ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಪೂರ್ಣ ಮುಂಗಾರು ಮಳೆಯು(Male Munsuchane) ಉತ್ತಮವಾಗಿ ಅಗುತ್ತಿದ್ದು ಈ ಲೇಖನದಲ್ಲಿ ರಾಜ್ಯದ ಮಳೆ ಪ್ರಮಾಣ ಮತ್ತು ಮಳೆ ಮುನ್ಸೂಚನೆ ವಿವರವನ್ನು ಸಂಕ್ಷೀತವಾಗಿ ವಿವರಿಸಲಾಗಿದೆ.
ಕರ್ನಾಟಕ ಮಳೆ ಪ್ರಮಾಣ ನಕ್ಷೆಯ(Karnataka Weather Update) ಮಾಹಿತಿಯ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ತಿಗಡೊಳ್ಳಿ ವ್ಯಾಪ್ತಿಯಲ್ಲಿ ಅತ್ಯಧಿಕ 48.5 ಮಿಲಿ ಮೀಟರ್ ಮಳೆ ದಾಖಲಾಗಿರುತ್ತದೆ. ಉಳಿದಂತೆ ಬೆಳಗಾವಿ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಅಲ್ಲಲ್ಲಿ ಮಳೆಯಾಗಿದ್ದು, ದಕ್ಷಿಣಕನ್ನಡ, ಉತ್ತರಕನ್ನಡ, ಬೀದರ್, ಉಡುಪಿ, ಧಾರವಾಡ, ಕಲಬುರಗಿ, ಬಾಗಲಕೋಟೆ ಜಿಲ್ಲೆಯ ಅಲ್ಲಲ್ಲಿ ಮಳೆ ದಾಖಲಾಗಿರುತ್ತದೆ.
ಇದನ್ನೂ ಓದಿ: Cyber Crime Portal-ಮೊಬೈಲ್ ಬಳಕೆದಾರರು ತಪ್ಪದೇ ಈ ಮಾಹಿತಿ ತಿಳಿಯಿರಿ!
Karnataka Weather-ಏಪ್ರಿಲ್ 27ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ:
ಕರ್ನಾಟಕದಲ್ಲಿ ಏಪ್ರಿಲ್ 24, 2025ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯು ಕರಾವಳಿ, ಮಲೆನಾಡು ಮತ್ತು ಒಳನಾಡು ಭಾಗಗಳಲ್ಲಿ ವಿಭಿನ್ನ ವಾತಾವರಣವನ್ನು ಸೂಚಿಸುತ್ತದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (KSNDMC) ಮತ್ತು ಭಾರತೀಯ ಹವಾಮಾನ ಇಲಾಖೆ (IMD) ಮಾಹಿತಿಯ ಆಧಾರದ ಮೇಲೆ,
ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ, ಬಿಸಿಲು ಮತ್ತು ಮೋಡದ ವಾತಾವರಣದ ಮಿಶ್ರ ಚಿತ್ರಣವನ್ನು ನಿರೀಕ್ಷಿಸಲಾಗಿದೆ. ಏಪ್ರಿಲ್ 27ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಜ್ಞರು ತಿಳಿಸಿದ್ದಾರೆ.
ಇದನ್ನೂ ಓದಿ: Male Nakshatragalu-2025: ಈ ವರ್ಷದ ಮಳೆ ನಕ್ಷತ್ರಗಳು! ಇಲ್ಲಿದೆ ಸಂಪೂರ್ಣ ಮಾಹಿತಿ!
Coastal Water Update-ಕರಾವಳಿ ಭಾಗದಲ್ಲಿ:
ಕಾಸರಗೋಡು ಸೇರಿದಂತೆ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬೆಳಿಗ್ಗೆ ಬಿಸಿಲಿನ ವಾತಾವರಣದೊಂದಿಗೆ ಅಲ್ಲಲ್ಲಿ ಮೋಡ ಕವಿದ ವಾತಾವರಣ ನಿರೀಕ್ಷಿಸಲಾಗಿದೆ. ಸಂಜೆಯ ವೇಳೆಗೆ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಯಿದೆ. ಗಾಳಿಯ ಒತ್ತಡ ಹೆಚ್ಚಾದರೆ ಕಾಸರಗೋಡು ತನಕವೂ ಮಳೆ ವ್ಯಾಪಿಸಬಹುದು. ಉತ್ತರ ಒಳನಾಡಿನಿಂದ ಬೀಸುವ ಗಾಳಿಯ ಪ್ರಭಾವದಿಂದ ಉತ್ತರ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ ಸಹ ಮಳೆಯ ಸಾಧ್ಯತೆ ಕಂಡುಬಂದಿದೆ.
ಪ್ರಸ್ತುತ, ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಆದರೆ, ಏಪ್ರಿಲ್ 27ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸೂಚನೆಗಳಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ರೈತರು ಮತ್ತು ಸಾರ್ವಜನಿಕರು ಈ ಬದಲಾವಣೆಗೆ ಸಿದ್ಧರಾಗಿರುವಂತೆ ಸಲಹೆ ನೀಡಲಾಗಿದೆ.
ಇದನ್ನೂ ಓದಿ: Diploma Agriculture-ಒಂದು ವರ್ಷದ ಕೃಷಿ ಡಿಪ್ಲೊಮಾ ಮತ್ತು ಇತರೆ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ!

Malenadu Weather-ಮಲೆನಾಡು ಜಿಲ್ಲೆಗಳ ಮುನ್ಸೂಚನೆ:
ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಕರಾವಳಿಗೆ ಸಮೀಪವಿರುವ ಪ್ರದೇಶಗಳಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆಯಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸಂಜೆ ಮತ್ತು ರಾತ್ರಿ ವೇಳೆಯಲ್ಲಿ ಗುಡುಗು ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಉಳಿದ ಭಾಗಗಳಲ್ಲಿ ಮೋಡ ಕವಿದ ವಾತಾವರಣ ನಿರೀಕ್ಷಿಸಲಾಗಿದೆ.
ಪ್ರಸ್ತುತ ಮಳೆಯ ಪ್ರಮಾಣ ಸಾಮಾನ್ಯ ಮಟ್ಟದಲ್ಲಿದ್ದು, ಏಪ್ರಿಲ್ 27ರ ನಂತರ ಮಳೆಯ ತೀವ್ರತೆ ಹೆಚ್ಚಾಗುವ ಲಕ್ಷಣಗಳಿವೆ. ಈ ಅವಧಿಯವರೆಗೆ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಕೃಷಿಕರು ಮತ್ತು ಸ್ಥಳೀಯ ಜನರಿಗೆ ಈ ಮಾಹಿತಿಯನ್ನು ಗಮನದಲ್ಲಿಟ್ಟುಕೊಳ್ಳಲು ಸೂಚಿಸಲಾಗಿದೆ.
ಇದನ್ನೂ ಓದಿ: Anganavadi Recruitment-558 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ!
ಉತ್ತರ ಒಳನಾಡು:
ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿಯ ವೇಳೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆಯಿದೆ. ಗಾಳಿಯ ಒತ್ತಡದ ಪಾತ್ರ ಇಲ್ಲಿ ಮಹತ್ವದ್ದಾಗಿದೆ. ಗಾಳಿಯ ಒತ್ತಡ ಹೆಚ್ಚಾದರೆ ಕೊಪ್ಪಳ ಮತ್ತು ಹಾವೇರಿ ಜಿಲ್ಲೆಗಳಲ್ಲಿಯೂ ಮಳೆಯ ಸಾಧ್ಯತೆ ಕಂಡುಬಂದಿದೆ. ಪ್ರಸ್ತುತ, ಉತ್ತರ ಒಳನಾಡಿನಲ್ಲಿ ಅನಿರೀಕ್ಷಿತ ಮಳೆಯಾಗುತ್ತಿದ್ದು, ರೈತರು ಮತ್ತು ಸಾರ್ವಜನಿಕರು ಈ ಬದಲಾವಣೆಗೆ ಸಿದ್ಧರಾಗಿರುವಂತೆ ಸಲಹೆ ನೀಡಲಾಗಿದೆ.
ದಕ್ಷಿಣ ಒಳನಾಡು:
ದಕ್ಷಿಣ ಒಳನಾಡಿನ ಬೆಂಗಳೂರು, ಮೈಸೂರು, ಚಾಮರಾಜನಗರ, ಹಾಸನ ಮತ್ತು ಇತರ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣದೊಂದಿಗೆ ಅಲ್ಲಲ್ಲಿ ಮೋಡ ಕವಿದಿರುವ ಸಾಧ್ಯತೆಯಿದೆ. ಪ್ರಸ್ತುತ, ಈ ಭಾಗದಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಿದೆ. ಆದರೆ, ಏಪ್ರಿಲ್ 27ರಿಂದ ಈ ಭಾಗದಲ್ಲಿಯೂ ಮಳೆ ಆರಂಭವಾಗುವ ಲಕ್ಷಣಗಳಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಇದನ್ನೂ ಓದಿ: Vidyasiri Yojane-2025: ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ! ವಿದ್ಯಾಸಿರಿ ಯೋಜನೆಯ ವಿದ್ಯಾರ್ಥಿವೇತನ ಏರಿಕೆ!
Karnataka Weather-ತಾಪಮಾನ ಮತ್ತು ಗಾಳಿಯ ವೇಗ:
ಕರಾವಳಿ ಭಾಗದಲ್ಲಿ ತಾಪಮಾನ 28°C ರಿಂದ 34°C ವರೆಗೆ ಇರಲಿದ್ದು, ಗಾಳಿಯ ವೇಗ ಗಂಟೆಗೆ 30-50 ಕಿ.ಮೀ. ತಲುಪುವ ಸಾಧ್ಯತೆಯಿದೆ. ಮಲೆನಾಡು ಭಾಗದಲ್ಲಿ ತಾಪಮಾನ 24°C ರಿಂದ 32°C ವರೆಗೆ ಇರಲಿದೆ. ಒಳನಾಡಿನಲ್ಲಿ, ವಿಶೇಷವಾಗಿ ದಕ್ಷಿಣ ಒಳನಾಡಿನಲ್ಲಿ, ತಾಪಮಾನ 36°C ವರೆಗೆ ಇರಬಹುದು. ಉತ್ತರ ಒಳನಾಡಿನಲ್ಲಿ ಗಾಳಿಯ ಒತ್ತಡದಿಂದಾಗಿ ಮಳೆಯ ಸಾಧ್ಯತೆ ಹೆಚ್ಚಿದೆ.