Free Bus Pass-ಈ ವರ್ಗದರಿಗೆ ಉಚಿತ ಬಸ್ ಪಾಸ್ ಪಡೆಯಲು ಅರ್ಜಿ ಆಹ್ವಾನ!

January 29, 2025 | Siddesh
Free Bus Pass-ಈ ವರ್ಗದರಿಗೆ ಉಚಿತ ಬಸ್ ಪಾಸ್ ಪಡೆಯಲು ಅರ್ಜಿ ಆಹ್ವಾನ!
Share Now:

ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಕರ್ನಾಟಕ ರಾಜ್ಯ ಸರಕಾರದಿಂದ ಗ್ರಾಮೀಣ ಭಾಗದ ಪತ್ರಕರ್ತರಿಗೆ ಉಚಿತ ಬಸ್ ಪಾಸ್(Free Bus Pass) ಸೌಲಭ್ಯವನ್ನು ಒದಗಿಸಲು ರಾಜ್ಯ ಸರಕಾರದಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ಹಿಂದೆ ರಾಜ್ಯ ಸರಕಾರದ ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ಗ್ರಾಮೀಣ ಪತ್ರಕರ್ತರಿಗೆ(Free bus pass for press reporter) ರಾಜ್ಯ ಸರಕಾರವು ತನ್ನ ನಿಗಮ ವ್ಯಾಪ್ತಿಯಲ್ಲಿ ಸಂಚರಿಸುವ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಲು ಅವಕಾಶ ಮಾಡಿಕೊಡಲಾಗಿದೆ.

ಉಚಿತ ಬಸ್ ಪಾಸ್ ಪಡೆಯಲು ಸರಕಾರದಿಂದ ನಿಗದಿಪಡಿಸಿರುವ ಅರ್ಹತೆಗಳೇನು? ಅರ್ಜಿಯನ್ನು ಸಲ್ಲಿಸುವುದು ಹೇಗೆ? ಅಭ್ಯರ್ಥಿಗಳು ಬಸ್ ಪಾಸ್ ಅನ್ನು ಪಡೆಯಲು ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಒದಗಿಸಬೇಕಾದ ದಾಖಲಾತಿಗಳೇನು? ಇತ್ಯಾದಿ ಸಂಪೂರ್ಣ ವಿವರವನ್ನು ಈ ಕೆಳಗೆ ತಿಳಿಸಲಾಗಿದೆ.

ಇದನ್ನೂ ಓದಿ: VA Selection List- 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಬಿಡುಗಡೆ!

ಉಚಿತ ಬಸ್‌ಪಾಸ್‌ ಪಡೆಯಲು ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಆದೇಶ/ ವೇತನ ಪತ್ರ/ ಬ್ಯಾಂಕ್ ಸ್ಟೇಟ್‌ಮೆಂಟ್‌ ಇವುಗಳಲ್ಲಿ ಯಾವುದಾದರೂ ಒಂದು ದಾಖಲೆಯನ್ನು ಸೇವಾನುಭವಕ್ಕಾಗಿ ಒದಗಿಸಬೇಕು.

ಅರ್ಹ ಪತ್ರಕರ್ತರು ಉಚಿತ ಬಸ್‌ಪಾಸ್‌ ಅಡಿ ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಉಚಿತವಾಗಿ ಸಂಚರಿಸಬಹುದು. ತಹಶೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ ಒದಗಿಸಬೇಕು.

ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುವ ವರದಿಗಾರರಿಗೆ ಪ್ರತಿ ತಾಲೂಕಿಗೆ ಸಂಪಾದಕರು ಸೂಚಿಸುವ ಒಬ್ಬರಿಗೆ, ಜಿಲ್ಲಾ ಮಟ್ಟದ ಪತ್ರಿಕೆಗಳು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಒಬ್ಬರಿಗೆ, ಆರು ಪುಟಗಳಲ್ಲಿ ಪ್ರಕಟವಾಗುವ ಪ್ರಾದೇಶಿಕ ಪತ್ರಿಕೆಗಳು ಓರ್ವ ವರದಿಗಾರರು ಹಾಗೂ ಓರ್ವ ಫೋಟೋಗ್ರಾಫರ್‌ಗೆ, ಎಂಟು ಅಥವಾ ಹೆಚ್ಚು ಪುಟಗಳಲ್ಲಿ ಪ್ರಕಟವಾಗುವ ಪ್ರಾದೇಶಿಕ ಪತ್ರಿಕೆಗಳು ಇಬ್ಬರು ವರದಿಗಾರರು ಹಾಗೂ ಓರ್ವ ಫೋಟೋಗ್ರಾಫರ್‌ಗೆ ಬಸ್ ಪಾಸ್ ಪಡೆಯಲು ಅವಕಾಶವಿದೆ.

ಇದನ್ನೂ ಓದಿ: e-swathu andolana-ಇ-ಸ್ವತ್ತು ಮಾಡಿಕೊಳ್ಳದವರಿಗೆ ಸಿಹಿ ಸುದ್ದಿ! ಇ-ಸ್ವತ್ತು ವಿತರಣಾ ಆಂದೋಲನ!

Free Bus Pass

ಉಪಗ್ರಹ ಆಧಾರಿತ ವಿದ್ಯುನ್ಮಾನ ವಾಹಿನಿಗಳ ವರದಿಗಾರರು ತಾಲೂಕು ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರೆ ಪ್ರತಿ ತಾಲೂಕಿಗೆ ಓರ್ವ ಕ್ಯಾಮರಾಮ್ಯಾನ್ ಹಾಗೂ ಓರ್ವ ವರದಿಗಾರರು ಬಸ್ ಪಾಸ್ ಪಡೆಯಬಹುದು. ದಿನಪತ್ರಿಕೆಗಳು ಹಾಗೂ ಉಪಗ್ರಹ ಸುದ್ದಿ ವಾಹಿನಿಗಳ ಸಂಪಾದಕರು ನೀಡುವ ನೇಮಕಾತಿ ಪತ್ರ ಹಾಗೂ ಶಿಫಾರಸ್ಸು ಆಧರಿಸಿ ಬಸ್ ಪಾಸ್‌ಗಳನ್ನು ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Free Bus Pass Application-ಅರ್ಜಿಯನ್ನು ಸಲ್ಲಿಸುವುದು ಹೇಗೆ?

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳನ್ನು ತೆಗೆದುಕೊಂಡು ನಿಮ್ಮ ಹಳ್ಳಿ/ನಗರ ವ್ಯಾಪ್ತಿಯಲ್ಲಿರುವ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರವನ್ನು ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಅಥವಾ ಅಭ್ಯರ್ಥಿಗಳು ನೇರವಾಗಿ ತಮ್ಮ ಮೊಬೈಲ್ ನಲ್ಲಿ ಸೇವಾ ಸಿಂಧೂ ಪೋರ್ಟಲ್ ಅನ್ನು ಪ್ರವೇಶ ಮಾಡಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಆನ್‌ಲೈನ್ ಅರ್ಜಿಯ ಮುದ್ರಿತ ಪ್ರತಿಯನ್ನು ತಮ್ಮ ಜಿಲ್ಲೆಯ ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿಗೆ ಸ್ವಯಂ ದೃಢೀಕರಿಸಿ ಸಲ್ಲಿಸಬೇಕು.

ಸೇವಾ ಸಿಂಧು ಪೋರ್ಟಲ್ ಲಿಂಕ್- CLICK HERE

ಇದನ್ನೂ ಓದಿ: Ration-ಇಲಾಖೆಯ ನಿಯಮದನ್ವಯ ಈ ಕೆಲಸ ಮಾಡದಿದ್ದಲ್ಲಿ ಫೆಬ್ರವರಿ 15ರಿಂದ ಪಡಿತರ ವಿತರಣೆ ರದ್ದು!

Free Bus Pass Eligibility-ಅರ್ಜಿ ಸಲ್ಲಿಸಲು ಅರ್ಹತೆಗಳು:

1) ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

2) ಅರ್ಜಿದಾರರು ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರಬೇಕು.

3) ಅರ್ಜಿದಾರರು ನೇಮಕಾತಿ ಆದೇಶ ಪತ್ರ ಅಥವಾ ವೇತನಪತ್ರ ದಾಖಲೆಗಳನ್ನು ಹೊಂದಿರಬೇಕು.

4) ಕುಟುಂಬದ ಸದಸ್ಯರು ಸರಕಾರಿ ನೌಕರಿಯಲ್ಲಿರಬಾರದು.

ಇದನ್ನೂ ಓದಿ: Microfinance-ಮೈಕ್ರೋ ಫೈನಾನ್ಸ್ ಹಾವಳಿಗೆ ರಾಜ್ಯ ಸರಕಾರದಿಂದ ನೂತನ ನಿಯಮ ಜಾರಿ!

Documents For Free Bus Pass-ಅರ್ಜಿ ಸಲ್ಲಿಸಲು ದಾಖಲೆಗಳು:

A) ಅರ್ಜಿದಾರರ ಆಧಾರ್ ಕಾರ್ಡ ಪ್ರತಿ

B) ಪೋಟೋ

C) ಬ್ಯಾಂಕ್ ಪಾಸ್ ಬುಕ್ ಪ್ರತಿ

D) ಸೇವಾನುಭವ ಪ್ರಮಾಣ ಪತ್ರ

E) ನೇಮಕಾತಿ ಆದೇಶ ಪತ್ರ

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: