ಮಿತವ್ಯಯ ಮಾಡುವುದು,

2) ರೈತರಿಗೆ ಸಹಾಯಧನ ನೀಡುವುದರ ಮೂಲಕ ಸೂಕ್ಷ್ಮ ನೀರಾವರಿಯ ಪದ್ದತಿಯನ್ನು ರೈತರ ಜಮೀನುಗಳಲಿ. ಆಳವಡಿಸಲು ಪ್ರೋತ್ಸಾಹಿಸಿ ಶೇ. 50-70 ರಷ್ಟು ನೀರಿನ ಮಿತವ್ಯಯ ಸಾಧಿಸುವುದಲ್ಲದೇ, ವಿದ್ಯುಚ್ಛಕ್ತಿ ಮತ್ತು ಕೂಲಿ ವೆಚ್ಚದಲ್ಲಿ ಮಿತವ್ಯಯ ಸಾಧಿಸುವುದು,

3) ಸೂಕ್ಷ್ಮ ನೀರಾವರಿಯಲ್ಲಿ. ರಸಾವರಿ (Fertigation) ಪದತಿಯ ಮೂಲಕ ರಾಸಾಯನಿಕ ಗೊಬ್ಬರಗಳನ್ನು ಬೆಳೆಗಳಿಗೆ ನೀಡುವುದರ ಮೂಲಕ ಶೇ. 30-40 ರಷ್ಟು ರಾಸಾಯನಿಕ ಗೊಬ್ಬರಗಳ ಮಿತವ್ಯಯ ಸಾಧಿಸುವುದು,

4) ಬೆಳೆಗಳಲ್ಲಿ, ಶೇ. 30-100 ರಷ್ಟು ಹೆಚ್ಚು ಇಳುವರಿ ಹಾಗೂ ಉತ್ಪಾದಕತೆ ಸಾಧಿಸುವುದು.

ಇದನ್ನೂ ಓದಿ: SSP Date Extended- ಎಲ್ಲಾ ರೀತಿಯ ವಿದ್ಯಾರ್ಥಿವೇತನಕ್ಕೆ ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ ಮುಂದೂಡಿಕೆ!

Who can apply for Drip irrigation-ಫಲಾನುಭವಿಗಳ ಅರ್ಹತೆ:

1) ಫಲಾನುಭವಿಗಳು ರೈತರಾಗಿದ್ದು ಜಮೀನು ಅವರ ಹೆಸರಿನಲಿರಬೇಕು, ಜಂಟಿ ಖಾತೆಯಾಗಿದ್ದಲಿ. ಇತರೆ ಖಾತೆದಾರರ ಒಪ್ಪಿಗೆ ಪತ್ರ ಪಡೆದಿರಬೇಕು. (ತಂದೆ ಅಥವಾ ತಾಯಿ ಹೆಸರಿನಲಿ ಜಮೀನಿದ್ದು, ಅವರು ಮರಣ ಹೊಂದಿದ್ದಲ್ಲಿ ಮಾತ್ರ ಗ್ರಾಮ ಲೆಕ್ಕಿಗರಿಂದ ದೃಡೀಕರಿಸಿ, ಕುಟಂಬದ ಇತರೆ ಸದಸ್ಯರು ಒಪ್ಪಿಗೆ ಪಡೆದು ತಮ್ಮ ಹೆಸರಿನಲಿ. ಅರ್ಜಿ ಸಲ್ಲಿಸಬಹುದು).

2) ಮಹಿಳೆಯರ ಹೆಸರಿನಲ್ಲಿ ಖಾತೆ ಹೊಂದಿದ್ದಲ್ಲಿ ಮಹಿಳಾ ಖಾತೆದಾರರೇ ಅರ್ಜಿ ಸಲ್ಲಿಸಬೇಕು (ಕುಟುಂಬದ ಇತರೆ ಸದಸ್ಯರ ಹೆಸರಲಿ. ಅರ್ಜಿ ಸಲ್ಲಿಸಿದ್ದಲ್ಲಿ ಮಾನ್ಯ ಮಾಡಲಾಗುವುದಿಲ್ಲ.).

3) ಫಲಾನುಭವಿಗಳು ತೋಟಗಾರಿಕೆ ಬೆಳೆಗಳನ್ನು ಬೆಳೆಯುವ ರೈತರಾಗಿರಬೇಕು ಅಥವಾ ತೋಟಗಾರಿಕೆ ಬೆಳೆ ಬೆಳೆಯುವ ಆಸಕ್ತಿ ಹೊಂದಿರಬೇಕು ಹಾಗೂ ಸೂಕ್ಷ್ಮ ನೀರಾವರಿ ಅಳವಡಿಸಿದ ನಂತರ ತೋಟಗಾರಿಕೆ ಬೆಳೆಗಳನ್ನೇ ಬೆಳೆಯಬೇಕು,

4) ಫಲಾನುಭವಿಗಳು ನೀರಾವರಿ ಮೂಲವನ್ನು ಹೊಂದಿರಬೇಕು ಹಾಗೂ ಸೂಕ್ಷ್ಮ ನೀರಾವರಿಗೆ ಯೋಗವಿರುವಂತಹ ನೀರನ್ನು ಹೊಂದಿರಬೇಕು, ಜೊತೆಗೆ ಸೂಕ್ಷ್ಮ ನೀರಾವರಿ ಘಟಕಗಳು ಕಾರ್ಯನಿರ್ವಹಿಸಲು ಅವಶ್ಯವಿರುವ ವಿದುಚ್ಛಕ್ಕಿ ಅಥವಾ ಇತರೆ ಶಕ್ತಿಮೂಲಗಳನ್ನು ಹೊಂದಿರಬೇಕು (ತನ್ನ ಸ್ವಂತ ನೀರಾವರಿ ಮೂಲ ಇಲ್ಲದಿದ್ದಲಿ ಬೇರೆ ರೈತರಿಂದ ಈ ಸಂಬಂಧ ಒಪ್ಪಿಗೆ ಪತ್ರ ಪಡೆದು ಸಲ್ಲಿಸಬೇಕು).

5) ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ರೈತರಿಗೆ ಈ ಮೇಲೆ ತಿಳಿಸಿರುವಂತೆ ಗರಿಷ್ಠ 2.00 ಹೆಕ್ಟೇರ್‌ವರೆಗೆ ಶೇ.90ರಷ್ಟು ಸಹಾಯಧನ ನೀಡಲಾಗುತ್ತದೆ.

6) ಇತರೆ ರೈತರಿಗೆ ಈ ಮೇಲೆ ತಿಳಿಸಿರುವಂತೆ ಗರಿಷ್ಠ 2.00 ಹೆಕ್ಟೇ‌ರ್ ವರೆಗೆ ಶೇ.75 ರಷ್ಟು ಸಹಾಯಧನ ನೀಡಲು ಅವಕಾಶವಿರುತ್ತದೆ,

7) ಎಲ್ಲಾ ವರ್ಗದ ರೈತರಿಗೆ ಭಾರತ ಸರ್ಕಾರದ ಮಾರ್ಗಸೂಚಿಯನ್ವಯ 2.00 ಹೆಕ್ಟೇರ್ ಮೇಲ್ಪಟು 5.00 ಹೆಕ್ಟೇರ್‌ವರೆಗೂ ಶೇ.45 ರಷ್ಟು ಸಹಾಯಧನವನ್ನು ಪಾವತಿಸಲಾಗುತ್ತದೆ.

ಇದನ್ನೂ ಓದಿ: Diesel pumpset subsidy- ಶೇ 90% ಸಬ್ಸಿಡಿಯಲ್ಲಿ ಡೀಸೆಲ್ ಪಂಪ್ ಸೆಟ್ ಪಡೆಯಲು ಅರ್ಜಿ ಆಹ್ವಾನ!

Drip Irrigation application-ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು?

ಆಸಕ್ತ ರೈತರು ಅಗತ್ಯ ದಾಖಲಾತಿಗಳ ಸಮೇತ ನಿಮ್ಮ ತಾಲ್ಲೂಕಿನ ತೋಟಗಾರಿಕೆ ಇಲಾಖೆಯನ್ನು ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಇದನ್ನೂ ಓದಿ: Sukanya samriddhi- ಸುಕನ್ಯಾ ಸಮೃದ್ಧಿ ಯೋಜನೆ ಕೇಂದ್ರದಿಂದ ಭರ್ಜರಿ ಸಿಹಿ ಸುದ್ದಿ!

Documents- ಅರ್ಜಿ ಸಲ್ಲಿಸಲು ದಾಖಲಾತಿಗಳು:

1) ಅರ್ಜಿದಾರರ ಆಧಾರ್ ಕಾರ್ಡ
2) ಬ್ಯಾಂಕ್ ಪಾಸ್ ಬುಕ್
3) ರೇಶನ್ ಕಾರ್ಡ
4) ಪೋಟೋ
5) ಜಮೀನಿನ ಪಹಣಿ/RTC
6) ನೀರಿನ ಮೂಲದ ಪ್ರಮಾಣ ಪತ್ರ
7) ಜಂಟಿ ಮಾಲೀಕರಿದ್ದಲ್ಲಿ ಇತರೆ ಮಾಲೀಕರ ಅನುಮತಿ ಪ್ರಮಾಣ ಪತ್ರ