- Advertisment -
HomeBreaking NewsKarnataka Budget-2025: ಕರ್ನಾಟಕ ಬಜೆಟ್ ಮಂಡನೆ ದಿನಾಂಕ ಘೋಷಿಸಿದ ಸಿಎಂ ಸಿದ್ದರಾಮಯ್ಯ!

Karnataka Budget-2025: ಕರ್ನಾಟಕ ಬಜೆಟ್ ಮಂಡನೆ ದಿನಾಂಕ ಘೋಷಿಸಿದ ಸಿಎಂ ಸಿದ್ದರಾಮಯ್ಯ!

Karnataka Budget Date 2025-26: ಕರ್ನಾಟಕ ರಾಜ್ಯ ಸರಕಾರದ 2025-26 ನೇ ಸಾಲಿನ ಮೊದಲ ಬಜೆಟ್ ಮಂಡನೆಗೆ ಅಧಿಕೃತ ದಿನಾಂಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದು ಈ ಕುರಿತು ಅಧಿಕೃತ ಮಾಹಿತಿಯನ್ನು ವಾರ್ತಾ ಇಲಾಖೆಯ ಟ್ವಿಟರ್/ಎಕ್ಸ್ ಖಾತೆಯಲ್ಲಿ ಪ್ರಕಟಿಸಲಾಗಿದೆ.

ಸಾರ್ವಜನಿಕರು ಈ ಬಾರಿಯ ಬಜೆಟ್ ನಲ್ಲಿ ಯಾವೆಲ್ಲ ನಿರೀಕ್ಷೆಗಳನ್ನು ಇಟ್ಟುಕೊಳ್ಳಬಹುದು? ಈ ಬಜೆಟ್ ನಲ್ಲಿ(Karnataka Budget ) ಕೃಷಿ ಕ್ಷೇತ್ರಕ್ಕೆ ಎಷ್ಟು? ಹಣ ಮೀಸಲಿಡಲಾಗುತ್ತದೆ? ಹೊಸ ಯೋಜನೆಗಳ ಘೋಷಣೆ ಸಾಧ್ಯತೆ ಇತ್ಯಾದಿ ವಿಷಯಗಳ ಕುರಿತು ಒಂದಿಷ್ಟು ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ.

ಕರ್ನಾಟಕ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ(CM Siddaramaiah) ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯನವರು ತಮ್ಮ 16ನೇ ಬಜೆಟ್ ಮಂಡನೆಯನ್ನು ಕೆಲವೇ ದಿನಗಳಲ್ಲಿ ಮಂಡಿಸಲಿದ್ದು ಇದರ ಅಧಿಕೃತ ಮಾಹಿತಿ ಈ ಬಾರಿಯ ಬಜೆಟ್ ಗಾತ್ರ ಇನ್ನಿತರೆ ಮಾಹಿತಿಯನ್ನು ಸಹ ಇಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Ujjwala Yojane Subsidy-ಉಜ್ವಲ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಸಬ್ಸಿಡಿ ಬಿಡುಗಡೆ!

Karnataka Budget-2025-26 ನೇ ಸಾಲಿನ ಬಜೆಟ್ ಯಾವಾಗ?

ರಾಜ್ಯದ ಹಣಕಾಸು ಸಚಿವರು ಆಗಿರುವಂತಹ ಮಾನ್ಯ ಸಿದ್ದರಾಮಯ್ಯನವರು ಮುಂದಿನ ತಿಂಗಳು ಅಂದರೆ ಮಾರ್ಚ್ 03ನೇ ತಾರೀಕಿನಿಂದ ಬಜೆಟ್ ಅಧಿವೇಶನ ಆರಂಭಿಲಿದ್ದು ಮಾರ್ಚ್ 07ನೇ ತಾರೀಕಿನಂದು ಬಜೆಟ್ ಮಂಡಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ಸರಕಾರದಡಿ ಕಾರ್ಯ ನಿರ್ವಹಿಸುವ ವಾರ್ತಾ ಇಲಾಖೆಯಿಂದ ಅಧಿಕೃತ ಮಾಹಿತಿಯನ್ನು ಪ್ರಕಟಿಸಲಾಗಿದೆ.

Karnataka Budget News-ಮಾರ್ಚ್ 7 ರಂದು ಬಜೆಟ್‌ ಮಂಡಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಧಾನಮಂಡಲದ ಅಧಿವೇಶನ ಮಾರ್ಚ್ 3 ರಿಂದ ಆರಂಭವಾಗಲಿದ್ದು, ನೂತನ ವರ್ಷದ ಮೊದಲನೇ ಅಧಿವೇಶನವಾದ್ದರಿಂದ ರಾಜ್ಯಪಾಲರು 3 ರಂದು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಾರ್ಚ್‌ 4, ಮಂಗಳವಾರದಿಂದ ಗುರುವಾರದವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆದು, ಮಾರ್ಚ್ 7 ರಂದು, 2025-2026 ನೇ ಸಾಲಿನ ರಾಜ್ಯ ಬಜೆಟ್‌ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: FASTag New Rules- ಇಂದಿನಿಂದ FASTag ಬಳಕೆಗೆ ಹೊಸ ನಿಯಮ ಜಾರಿ!

CM Siddaramaiah

ಇದನ್ನೂ ಓದಿ: Sprinkler pipes Subsidy- ಕೃಷಿ ಇಲಾಖೆಯಿಂದ ಸಬ್ಸಿಡಿಯಲ್ಲಿ ಸ್ಪಿಂಕ್ಲರ್ ಸೆಟ್ ಪಡೆಯಲು ಅರ್ಜಿ ಆಹ್ವಾನ!

CM Of Karnataka-ಅತೀ ಹೆಚ್ಚು ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆ : ಸಿದ್ದರಾಮಯ್ಯ

ಹೌದು, ಇದು ಸಿದ್ದರಾಮಯ್ಯನವರ 16ನೇ ಬಜೆಟ್ ಮಂಡಣೆಯಾಗಿದ್ದು, ಹೆಚ್ಚು ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆ ಇವರದ್ದಾಗಿದೆ.

Karnataka Budget Details-ರೈತರ ಕುಂದು ಕೊರತೆ ಆಲಿಸಿದ ಸಿದ್ದರಾಮಯ್ಯ :

14 ದಿನಗಳ ನಂತರ ವಿಧಾನಸೌಧಕ್ಕೆ ಆಗಮಿಸಿದ ಸಿದ್ದರಾಮಯ್ಯನವರು ವಿವಿಧ ರೈತ ಸಂಘದ ಮುಖಂಡರ ಜೊತೆಗೆ ಈ ಸಾಲಿನ ಬಜೆಟ್ ನ ಪೂರ್ವಭಾವಿ ಸಭೆ ನಡೆಸಿ ರೈತರ ಕುಂದು ಕೊರತೆಗಳನ್ನು ಹಾಗೂ ಬೇಡಿಕೆಗಳನ್ನು ಆಲಿಸಿದ್ದು, ರೈತರ ಸಮುದಾಯಕ್ಕೆ ಏನು ಕೊಡುಗೆ ನೀಡಲಿದ್ದಾರೆ ಎಂದು ಕಾಯ್ದು ನೋಡಬೇಕಾಗಿದೆ.

ಇದನ್ನೂ ಓದಿ: Birth Certificate-ಹೈಕೋರ್ಟ್ ನಿಂದ ಜನನ ಪ್ರಮಾಣ ಪತ್ರದ ಕುರಿತು ಮಹತ್ವದ ತೀರ್ಪು!

Karnataka Budget Total Amount-ಈ ವರ್ಷದ ಕರ್ನಾಟಕ ಬಜೆಟ್ ನ ಒಟ್ಟು ಮೊತ್ತವೇಷ್ಟು?

ರಾಜ್ಯದ ಈ ವರ್ಷದ ಒಟ್ಟು ಬಜೆಟ್ ನ ಗಾತ್ರವು 4 ಲಕ್ಷ ಕೋಟಿ ರೂಪಾಯಿ ದಾಟಬಹುದು ಎಂದು ಅಂದಾಜಿಸಲಾಗಿದೆ. ಈ ವರ್ಷದ ಬಜೆಟ್ ನೇ ಮೇಲೆ ಜನರಿಗೆ ಹೆಚ್ಚು ನಿರೀಕ್ಷೆಗಳಿಲ್ಲ ಏಕೆಂದರೆ ಈಗಾಗಲೇ 5 ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿರುವುದರಿಂದ ಈ ಯೋಜನೆಗಳಿಗೆ ಅನುದಾನವನ್ನು ಹಂಚಿಕೆ ಮಾಡುವ ಹೆಚ್ಚು ನಿರೀಕ್ಷೆ ಇದೆ. ಅದೇ ರೀತಿ ವಿವಿಧ ಸೆಕ್ಟರ್ ಗಳ ಆದಾಯ ಸಂಗ್ರಹಣೆಗೆ ಹೆಚ್ಚು ಒತ್ತು ನೀಡುವ ನಿರೀಕ್ಷೆ ಇದೆ.

- Advertisment -
LATEST ARTICLES

Related Articles

- Advertisment -

Most Popular

- Advertisment -