ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯು(Gruhalakshmi Yojane) ಒಂದು ಬಹುಮುಖ್ಯ ಯೋಜನೆಯಾಗಿದ್ದು, ಈ ಯೋಜನೆಯಡಿ ಪ್ರತಿ ತಿಂಗಳು ನೀಡುವ ಆರ್ಥಿಕ ನೆರವಿನ ಕುರಿತು ಲಕ್ಷ್ಮೀ ಹೆಬ್ಬಾಳ್ಕರ್(Lakshmi hebbalkar) ಸಚಿವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ರವರು ತಿಳಿಸಿರುವ ಮಾಹಿತಿಯನ್ನು ಈ ಲೇಖನದಲ್ಲಿ ಪ್ರಕಟಿಸಲಾಗಿದೆ.
ಕಳೆದ 2-3 ವಾರದಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಗೃಹಲಕ್ಷ್ಮಿ(Gruhalakshmi Scheme) ಮತ್ತು ಅನ್ನಭಾಗ್ಯ ಯೋಜನೆಯ ಹಣ ಅರ್ಹ ಫಲಾನುಭವಿಗಳಿಗೆ ಸರಿಯಾಗಿ ತಲುಪುತ್ತಿಲ್ಲ ಎನ್ನುವ ಗೊಂದಲ ಸೃಷ್ಟಿಯಾಗಿದ್ದು, ಈ ಕುರಿತು ಆಯಾ ಇಲಾಖೆಗೆ ಸಂಬಂಧಪಟ್ಟ ಸಚಿವರು ಸ್ಪಷ್ಟನೆಯನ್ನು ನೀಡುತ್ತಿದ್ದು ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆ ಕುರಿತು ಈ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆ ವಿವರವನ್ನು ಇಲ್ಲಿ ವಿವರಿಸಲಾಗಿದೆ.
ಗೃಹಲಕ್ಷ್ಮಿ ಯೋಜನೆಯಡಿ(Gruhalakshmi Status) ಪಡಿತರ ಚೀಟಿ ಹೊಂದಿರುವ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು ರೂ 2,000 ಹಣವನ್ನು ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡಲಾಗುತ್ತಿದ್ದು ಕೆಲವು ತಾಂತ್ರಿಕ ಕಾರಣಗಳಿಂದ ಅರ್ಹ ಫಲಾನುಭವಿಗಳಿಗೆ ಈ ಯೋಜನೆಯ ಆರ್ಥಿಕ ನೆರವು ಜಮಾ ಅಗಿರುವುದಿಲ್ಲ ಈ ಕುರಿತು ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ.
ಇದನ್ನೂ ಓದಿ: E-Khata Documents-ಇ-ಆಸ್ತಿ ಖಾತಾ ಪಡೆಯಲು ಈ ದಾಖಲೆ ಸಲ್ಲಿಸುವುದು ಕಡ್ಡಾಯ!
Gruhalakshmi Latest News-ಇನ್ನೊಂದು ವಾರದಲ್ಲಿ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಇನ್ನೊಂದು ವಾರದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಲಿದೆ. ತಾಲೂಕು ಪಂಚಾಯಿತಿ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಬಿಡುಗಡೆ ಮಾಡಲಾಗುವುದು. ಈಗಾಗಲೇ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಶೀಘ್ರದಲ್ಲೇ ಹಣ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಬೆಳಗಾವಿಯ ತಮ್ಮ ಸ್ವಂತ ಗೃಹ ಕಚೇರಿಯಲ್ಲಿ ಈ ಕುರಿತು ಮಾಹಿತಿಯನ್ನು ಮಾಧ್ಯಮ ಮಿತ್ರರೊಂದಿಗೆ ಹಂಚಿಕೊಂಡಿದ್ದು, ಗೃಹಲಕ್ಷ್ಮಿ ಯೋಜನೆಯಡಿ(Gruhalakshmi Application)ಅರ್ಜಿ ಸಲ್ಲಿಸಿದವರು ಗೊಂದಲಕ್ಕೆ ಒಳಗಾಗಬಾರದು ಇನ್ನೊಂದು ವಾರದಲ್ಲಿ ಎಲ್ಲಾ ಅರ್ಹ ಫಲಾನುಭವಿಗಳಿಗೆ ಈ ಯೋಜನೆಯ ಹಣವನ್ನು ಜಮಾ ಮಾಡಲು ಅಧಿಕಾರಿಗಳಿಗೆ ಸೂಚನೆಯನ್ನು ನೀಡಲಾಗಿದೆ ಎಂದರು.
ಇದನ್ನೂ ಓದಿ: Karmika ilake Yojana-ಕಾರ್ಮಿಕ ಮಂಡಳಿಯಿಂದ ಈ ಯೋಜನೆಯಡಿ ಸಿಗುತ್ತೆ 1,00,000/- ಧನ ಸಹಾಯ!

ಈ ಬಾರಿ ನೇರ ನಗದು ವರ್ಗಾವಣೆ(DBT) ಮೂಲಕ ಹಣ ಜಮಾ ಮಾಡಲು ತಾಲ್ಲೂಕು ಪಂಚಾಯತಿ ಮೂಲಕ ಅರ್ಹ ಫಲಾನುಭವಿಗಳಿಗೆ ಆರ್ಥಿಕ ನೆರವನ್ನು ಜಮಾ ಮಾಡಲು ಸೂಕ್ತ ಕ್ರಮಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ನನಗೆ ಸಂಭವಿಸಿರುವ ರಸ್ತೆ ಅಪಘಾತದಿಂದ ಚಿಕಿತ್ಸೆ ಹಾಗೂ ಇನ್ನಿತರೆ ಕಾರಣಗಳಿಂದ ಈ ಬಾರಿ ಹಣ ಸಂದಾಯವಾಗುವುದು ಕೊಂಚ ವಿಳಂಬವಾಗಿರುವುದು ನಿಜ ಆದರೆ ಇನ್ನು ವಿಳಂಬ ಮಾಡದೇ ಒಂದು ವಾರದ ಒಳಗಾಗಿ ಆರ್ಥಿಕ ನೆರವನ್ನು ವರ್ಗಾವಣೆಯನ್ನು ಮಾಡಲು ಸೂಕ್ತ ಕ್ರಮವನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಈಗಾಗಲೇ ಆದೇಶವನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: Land Survey-ನಿಮ್ಮ ಜಮೀನಿನ ಸರ್ವೇ ಇನ್ನೂ ಮುಂದೆ ಕೇವಲ 10 ನಿಮಿಷದಲ್ಲಿ ಮಾಡಿಸಬಹುದು!

Gruhalakshmi DBT Amount-ತಾಲೂಕು ಮಟ್ಟದಲ್ಲೇ ನೇರ ನಗದು ವರ್ಗಾವಣೆ:
ಈ ಹಿಂದೆ ಗೃಹಲಕ್ಷ್ಮಿ(Gruhalakshmi hana) ಯೋಜನೆಯ ಅರ್ಹ ಫಲಾನುಭವಿಗಳಿಗೆ ಬೆಂಗಳೂರು ಕೇಂದ್ರದಿಂದ ರಾಜ್ಯ ಎಲ್ಲಾ ಜಿಲ್ಲೆಯ ಫಲಾನುಭವಿಗಳಿಗೆ ಈ ಯೋಜನೆಯ ಪ್ರತಿ ತಿಂಗಳ ರೂ 2,000 ಹಣವನ್ನು ನೇರ ನಗದು ವರ್ಗಾವಣೆ ಮೂಲಕ ವರ್ಗಾವಣೆ ಮಾಡಲಾಗುತ್ತಿತ್ತು ಆದರೆ ಈಗ ಮೊದಲಿಗೆ ನೇರವಾಗಿ ರಾಜ್ಯದ ಎಲ್ಲಾ ತಾಲೂಕು ಪಂಚಾಯತಿ ಕಚೇರಿಗಳಿಗೆ ಹಣವನ್ನು ಬಿಡುಗಡೆ ಮಾಡಿ ನಂತರ ತಾಲೂಕು ಮಟ್ಟದಲ್ಲಿರುವ ಶಿಶು ಯೋಜನಾಭಿವೃದ್ದಿ ಅಧಿಕಾರಿಗಳ(CDPO) ಖಾತೆಗೆ ಈ ಹಣವನ್ನು ವರ್ಗಾವಣೆ ಮಾಡಿ ಈ ಲಾಗಿನ್ ಮೂಲಕ ಆ ತಾಲೂಕಿನ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಪಟ್ಟಿಯಲ್ಲಿರುವ ಅರ್ಹರಿಗೆ ಹಣವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: Karnataka Cabinet-ರಾಜ್ಯ ಸರಕಾರದಿಂದ “ಮಸ್ವಾಶ್ರಯ ಯೋಜನೆ” ಅಡಿ 10,000 ಮನೆ ಮಂಜೂರು!
Gruhalakshmi Beneficiary Details- ಗೃಹಲಕ್ಷ್ಮಿ ಯೋಜನೆ ಫಲಾನಭವಿಗಳ ಅಂಕಿ-ಅಂಶ ಹೀಗಿದೆ:
ಯೋಜನೆ ಪ್ರಾರಂಭ- 19 ಜುಲೈ 2023
ಜುಲೈ 2024 ತಿಂಗಳ ಅಂತ್ಯದವರೆಗೆ ಒಟ್ಟು ಫಲಾನುಭವಿಗಳ ಸಂಖ್ಯೆ- 1.25 ಕೋಟಿ
ಜನವರಿ 2025 ಕ್ಕೆ ಒಟ್ಟು ಫಲಾನುಭವಿಗಳ ಸಂಖ್ಯೆ- 1.28 ಕೋಟಿ
ಒಂದು ವರ್ಷಕ್ಕೆ ಈ ಯೋಜನೆಯಡಿ ಮೀಸಲಿಡಲಾದ ಮೊತ್ತ- 28,604 ಕೋಟಿ ರೂ