Labour card application- ಕಾರ್ಮಿಕ ಮಂಡಳಿಯಿಂದ ಸ್ಮಾರ್ಟ್ ಕಾರ್ಡ! ಈ ಕಾರ್ಡ ಹೊಂದಿರುವವರಿಗೆ 5 ಲಕ್ಷ ವಿಮೆ ಸೌಲಭ್ಯ!

October 15, 2024 | Siddesh
Labour card application- ಕಾರ್ಮಿಕ ಮಂಡಳಿಯಿಂದ ಸ್ಮಾರ್ಟ್ ಕಾರ್ಡ! ಈ ಕಾರ್ಡ ಹೊಂದಿರುವವರಿಗೆ 5 ಲಕ್ಷ ವಿಮೆ ಸೌಲಭ್ಯ!
Share Now:

ಅಸಂಘಟಿತ ವರ್ಗದ ಕಾರ್ಮಿಕರಲ್ಲಿ ಖಾಸಗಿ ವಾಣಿಜ್ಯ ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರು ಬಹು ಸಂಖ್ಯೆಯಲ್ಲಿದ್ದು, ಅವರಿಗೆ ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ನೂತನ(Labour card) ಯೋಜನೆಯನ್ನು ಜಾರಿಗೆ ತರಲಾಗಿದೆ.

ಕರ್ನಾಟಕ ರಾಜ್ಯ ಸರ್ಕಾರವು, "ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಕ ಭದ್ರತಾ ಮತ್ತು ಕಲ್ಯಾಣ ಯೋಜನೆ"ಯನ್ನು(Labour card application) ರೂಪಿಸಿದ್ದು, ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿಯ ಮೂಲಕ ಜಾರಿಗೊಳಿಸಲಾಗುತ್ತಿದೆ.

ಇದನ್ನೂ ಓದಿ: Junior Power Man: KEB ಯಿಂದ SSLC ಪಾಸಾದವರಿಗೆ ಭರ್ಜರಿ ಉದ್ಯೋಗವಾಕಾಶ! 2,975 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ!

"ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಕ ಭದ್ರತಾ ಮತ್ತು ಕಲ್ಯಾಣ ಯೋಜನೆ"ಯಡಿ ವಿವಿಧ ಸೌಲಭ್ಯವನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಎಲ್ಲಿ ಅರ್ಜಿ ಸಲ್ಲಿಸಬೇಕು? ಈ ಯೋಜನೆಯಡಿ ಪಡೆಯಬಹುದಾದ ಪ್ರಯೋಜನಗಳೇನು? ಇತರೆ ಸಂಪೂರ್ಣ ವಿವರವನ್ನು ಈ ಲೇಖನದಲ್ಲಿ ತಿಳಿಸಲಾಗಿದೆ.

Labour card online application- ನೋಂದಣಿ ಮತ್ತು ಸ್ಕಾರ್ಟ್ ಕಾರ್ಡ್ ವಿತರಣೆ:

ಈ ಯೋಜನೆಯಡಿ ಚಾಲಕ, ನಿರ್ವಾಹಕ, ಕ್ಲೀನರ್, ನಿಲ್ದಾಣ ಸಿಬ್ಬಂದಿ, ಮಾರ್ಗ ಪರಿಶೀಲನಾ ಸಿಬ್ಬಂದಿ, ಬುಕಿಂಗ್ ಗುಮಾಸ್ತ, ನಗದು ಗುಮಾಸ್ತ, ಡಿಪೋ ಗುಮಾಸ್ತ, ಸಮಯ ಪಾಲಕ, ಕಾವಲುಗಾರ ಅಥವಾ ಪರಿಚಾರಕ, ಮೋಟಾರು ಗ್ಯಾರೇಜುಗಳಲ್ಲಿ ಟೈರ್ ಜೋಡಿಸುವ ಮತ್ತು ಬೇರ್ಪಡಿಸುವ ಘಟಕಗಳಲ್ಲಿ, ಪಂಚರ್ ದುರಸ್ತಿ ಮಳಿಗೆಗಳಲ್ಲಿ ವೀಲ್ ಬ್ಯಾಲೆನ್ಸಿಂಗ್ ಮತ್ತು ಅಲೈಸ್ಟೆಂಟ್ ಘಟಕಗಳಲ್ಲಿ,

ನೀರಿನಿಂದ ಸ್ವಚ್ಛಗೊಳಿಸುವ ಘಟಕಗಳಲ್ಲಿ ಕೆಲಸ ಮಾಡುವವರು ಮೋಟಾರು ವಾಹನ ಹೊರಕವಚ ನಿರ್ಮಾಣ ಘಟಕಗಳಲ್ಲಿ, ಟಿಂಕರಿಂಗ್, ಎಲೆಕ್ಟಿಕಲ್ ಹಾಗೂ ಎಸಿ ಘಟಕ ಇತ್ಯಾದಿ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಸುಮಾರು 40 ಲಕ್ಷ ಕಾರ್ಮಿಕರು ಒಳಗೊಂಡಿದ್ದು, ಯೋಜನೆಯಡಿ ನೋಂದಾಯಿಸಿ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತಿದೆ. ಸದರಿ ಕಾರ್ಮಿಕರು ಮಂಡಳಿಯ ksuwssb.karnataka.gov.in ಪೋರ್ಟಲ್ ನಲ್ಲಿಅಗತ್ಯ ದಾಖಲೆಗಳೊಂದಿಗೆ ನೋಂದಣಿ ಮಾಡಿಕೊಳ್ಳವುದು ಎಂದು ಮಂಡಳಿಯಿಂದ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ.

ಇದನ್ನೂ ಓದಿ: Bigg boss kannada-ಬಿಗ್ ಬಾಸ್ ಗೆ ವಿದಾಯ ಹೇಳಿದ ಕಿಚ್ಚ ಸುದೀಪ್!

karmika card benefits

Who can apply for labour department smart card- ಸೌಲಭ್ಯ ಪಡೆಯಲು ಅರ್ಹತೆಗಳು:

  • ಈ ಯೋಜನೆಯು ಕರ್ನಾಟಕ ರಾಜ್ಯಕ್ಕೆ ಮಾತ್ರ ಅನ್ವಯಿಸುತ್ತದೆ.
  • ವಯೋಮಿತಿ 18 ರಿಂದ 60 ವರ್ಷ .
  • ಆದಾಯ ತೆರಿಗೆ ಪಾವತಿದಾರರಾಗಿರಬಾರದು.
  • ಇ.ಎಸ್.ಐ ಮತ್ತು ಇ.ಪಿ.ಎಫ್ ಸೌಲಭ್ಯ ಹೊಂದಿರಬಾರದು.
  • ಯೋಜನೆಯ ಸೌಲಭ್ಯಗಳು ಕರ್ತವ್ಯದಲ್ಲಿರುವಾಗ ಹಾಗೂ ಇಲ್ಲದಿರುವಾಗಲೂ ಸಹ ಲಭ್ಯವಾಗುತ್ತದೆ.
  • ಚಾಲಕರು, ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯಿಂದ ವಾಣಿಜ್ಯ ವಾಹನ ಚಲಾಯಿಸಲು ಚಾಲನಾ ಪರವಾನಗಿಯನ್ನು ಹೊಂದಿರುವುದು ಕಡ್ಡಾಯ.

Labour card Application fee-ಶುಲ್ಕ:

ನೋಂದಣಿ ಶುಲ್ಕ, (3 ವರ್ಷಗಳ ಅವಧಿ): 50/-

ನವೀಕರಣ ಶುಲ್ಕ (ಮುಂದಿನ 3 ವರ್ಷಗಳ ವರೆಗೆ): 50/-

ಇದನ್ನೂ ಓದಿ: Monthly pension scheme- ರೈತರಿಗೆ ಈ ಯೋಜನೆಯಡಿ ಸಿಗುತ್ತೆ ತಿಂಗಳಿಗೆ ರೂ 3,000 ಪಿಂಚಣಿ!

Labour card benefits-ಯೋಜನೆಯಡಿ ದೊರಕುವ ಸೌಲಭ್ಯಗಳು:

(1) Accident insurance-ಅಪಘಾತ ಪರಿಹಾರ ಸೌಲಭ್ಯ:

ಅಪಘಾತದಿಂದ ಫಲಾನುಭವಿಗಳು ನಿಧನರಾದಲ್ಲಿ, ನಾಮನಿರ್ದೇಶಿತರಿಗೆ ರೂ 5.0 ಲಕ್ಷ ಪರಿಹಾರ.

ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದಾಗ, ಫಲಾನುಭವಿಗೆ ದುರ್ಬಲತೆಯ ಪ್ರಮಾಣಕ್ಕನುಗುಣವಾಗಿ ರೂ 2.0 ಲಕ್ಷದ ದರೆಗೆ ಪರಿಹಾರ.

A)ಅಪಘಾತದಿಂದ ತಾತ್ಕಾಲಿಕ ದುರ್ಬಲತೆ ಹೊಂದಿದಾಗ:-

ಅಪಘಾತಕೊಳ್ಳಗಾಗಿ ಆಸ್ಪತ್ರೆಯಲ್ಲಿ 15 ದಿನಗಳಿಗಿಂತ ಕಡಿಮೆ ಅವಧಿಗೆ ಒಳರೋಗಿಯಾಗಿ ಚಿಕಿತ್ಸೆ ಪಡೆದಲ್ಲಿ, ಗರಿಷ್ಠ ರೂ 50,000/- ರವರೆಗೆ ಅಥವಾ ನಿಖರ ಆಸ್ಪತ್ರೆ ವೆಚ್ಚ, ಇವುಗಳಲ್ಲಿ ಯಾವುದು ಕಡಿಮೆಯೋ ಅದು ಹಾಗೂ 15 ದಿನಗಳಿಗಿಂತ ಹೆಚ್ಚು ಅವಧಿಗೆ ಒಳರೋಗಿಯಾಗಿ ಚಿಕಿತ್ಸೆ ಪಡೆದಲ್ಲಿ, ಗರಿಷ್ಠ ರೂ 1.0 ಲಕ್ಷದ ವರೆಗೆ ಅಥವಾ ನಿಖರ ಆಸ್ಪತ್ರೆ ವೆಚ್ಚ. ಇವುಗಳಲ್ಲಿ ಯಾವುದು ಕಡಿಮೆಯೊ ಅದರ ಮರುಪಾವತಿ.

ಇದನ್ನೂ ಓದಿ: Home loan- ಮನೆ ಕಟ್ಟಲು ಸಾಲ ಪಡೆಯಬೇಕೆ? ಇಲ್ಲಿದೆ ಉಪಯುಕ್ತ ಮಾಹಿತಿ!

(2) ನೈಸರ್ಗಿಕ ಮರಣ ಪರಿಹಾರ ಹಾಗೂ ಅಂತ್ಯಸಂಸ್ಕಾರ ವೆಚ್ಚ:

ಸಹಜ ಮರಣ ಹೊಂದಿದ ಫಲಾನುಭವಿಗಳ ಅವಲಂಬಿತರಿಗೆ ಅಂತ್ಯ ಸಂಸ್ಕಾರದ ವೆಚ್ಚವೂ ಸೇರಿದಂತೆ ರೂ.25,000/-ಗಳ ಪರಿಹಾರ.

(3) Education scholarship-ಶೈಕ್ಷಣಿಕ ಧನಸಹಾಯ :

(A) ನೋಂದಾಯಿತ ಫಲಾನುಭವಿಯ ಗರಿಷ್ಠ ಇಬ್ಬರು ಮಕ್ಕಳಿಗೆ:-

12ನೇ ತರಗತಿ ಅಥವಾ ತತ್ಸಮಾನ ವಾರ್ಷಿಕ ತಲಾ- ರೂ 3,000/-
ಪದವಿ ಅಥವಾ ತತ್ಸಮಾನ ವಾರ್ಷಿಕ ತಲಾ- ರೂ 5,500/-
ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ಶಿಕ್ಷಣ- ವಾರ್ಷಿಕ ತಲಾ ರೂ 8,000/-
ಸ್ನಾತಕೋತ್ತರ ಪದವಿ - ವಾರ್ಷಿಕ ತಲಾ ರೂ.11,000/-

ಇದನ್ನೂ ಓದಿ: RTC Aadhar link- ಪಹಣಿಗೆ ಆಧಾರ್ ಲಿಂಕ್ ಸರಕಾರದಿಂದ ಮಹತ್ವದ ಮಾಹಿತಿ ಪ್ರಕಟ!

(B) ಅಪಘಾತದಿಂದ ನಿಧನರಾದ / ಸಂಪೂರ್ಣ ಶಾಶ್ವತ ದುರ್ಬಲತೆ ಹೊಂದಿದೆ

ಫಲಾನುಭವಿಯ ಗರಿಷ್ಠ ಇಬ್ಬರು ಮಕ್ಕಳಿಗೆ:-

  • 1ನೇ ತರಗತಿಯಿಂದ ಪದವಿ ಅಥವಾ ತತ್ಸಮಾನ ವಾರ್ಷಿಕ- ರೂ 10,000/-
  • ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ಶಿಕ್ಷಣ - ವಾರ್ಷಿಕ- ರೂ 20,000/-
  • ಸ್ನಾತಕೋತ್ತರ ಪದವಿ ವಾರ್ಷಿಕ- ರೂ 25,000/-

(4) ಹೆರಿಗೆ ಭತ್ಯೆ :

ಫಲಾನುಭವಿಯ ಮೊದಲ ಎರಡು ಹೆರಿಗೆಗಳಿಗೆ ಮಾತ್ರ ಸೀಮಿತಗೊಂಡಂತೆ ತಲಾ ರೂ 10,000/-ಗಳು,

ಇದನ್ನೂ ಓದಿ: BPL Card-ಪಡಿತರ ಚೀಟಿದಾರರೇ ಗಮನಿಸಿ ಈ ನಿಯಮ ಪಾಲಿಸದಿದ್ದರೆ ನಿಮ್ಮ ಕಾರ್ಡ ರದ್ದಾಗುತ್ತದೆ!

Insurance claim process- ಕ್ರೈಮ್ ಮಾಡುವ ವಿಧಾನ :-

ಅರ್ಜಿದಾರ / ಫಲಾನುಭವಿಯು ಅಪಘಾತ ಪರಿಹಾರಕ್ಕಾಗಿ ಅಪಘಾತ ಸಂಭವಿಸಿದ 1 ವರ್ಷದೊಳಗೆ ಹಾಗೂ ಸಹಜ ಮರಣ ಪ್ರಕರಣಗಳಲ್ಲಿ ಮರಣ ದಿನಾಂಕದಿಂದ 6 ತಿಂಗಳ ಅವಧಿಯೊಳಗೆ ಹಾಗೂ ಶೈಕ್ಷಣಿಕ ಧನಸಹಾಯಕ್ಕಾಗಿ ಮಂಡಳಿಯು ಘೋಷಿಸಿದ ಅವಧಿಯಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವುದು,

ನೋಂದಣಿ / ಕ್ಲೀಮ್ / ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ವಿಳಾಸಗಳು:

ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿ ಕಛೇರಿ, ಕಲ್ಯಾಣ ಸುರಕ್ಷಾ ಭವನ, ಡೈರಿ ವೃತ್ತ, ಬನ್ನೇರುಘಟ್ಟ ರಸ್ತೆ ಬೆಂಗಳೂರು-560 029.

ವೆಬ್‌ಸೈಟ್: https://ksuwssb.karnataka.gov.in/

ಕಾರ್ಮಿಕ ಇಲಾಖೆಯ ಉಚಿತ ಸಹಾಯವಾಣಿ ಸಂಖ್ಯೆ : 155214

ಹೆಚ್ಚಿನ ಮಾಹಿತಿಗಾಗಿ:

ಕಾರ್ಮಿಕ ಇಲಾಖೆಯ ಎಲ್ಲಾ ಉಪ ಕಾರ್ಮಿಕ ಆಯುಕ್ತರು, ಸಹಾಯಕ ಕಾರ್ಮಿಕ ಆಯುಕ್ತರು, ಜಿಲ್ಲಾ ಕಾರ್ಮಿಕ ಅಧಿಕಾರಿಗಳು, ಹಿರಿಯ ಕಾರ್ಮಿಕ ನಿರೀಕ್ಷಕರು, ಕಾರ್ಮಿಕ ನಿರೀಕ್ಷಕರ ಕಛೇರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: