HomeGovt SchemesGruhalakshmi News- ಗೃಹಲಕ್ಷ್ಮಿ ಯೋಜನೆಯ ಕುರಿತು ಮಹತ್ವದ ಮಾಹಿತಿ! ಈ ವರ್ಗದವರಿಗೂ ಗೃಹಲಕ್ಷ್ಮಿ ನೆರವು!

Gruhalakshmi News- ಗೃಹಲಕ್ಷ್ಮಿ ಯೋಜನೆಯ ಕುರಿತು ಮಹತ್ವದ ಮಾಹಿತಿ! ಈ ವರ್ಗದವರಿಗೂ ಗೃಹಲಕ್ಷ್ಮಿ ನೆರವು!

ಗೃಹಲಕ್ಷ್ಮಿ ಯೋಜನೆಯಡಿ(Gruhalakshmi Amount) ಅರ್ಜಿ ಸಲ್ಲಿಕೆ ಮತ್ತು ಈ ಯೋಜನೆಯಡಿ ಪ್ರತಿ ತಿಂಗಳು ರೂ 2,000 ಅರ್ಥಿಕ ನೆರವು ಪಡೆಯುವುದರ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಹಂಚಿಕೊಂಡಿರುವ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ.

ಕರ್ನಾಟಕ ಸರಕಾರದಿಂದ ಪಡಿತರ ಚೀಟಿ ಹೊಂದಿರುವ ಕುಟುಂಬದ ಯಜಮಾನಿಯರಿಗೆ ಅರ್ಥಿಕವಾಗಿ ನೆರವು ನೀಡಲು ಪ್ರತಿ ತಿಂಗಳು ರೂ 2,000 ಸಾವಿರ ಹಣವನ್ನು ಗೃಹಲಕ್ಷ್ಮಿ(Gruhalakshmi mahiti kannada) ಯೋಜನೆಯಡಿ ಒದಗಿಸಲಾಗುತ್ತಿದ್ದು ಈ ಯೋಜನೆಯ ಕುರಿತು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್(Laxmi hebbalkar) ಅವರು ನೀಡಿರುವ ಉತ್ತರದ ವಿವರವನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: Labour department scholarship- ಕಾರ್ಮಿಕ ಇಲಾಖೆಯಿಂದ ಶೈಕ್ಷಣಿಕ ಧನ ಸಹಾಯ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

Gruhalakshmi Yojana Amount- ದೇವದಾಸಿ ಮಹಿಳೆಯರಿಗೂ ಗೃಹಲಕ್ಷ್ಮಿ ಯೋಜನೆಯಡಿ ನೆರವು:

ರಾಜ್ಯದಲ್ಲಿನ ದೇವದಾಸಿ ಮಹಿಳೆಯರಿಗೆ ಕೂಡಾ ಗೃಹ ಲಕ್ಷ್ಮೀ ಯೋಜನೆಯ(Gruhalakshmi status) ನೆರವು ದೊರೆಯುತ್ತಿದ್ದು, ಸೌಲಭ್ಯ ದೊರೆಯದ ಬಗ್ಗೆ ಯಾವುದೇ ದೂರು ಸಲ್ಲಿಕೆಯಾಗಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳ್ಕರ್ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಮಾಹಿತಿ ಹಂಚಿಕೊಂಡಿದ್ದು.

ಈ ವರ್ಗದವರು ಸಹ ಗೃಹಲಕ್ಷ್ಮಿ(Gruhalakshmi Yojana News) ಯೋಜನೆಯಡಿ ಅರ್ಜಿ ಸಲ್ಲಿಸಿ ಅರ್ಥಿಕ ನೆರವನ್ನು ಪಡೆದುಕೊಳ್ಳಲು ಅವಕಾಶವಿರುತ್ತದೆ ಎಂದು ತಿಳಿಸಿದ್ದು ಇಲ್ಲಿಯವರೆಗೆ ಇಂತಹ ಮಹಿಳೆಯರು ನಮಗೆ ಗೃಹಲಕ್ಷ್ಮಿ ಯೋಜನೆಯಡಿ ಹಣ ಸಂದಾಯವಾಗುತಿಲ್ಲ ಎಂದು ದೂರು ಸಲ್ಲಿಸಿರುವುದಿಲ್ಲ ಎಂದು ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ವೇಳೆ ಮಾಹಿತಿ ತಿಳಿಸಿದ್ದಾರೆ.

ಇದನ್ನೂ ಓದಿ: Sheep farming loan-ಶೇ 50% ಸಬ್ಸಿಡಿ ಪಡೆದು ಕುರಿ ಸಾಕಾಣಿಕೆ ಆರಂಭಿಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

Gruhalakshmi

ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯೆ ಹೇಮಲತಾ ನಾಯಕ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸುತ್ತಾ, ರಾಜ್ಯದಲ್ಲಿ ದೇವದಾಸಿ ಮಹಿಳೆಯರಿಗೆ ಮಾಸಾಶನ ಯೋಜನೆಯಡಿಯಲ್ಲಿ ಪ್ರತಿ ತಿಂಗಳು ರೂ 2000 ಆರ್ಥಿಕ ಸಹಾಯ ಯೋಜನೆಯಡಿ ರೂ.30000 ಗಳ ಸಹಾಯಧನ ಹಾಗೂ ಮಾಜಿ ದೇವದಾಸಿ ವಸತಿ ಯೋಜನೆಯಡಿ ವಸತಿ ಸೌಲಭ್ಯ ಒದಗಿಸಲಾಗುತ್ತಿದೆ ಎಂದರು.

ಕೊಪ್ಪಳ ಜಿಲ್ಲೆಗೆ ಸಂಬಂಧಿಸಿದಂತೆ 6018 ದೇವದಾಸಿ ಮಹಿಳೆಯರನ್ನು ಸಮೀಕ್ಷೆ ಯಲ್ಲಿ ಗುರುತಿಸಿದ್ದು 2653 ಮಂದಿ ಜೀವಂತವಿದ್ದಾರೆ. ಜಿಲ್ಲೆಗೆ ಸಂಬದಿಸಿದಂತೆ ಮತ್ತೊಮ್ಮೆ ಸಮೀಕ್ಷೆ ನಡೆಸಿ ಅರ್ಹರನ್ನು ಗುರುತಿಸಿ ಸೌಲಭ್ಯಗಳನ್ನು ಒಡಗಿಸಲಾಗುವುದು ಎಂದ ಸಚಿವರು ಅನಿಷ್ಟ ಪದ್ಧತಿಯಾದ ದೇವದಾಸಿ ಪದ್ಧತಿಯನ್ನು ಬೇರು ಸಮೇತ ಕಿತ್ತೊಗೆಯಲು ಪ್ರಯತ್ನಿಸಲಾಗುತ್ತಿದೆ ಎಂದು ಮಾಹಿತಿ ಹಂಚಿಕೊಂಡರು.

ಇದನ್ನೂ ಓದಿ: Food cart vehicle subsidy- 4 ಲಕ್ಷ ಸಬ್ಸಿಡಿಯಲ್ಲಿ ಫುಡ್ ಕಾರ್ಟ್ ವಾಹನ ಖರೀದಿಗೆ ಅರ್ಜಿ ಆಹ್ವಾನ! ಇಲ್ಲಿದೆ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್!

Gruhalakshmi Yojane borewell news-ಗೃಹಲಕ್ಷ್ಮಿ ಹಣದಲ್ಲಿ ಬೋರ್​ವೆಲ್ ಕೊರೆದಿದ ಅತ್ತೆ-ಸೊಸೆ:

ಗೃಹಲಕ್ಷ್ಮಿ ಯೋಜನೆಯಡಿ ಇಲ್ಲಿಯವರೆಗೆ ಪಡೆದ ಹಣದಿಂದ ರಾಜ್ಯದ್ಯಂತ ಅನೇಕ ಮಹಿಳೆಯರು ವಿವಿಧ ಬಗ್ಗೆಯ ಉಪಯುಕ್ತ ಕೆಲಸಕ್ಕೆ ಈ ಹಣವನ್ನು ಬಳಕೆ ಮಾಡಿಕೊಂಡಿರುವುದು ಸುದ್ದಿ ಅಗಿತ್ತು ಅದರೆ ಈಗ ಈ ಹಣವನ್ನು ಬಳಕೆ ಮಾಡಿಕೊಂಡು ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಮಾಬುಲೀ ಹೆಸರಿನವರು ಹಾಗೂ ಸೊತೆ ರೋಷನ್ ಬೇಗಂ ಅವರು ಬೋರ್​ವೆಲ್ ಕೊರೆಸಲು ಗೃಹಲಕ್ಷ್ಮಿ ಹಣವನ್ನು ಬಳಕೆ ಮಾಡಿದ್ದಾರೆ.

Gruhalaskhmi Status-ಗೃಹಲಕ್ಷ್ಮಿ ಯೋಜನೆಯಡಿ ಹಣ ಜಮಾ ಅಗಿರುವುದನ್ನು ಚೆಕ್ ಮಾಡುವುದು ಹೇಗೆ:

ಈ ಯೋಜನೆಯಡಿ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳು ಪ್ರತಿ ತಿಂಗಳು ತಮಗೆ ರೂ 2,000 ಸಾವಿರ ಅರ್ಥಿಕ ನೆರವು ಜಮಾ ಅಗಿರುವುದನ್ನು ಚೆಕ್ ಮಾಡಿ ಮಾಡಲು ಬ್ಯಾಂಕ್ ಶಾಖೆಗೆ ಭೇಟಿ ಮಾಡದೇ ತಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳಬಹುದು. ಈ ಕೆಳಗೆ ತಿಳಿಸಿರುವ ವಿಧಾನಗಳನ್ನು ಅನುಸರಿಸಿ ಪ್ರತಿ ತಿಂಗಳು ಜಮಾ ಅಗುವ ಅರ್ಥಿಕ ನೆರವನ್ನು ಚೆಕ್ ಮಾಡಿಕೊಳ್ಳಬಹುದು.

ಇಲ್ಲಿ ಕ್ಲಿಕ್ ಮಾಡಿ Gruhalaskhmi Status Check On Mobile ಗೂಗಲ್ ಪ್ಲೇ ಸ್ಟೋರ್ ಪ್ರವೇಶ ಮಾಡಿ ಡಿಬಿಟಿ ಕರ್ನಾಟಕ(DBT KARNATAKA) ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಂಡು ಈ ಅಪ್ಲಿಕೇಶನ್ ಅನ್ನು ಒಪನ್ ಮಾಡಿ ಫಲಾನುಭವಿಯ ಆಧಾರ್ ಕಾರ್ಡ ನಂಬರ್ ಅನ್ನು ಹಾಕಿ ಬಳಕೆದಾರ ಐಡಿಯನ್ನು ಸಕ್ರಿಯಗೊಳಿಸಿ ಲಾಗಿನ್ ಅಗಲು ನಾಲ್ಕು ಅಂಕಿಯ ಪಾಸ್ವರ್ಡ ಅನ್ನು ರಚನೆ ಮಾಡಿಕೊಂಡು ಪುನಃ ಲಾಗಿನ ಬಟನ್ ಮೇಲೆ ಕ್ಲಿಕ್ ಮಾಡಿ “ಪಾವತಿ ಸ್ಥಿತಿ” ಬಟನ್ ಮೇಲೆ ಕ್ಲಿಕ್ ಮಾಡಿ “ಗೃಹಲಕ್ಷ್ಮಿ ಯೋಜನೆ” ಆಯ್ಕೆ ಮೇಲೆ ಒತ್ತಿ ನಿಮಗೆ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯಡಿ ಹಣ ಜಮಾ ಅಗುವುದನ್ನು ನಿಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳಬಹುದು.

ಇದನ್ನೂ ಓದಿ: PM-Vishwakarma 2024-ಪಿ ಎಂ ವಿಶ್ವಕರ್ಮ ಯೋಜನೆಯಡಿ ಹೋಲಿಗೆ ಯಂತ್ರ ಸಬ್ಸಿಡಿ ಹಾಗೂ ಇತರೆ ಸೌಲಭ್ಯಕ್ಕೆ ₹1,751 ಕೋಟಿ ಅನುದಾನ!

ಅಥವಾ ನಿಮ್ಮ ಬ್ಯಾಂಕ್ ಖಾತೆಗೆ ಲಿಂಕ್ ಇರುವ ಮೊಬೈಲ್ ನಂಬರ್ ನಿಂದ ಮಿಸ್ ಕಾಲ್ ಬ್ಯಾಂಕ್ ಬ್ಯಾಲೆನ್ಸ್ ಚೆಕ್ ಸಹಾಯವಾಣಿಗೆ ಮಿಸ್ ಕಾಲ್ ಮಾಡಿ ಮನೆಯಲ್ಲೇ ಕುಳಿತು ಈ ಯೋಜನೆಯಡಿ ಹಣ ಜಮಾ ಅಗಿದಿಯಾ? ಇಲ್ಲವಾ? ಎಂದು ಮಾಹಿತಿ ತಿಳಿದುಕೊಳ್ಳಬಹುದು.

Gruhalaskhmi scheme- ಗೃಹಲಕ್ಷ್ಮಿ ಯೋಜನೆಯಡಿ ಹಣ ಸಂದಾಯವಾಗುವುದು ಸ್ಥಗಿತವಾಗಲು ಕಾರಣಗಳು:

ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ಹಣ ಪಡೆಯುತ್ತಿದ್ದು ಕಳೆದ 2-3 ತಿಂಗಳಿನಿಂದ ಹಣ ಸಂದಾಯವಾಗುವುದು ಸ್ಥಗಿತವಾಗಿದ್ದರೆ ಅಂತಹ ಫಲಾನುಭವಿಗಳು ಈ ಕೆಳಗೆ ತಿಳಿಸಿರುವ ಮಾಹಿತಿಯನ್ನು ತಪ್ಪದೇ ಸಂಪೂರ್ಣವಾಗಿ ಓದಿ ಮಾಹಿತಿಯನ್ನು ತಿಳಿದುಕೊಂಡು ನಿಮ್ಮ ಅರ್ಜಿಯ ತಾಂತ್ರಿಕ ಸಮಸ್ಯೆಯನ್ನು ಸರಿಪಡಿಸಿಕೊಳ್ಳಬಹುದು.

ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ ಲಿಂಕ್(NPCI mapping) ಇಲ್ಲದೇ ಇರುವುದು ಅಥವಾ ಬ್ಯಾಂಕ್ ಖಾತೆ ನಿಷ್ಕ್ರಿಯಗೊಂಡಿದ್ದಲ್ಲಿ ಹಣ ಜಮಾ ಅಗುವುದಿಲ್ಲ.

ಕಳೆದ ಅರ್ಥಿಕ ವರ್ಷದ ಆದಾಯ ತೆರಿಗೆ ಪಾವತಿ(Income tax) ಮಾಡಿದ್ದಲ್ಲಿ ಈ ಯೋಜನೆಯಡಿ ಹಣ ಪಡೆಯಲು ಸಾಧ್ಯವಾಗುವುದಿಲ್ಲ.

ರೇಶನ್ ಕಾರ್ಡ ನಲ್ಲಿ ಕುಟುಂಬದ ಯಜಮಾನಿಯ ವಿವರ ಬದಲಾವಣೆ ಅದರೆ ಈ ಯೋಜನೆಯಡಿ ಹಣ ಪಡೆಯಲು ಸಾಧ್ಯವಾಗುವುದಿಲ್ಲ.

ಇದನ್ನೂ ಓದಿ: Gruhalakshmi 15th Installment- ಗೃಹಲಕ್ಷ್ಮಿ ಯೋಜನೆಯಡಿ ಈ ಜಿಲ್ಲೆಯ ಮಹಿಳೆಯರಿಗೆ 15ನೇ ಕಂತಿನ ಹಣ ಬಿಡುಗಡೆ!

Most Popular

Latest Articles

Related Articles