“ಗೃಹ ಜ್ಯೋತಿ" ಯೋಜನೆ ಕುರಿತು ನೂತನ ಪ್ರಕಟಣೆ ಹೊರಡಿಸಿದ ರಾಜ್ಯ ಸರಕಾರ.

ರಾಜ್ಯ ಸರಕಾರದಿಂದ “ಗೃಹ ಜ್ಯೋತಿ" ಯೋಜನೆಯಡಿ ಪ್ರತಿ ಮನೆಗೆ ಉಚಿತ ವಿದ್ಯುತ್ ಸೌಕರ್ಯ ಒದಗಿಸುವ ಸಂಬಂಧ ವಿದ್ಯುತ್‌ ಸರಬರಾಜು ಕಂಪನಿಗಳು ಕೋರಿರುವ ಅಂಶಗಳಿಗೆ ಸ್ಪಷ್ಟಿಕರಣ ನೀಡಿ ನೂತನ ಪ್ರಕಟಣೆ ಹೊರಡಿಸಿದೆ.

ಮೂಲಭೂತ ಸೌಕರ್ಯಗಳಲ್ಲಿ ಒಂದಾದ ವಿದ್ಯುಚ್ಛಕ್ತಿಯನ್ನು ಉಚಿತವಾಗಿ ರಾಜ್ಯದ ನಾಗರೀಕರಿಗೆ ಒದಗಿಸಲು ದಿನಾಂಕ:20.05.2023 ರಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ಗೃಹ ಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್‌ ಒದಗಿಸಲು ತಾತ್ವಿಕ ಅನುಮೋದನೆ ನೀಡಲಾಗಿತ್ತು.

ಗೃಹ ಜ್ಯೋತಿ" ಯೋಜನೆಯಡಿ ರಾಜ್ಯದಲ್ಲಿನ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್‌ಗಳವರೆಗಿನ ಬಳಕೆಯ ಮಿತಿಯಲ್ಲಿ ಪ್ರತಿ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ (ಆರ್ಥಿಕ ವರ್ಷ 2022-23ರ ಬಳಕೆಯ ಆಧಾರದನ್ವಯ) ಯೂನಿಟ್‌ಗಳ ಮೇಲೆ ಶೇ.10ರಷ್ಟು ಹೆಚ್ಚಿನ ಬಳಕೆಯ ಮಿತಿಯನ್ನು ಅನುಮತಿಸಿ, ಅದಕ್ಕನುಗುಣವಾಗಿ ವಿದ್ಯುತ್ ಬಿಲ್ಲಿನ ಮೊತ್ತವನ್ನು ಉಚಿತವಾಗಿ ಒದಗಿಸಲು: ಹಾಗೂ 200 ಯೂನಿಟ್‌ಗಳ ಬಳಕೆಯನ್ನು ಮೀರಿದ ಗ್ರಾಹಕರು ಪೂರ್ಣ ವಿದ್ಯುತ್‌ ಬಿಲ್ಲನ್ನು ಪಾವತಿಸಲು ಸರ್ಕಾರವು ಕೆಲವು ಷರತ್ತುಗಳೊಂದಿಗೆ ಸದರಿ ಯೋಜನೆಯನ್ನು ದಿನಾಂಕ: 01.07.2023 ರಿಂದ ಜಾರಿಗೊಳಿಸಲು  ಆಡಳಿತಾತ್ಮಕ ಅನುಮೋದನೆ ನೀಡಿದ್ದು.

ವಿದ್ಯುತ್ ಸರಬರಾಜು ಕಂಪನಿಗಳು ಗೃಹ ಜ್ಯೋತಿ" ಯೋಜನೆಯಡಿ ಉಚಿತ ವಿದ್ಯುತ್ ಸೌಕರ್ಯ ಒದಗಿಸುವ ಸಂಬಂಧ ಉಂಟಾಗಿರುವ ಗೊಂದಲಗಳ ಬಗ್ಗೆ ಸ್ಪಷ್ಟಿಕರಣ ನೀಡಲು ಕೋರಿರುತ್ತಾರೆ. ಆದ್ದರಿಂದ ನೂತನ ಪ್ರಕಟಣೆಯನ್ನು ಹೊರಡಿಸಲಾಗಿದೆ.

ಗೃಹ ಜ್ಯೋತಿ" ಯೋಜನೆಯಡಿ ಉಚಿತ ವಿದ್ಯುತ್‌ ಸೌಕರ್ಯ ಒದಗಿಸುವ ಸಂಬಂಧ ಉಂಟಾಗಿರುವ ಗೊಂದಲಗಳಿಗೆ ಸ್ಪಷ್ಟಿಕರಣ ಕುರಿತು
ಕೋರಿರುವ ಅಂಶಗಳು ಹೀಗಿವೆ:

ಪ್ರಶ್ನೆ-1:- ಈ ಯೋಜನೆಯು ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿರುವ ವಿದ್ಯುತ್‌ ಬಳಕೆದಾರರಿಗೂ ಆನ್ವಯಿಸುವುದೆ?

ಉತ್ತರ: ಗೃಹ ವಿದ್ಯುತ್‌ ಬಳಕೆದಾರರು ಬಾಡಿಗೆದಾರರಾಗಿದ್ದಲ್ಲಿ, ವಾಸದ ಮನೆಯ ವಿಳಾಸಕ್ಕೆ ಸಂಬಂಧಿಸಿದಂತೆ ಆಧಾರ್ ಸಂಖ್ಯೆಯನ್ನು ಸೇವಾ ಸಿಂಧು ಪೋರ್ಟಲ್‌ನಲ್ಲಿ ಜೋಡಣೆ ನೊಂದಾಯಿಸುವ ಪಡೆಯುವುದು. 

ಪ್ರಶ್ನೆ-2:- 200 ಯುನಿಟ್‌ ಗಳ ಬಳಕೆಯ ಮಿತಿಯನ್ನು ಯಾವುದಾದರು ಮಾಹೆಗಳಲ್ಲಿ ಮಾತ್ರ 200 ಯುಮಿಟ್ ಮಿತಿ ದಾಟಿದರೂ, ಸದರಿ ಯೋಜನೆಯಲ್ಲಿ ಮುಂದುವರಿಯುವವರೆ?

ಉತ್ತರ:- 200 ಯುನಿಟ್‌ ಗಳ ಬಳಕೆಯ ಮಿತಿಯನ್ನು ಯಾವುದಾದರು ಮಾಹೆಯಲ್ಲಿ ಮೀರಿದಲ್ಲಿ ಆ ತಿಂಗಖ ಪೂರ್ಣ ವಿದ್ಯುತ್ ಬಿಲ್ಲನ್ನು ಪಾವತಿಸಿ, ಸದರಿ ಯೋಜನೆಯಲಿ ಮುಂದುವರೆಸುವುದು.

ಇದನ್ನೂ ಓದಿ: ಮುಂಗಾರು ಮಳೆ ಹೇಗೆ ಉಂಟಾಗುತ್ತದೆ? ಮಾನ್ಸೂನ್ ಮಾರುತಗಳು ಎಂದರೇನು?

ಪ್ರಶ್ನೆ-3:- ಸರ್ಕಾರದ ಆದೇಶದ ನಂತರ ಹೊಸದಾಗಿ ಗೃಹಬಳಕೆಗಾಗಿ ವಿದ್ಯುತ್ ಸಂಪರ್ಕ ಪಡೆದ ಗ್ರಾಹಕರಿಗೆ/ಬಳಕೆದಾರರಿಗೆ ಈ ಯೋಜನೆಯು ಅನ್ವಯಿಸುತ್ತದೆಯೇ? 

ಉತ್ತರ:- ಹೊಸ ಸಂಪರ್ಕ ಪಡೆದ ಗ್ರಾಹಕರಿಗೆ ಬಳಕೆ ಇತಿಹಾಸ ಇಲ್ಲದಿರುವುದರಿಂದ ರಾಜ್ಯದ ಗೃಹ ಬಳಕೆದಾರರ ಸರಾಸರಿ ಈ ಬಳಕೆಯು ಮಾಸಿಕ 53 ಯೂನಿಟ್‌ಗಳಾಗಿರುವುದರಿಂದ 53 ಯೂನಿಟ್‌ಗಳನ್ನೇ ನಿರ್ಧರಿಸಿ ಸೌಲಭ್ಯವನ್ನು ವಿಸ್ತರಿಸುವುದು. ಈ ಯೋಜನೆಯ ಸೌಲಭ್ಯವನ್ನು ವಿಸ್ತರಿಸುವುದು.

ಪ್ರಶ್ನೆ-4:- . 2022-23 ರಲ್ಲಿ ಒಂದು ವರ್ಷಕ್ಕಿಂತ ಕಡಿಮೆ ಬಳಕೆ ಅವಧಿಯ ಬಳಕೆ ದಾಖಲಾಗಿದ್ದಲ್ಲಿ, ಅಂತಹ ಮನೆಗಳ ಕಡಿಮೆ ಅವಧಿಯ ಸರಾಸರಿ ಪರಿಗಣಿಸುವ ವಿಧಾನ ಹೇಗೆ?

ಉತ್ತರ:- ಬಳಕೆ ಇತಿಹಾಸ ಗೃಹಬಳಕೆದಾರರ ಸರಾಸರಿ ಇಲ್ಲದಿರುವುದರಿಂದ ರಾಜ್ಯದ ಬಳಕೆಯು ಮಾಸಿಕ 53 ಯೂನಿಟ್‌ಗಳಾಗಿರುವುದರಿಂದ ಯೂನಿಟ್‌ಗಳನ್ನೇ 53 ಯೂನಿಟಗಳನ್ನೇ ನಿರ್ಧರಿಸಿ ಈ ಯೋಜನೆಯ ಸೌಲಭ್ಯವನ್ನು ವಿಸ್ತರಿಸುವುದು.

ಪ್ರಶ್ನೆ-5:-  Multi Stored Apartment ಗಳಿಗೆ ಈ ಯೋಜನೆ ಅನ್ವಯಿಸುತ್ತದೆಯೇ?

ಉತ್ತರ:- ಯಾವ ಮನೆಗಳಿಗೆ ಪ್ರತ್ಯೇಕ ಮೀಟರ್ ಇದೆಯೋ ಹಾಗೂ ಮೀಟರ್ ರೀಡಿಂಗ್ ಮಾಡಲಾಗುತ್ತಿದೆಯೋ ಅಂತಹ ಎಲ್ಲಾ ಮನೆಗಳಿಗೆ ಈ ಯೋಜನೆ ಅನ್ವಯಿಸುತ್ತದೆ.