- Advertisment -
HomeNew postsKrishi Mela Bengalore- ನಾಳೆಯಿಂದ ಬೆಂಗಳೂರು ಕೃಷಿ ಮೇಳ! ಈ ಬಾರಿಯ ಮೇಳದ ವಿಶೇಷತೆಗಳೇನು?

Krishi Mela Bengalore- ನಾಳೆಯಿಂದ ಬೆಂಗಳೂರು ಕೃಷಿ ಮೇಳ! ಈ ಬಾರಿಯ ಮೇಳದ ವಿಶೇಷತೆಗಳೇನು?

ನಾಳೆಯಿಂದ ಬೆಂಗಳೂರು ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಒಟ್ಟು ನಾಲ್ಕು(4) ದಿನ ಕೃಷಿ ಮೇಳವನ್ನು(Krishi Mela Bengalore) ಆಯೋಜನೆ ಮಾಡಲಾಗಿದ್ದು, ಈ ಬಾರಿಯ ಮೇಳದಲ್ಲಿ ರೈತರಿಗೆ ಯಾವೆಲ್ಲ ನೂತನ ತಾಂತ್ರಿಕತೆಗಳನ್ನು ಪರಿಚಯಿಸಲಾಗುತ್ತಿದೆ ಎನ್ನುವ ಮಾಹಿತಿ ಇಲ್ಲಿ ತಿಳಿಸಲಾಗಿದೆ.

ಈ ಬಾರಿಯ ಮೇಳವನ್ನು ಹವಾಮಾನ ಚತುರ ಡಿಜಿಟಲ್ ಕೃಷಿ” ಎಂಬ ಘೋಷವಾಕ್ಯದೊಂದಿಗೆ ಆಯೋಜನೆ ಮಾಡಲು ಕೃಷಿ ವಿಶ್ವವಿದ್ಯಾನಿಲಯದಿಂದ ಸಿದ್ದತೆಯನ್ನು ನಡೆಸಿದ್ದು ನವೆಂಬರ್ 14 ರಿಂದ 17 ರವರೆಗೆ ನಾಲ್ಕು ದಿನಗಳ ಕಾಲ(, krishi mela bangalore dates) ಈ ಮೇಳ ನಡೆಯಲಿದೆ ಎಂದು ಕೃಷಿ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಎಸ್.ವಿ.ಸುರೇಶ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Rice MSP- ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ! ಬೆಲೆ ಎಷ್ಟು ನಿಗದಿ ಮಾಡಲಾಗಿದೆ?

ನಿನ್ನೆ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಆಡಳಿತ ಮಂಡಳಿ ಕೊಠಡಿಯ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ಕೃಷಿ ವಿಶ್ವವಿದ್ಯಾಲಯ, ಕರ್ನಾಟಕ ಸರ್ಕಾರದ ಕೃಷಿ, ತೋಟಗಾರಿಕೆ, ರೇಷ್ಮೆ, ಅರಣ್ಯ, ಪಶುಸಂಗೋಪನೆ, ಮೀನುಗಾರಿಕೆ, ಕೃಷಿ ಮಾರುಕಟ್ಟೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೃಷಿಕ ಸಮಾಜ ಮತ್ತು ಕರ್ನಾಟಕ ಹಾಲು ಮಹಾಮಂಡಳಿಗಳ ಸಹಯೋಗದಲ್ಲಿ ಕೃಷಿ ಮೇಳ -2024 ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ ಎಂದು ಮಾಹಿತಿ ತಿಳಿಸಿದ್ದಾರೆ.

Bengalore Krishimela-ಹೊಸ ತಳಿಗಳ ಬಿಡುಗಡೆ:

ಕೃಷಿ ಮೇಳದಲ್ಲಿ ಕೃಷಿ ವಿಶ್ವವಿದ್ಯಾನಿಲಯ ಅಭಿವೃದ್ಧಿ ಪಡಿಸಿರುವ ಮುಸುಕಿನ ಜೋಳ ಸಂಕರಣ ತಳಿ, ಅಲಸಂದೆ ತಳಿ, ಸೂರ್ಯಕಾಂತಿ ಸಂಕರಣ ತಳಿ, ಬಾಜ್ರ ನೇಪಿಯರ್ ಸಂಕರಣ ತಳಿಗಳನ್ನು ಬಿಡುಗಡೆ ಮಾಡಲಾಗುವುದು. ಮಲ್ಟಿಸ್ಪೆಕ್ಟ್ರಲ್ ಡ್ರೋನ್, ಕೃಷಿ ಡ್ರೋನ್, ರೊಬೋಟ್ ಕೃಷಿ ಯಂತ್ರ, ಹಣ್ಣಿನ ವರ್ಗೀಕರಣ ಯಂತ್ರ, ಸ್ವಯಂ ಚಾಲಿತ ರಸಗೊಬ್ಬರ ಹರಡುವ ಯಂತ್ರ, ಆಳ ನಿಯಂತ್ರಕ ರೋಟವೇಟರ್, ಸ್ವಯಂಚಾಲಿತ ಬೂಮ್ ಸ್ಟ್ರೇಯರ್, ಸೌರಶಕ್ತಿ ಚಾಲಿತ ಬರ್ಡ್ ಸ್ಕೇರರ್ ತಾಂತ್ರಿಕತೆಯ ಪ್ರದರ್ಶನವಿರುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ: Land owner details- ಒಂದೆರಡು ಕ್ಲಿಕ್ ನಲ್ಲಿ ಜಮೀನಿನ ಮಾಲೀಕರ ವಿವರ ತಿಳಿಯಬಹುದು!

Krishi Mela

GKVK Krishi mela-2024: ಮೇಳದ ವಿಶೇಷತೆಗಳೇನು?

1) ಸಮಗ್ರ ಬೇಸಾಯ ಪದ್ದತಿ ಪ್ರಾತ್ಯಕ್ಷಿಕೆ,

2) ಖುಷ್ಕಿ ಬೇಸಾಯಕ್ಕೆ ಸೂಕ್ತವಾದ ಬೆಳೆ ಪದ್ಧತಿಗಳು,

3) ನೂತನವಾಗಿ ಬಿಡುಗಡೆಯಾದ ವಿವಿಧ ಬೆಳೆ ತಳಿಗಳ ಪ್ರಾತ್ಯಕ್ಷಿಕೆ, ರೇಷ್ಮೆ ಕೃಷಿ,

4) ತೋಟಗಾರಿಕೆ ಬೆಳೆಗಳ ಮತ್ತು ನಿಖರ ಕೃಷಿ ಪ್ರಾತ್ಯಕ್ಷಿಕೆ,

5) ಔಷಧೀಯ ಮತ್ತು ಸುಗಂಧ ದ್ರವ್ಯ ಸಸ್ಯಗಳು,

6) ಸಿರಿಧಾನ್ಯಗಳು ಹಾಗೂ ಮಹತ್ವ,

7) ಜಲಾನಯನ ನಿರ್ವಹಣೆ,

8) ಸಾವಯವ ಕೃಷಿ ಪದ್ಧತಿಗಳು,

9) ಮಣ್ಣು ರಹಿತ ಕೃಷಿ,

10) ಕೃಷಿಯಲ್ಲಿ ನೂತನ ಮಾಹಿತಿ ತಂತ್ರಜ್ಞಾನ,

ಇದನ್ನೂ ಓದಿ: Raagi Msp price-ರೈತರಿಗೆ ಸಿಹಿ ಸುದ್ದಿ ಕ್ವಿಂಟಲ್‌ಗೆ ₹4,290 ರೂ ರಂತೆ ರಾಗಿ ಖರೀದಿ!

11) ಹನಿ ಮತ್ತು ತುಂತುರು ನೀರಾವರಿ ಪದ್ಧತಿಗಳು,

12) ಮಳೆ ಹಾಗೂ ಮೇಲ್ಛಾವಣಿ ನೀರಿನ ಕೊಯ್ಲು,

13) ಸುಧಾರಿತ ಕೃಷಿ ಯಂತ್ರೋಪಕರಣಗಳ ಪ್ರದರ್ಶನ,

14) ಕೊಯ್ಲಿನೋತ್ತರ ತಾಂತ್ರಿಕತೆ, ಕೃಷಿ ಉತ್ಪನ್ನ

15) ಸಂಸ್ಕರಣೆ ಮತ್ತು ಮೌಲ್ಯ ವರ್ಧನೆ, ಬಿತ್ತನೆ ಬೀಜಗಳ ಪರೀಕ್ಷೆ ಹಾಗೂ ಶೇಖರಣೆ,

16) ಪಶುಸಂಗೋಪನೆ ಹೈನುಗಾರಿಕೆ, ಕುರಿ, ಕೋಳಿ ಹಾಗೂ ಮೀನು ಸಾಕಾಣಿ, ಜೈವಿಕ ಹಾಗೂ ನವೀಕರಿಸಲ್ಪಡುವ ಇಂಧನ,

17) ಕೃಷಿ ಆಟೋಮೇಷನ್ ತಂತ್ರಜ್ಞಾನಗಳು,

18) ಮಾರುಕಟ್ಟೆ ನೈಪುಣ್ಯತೆ ಮಾಹಿತಿ, ಕೃಷಿ ಪರಿಕರಗಳ ಹಾಗೂ ಪ್ರಕಟಣೆಗಳ ಮಾರಾಟ ವ್ಯವಸ್ಥೆ ಕೃಷಿ ಮೇಳದ ಇತರೆ ಆಕರ್ಷಣೆಗಳಾಗಿವೆ ಎಂದು ತಿಳಿಸಿದರು.

ಇದನ್ನೂ ಓದಿ: Supreme Court Order- ಸುಪ್ರೀಂಕೋರ್ಟ್ ನಿಂದ ಕೃಷಿ ಭೂಮಿ ಮಾರಾಟದ ಬಗ್ಗೆ ಮಹತ್ವದ ತೀರ್ಪು ಪ್ರಕಟ!

GKVK

Agriculture exhibition in bangalore-ಕೃಷಿ ವಸ್ತು ಪ್ರದರ್ಶನ:

ಸುಮಾರು 700 ಮಳಿಗೆಗಳಲ್ಲಿ ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರಿನ ಮಳಿಗೆಗಳು, ಕೃಷಿ ಸಂಬಂಧಿಸಿದ ವಿಶ್ವವಿದ್ಯಾನಿಲಯಗಳು / ಸಂಸ್ಥೆಗಳು, ಅಭಿವೃದ್ಧಿ ಇಲಾಖೆಗಳ ಮಳಿಗೆಗಳು, ಕೃಷಿ ಪರಿಕರಗಳ ಮಳಿಗೆಗಳು, ಕೃಷಿ ಇಂಜಿನಿಯರಿಂಗ್ ಮತ್ತು ಪಶುಸಂಗೋಪನೆ ಮಳಿಗೆಗಳಲ್ಲಿ ನೂತನ ತಂತ್ರಜ್ಞಾನಗಳನ್ನು ಪ್ರದರ್ಶಿಸಲಾಗುವುದು.

ರೈತರ ಕೃಷಿ ಸಮಸ್ಯೆಗಳಿಗೆ ತಜ್ಞರಿಂದ ವೈಜ್ಞಾನಿಕ ಸಲಹೆ, ತಜ್ಞ ವಿಜ್ಞಾನಿಗಳ ತಂಡದಿಂದ ಕೃಷಿ ಸಂಬಂಧಿತ ಪ್ರಶ್ನೆಗಳಿಗೆ ನೇರ ಪರಿಹಾರ, ಪ್ರಾತ್ಯಕ್ಷಿಕಾ ತಾಕುಗಳು, ಮಳಿಗೆಗಳು ಮತ್ತು ಕೃಷಿ ಮೇಳದ ಕಾರ್ಯಕ್ರಮವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ: PAN Card News: ನಿಮ್ಮ ಬಳಿ ಪಾನ್ ಕಾರ್ಡ್ ಇದ್ಯಾ? ಆಗಿದ್ದರೆ ತಪ್ಪದೆ ಈ ಮಾಹಿತಿ ತಿಳಿಯಿರಿ!

ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಮಹಾದ್ವಾರದಿಂದ ಕೃಷಿ ಮೇಳದ ಸಭಾಂಗಣಕ್ಕೆ ತಲುಪಲು ಸಾರ್ವಜನಿಕರಿಗೆ ಉಚಿತ ಸಾರಿಗೆ ವ್ಯವಸ್ಥೆ, ಪ್ರತ್ಯೇಕ ವಾಹನ ನಿಲುಗಡೆ ವ್ಯವಸ್ಥೆ, ಉಚಿತ ಪ್ರವೇಶ, ರಿಯಾಯಿತಿ ದರದಲ್ಲಿ ಮುದ್ದೆ ಊಟದ ವ್ಯವಸ್ಥೆ ಮಾಡಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಸಂಶೋಧನಾ ನಿರ್ದೇಶಕ ಡಾ.ಹೆಚ್.ಎಸ್. ಶಿವರಾಮು, ವಿಸ್ತರಣಾ ನಿರ್ದೇಶಕ ಡಾ.ವೈ.ಎನ್.ಶಿವಲಿಂಗಯ್ಯ ಹಾಗೂ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಇನ್ನು ಹೆಚ್ಚಿನ ಮಾಹಿತಿ ಪಡೆಯಲು ವೆಬ್ಸೈಟ್: GKVK Krishi mela-2024

- Advertisment -
LATEST ARTICLES

Related Articles

- Advertisment -

Most Popular

- Advertisment -