Gruhalkashmi yojana application: ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಇಂದಿನಿಂದ ಪ್ರಾರಂಭ! ಯಾವ ರೀತಿ ಇರಲಿದೆ ಅರ್ಜಿ ಸಲ್ಲಿಕೆಗೆ ರೂಪುರೇಷೆಗಳು?

ಅಂತಿಮವಾಗಿ ರಾಜ್ಯ ಸರಕಾರವು ಇಂದಿನಿಂದ(19-07-2023) ಅಧಿಕೃತವಾಗಿ ಗೃಹಲಕ್ಷ್ಮಿ ಯೋಜನೆಗೆ(Gruhalakshmi Yojana) ಅರ್ಜಿ ಸಲ್ಲಿಕೆಯನ್ನು ಆರಂಭಗೊಳಿಸಿದೆ

ಅಂತಿಮವಾಗಿ ರಾಜ್ಯ ಸರಕಾರವು ಇಂದಿನಿಂದ(19-07-2023) ಅಧಿಕೃತವಾಗಿ ಗೃಹಲಕ್ಷ್ಮಿ ಯೋಜನೆಗೆ(Gruhalakshmi Yojana) ಅರ್ಜಿ ಸಲ್ಲಿಕೆಯನ್ನು ಆರಂಭಗೊಳಿಸಿದೆ,
ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ. 2000/-ಗಳನ್ನು ನೀಡುವ 'ಗೃಹಲಕ್ಷ್ಮಿ ಯೋಜನೆ'(Gruhalakshmi yojana application and guidelines)ಯನ್ನು ಜಾರಿಗೆ ತರಲು ತಾತ್ವಿಕ ಅನುಮೋದನೆ ನೀಡಿ ಆದೇಶ ಹೊರಡಿಸಲಾಗಿತ್ತು. ಈಗ ಈ ಯೋಜನೆಯ ವಿವರವಾದ ರೂಪುರೇಷ ಹಾಗೂ ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಲಾಗಿದೆ.

ಈ ಯೋಜನೆಗೆ ಸಾರ್ವಜನಿಕರು ಅರ್ಜಿ ಸಲ್ಲಿಸಲು, ಮಂಜೂರಾತಿ ಪತ್ರವನ್ನು ಪಡೆಯಲು ಮತ್ತು ಅಂತಿಮವಾಗಿ ಈ ಯೋಜನೆಯಡಿ ರೂ 2,000 ಅರ್ಥಿಕ ಸಹಾಯಧನವನ್ನು ಪಡೆಯಲು ಯಾವೆಲ್ಲ ರೂಪುರೇಷೆ/ವಿಧಾನವನ್ನು ಜಾರಿಗೆ ತರಲಾಗಿದೆ ಮತ್ತು ನೀವು ಅರ್ಜಿ ಸಲ್ಲಿಸಲು ನಿಮಗೆ ನಿಗದಿಪಡಿಸಿದ ದಿನ ಮತ್ತು ಸ್ಥಳ ಯಾವುದು ಎಂದು ಹೇಗೆ ತಿಳಿಯಬೇಕು? ಎಂದು ಈ ಅಂಕಣದಲ್ಲಿ ಸಂಪೂರ್ಣವಾಗಿ ವಿವರಿಸಲಾಗಿದೆ ನೀವು ತಿಳಿಯಿರಿ ನಿಮ್ಮ ಅಪ್ತರಿಗೂ ಈ ಮಾಹಿತಿ ತಿಳಿಸಿ.

ಮಹಿಳೆಗೆ ಪ್ರತಿ ತಿಂಗಳು ರೂ. 2000/-ಗಳನ್ನು ನೀಡುವ "ಗೃಹಲಕ್ಷ್ಮಿ' ಯೋಜನೆಯ ಅರ್ಜಿಗಳನ್ನು ಪರಿಶೀಲಿಸಿ ಮಂಜೂರಾತಿ ನೀಡಲು ಸಂಬಂಧಿಸಿದ ತಾಲ್ಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು(CDPO) ಮಂಜೂರಾತಿ ಪ್ರಾಧಿಕಾರವೆಂದು ಪರಿಗಣಿಸಲು ಈ ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ.

ಗ್ರಹಲಕ್ಷ್ಮಿ ಯೋಜನೆಯ ಮಾರ್ಗಸೂಚಿ ಮತ್ತು ರೂಪುರೇಷೆಗಳ ವಿವರ ಹೀಗಿದೆ:

ಗ್ರಹಲಕ್ಷ್ಮಿ ಯೋಜನೆಯ ಉದ್ದೇಶ:

ರಾಜ್ಯ ಸರಕಾರದಿಂದ  ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರವು ಅನೇಕ ಯೋಜನೆಗಳನ್ನು ಹಮ್ಮಿಕೊಂಡಿರುತ್ತದೆ. ಕುಟುಂಬದ ನಿರ್ವಹಣೆಯಲ್ಲಿ ಕುಟುಂಬದ ಯಜಮಾನಿಯ ಪಾತ್ರ ಪುಮುಖವಾಗಿದ್ದು, ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬದ ನಿರ್ವಹಣೆಯು ಉತ್ತಮ ಗುಣಮಟ್ಟದಲ್ಲಿರುತ್ತದೆ. ಆದ್ದರಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000-00ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಯನ್ನು 2023-24ನೇ ಸಾಲಿನಿಂದ ಜಾರಿಗೆ ತರಲಾಗಿದೆ.

ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ಪಡೆಯಲು ಯಾರೆಲ್ಲ ಅರ್ಹರು:

1. ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.

2. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ಪಾವತಿದಾರರಾಗಿದ್ದಲ್ಲಿ ಈ ಯೋಜನೆಗೆ ಅರ್ಹರಾಗುವುದಿಲ್ಲ. 3. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಜಿಎಸ್‌ಟಿ ರಿಟರ್ನ್ ಸಲ್ಲಿಸುವವರಾಗಿದ್ದಲ್ಲಿ ಅರ್ಹರಾಗುವುದಿಲ್ಲ.

Gruhalakshmi required documents- ಯೋಜನೆಯಡಿ ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:

1. ಪಡಿತರ ಚೀಟಿಯ ಸಂಖ್ಯೆ

2. ಯಜಮಾನಿಯ ಹಾಗೂ ಯಜಮಾನಿ ಪತಿಯ ಆಧಾರ್ ಕಾರ್ಡ್ ಸಂಖ್ಯೆ,

3. ಯಜಮಾನಿಯ ಆಧಾರ್‌ಗೆ ಜೋಡಣೆಯಾಗಿರುವ ಬ್ಯಾಂಕ್ ಖಾತೆಯ ಫಲಾನುಭವಿಯು ಇಚ್ಛಿಸುವ ಪರ್ಯಾಯ ಬ್ಯಾಂಕ್ ಖಾತೆಯ ವಿವರ.

ಈ ಯೋಜನೆಯ ನೋಂದಣಿ  ಮತ್ತು ನೀವು ಅರ್ಜಿ ಸಲ್ಲಿಸಲು ನಿಮಗೆ ನಿಗದಿಪಡಿಸಿದ ದಿನ ಮತ್ತು ಸ್ಥಳ ಯಾವುದು ಎಂದು ತಿಳಿಯುವ ವಿಧಾನ:

1. ಫಲಾನುಭವಿಗಳು ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್‌ ಹಾಗೂ ಬಾಪೂಜಿ ಸೇವಾ ಕೇಂದ್ರ ಮೂಲಕ ಸೇವಾಸಿಂಧು ಪೋರ್ಟಲ್‌ನಲ್ಲಿ ಉಚಿತವಾಗಿ ನೋಂದಾಯಿಸಿ ಕೊಳ್ಳಬಹುದು.

2. ಫಲಾನುಭವಿಗಳು ಮೇಲ್ಕಾಣಿಸಿದ ಕೇಂದ್ರಗಳಲ್ಲದೆ "ಪುಜಾ ಪ್ರತಿನಿಧಿ" (citizen volunteers) ಮೂಲಕ ಸಹ ಸೇವಾಸಿಂಧು ಪೋರ್ಟಲ್‌ನಲ್ಲಿ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು. 

3. ಪ್ರತಿ ಫಲಾನುಭವಿಯ ನೋಂದಾವಣಿಗೆ ನಿಗದಿ ಮಾಡಿರುವ ದಿನಾಂಕ, ಸಮಯ ಮತ್ತು ಸ್ಥಳವನ್ನು 1902ಕ್ಕೆ ಕಾಲ್ ಮಾಡಿ ಅಥವಾ 8147500500 ನಂಬರ್‌ಗೆ SMS ಮೂಲಕ ಸಂದೇಶ ಕಳುಹಿಸಿ ಮಾಹಿತಿ ಪಡೆಯಬಹುದಾಗಿದೆ.

4. ನಿಗಧಿತ ಸಮಯಕ್ಕೆ ಭೇಟಿ ನೀಡಿ ನೋಂದಾವಣೆ ಮಾಡಿಕೊಳ್ಳಲು ಸಾಧ್ಯವಾಗದೆಯಿದ್ದಲ್ಲಿ, ಅದೇ ಕೇಂದ್ರಕ್ಕೆ ಮುಂದಿನ ಯಾವುದೇ ದಿನಗಳಲ್ಲಿ ಕಛೇರಿ ಸಮಯದ ನಂತರ (ಸಂಜೆ 5.00 ಗಂಟೆ ನಂತರ) ತೆರಳಿ ನೋಂದಾಯಿಸಿಕೊಳ್ಳಬಹುದು.

5. ಅನುಮೋದಿಸಲ್ಪಟ್ಟ ಅರ್ಹ ಫಲಾನುಭವಿಗಳಿಗೆ ಮಂಜೂರಾತಿ ಪತ್ರವನ್ನು ನೀಡಲಾಗುವುದು.

6. ಯೋಜನೆಯಡಿ ನೋಂದಾಯಿಸುವ ಫಲಾನುಭವಿಯು ಯಾವುದೇ ಶುಲ್ಕವನ್ನುಪಾವತಿಸುವಂತಿಲ್ಲ. 

7. ಯೋಜನೆಯಡಿ ನೋಂದಾಯಿಸಿಕೊಳ್ಳಲು ಯಾವುದೇ ಅಂತಿಮ ದಿನಾಂಕ ಮತ್ತು ಸಮಯ ನಿಗದಿ ಪಡಿಸಿರುವುದಿಲ್ಲ.

ಇದನ್ನೂ ಓದಿ: Ration Card: ರೇಷನ್ ಕಾರ್ಡ್ ನಲ್ಲಿ ಕುಟುಂಬದ ಮುಖ್ಯಸ್ಥರು ಯಾರೆಂದು ಮತ್ತು ಯಾವ ಬ್ಯಾಂಕ್ ಅಕೌಂಟ್ ಗೆ ಆಧಾರ್ ಲಿಂಕ್ ಆಗಿದೆ ಎಂದು ತಿಳಿಯಲು ವೆಬ್ಸೈಟ್ ಲಿಂಕ್.

How to register under gruha jyoti scheme- ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿ ವಿಧಾನದ ಪ್ರಕ್ರಿಯೆ (FLOW Chart)

ಗೃಹಲಕ್ಷ್ಮಿ ಯೋಜನೆಯಡಿ ಅರ್ಹ ಫಲಾನುಭವಿಗಳ ನೋಂದಣಿ ಪ್ರಕ್ರಿಯೆ 3 ಪ್ರಕಾರ ಗಳಲ್ಲಿ ಇರುತ್ತದೆ.

ವಿಧಾನ-1 (Pre-Sanctioned RC's): 

ಈಗಾಗಲೇ ಕುಟುಂಬ ತಂತ್ರಾಂಶದಿಂದ ಅರ್ಹ ಫಲಾನುಭವಿಯ ಪಡಿತರ ಚೀಟಿಯ ಸಂಖ್ಯೆಯನ್ನಾಧರಿಸಿ ಯೋಜನೆಯಡಿ ಫಲಾನುಭವಿಗಳೆಂದು ಗುರುತಿಸಲಾಗಿದೆ. ಮುಂದುವರೆದು ಯೋಜನೆಯ Online ರಿಜಿಸ್ಟ್ರೇಷನ್‌ನ ಕೆಲವು ಫೀಲ್ಡ್‌ಗಳನ್ನು ಭರ್ತಿ ಮಾಡುವ ಅವಶ್ಯಕತೆ ಇದ್ದು, ಮೇಲ್ಕಾಣಿಸಿದ ಕೇಂದ್ರಗಳಿಗೆ ಭೇಟಿ ನೀಡಿ ಅಗತ್ಯ ಮಾಹಿತಿ ಒದಗಿಸುವುದು. 

ವಿಧಾನ-2 (Process for Open Portal): 

ಫಲಾನುಭವಿಯ ಪಡಿತರ ಚೀಟಿಯ ಸಂಖ್ಯೆಯನ್ನು upload ಮಾಡಬೇಕಾಗುತ್ತದೆ. ಇದರ ಅನುಸಾರ ಕುಟುಂಬ ತಂತ್ರಾಂಶದಿಂದ ಫಲಾನುಭವಿಯ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ. ಸದರಿ ಮಾಹಿತಿಯನ್ನು ಪರಿಶೀಲಿಸಿ ದಾಖಲೆಗಳು ತಾಳೆಯಾಗಿರುವುದು ಕಂಡುಬಂದಲ್ಲಿ ಯೋಜನೆಯಡಿ ನೋಂದಣಿ ಮಾಡಲಾಗುತ್ತದೆ. 

ವಿಧಾನ-3 (Process for Citizen Enrollers): 

ಪ್ರಜಾಪ್ರತಿನಿಧಿಗಳು ಮನೆಮನೆಗೆ ತೆರಳಿ ಇದುವರೆಗೂ ಯೋಜನೆಯಡಿ ನೋಂದಾಯಿಸದ ಫಲಾನುಭವಿಗಳ ನೋಂದಣಿ ಮಾಡಿಕೊಳ್ಳುತ್ತಾರೆ. ಯೋಜನೆಯಡಿ ನೋಂದಾಯಿಸಲು ಅವಶ್ಯವಿರುವ ದಾಖಲೆಗಳ ಮಾಹಿತಿ ನೀಡಿ ಪುಜಾ ಪ್ರತಿನಿಧಿಗಳ ಮೂಲಕ ನೋಂದಾಯಿಸಿಕೊಳ್ಳಬಹುದು. 

ಅರ್ಜಿ ಸಲ್ಲಿಸಿದವರಿಗೆ ರೂ 2,000 ಹಣ ಪಾವತಿ ಮಾಡುವ ವಿಧಾನ:

1. ಈಗಾಗಲೇ ಆಧಾರ್ ಜೋಡಣೆಯಾಗಿರುವ ಫಲಾನುಭವಿಯ ಖಾತೆಗೆ ಪ್ರತಿ ತಿಂಗಳು ರೂ.2000/- ಗಳನ್ನು ನೇರ ವರ್ಗಾವಣೆ ಮೂಲಕ(DBT) ಜಮೆ ಮಾಡಲಾಗುವುದು. 

2. ಒಂದು ವೇಳೆ ಫಲಾನುಭವಿಗಳು ಇಚ್ಚಿಸಿದಲ್ಲಿ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆ ಬದಲು ಕುಟುಂಬದ ಯಜಮಾನಿಯ ಹೆಸರಿನಲ್ಲಿರುವ ಪರ್ಯಾಯ ಬ್ಯಾಂಕ್‌ ಖಾತೆಯನ್ನು ನೀಡಬಹುದಾಗಿರುತ್ತದೆ. ಸದರಿ ಬ್ಯಾಂಕ್‌ ಖಾತೆಗೆ ಪ್ರತಿ ತಿಂಗಳು ರೂ. 2000/-ಗಳನ್ನು ಆರ್.ಟಿ.ಜಿ.ಎಸ್.(RTGS) ಮೂಲಕ ಜಮೆ ಮಾಡಲಾಗುತ್ತದೆ.

3. ಆಧಾರ್ ಜೋಡಣೆಯಾಗಿರುವ ಬ್ಯಾಂಕ್‌ ಖಾತೆ ಬದಲು Non Aadhar Seeded Bank Account ಗೆ ಸೌಲಭ್ಯವನ್ನು ಪಡೆಯಲು ಇಚ್ಛಿಸುವ ಫಲಾನುಭವಿಗಳಿಗೆ ತಕ್ಷಣವೇ ಮಂಜೂರಾತಿ ಪತ್ರ ನೀಡಲಾಗುವುದಿಲ್ಲ. ಬ್ಯಾಕ್‌ ಎಂಡ್‌ನಲ್ಲಿ ನೋಂದಾವಣೆ ಅರ್ಜಿಗಳನ್ನು ಸರ್ಕಾರದ ಆದೇಶ ಸಂಖ್ಯೆ: ಮಮಇ 70 ಮಮಅ 2023 (2,57-4), ದಿನಾಂಕ: 12-06-2023ರಲ್ಲಿ ನಿಗಧಿಪಡಿಸಲಾದ ಸಂಬಂಧಿಸಿದ ತಾಲ್ಲೂಕಿನ/ಯೋಜನೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಲಾಗಿನ್‌ಗೆ ಕಳುಹಿಸಿ ಪರಿಶೀಲನ ನಡೆಸುವುದು. ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಮ್ಮ ಲಾಗಿನ್‌ನಲ್ಲಿ ಸ್ವೀಕೃತವಾಗಿರುವ ನೋಂದಾವಣೆ ಅರ್ಜಿಗಳನ್ನು ಒಂದೊಂದಾಗಿ ಪರಿಶೀಲಿಸಿ, ಪ್ರತಿ ನೋಂದಾವಣೆ ಅರ್ಜಿಯನ್ನು ಈಗಾಗಲೇ ಪಡಿತರ ಚೀಟಿಯನ್ನಯ ವ್ಯಕ್ತವಾಗಿರುವ ಯಜಮಾನಿಯ ಹೆಸರು ಹಾಗೂ ಪಾಸ್ ಪುಸ್ತಕದಲ್ಲಿರುವ ಖಾತೆದಾರರ ಹೆಸರು ಹೊಂದಾಣಿಕೆಯಾಗುವುದನ್ನು ತಾಳೆ ನೋಡುವುದು. ಹಾಗೆ ವಿವರಗಳನ್ನು ತುಲನೆ ಮಾಡಿದ ನಂತರ ಹೊಂದಾಣಿಕೆಯಾದಲ್ಲಿ ಮಾತ್ರ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯವನ್ನು ಪಡೆಯಲು ಶಿಫಾರಸ್ಸು ಮಾಡುವುದು. ಆನಂತರವೇ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ನೀಡಲಾಗುತ್ತದೆ.

4. ಒಂದು ವೇಳೆ Non Aadhar Seeded Bank Accountಗೆ ಸೌಲಭ್ಯವನ್ನು ಪಡೆಯಲು ಇಚ್ಛಿಸುವ ಫಲಾನುಭವಿಗಳ ಅತಿ ಹೆಚ್ಚು ಇದ್ದು ಹೆಚ್ಚಿನ ಸಂಖ್ಯೆಯ ನೋಂದಾವಣೆ ಅರ್ಜಿಗಳು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಲಾಗಿನ್‌ಗೆ ಕಳುಹಿಸಲ್ಪಟ್ನಲ್ಲಿ, ತಾಲ್ಲೂಕು ಮಟ್ಟದ ಇತರ ಅಧಿಕಾರಿಗಳಿಗೂ ಅಂದರೆ, ತಾಲ್ಲೂಕು ಪಂಚಾಯತ್‌ನ ಕಾರ್ಯನಿರ್ವಾಹಕ ಅಧಿಕಾರಿ, ತಹಶೀಲ್ದಾರ್‌ರವರಿಗೂ ಪ್ರತ್ಯೇಕ ಲಾಗಿನ್ ರಚಿಸಿ ಹೆಚ್ಚಿನ ನೋಂದಾವಣೆ ಅರ್ಜಿಗಳನ್ನು ಪರಿಶೀಲಿಸಿ ಮಂಜೂರಾತಿಗೆ ಶಿಫಾರಸ್ಸು ಮಾಡಲು ವ್ಯವಸ್ಥೆ ಮಾಡಲಾಗುವುದು.

Gruhalakshmi helpline- ಗೃಹಲಕ್ಷ್ಮಿ ಯೋಜನೆಯ ಸಹಾಯವಾಣಿ - 1902:

ಗೃಹಲಕ್ಷ್ಮಿ ಯೋಜನೆ ಕುರಿತು ಯಾವುದೇ ಪುಶ್ನೆಗಳು ಅಥವಾ ಸಮಸ್ಯೆಗಳಿಗೆ ಉಚಿತ Toll Free ಸಹಾಯವಾಣಿ ಸಂಖ್ಯೆ: 1902 ಕ್ಕೆ ಬೆಳಿಗ್ಗೆ 9-00 ರಿಂದ ಸಂಜೆ 6-00 ಗಂಟೆಯವರೆಗೆ ಕರೆ ಮಾಡಬಹುದು.

ಇದನ್ನೂ ಓದಿ: Fasal bima Yojana: ಈ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಲು ಇನ್ನು ಕೇವಲ 14 ದಿನ ಉಳಿದಿದೆ! ಮತ್ತು ಅರ್ಜಿ ಚೆಕ್ ಮಾಡುವ ವೆಬ್ಸೈಟ್ ಲಿಂಕ್.