- Advertisment -
HomeAgricultureFarmers Market-ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರುವತಿಯಿಂದ ರೈತ ಸಂತೆ!

Farmers Market-ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರುವತಿಯಿಂದ ರೈತ ಸಂತೆ!

ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದಿಂದ ರೈತರಿಗೆ ತಮ್ಮ ಉತ್ಪನ್ನಗಳನ್ನು(Farmers Market) ಉತ್ತಮ ದರದಲ್ಲಿ ಮಾರಾಟ ಮಾಡಲು ಆರ್ಥಿಕವಾಗಿ ಬೆಂಬಲವನ್ನು ವಿಶ್ವವಿದ್ಯಾನಿಲಯದಿಂದ ಬೆಂಬಲವನ್ನು ನೀಡಲು ವಿಶ್ವವಿದ್ಯಾನಿಲಯದ ಆವರಣದಲ್ಲಿ “ರೈತ ಸಂತೆ” ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು ಇದರ ಬಗ್ಗೆ ಸಂಪೂರ್ಣ ವಿವರವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ.

ರೈತರು ಈ ಕಾರ್ಯಕ್ರಮದಿಂದ ಯಾವೆಲ್ಲ ಪ್ರಯೋಜನವನ್ನು ಪಡೆದುಕೊಳ್ಳಬಹುದು? ಈ ಕಾರ್ಯಕ್ರಮದಿಂದ ರೈತರಿಗೆ ಅಗುವ ಲಾಭಗಳೇನು? ರೈತ ಸಂತೆ ನಡೆಯುವ ದಿನಾಂಕ ಮತ್ತು ಸ್ಥಳ ವಿವರ ಸೇರಿದಂತೆ ಇನ್ನಿತರೆ ಅಗತ್ಯ ಮಾಹಿತಿಯನ್ನು ಈ ಲೇಖನದಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: Free Laptop-SSLC ಅಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಉಚಿತ ಲಾಪ್ ಟಾಪ್ ವಿತರಣೆ!

ಪ್ರಸ್ತುತ ದಿನಗಳಲ್ಲಿ ರೈತರಿಗೆ ತಾವು ಬೆಳೆದಿರುವ ಬೆಳೆಗಳಿಗೆ ಉತ್ತಮ ದರ ಸಿಗುವುದಿಲ್ಲ ಅದೇ ರೀತಿಯಲ್ಲಿ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಉತ್ಪನ್ನಗಳು ಸಮರ್ಪಕ ದರದಲ್ಲಿ ಲಭ್ಯವಾಗುವುದಿಲ್ಲ ಈ ಎರಡು ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕ್ರಮವನ್ನು ನಿರ್ಮಾಣ ಮಾಡಲು ಈ “ರೈತರ ಸಂತೆ” ನೆರವು ನೀಡಲಾಗಿದೆ.

What Is Farmers Market-ಏನಿದು ರೈತರ ಸಂತೆ:

ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಈ ರೈತರ ಸಂತೆಗೆ ತೆಗೆದುಕೊಂಡು ಹೋಗಿ ನೇರವಾಗಿ ಗ್ರಾಹಕರಿಗೆ ಉತ್ತಮ ದರದಲ್ಲಿ ಗುಣಮಟ್ಟದ ಉತ್ಪನ್ನವನ್ನು ಮಾರಾಟ ಮಾಡಬಹುದು. ಒಂದು ವಾಕ್ಯದಲ್ಲಿ ಹೇಳಬೇಕು ಎಂದರೆ ರೈತರೆಲ್ಲರು ಸೇರಿ ತಮ್ಮ ಕೃಷಿ ಉತ್ಪನ್ನವನ್ನು ಯಾವುದೇ ಕಮಿಷನ್ ಇಲ್ಲದೆ ಉತ್ತಮ ದರದಲ್ಲಿ ಮಾರಾಟ ಮಾಡುವ ವೇದಿಕೆ ಎನ್ನಬಹುದು.

ಇದನ್ನೂ ಓದಿ: Free School admission-ಉಚಿತ ವಸತಿ ಶಾಲೆ ಪ್ರವೇಶ ಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ!

raitara sante

Farmers Market Date-ರೈತ ಸಂತೆ ನಡೆಯುವ ದಿನಾಂಕ:

ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದಿಂದ ಇದೇ ಏಪ್ರಿಲ್ 26 ರಂದು“ರೈತ ಸಂತೆ” ಅನ್ನು ವಿಶ್ವವಿದ್ಯಾನಿಲಯದ ಆವರಣದಲ್ಲಿ ಆಯೋಜನೆ ಮಾಡಲಾಗಿದೆ ರೈತರು ಈ ದಿನದಂದು ನೇರವಾಗಿ ತಮ್ಮ ಉತ್ಪನ್ನಗಳನ್ನು ತೆಗೆದುಕೊಂಡು ಹೋಗಿ ಗ್ರಾಹಕರಿಗೆ ಮಾರಾಟ ಮಾಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

GKVK Bengaluru-ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಚಟುವಟಿಕೆಯ ಪರಿಚಯ:

ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಕಾರ್ಯ ಚಟುವಟಿಕೆಗಳು ಮತ್ತು ಉತ್ಪನ್ನಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲು “ರೈತ ಸಂತೆ”ಯನ್ನು ಏಪ್ರಿಲ್ 26 ರಂದು ಬೆಳಿಗ್ಗೆ 7.00 ರಿಂದ ಸಂಜೆ 4.00 ಗಂಟೆಯವರೆಗೆ ಬೆಂಗಳೂರಿನ ಜಿ.ಕೆ.ವಿ.ಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ರೈತರ ಸಂತೆಯಲ್ಲಿ ಕೃಷಿ ಉತ್ಪನ್ನ / ಪರಿಕರಗಳ ಪ್ರದರ್ಶನ ಮತ್ತು ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಿತ್ತನೆ ಬೀಜಗಳು, ಸಿರಿಧಾನ್ಯಗಳ ಮೌಲ್ಯವರ್ಧಿತ ಉತ್ಪನ್ನಗಳು, ಸಾವಯವ ಉತ್ಪನ್ನಗಳು, ತೋಟಗಾರಿಕೆ: ಹಣ್ಣುಗಳು, ಸುಗಂಧ ಮತ್ತು ಔಷಧೀಯ ಸಸ್ಯಗಳು, ಜೈವಿಕ ಗೊಬ್ಬರಗಳು, ಕೃಷಿ ಯಂತ್ರೋಪಕರಣಗಳು, ಎರೆಹುಳು ಗೊಬ್ಬರ, ಸಸ್ಯ ಸಂರಕ್ಷಣೆ: ಜೈವಿಕ ಕೀಟನಾಶಕಗಳು,

ಇದನ್ನೂ ಓದಿ: Yashaswini Yojane-ಯಶಸ್ವಿನಿ ಯೋಜನೆಯಡಿ ಮಹತ್ವ ಬದಲಾವಣೆಗೆ ಶಿಫಾರಸು!

ಗುಣಮಟ್ಟದ ಪದಾರ್ಥಗಳು ಪರಿಕರಗಳು, ಕರಕುಶಲ ವಸ್ಥುಗಳು: ಗವ್ಯೋತ್ಪನ್ನಗಳು, ಅಡಿಕೆ ಉತ್ಪನ್ನಗಳು, ರೇಷ್ಮೆ ಕೃಷಿಯ ಉಪ-ಉತ್ಪನ್ನಗಳು, ಅಣಬೆ, ಜೇನು ಕೃಷಿ, ವಾಣಿಜ್ಯೀಕರಣ ಉತ್ಪನ್ನಗಳು, ಪಶು ಸಂಗೋಪನೆ, ಕೃಷಿ ಪ್ರಕಟಣೆಗಳು, ವಿಶ್ವವಿದ್ಯಾನಿಲಯದ ಬಗ್ಗೆ ಮಾಹಿತಿ, ತಾರಸಿ ಕೈತೋಟ / ನಗರ ತೋಟಗಾರಿಕೆ ಇನ್ನು ಮುಂತಾದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟದ ವ್ಯವಸ್ಥೆಯಿರುತ್ತದೆ. ಸಾರ್ವಜನಿಕರು ಮತ್ತು ರೈತರು ಈ ವಿನೂತನ ಸಂತೆಯ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.

Agriculture University Bengalure Website-ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಕುರಿತು ಇನ್ನು ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಕೃತ ಜಾಲತಾಣ- Click here

- Advertisment -
LATEST ARTICLES

Related Articles

- Advertisment -

Most Popular

- Advertisment -