ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ವಿದ್ಯಾರ್ಥಿವೇತನ(Labour department scholarship) ಪಡೆಯಲು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಿ ಪ್ರಕಟಣೆ ಹೊರಡಿಸಲಾಗಿದೆ.
ಕಾರ್ಮಿಕ ಇಲಾಖೆಯಡಿ ಬರುವ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ(Karmika mandali) 2023-24 ಮತ್ತು 2024-25ನೇ ಸಾಲಿನ ಶೈಕ್ಷಣಿಕ ಧನ ಸಹಾಯ ಪಡೆಯಲು ಅರ್ಹ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಅರ್ಥಿಕ ನೆರವನ್ನು ಪಡೆಯಲು SSP ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಇದನ್ನೂ ಓದಿ: Sheep farming loan-ಶೇ 50% ಸಬ್ಸಿಡಿ ಪಡೆದು ಕುರಿ ಸಾಕಾಣಿಕೆ ಆರಂಭಿಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ!
ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಪ್ರತಿ ವರ್ಷ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಅರ್ಥಿಕವಾಗಿ(Labour department scholarship ) ನೆರವಾಗಲು ಧನ ಸಹಾಯ ಒದಗಿಸಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತದೆ ಇದೇ ಮಾದರಿಯಲ್ಲಿ ಈ ವರ್ಷವು ಸಹ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ, ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.
Last date for Labour department scholarship- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಡಿಸೆಂಬರ್ 2024
ಅರ್ಜಿ ಸಲ್ಲಿಸುವವರಿಗೆ ಪ್ರಮುಖ ಮಾಹಿತಿ:
ಯೋಜನೆ ಅರ್ಜಿ ಸಲ್ಲಿಸಲು ಅರ್ಹರು | ವಿದ್ಯಾರ್ಥಿಗಳು |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 31 ಡಿಸೆಂಬರ್ 2024 |
ಅರ್ಜಿ ಸಲ್ಲಿಸಲು ಲಿಂಕ್ | Apply Now |
ಕಾರ್ಮಿಕ ಮಂಡಳಿ ವೆಬ್ಸೈಟ್ | Click Here |
Labour department scholarship application method-ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ವಿದ್ಯಾರ್ಥಿಗಳು ಅಗತ್ಯ ದಾಖಲಾತಿಗಳನ್ನು ಜೋಡಿಸಿಕೊಂಡು ರಾಜ್ಯ ಸರಕಾರದಿಂದ ವಿದ್ಯಾರ್ಥಿವೇತನಕ್ಕಾಗಿಯೇ ಅಭಿವೃದ್ದಿಪಡಿಸಿರುವ SSP ಪೋರ್ಟಲ್ ಅನ್ನು ಭೇಟಿ ಮಾಡಿ ಈ ಈ ಕೆಳಗಿನ ವಿಧಾನವನ್ನು ಅನುಸರಿಸಿ ಕೊನೆಯ ದಿನಾಂಕ ಮುಕ್ತಾಯವಾಗುವುದರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
Step-1: ಪ್ರಥಮದಲ್ಲಿ Labour department scholarship ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ SSP ತಂತ್ರಾಂಶವನ್ನು ಪ್ರವೇಶ ಮಾಡಬೇಕು.
Step-2: ಮೊದಲ ಬಾರಿಗೆ SSP ತಂತ್ರಾಂಶವನ್ನು ಪ್ರವೇಶ ಮಾಡುವವರು ಮೊದಲು User ID ಮತ್ತು Password ಅನ್ನು ರಚನೆ ಮಾಡಿಕೊಂಡು “Login” ಬಟನ್ ಮೇಲೆ ಕ್ಲಿಕ್ ಮಾಡಬೇಕು.
Step-3: Login ಬಟನ್ ಮೇಲೆ ಕ್ಲಿಕ್ ಮಾಡಿ ಕಾರ್ಮಿಕ ಇಲಾಖೆ ಮಂಡಳಿಯನ್ನು ಆಯ್ಕೆ ಮಾಡಿ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಕೊನೆಯಲ್ಲಿ “Submit” ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.
ಅಥವಾ ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಕಂಪ್ಯೂಟರ್ ಸೆಂಟರ್/ಗ್ರಾಮ ಒನ್/ಬೆಂಗಳೂರು ಒನ್ ಕೇಂದ್ರವನ್ನು ನೇರವಾಗಿ ಭೇಟಿ ಮಾಡಿಯು ಸಹ ಅರ್ಜಿಯನ್ನು ಸಲ್ಲಿಸಬಹುದು.
ಇದನ್ನೂ ಓದಿ: PM-Vishwakarma 2024-ಪಿ ಎಂ ವಿಶ್ವಕರ್ಮ ಯೋಜನೆಯಡಿ ಹೋಲಿಗೆ ಯಂತ್ರ ಸಬ್ಸಿಡಿ ಹಾಗೂ ಇತರೆ ಸೌಲಭ್ಯಕ್ಕೆ ₹1,751 ಕೋಟಿ ಅನುದಾನ!
Documents for application-ಅರ್ಜಿ ಸಲ್ಲಿಸಲು ದಾಖಲೆಗಳು:
(1) ಅರ್ಜಿದಾರ ವಿದ್ಯಾರ್ಥಿಯ ಆಧಾರ್ ಕಾರ್ಡ
(2) ಕಾರ್ಮಿಕ ಕಾರ್ಡ ಪ್ರತಿ
(3) ಬ್ಯಾಂಕ್ ಪಾಸ್ ಬುಕ್ ಪ್ರತಿ
(4) ಶಾಲಾ ದಾಖಲಾತಿ ಪ್ರಮಾಣ ಪತ್ರ
(5) ಮೊಬೈಲ್ ನಂಬರ್
Who can apply for scholarship yojana-ಅರ್ಜಿ ಸಲ್ಲಿಸಲು ಅರ್ಹರು:
(1) ಕಾರ್ಮಿಕ ಕಾರ್ಡ ಹೊಂದಿರುವ ಪೋಷಕರ ಮಕ್ಕಳ ಈ ಧನ ಸಹಾಯವನ್ನು ಪಡೆಯಲು ಅರ್ಜಿ ಸಲ್ಲಿಸಬಹುದು.
(2) ಪ್ರಸ್ತುತ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು ಒಂದು ಕುಟುಂಬದಲ್ಲಿ ಎರಡು ಜನಕ್ಕೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
(3) ಈ ಹಿಂದೆ ಧನ ಸಹಾಯ ಪಡೆದವರು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.
ಇದನ್ನೂ ಓದಿ: Gruhalakshmi 15th Installment- ಗೃಹಲಕ್ಷ್ಮಿ ಯೋಜನೆಯಡಿ ಈ ಜಿಲ್ಲೆಯ ಮಹಿಳೆಯರಿಗೆ 15ನೇ ಕಂತಿನ ಹಣ ಬಿಡುಗಡೆ!
Karnataka Labour department-ಕಾರ್ಮಿಕರ ಮಂಡಳಿಯ ವಿಶೇಷ ಪ್ರಕಟಣೆಗಳು:
(1) ಎಲ್ಲಾ ನೋಂದಾಯಿತ ಕಟ್ಟಡ ಕಾರ್ಮಿಕರು ಇ-ಕಾರ್ಡ್ ಪಡೆಯಲು https://kbocwwb. karnataka.gov.in ತಂತ್ರಾಂಶದಲ್ಲಿ ನೊಂದಣಿ ಸಂಖ್ಯೆ (Registration Number) ಮತ್ತು ಉಲ್ಲೇಖ ಸಂಖ್ಯೆ (Reference Number) ನಮೂದಿಸಿ ಕಡ್ಡಾಯವಾಗಿ ದಿನಾಂಕ: 31-12-2024 ರೊಳಗೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಲಿಂಕ್ ಮಾಡಲು ಸೂಚಿಸಿದೆ.
(2) ಅಲ್ಲದೇ ಎಲ್ಲಾ ನೋಂದಾಯಿತ ಕಟ್ಟಡ ಕಾರ್ಮಿಕರು ತಮ್ಮ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಯೊಂದಿಗೆ ಜೋಡಣೆ ಮಾಡಿ ಎನ್.ಪಿ.ಸಿ.ಐ ಮ್ಯಾಪಿಂಗ್ (NPCI Mapping) ಮಾಡಿಸುವುದು ಕಡ್ಡಾಯವಾಗಿರುತ್ತದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.
(3) ಈ ಹಿಂದೆ ಪ್ರೀ ಮೆಟ್ರಿಕ್ (1 ರಿಂದ 10ನೇ ತರಗತಿ) ತರಗತಿಗಳಲ್ಲಿ ಶೈಕ್ಷಣಿಕ ಧನಸಹಾಯಕ್ಕಾಗಿ ಎಸ್.ಎಸ್.ಪಿ ತಂತ್ರಾಂಶದ ಮೂಲಕ ಕರ್ನಾಟಕ ಸರ್ಕಾರದ ಯಾವುದಾದರೂ ಇಲಾಖೆಗೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ವಿದ್ಯಾರ್ಥಿವೇತನ ಪಡೆದಿದ್ದಲ್ಲಿ ಅಂತಹ ವಿದ್ಯಾರ್ಥಿಗಳ ಅರ್ಜಿಗಳನ್ನು ಮುಂದಿನ ವರ್ಷ ಸ್ವಯಂ ಚಾಲಿತ ನವೀಕರಣದ (Auto renewal) ಮೂಲಕ ಎಸ್.ಎಸ್.ಪಿ ತಂತ್ರಾಂಶದಲ್ಲಿ ಸ್ವೀಕರಿಸುವುದರಿಂದ ಪುನಃ ಪ್ರೀ ಮೆಟ್ರಿಕ್ ಶೈಕ್ಷಣಿಕ ಧನಸಹಾಯಕ್ಕಾಗಿ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.