ರೈತರು ಸಾಲದ ಮೇಲಿನ ಬಡ್ಡಿ ಮನ್ನಾದ(Loan interest) ಪ್ರಯೋಜನ ಪಡೆಯಲು 31 ಮಾರ್ಚ ಒಳಗಾಗಿ ತಪ್ಪದೇ ಈ ಕೆಲಸ ಮಾಡಿ.
ರೈತರು ಸಹಕಾರ ಬ್ಯಾಂಕುಗಳಿಂದ ಪಡೆದಿರುವ ಸಾಲವು 2023ರ ಡಿಸೆಂಬರ್ 31ರವರೆಗೆ ಸುಸ್ತಿಯಾಗಿರುವ ಮಧ್ಯಮಾವಧಿ, ದೀರ್ಘಾವಧಿ ಕೃಷಿ ಮತ್ತು ಕೃಷಿ ಆಧಾರಿತ ಸಾಲಗಳ(Agriculture loan) ಸಾಲದ ಮೇಲಿನ ಬಡ್ಡಿ ಮನ್ನಾದ ಪ್ರಯೋಜನ ಪಡೆಯಲು 31 ಮಾರ್ಚ ಒಳಗಾಗಿ ತಪ್ಪದೇ ಈ ಕೆಲಸ ಮಾಡಿದರೆ ಮಾತ್ರ ನಿಮಗೆ ಈ ಸಾಲದ ಮೇಲಿನ ಬಡ್ಡಿ ಮನ್ನಾ ಅಗುತ್ತದೆ.
ರೈತರು ಬಡ್ಡಿ ಮನ್ನಾದ ಪ್ರಯೋಜನ ಪಡೆಯಲು ಯಾವ ಕ್ರಮ ಅನುಸರಿಸಬೇಕು? ಈ ಸೌಲಭ್ಯ ಪಡೆಯಲು ಕೊನೆಯ ದಿನಾಂಕ ಯಾವುದು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.
ಇದನ್ನೂ ಓದಿ: Free computer training- 45 ದಿನದ ಉಚಿತ ಕಂಪ್ಯೂಟರ್ ಡಿ.ಟಿ.ಪಿ ಕಲಿಕೆ ತರಬೇತಿಗೆ ಅರ್ಜಿ ಆಹ್ವಾನ!
Agriculture loan interest- ಬಾಕಿ ಇರುವ ಬಡ್ಡಿ ಮನ್ನಾ ಗೆ ಮಾರ್ಚ್ 31ವರೆಗೆ ಅವಕಾಶ:
ರೈತರು ರಾಜ್ಯದ ಸಹಕಾರ ಸಂಘಗಳು ಅಂದರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಲ್ಯಾಂಗ್ಸ್ ಸಹಕಾರ ಸಂಘಗಳು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕುಗಳು ಮತ್ತು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಿಂದ ಸಾಲ ಪಡೆದು ದಿನಾಂಕ: 31-12- 2023 ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಕಂತುಗಳ ಅಸಲನ್ನು ದಿನಾಂಕ: 31-03-2024 ರೊಳಗೆ ಸಂಬಂಧಪಟ್ಟ ಪತ್ತಿನ ಸಹಕಾರ ಸಂಘ/ಬ್ಯಾಂಕುಗಳಿಗೆ ಪೂರ್ತಿಯಾಗಿ ಮರುಪಾವತಿಸಿದಲ್ಲಿ,
ಈ ಮೊತ್ತಕ್ಕೆ ಬಾಕಿಯಿರುವ ಬಡ್ಡಿಯನ್ನು ಮನ್ನಾ ಮಾಡಲು ಮತ್ತು ಈ ರೀತಿ ಮನ್ನಾ ಮಾಡಿದ ಬಡ್ಡಿ ಮೊಬಲಗನ್ನು ಸಹಕಾರ ಸಂಘಗಳಿಗೆ ಸರ್ಕಾರವು ಭರ್ತಿ ಮಾಡಲು ಕೆಲವು ಷರತ್ತಿಗೊಳಪಟ್ಟು ಮಂಜೂರಾತಿ ನೀಡಿ ಸಹಕಾರ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ.
ಇದನ್ನೂ ಓದಿ: Lok sabha election-2024: ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದಿಯಾ? ಎಂದು ಪರಿಶೀಲಿಸಲು ವೆಬ್ಸೈಟ್ ಲಿಂಕ್ ಬಿಡುಗಡೆ.
Last date- ಈ ಮೊದಲು ನಿಗದಿಪಡಿಸಿದ ಕೊನೆಯ ದಿನಾಂಕ : 29-02-2024 ಮುಂದೂಡಿಕೆ:
ಸಹಕಾರ ಸಂಘಗಳು ಸಲ್ಲಿಸಿದ ಮಾಹಿತಿಯನ್ವಯ ದಿನಾಂಕ:29-02-2024 ರವರೆಗೆ 29,456 ರೈತರು ರೂ.281.88 ಕೋಟಿಗಳ ಸುಸ್ತಿ ಸಾಲವನ್ನು ಮರುಪಾವತಿಸಿದ್ದು ಇದರ ಮೇಲೆ ಸರ್ಕಾರದ ಬಡ್ಡಿ ರೂ.214.55 ಕೋಟಿಗಳಾಗಿರುತ್ತದೆ.
ಮುಂದುವರೆದು, ಬರಗಾಲ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರೈತರ ಅನುಕೂಲಕ್ಕಾಗಿ ಸುಸ್ತಿ ಸಾಲಗಳ ಬಡ್ಡಿ ಮನ್ನಾ ಯೋಜನೆಯಡಿ ಸುಸ್ತಿ ಸಾಲಗಳ ಮರುಪಾವತಿ ಅವಧಿಯನ್ನು ದಿನಾಂಕ: 31-03-2024 ರವರೆಗೆ ವಿಸ್ತರಿಸುವಂತೆ ನಿಬಂಧಕರು ಕೋರಿರುತ್ತಾರೆ. ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ, ಕಳಕಂಡಂತೆ ಆದೇಶಿಸಿದೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಸರ್ಕಾರದ ಆದೇಶ ಸಂಖ್ಯೆ:ಸಿಒ 291 ಸಿಎಲ್‌ಎಸ್ 2023, ದಿನಾಂಕ: 20-01-2024 ರ ಆದೇಶದಲ್ಲಿ ಬಡ್ಡಿಮನ್ನಾ ಮಾಡುವ ಯೋಜನೆಯಲ್ಲಿ ಬಡ್ಡಿ ಮನ್ನಾ ಸೌಲಭ್ಯವನ್ನು ಪಡೆಯಲು ರಾಜ್ಯದ ರೈತರು ಸಹಕಾರ ಸಂಘಗಳು ಅಂದರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಲ್ಯಾಂಪ್ಸ್ ಸಹಕಾರ ಸಂಘಗಳು,
ಇದನ್ನೂ ಓದಿ: Voter ID- ವೋಟರ್ ಐಡಿ ತಿದ್ದುಪಡಿಗೆ ಕೊನೆಯ ಅವಕಾಶ! ಇಲ್ಲಿದೆ ನೀವೇ ಅರ್ಜಿ ಸಲ್ಲಿಸುವ ವಿಧಾನ.
ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕುಗಳು ಮತ್ತು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಿಂದ ಸಾಲ ಪಡೆದು ದಿನಾಂಕ: 31-12-2023 ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಸಂಬಂಧಿತ ಸಾಲಗಳ ಕಂತುಗಳ ಅಸಲನ್ನು ಪಾವತಿಸಲು ನಿಗದಿಪಡಿಸಿದ ದಿನಾಂಕ:29-02-2024ನ್ನು ದಿನಾಂಕ: 31-03-2024 ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.
ಸಹಕಾರ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್: Click here
Karnataka State co-operative apex bank website- Click here
ಇದನ್ನೂ ಓದಿ: NVS Recruitment- ನವೋದಯ ವಿದ್ಯಾಲಯ ಸಮಿತಿಯಲ್ಲಿ ಬೋದಕೇತರ ಹುದ್ದೆಗಳ ಭರ್ಜರಿ ನೇಮಕಾತಿ! 1377 ಹುದ್ದೆಗಳಿಗೆ ಅರ್ಜಿ ಆಹ್ವಾನ.