Karnataka Board Timetable 2025-PUC ಮತ್ತು SSLC ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ!

2024-25ನೇ ಸಾಲಿನ ಎಸ್. ಎಸ್ ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ರ ತಾತ್ಕಾಲಿಕ ವೇಳಾಪಟ್ಟಿಯನ್ನು(Karnataka Board Timetable) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ(kseb) ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ.

ಮಕ್ಕಳಿಗೆ ಮುಂದಿನ/ಉನ್ನತ ವಿದ್ಯಾಭ್ಯಾಸಕ್ಕೆ ಎಸ್. ಎಸ್ ಎಲ್.ಸಿ(SSLC) ಮತ್ತು ದ್ವಿತೀಯ ಪಿಯುಸಿ(PUC) ಪರೀಕ್ಷೆಗಳು ಬುನಾದಿ ಇದ್ದಂತೆ ಈ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಪಡೆದುಕೊಂಡರೆ ಉನ್ನತ ಶಿಕ್ಷಣ ಪಡೆಯಲು ನೆರವಾಗುತ್ತದೆ.

ಇದನ್ನೂ ಓದಿ: Free cylinder scheme-ಮಹಿಳೆಯರಿಗೆ ಉಚಿತ ಗ್ಯಾಸ್ ಸಿಲಿಂಡರ್ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

ಈ ವರ್ಷದ ಎಸ್. ಎಸ್ ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯನ್ನು(SSLC and PUC exam Time Table) ಯಾವ ದಿನಾಂಕದಿಂದ ಆರಂಭಿಸಲಾಗುತ್ತದೆ ಎನ್ನುವ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದ್ದು ಇದರ ವಿವರವನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ.

SSLC and PUC exam Time Table- ಆಕ್ಷೇಪಣೆ ಸಲ್ಲಿಸಲು ಅವಕಾಶ:

ಮಂಡಲಿಯ ಅಧಿಕೃತ ಜಾಲತಾಣದಲ್ಲಿ ಎಸ್. ಎಸ್ ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಗೊಂಡಿದ್ದು ಈ ಕುರಿತು ಆಕ್ಷೇಪಣೆ ಸಲ್ಲಿಸುವುದಿದ್ದಲ್ಲಿ ದಿನಾಂಕ : 02 ಡಿಸೆಂಬರ್ 2024 ರಿಂದ 16 ಡಿಸೆಂಬರ್ 2024 ರ ನಡುವೆ ಸಲ್ಲಿಸಲು ಕಾಲಾವಕಾಶವಿರುತ್ತದೆ ಎಂದು ಮಂಡಲಿಯ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ತಾತ್ಕಾಲಿಕ ವೇಳಾಪಟ್ಟಿ ಕುರಿತು ಆಕ್ಷೇಪಣೆ ಸಲ್ಲಿಸಲು ಇಮೇಲ್ ವಿಳಾಸ: [email protected] ಕ್ಕೆ ಸಲ್ಲಿಸಿ ಹಾಗೂ ಇದರ ಹಾರ್ಡ ಕಾಪಿಯನ್ನು ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560003 ಕ್ಕೆ ನಿಗದಿತ ಸಮಯದೊಳಗಾಗಿ ಪೋಸ್ಟ್ ಮಾಡಬೇಕು ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: KMF Milk Incentive- ರಾಜ್ಯ ಸರಕಾರದಿಂದ ರೈತರಿಗೆ 649 ಕೋಟಿ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ! ಇಲ್ಲಿದೆ ಸ್ಟೇಟಸ್ ಚೆಕ್ ವೆಬ್ಸೈಟ್ ಲಿಂಕ್!

SSLC exam Time Table- ಎಸ್. ಎಸ್ ಎಲ್.ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ:

Karnataka Board Timetable

ಇದನ್ನೂ ಓದಿ: Land surveyors notification-750 ಭೂಮಾಪಕರ ಹುದ್ದೆಗೆ ಅರ್ಜಿ ಆಹ್ವಾನ! ಅರ್ಜಿ ಸಲ್ಲಿಸಲು ಇನ್ನು 7 ದಿನ ಮಾತ್ರ ಅವಕಾಶ!

Karnataka Board Timetable

PUC exam Time Table- ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ:

Karnataka Board Timetable

ಇದನ್ನೂ ಓದಿ: Bele hani parihara-ಹಿಂಗಾರು ಹಂಗಾಮಿನ ₹120 ಕೋಟಿ ಬೆಳೆ ಹಾನಿ ಪರಿಹಾರ ರೈತರ ಖಾತೆಗೆ!

Karnataka Board Timetable

ತಾತ್ಕಾಲಿಕ ವೇಳಾಪಟ್ಟಿ PDF ಪೈಲ್ ಅನ್ನು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ: Karnataka Board Timetable-2025

ವಿದ್ಯಾರ್ಥಿಗಳಿಗೆ ಮಂಡಳಿಯ ಪ್ರಮುಖ ಸೂಚನೆಗಳು:

1) 03-04-2025ರಂದು ವಿದ್ಯಾರ್ಥಿಗಳಿಗೆ ಪ್ರಯೋಗಿಕ ಹಾಗೂ ಮೌಖಿಕ ಪರೀಕ್ಷೆಗಳನ್ನು ಆಯಾ ಶಾಲೆಗಳಲ್ಲಿ ನಡೆಸಲಾಗುತ್ತದೆ,

2) ವಿಷಯ ಸಂಕೇತ 15 ಮತ್ತು 60ರ ವಿಷಯಗಳು ಆದರ್ಶ ವಿದ್ಯಾಲಯಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯವಾಗುತ್ತವೆ.

3) ಹಿಂದೂಸ್ತಾನಿ ಸಂಗೀತ ಮತ್ತು ಕರ್ನಾಟಕ ಸಂಗೀತ ವಿಷಯದ ಪರೀಕ್ಷೆಯನ್ನು ಮಧ್ಯಾಹ್ನ 2.00 ಗಂಟೆಯಿಂದ ಸಾಯಂಕಾಲ 5.15 ರವರೆಗೆ ನಿಗದಿಪಡಿಸಿದೆ. ಸದರಿ ವಿಷಯಗಳ ತಾತ್ವಿಕ ಪರೀಕ್ಷೆಯನ್ನು ಮಧ್ಯಾಹ್ನ 2.00 ಗಂಟೆಯಿಂದ ಮಧ್ಯಾಹ್ನ 3.45 ಗಂಟೆಯವರೆಗೆ ಮತ್ತು ಪ್ರಾಯೋಗಿಕ ಪರೀಕ್ಷೆಯನ್ನು ಮಧ್ಯಾಹ್ನ 3.45 ರಿಂದ ಸಾಯಂಕಾಲ 5.15 ಗಂಟೆಯವರೆಗೆ ನಡೆಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Solar Pumpset subsidy- ಶೇ 80 ರಷ್ಟು ಸಹಾಯಧನದಲ್ಲಿ ಪಂಪ್ ಸೆಟ್ ಪಡೆಯಲು ಅರ್ಜಿ ಆಹ್ವಾನ!

4) ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳು ಮೂರು ಗಂಟೆಯ ಪ್ರಶ್ನೆಪತ್ರಿಕೆಗೆ ಉತ್ತರಿಸಲು ಹೆಚ್ಚುವರಿಯಾಗಿ 60 ನಿಮಿಷಗಳು, ಎರಡೂವರೆ ಗಂಟೆಯ ಪ್ರಶ್ನೆಪತ್ರಿಕೆಗೆ 50 ನಿಮಿಷಗಳು, ಎರಡು ಗಂಟೆಯ ಪ್ರಶ್ನೆಪತ್ರಿಕೆಗೆ 40 ನಿಮಿಷಗಳು, ಒಂದೂವರೆ ಗಂಟೆಯ ಪ್ರಶ್ನೆಪತ್ರಿಕೆಗೆ 30 ನಿಮಿಷಗಳನ್ನು ನೀಡಲಾಗುವುದು.

5) ಪ್ರಥಮ ಭಾಷಾ ವಿಷಯಗಳು, ಕೋರ್ ವಿಷಯಗಳು ಮತ್ತು ಜೆ.ಟಿ.ಎಸ್. ವಿಷಯಗಳಿಗೆ ಬೆಳಗ್ಗೆ 10.00 ರಿಂದ ಮಧ್ಯಾಹ್ನ 1.15 ರವರೆಗೆ ಮತ್ತು ದ್ವಿತೀಯ ಭಾಷಾ ವಿಷಯಗಳು ಹಾಗೂ ತೃತೀಯ ಭಾಷಾ ವಿಷಯಗಳಿಗೆ ಬೆಳಗ್ಗೆ 10.00 ರಿಂದ ಮಧ್ಯಾಹ್ನ 1.00ರವರೆಗೆ ಅವಧಿ ನಿಗದಿಪಡಿಸಿದೆ.

6) ಪ್ರಥಮ ಭಾಷಾ ವಿಷಯಗಳು, ಕೋರ್ ವಿಷಯಗಳು ಮತ್ತು ಜೆ.ಟಿ.ಎಸ್. ವಿಷಯಗಳ ಪರೀಕ್ಷೆ ಬರೆಯಲು 3.00 ಗಂಟೆ ಮತ್ತು ಪ್ರಶ್ನೆಪತ್ರಿಕೆ ಓದಲು 15 ನಿಮಿಷ ಹಾಗೂ ದ್ವಿತೀಯ ಮತ್ತು ತೃತೀಯ ಭಾಷಾ ವಿಷಯಗಳಿಗೆ ಪರೀಕ್ಷೆ ಬರೆಯಲು 2 ಗಂಟೆ 45 ನಿಮಿಷ ಹಾಗೂ ಪ್ರಶ್ನೆಪತ್ರಿಕೆ ಓದಲು 15 ನಿಮಿಷ ನಿಗದಿಪಡಿಸಲಾಗಿದೆ.

7) ಎನ್.ಎಸ್.ಕ್ಯೂ.ಎಫ್. ವಿಷಯಗಳ ಪರೀಕ್ಷೆ ಬೆಳಗ್ಗೆ 10.00 ರಿಂದ 12.15ರವರೆಗೆ ನಡೆಯಲಿದೆ.

8) ಎನ್.ಎಸ್.ಕ್ಯೂ.ಎಫ್. ಪರೀಕ್ಷಾ ವಿಷಯಗಳ ಪರೀಕ್ಷೆ ಬರೆಯಲು 2.00 ಗಂಟೆ ಹಾಗೂ ಪ್ರಶ್ನೆಪತ್ರಿಕೆ ಓದಲು 15 ನಿಮಿಷ ನಿಗದಿಪಡಿಸಲಾಗಿದೆ.