free Hostel Application-2024: ಉಚಿತ ಹಾಸ್ಟೆಲ್ ಪ್ರವೇಶಾತಿಗೆ ಅರ್ಜಿ! ಮೊಬೈಲ್ ನಲ್ಲಿಯೇ ಅರ್ಜಿ ಸಲ್ಲಿಸುವ ಲಿಂಕ್ ಬಿಡುಗಡೆ!

ಸರ್ಕಾರಿ ಉಚಿತ ವಸತಿ ನಿಲಯಗಳ ಪ್ರವೇಶಾತಿಗೆ ಕಾಯುತ್ತಿದ್ದವರಿಗೆ ಗುಡ್ ನ್ಯೂಸ್. ಸರ್ಕಾರವು ಇದೀಗ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ(Government Hostel Application 2024) ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. 

ಕರ್ನಾಟಕ ಸರ್ಕಾರದ ಅಡಿಯಲ್ಲಿರುವ, ವಿದ್ಯಾರ್ಥಿಗಳಿಗೆ ಉಚಿತ ವಸತಿ ಮತ್ತು ಊಟದ ಸೌಲಭ್ಯವನ್ನು ಕಲ್ಪಿಸಲು ಇರುವಂತಹ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಬೇಕಾಗಿರುವ ಸಂಪೂರ್ಣ ವಿವರವನ್ನು ಇಲ್ಲಿ ನೀಡಲಾಗಿದೆ.

2024-25ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ (Minority Welfare Department) ಪ್ರಿಮೆಟ್ರಿಕ್ ಆಗೋ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿಗಳಿಗೆ ಹೊಸದಾಗಿ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶಾತಿ ಬಯಸುವ ಅಭ್ಯರ್ಥಿಗಳಿಗೆ ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಿದೆ.

ಇದನ್ನೂ ಓದಿ: karnataka dams water level: ರಾಜ್ಯದ ಯಾವ ಜಲಾಶಯಕ್ಕೆ ಎಷ್ಟು ನೀರು ಹರಿದು ಬರುತ್ತಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ.

Who can apply?ಯಾರು ಅರ್ಜಿ ಸಲ್ಲಿಸಬಹುದು? 

ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವಂತಹ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಹಾಗು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಅಲ್ಪಸಂಖ್ಯಾತ ಸಮುದಾಯದವರಾದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಬೌದ್ಧ, ಜೈನ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳು ಸೇರಿದಂತೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಪೋಷಕರ ವಾರ್ಷಿಕ ಆದಾಯ ಎಷ್ಟಿರಬೇಕು?

ಸರ್ಕಾರಿ ಉಚಿತ ವಸತಿ ನಿಲಯಗಳ ಪ್ರವೇಶಾತಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳ ಪೋಷಕರ ವಾರ್ಷಿಕ ಆದಾಯವು 2.50ಲಕ್ಷ ರೂಪಾಯಿ ಒಳಗಿರಬೇಕು.

ಇದನ್ನೂ ಓದಿ: Veterinary department-ಪಶುಪಾಲನಾ ಇಲಾಖೆಯಿಂದ ಯಾವೆಲ್ಲ ಯೋಜನೆಯಡಿ ಸೌಲಭ್ಯ ಪಡೆಯಬಹುದು?

Government free Hostel Application 2024 – ಅರ್ಜಿ ಸಲ್ಲಿಸಲು ಬೇಕಾಗುವ ಅವಶ್ಯ ದಾಖಲಾತಿಗಳು : 

• ಶೈಕ್ಷಣಿಕ ಪ್ರಮಾಣ ಪತ್ರ 
• ವಿದ್ಯಾರ್ಥಿಯ ಆಧಾರ್ ಕಾರ್ಡ್ 
• ಜಾತಿ ಮತ್ತು ಆದಾಯ ಪ್ರಮಾಣ ಪತ್ರ
• ಕಾಲೇಜು ನೊಂದಣಿ ಸಂಖ್ಯೆ 
• ಮೊಬೈಲ್ ನಂಬರ್
• ಹಿಂದಿನ ಶೈಕ್ಷಣಿಕ ವರ್ಷದ ಅಂಕಪಟ್ಟಿ 

ಹಾಸ್ಟೆಲ್ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಕೊನೆಯ  ದಿನಾಂಕಗಳು : 

• Pre – Matric ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಸಲು – 31 ಜುಲೈ 2024
• Post – Matric ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಸಲು – 05 ಆಗಸ್ಟ್ 2024

ಇದನ್ನೂ ಓದಿ: NLM ಯೋಜನೆಯಡಿ ರೂ 25 ಲಕ್ಷದವರೆಗೆ ಶೇ 50% ಸಬ್ಸಿಡಿಯಲ್ಲಿ ಸ್ವ-ಉದ್ಯೋಗ ಮಾಡಲು ಅವಕಾಶ! ಇಲ್ಲಿದೆ ಸಂಪೂರ್ಣ ಮಾಹಿತಿ!

ಅರ್ಜಿ ಸಲ್ಲಿಸಲು ಪ್ರಮುಖ ಲಿಂಕ್ : 

• ಅರ್ಜಿ ಸಲ್ಲಿಸುವ ಲಿಂಕ್ – Apply Now