ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖ ಯೋಜನೆಯಾಗಿರುವ ಗೃಹಲಕ್ಷ್ಮಿ(Gruhalakshmi Yojane) ಯೋಜನೆಯ ಆರ್ಥಿಕ ನೆರವಿನ ವರ್ಗಾವಣೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸದನದಲ್ಲಿ ತಿಳಿಸಿರುವ ಮಾಹಿತಿಯನ್ನು ಇಲ್ಲಿ ಹಂಚಿಕೊಳ್ಳಲಾಗಿದೆ.
ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ಅರ್ಹ ಪಡಿತರ ಚೀಟಿ ಹೊಂದಿರುವ ಮಹಿಳೆಯರಿಗೆ ನೀಡುವ ರೂ 2,000/- ಹಣವನ್ನು(Gruhalakshmi Amount) ಸರಿಯಾಗಿ ಪ್ರತಿ ತಿಂಗಳು ಸಮರ್ಪಕವಾಗಿ ಜಮಾ ಮಾಡಲಾಗುತ್ತಿಲ್ಲ ಎಂದು ಬಹುತೇಕ ಜಿಲ್ಲೆಯ ಫಲಾನುಭವಿಗಳು ಶಾಸಕರಿಗೆ ದೂರು ಸಲ್ಲಿಸುವುದರ ಕುರಿತು ಸದನದಲ್ಲಿ ಮಾಹಿತಿಯನ್ನು ತಿಳಿಸಿದಾಗ ಈ ಕುರಿತು ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮಿ ಯೋಜನೆಯ ಆರ್ಥಿಕ ನೆರವಿನ ವರ್ಗಾವಣೆ ಕುರಿತು ಮಾಹಿತಿಯನ್ನು ತಿಳಿಸಿದ್ದಾರೆ.
ಇದನ್ನೂ ಓದಿ: Voter ID-ವೋಟರ್ ಐಡಿ ಕುರಿತು ಮಹತ್ವದ ಮಾಹಿತಿ ಪ್ರಕಟ!
ಈ ಲೇಖನದಲ್ಲಿ ಇಲ್ಲಿಯವರಿಗೆ ಗೃಹಲಕ್ಷ್ಮಿ ಯೋಜನೆಯಡಿ ಎಷ್ಟು ಕಂತು(Gruhalakshmi Status) ಹಣ ಜಮಾ ಅಗಿದೆ ಎಂದು ಅರ್ಹ ಫಲಾನುಭವಿಗಳು ತಮ್ಮ ಮೊಬೈಲ್ ನಲ್ಲೇ ಹೇಗೆ ಚೆಕ್ ಮಾಡಿಕೊಳ್ಳಬಹುದು ಎನ್ನುವ ಮಾಹಿತಿಯನ್ನು ಸಹ ವಿವರಿಸಲಾಗಿದ್ದು ಈ ಮಾಹಿತಿ ಉಪಯುಕ್ತ ಅನಿಸಿದ್ದಲ್ಲಿ ತಪ್ಪದೇ ನಿಮ್ಮ ಬಳಿಯಿರುವ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ.
Gruhalakshmi Scheme-ಎರಡು ತಿಂಗಳ ಗೃಹಲಕ್ಷ್ಮಿ ಹಣ ಬಾಕಿ:
ರೇಶನ್ ಕಾರ್ಡ ಅನ್ನು ಹೊಂದಿರುವ ಕುಟುಂಬದ ಯಜಮಾನಿಯರ ಖಾತೆಗೆ ಪ್ರತಿ ತಿಂಗಳು ರೂ 2,000 ಹಣವನ್ನು ಗೃಹಲಕ್ಷ್ಮಿ ಯೋಜನೆಯಡಿ ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡಲಾಗುತ್ತಿದ್ದು ಜನವರಿ-2025 ಮತ್ತು ಫೆಬ್ರವರಿ-2025 ತಿಂಗಳ ಹಣವನ್ನು ಅರ್ಹ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ಜಮಾ ಮಾಡುವುದು ಬಾಕಿ ಉಳಿದಿರುತ್ತದೆ.
ಇದನ್ನೂ ಓದಿ: Yashaswini Card-2025: ಯಶಸ್ವಿನಿ ಕಾರ್ಡ ಪಡೆಯಲು ಇನ್ನು 10 ದಿನ ಮಾತ್ರ ಅವಕಾಶ!
Gruhalakshmi installment date-ಈ ದಿನಾಂಕದ ನಂತರ ಎರಡು ಕಂತಿನ ಗೃಹಲಕ್ಷ್ಮಿ ಹಣ ಮಹಿಳೆಯರಿಗೆ ಜಮಾ ಅಗಲಿದೆ:
ಗೃಹಲಕ್ಷ್ಮಿ ಯೋಜನೆಯಡಿ ಹಣ ಜಮಾ ವಿಳಂದ ಕುರಿತು ಸುದ್ದಿಗಾರರೊಂದಿಗೆ ಮಾಹಿತಿಯನ್ನು ಹಂಚಿಕೊಂಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಜನವರಿ ಮತ್ತು ಫೆಬ್ರವರಿ ಈ ಎರಡು ತಿಂಗಳ ಹಣವನ್ನು ಒಂದೇ ಬಾರಿಗೆ ಎಲ್ಲಾ ಅರ್ಹ ಫಲಾನುಭವಿಗಳ ಖಾತೆಗೆ 31 ಮಾರ್ಚ್ 2025 ರ ನಂತರ ನೇರವಾಗಿ ಅವರ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

Gruhalakshmi Beneficiary List-ಗೃಹಲಕ್ಷ್ಮಿ ಯೋಜನೆಯಡಿ ಹಣವನ್ನು ಪಡೆಯಲು ಅರ್ಹರಿರುವ ಪಟ್ಟಿ ಬಿಡುಗಡೆ:
ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ಹಣವನ್ನು ಪಡೆಯಲು ಅರ್ಹರಿರುವ ಹಳ್ಳಿವಾರು ಪಟ್ಟಿಯನ್ನು ಆಹಾರ ಇಲಾಖೆಯ ಅಧಿಕೃತ ಜಾಲತಾಣದಲ್ಲಿ ಬಿಡುಗಡೆ ಮಾಡಲಾಗಿದ್ದು ಈ ಕೆಳಗೆ ವಿವರಿಸಿರುವ ಹಂತಗಳನ್ನು ಅನುಸರಿಸಿ ನಾಗರಿಕರು ತಮ್ಮ ಮೊಬೈಲ್ ನಲ್ಲೇ ಅರ್ಹರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಖಚಿತಪಡಿಸಿಕೊಳ್ಳಬಹುದು.
Step-1: ಮೊದಲಿಗೆ Gruhalakshmi Beneficiary List ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ಆಹಾರ ಇಲಾಖೆಯ ತಂತ್ರಾಂಶವನ್ನು ಪ್ರವೇಶ ಮಾಡಬೇಕು.
Step-2: ತದನಂತರ ಈ ಪೇಜ್ ನಲ್ಲಿ “ಇ-ಪಡಿತರ ಚೀಟಿ” ಬಟನ್ ಮೇಲೆ ಕ್ಲಿಕ್ ಮಾಡಿ ಕೆಳಗೆ ಕಾಣುವ “ಹಳ್ಳಿ ಪಟ್ಟಿ” ಬಟನ್ ಮೇಲೆ ಕ್ಲಿಕ್ ಮಾಡಬೇಕು.
Step-3: ನಂತರ ಈ ಪುಟದಲ್ಲಿ ನಿಮ್ಮ ಜಿಲ್ಲೆ, ತಾಲ್ಲೂಕು, ಗ್ರಾಮ ಪಂಚಾಯತಿ, ಹಳ್ಳಿ ಹೆಸರನ್ನು ಆಯ್ಕೆ ಮಾಡಿಕೊಂಡು “Go” ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಹಳ್ಳಿಯ ಗೃಹಲಕ್ಷ್ಮಿ ಯೋಜನೆಯಡಿ ಅರ್ಜಿ ಸಲ್ಲಿಸಲು ಪ್ರತಿ ತಿಂಗಳು ಹಣ ಪಡೆಯಲು ಅರ್ಹರಿರುವ ಪಟ್ಟಿಯನ್ನು ತೋರಿಸುತ್ತದೆ.
ಇದನ್ನೂ ಓದಿ: Land Conversion-ಗ್ರಾಮೀಣ ಭಾಗದಲ್ಲಿ ಮನೆ ಕಟ್ಟುವವರಿಗೆ ಸಿಹಿ ಸುದ್ದಿ: ಸಚಿವ ಕೃಷ್ಣಬೈರೇಗೌಡ
Gruhalakshmi Status-ಇಲ್ಲಿಯವರಿಗೆ ಗೃಹಲಕ್ಷ್ಮಿ ಯೋಜನೆಯಡಿ ಎಷ್ಟು ಕಂತು ಹಣ ಜಮಾ ಅಗಿದೆ ಎಂದು ತಿಳಿಯುವ ವಿಧಾನ:
ಗೃಹಲಕ್ಷ್ಮಿ ಯೋಜನೆಯಡಿ ಅರ್ಜಿ ಸಲ್ಲಿಸಿರುವವರು ಈ ಕೆಳಗಿನ ವಿಧಾನವನ್ನು ಅನುಸರಿಸಿ ಇಲ್ಲಿಯವರಿಗೆ ಗೃಹಲಕ್ಷ್ಮಿ ಯೋಜನೆಯಡಿ ಎಷ್ಟು ಕಂತು ಹಣ ಜಮಾ ಅಗಿದೆ ಎನ್ನುವ ಮಾಹಿತಿಯನ್ನು ತಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳಲು ಅವಕಾಶವಿರುತ್ತದೆ.
Step-1: ಮೊದಲಿಗೆ ಈ Gruhalakshmi Status Check ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಡಿಬಿಟಿ ಕರ್ನಾಟಕ ಮೊಬೈಲ್ ಅಪ್ಲಿಕೇಶನ್ ಅನ್ನು ಗೂಗಲ್ ಪ್ಲೇ ಸ್ಟೋರ್ ಪ್ರವೇಶ ಮಾಡಿ ಡೌನ್ಲೋಡ್ ಮಾಡಿಕೊಳ್ಳಬೇಕು.
Step-2: ತದನಂತರ ಅಪ್ಲಿಕೇಶನ್ ಅನ್ನು ಲಾಗಿನ್ ಅಗಲು ಆಧಾರ್ ಕಾರ್ಡ ನಂಬರ್ ಮತ್ತು ಒಟಿಪಿ ಅನ್ನು ಹಾಕಿ ಬಳಕೆದಾರ ಐಡಿಯನ್ನು ಸಕ್ರಿಯಗೊಳಿಸಿಕೊಂಡು ಪಾಸ್ವರ್ಡ ಅನ್ನು ಸಕ್ರಿಯಗೊಳಿಸಬೇಕು.
ಇದನ್ನೂ ಓದಿ: Diploma Certificate Courses-ಕೃಷಿ ವಿದ್ಯಾಲಯದಲ್ಲಿ ಸರ್ಟಿಫಿಕೇಟ್ ಕೋರ್ಸ್ ಮಾಡುವ ಅರ್ಜಿ ಆಹ್ವಾನ!
Step-3: ಮೇಲಿನ ಹಂತಗಳನ್ನು ಪೂರ್ಣಗೊಳಿಸಿದ ಬಳಿಕೆ ಲಾಗಿನ್ ಬಟನ್ ಮೇಲೆ ಕ್ಲಿಕ್ ಮಾಡಿ ರಚನೆ ಮಾಡಿಕೊಂಡಿರುವ ಪಾಸ್ವರ್ಡ ನಮೂದಿಸಿ ಲಾಗಿನ್ ಅಗಿ ಇಲ್ಲಿ ಮುಖಪುಟದಲ್ಲಿ ಕಾಣುವ “ಪಾವತಿ ಸ್ಥಿತಿ” ಬಟನ್ ಮೇಲೆ ಕ್ಲಿಕ್ ಮಾಡಿ ಗೃಹಲಕ್ಷ್ಮಿ ಯೋಜನೆಯನ್ನು ಆಯ್ಕೆ ಮಾಡಿಕೊಂಡು ಇಲ್ಲಿಯವರಿಗೆ ಈ ಯೋಜನೆಯಡಿ ಎಷ್ಟು? ಹಣ ಜಮಾ ಅಗಿದೆ? ಬ್ಯಾಂಕ್ ಖಾತೆ ಯಾವುದು? ಜಮಾ ದಿನಾಂಕ ಇನ್ನಿತರೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ಕಾಣಬಹುದು.