Microfinance-ಮೈಕ್ರೋ ಫೈನಾನ್ಸ್ ಹಾವಳಿಗೆ ರಾಜ್ಯ ಸರಕಾರದಿಂದ ನೂತನ ನಿಯಮ ಜಾರಿ!

January 27, 2025 | Siddesh
Microfinance-ಮೈಕ್ರೋ ಫೈನಾನ್ಸ್ ಹಾವಳಿಗೆ ರಾಜ್ಯ ಸರಕಾರದಿಂದ ನೂತನ ನಿಯಮ ಜಾರಿ!
Share Now:

ರಾಜ್ಯಾದ್ಯಂತ ಬಹುತೇಕ ಹಲವು ಜಿಲ್ಲೆಗಳಲ್ಲಿ ಸಾರ್ವಜನಿಕರಿಗೆ ಮೈಕ್ರೋ ಫೈನಾನ್ಸ್(Microfinance) ಕಂಪನಿಗಳು ಸಾಲ ಮರು ವಸೂಲಾತಿಗೆ ತೀರ್ವ ಕಿರುಕುಳ ನೀಡುತ್ತಿರುವುದರಿಂದ ಈ ಕುರಿತು ರಾಜ್ಯ ಸರಕಾರವು ನೂತನ ನಿಯಮ ಜಾರಿಗೊಳಿಸಿದೆ.

ಮೈಕ್ರೋ ಫೈನಾನ್ಸ್ ಹಾವಳಿ ತಡೆಗಟ್ಟಲು ಸರಕಾರ ತೆಗೆದುಕೊಂಡ ಕ್ರಮಗಳೇನು? ಮೈಕ್ರೋ ಫೈನಾನ್ಸ್(Karnataka Microfinance News) ಪ್ರಕರಣಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿರುವ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ: Marriage Registration-ಮದುವೆ ನೋಂದಣಿ ಮಾಡಿಕೊಳ್ಳಲು ಈ ದಾಖಲೆ ಕಡ್ಡಾಯ!

Micro finance- ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ನಿರ್ಧಾರಗಳು:

1) ಸಾಲಗಾರರಿಂದ ಬಲವಂತವಾಗಿ ಕಿರುಕುಳ ನೀಡಿ ಸಾಲ ವಸೂಲಿ ಮಾಡುವ ಮೈಕ್ರೋ ಫೈನಾನ್ಸ್ ಸಿಬ್ಬಂದಿ ವಿರುದ್ದ ಕ್ರಿಮಿನಲ್ ಮೊಕದ್ದಮೆಯನ್ನು ಹಾಕಲಾಗುತ್ತದೆ ಎಂದು ತಿಳಿಸಲಾಗಿದೆ.

2) ಸಂಜೆ 5-00 ಗಂಟೆಯ ನಂತರ ಸಾಲ ವಸೂಲಿಗಾಗಿ ಸಾಲಗಾರರ ಮನೆಯ ಬಳಿ ಫೈನಾನ್ಸ್ ಸಿಬ್ಬಂದಿಗಳು ಹೋಗಬಾರದು ಎಂದು ತಿಳಿಸಲಾಗಿದೆ.

3) ಮೈಕ್ರೋ ಫೈನಾನ್ಸ್ ಕಂಪನಿಯವರು ಸಾಲ ವಸೂಲಿಗೆ ಬೌನ್ಸರ್ ಮತ್ತು ಗೂಂಡಾ ಹಾಗೂ ಹೊರಗುತ್ತಿಗೆ ಜನರನ್ನು ಬಳಕೆ ಮಾಡುವಂತಿಲ್ಲ ಎಂದು ಸೂಚಿಸಲಾಗಿದೆ.

4) ಪ್ರತಿ ಜಿಲ್ಲೆಯಲ್ಲಿಯು ಸಹ ಸಾಲಗಾರರ ನೆರವಿಗೆ ಬರಲು ಸಹಾಯವಾಣಿಯನ್ನು ಆರಂಭಿಸಲು ತಿರ್ಮಾನ ಕೈಗೊಳ್ಳಲಾಗಿದೆ.

5) ಮೈಕ್ರೋ ಫೈನಾನ್ಸ್ ಕಂಪನಿಯು ದುಬಾರಿ ಬಡ್ಡಿ, ಲೈಸೆನ್ಸ್ ಇಲ್ಲದ್ದಿದ್ದರೆ RBI ನಿಯಮ ಮೀರಿದರೆ ಸರಕಾರಕ್ಕೆ ದಂಡ ಪಾವತಿ ಮಾಡಲು ಕ್ರಮ.

ಇದನ್ನೂ ಓದಿ: Ration Correction-ಆಹಾರ ಇಲಾಖೆಯಿಂದ ರ‍ೇಷನ್ ಕಾರ್ಡ ತಿದ್ದುಪಡಿ ಕುರಿತು ನೂತನ ಪ್ರಕಟಣೆ!

Microfinance

Microfinance Latest News-ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿ: ಮುಖ್ಯಮಂತ್ರಿ ಸಿದ್ದರಾಮಯ್ಯ!

ಮೈಕ್ರೋ ಫೈನಾನ್ಸ್‌ ಗಳ ಹಾವಳಿ ಕುರಿತು ರಾಜ್ಯ ಸರಕಾರದಿಂದ ಕಟ್ಟುನಿಟ್ಟಿನ ನಿಯಮ ಜಾರಿಗೆ ಮುಂದಾಗಿದ್ದು ಮೈಕ್ರೋ ಫೈನಾನ್ಸ್‌ಗಳ ನಿಯಮ ಬಾಹಿರ ಸಾಲ ವಸೂಲಿಗೆ ಅಂಕುಶ ಬೀಳಲಿದೆ.

ಸಾರ್ವಜನಿಕರ ಹಿತಕ್ಕಾಗಿ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ಜಾರಿ ಮಾಡಲು ನಿರ್ಧರಿಸಲಾಗಿದ್ದು, ಬಲವಂತದ ಸಾಲ ವಸೂಲಿ ಮಾಡುವ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೊಲೀಸರಿಗೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲು ಹೊಸ ಕಾನೂನಿನಲ್ಲಿ ಅವಕಾಶ ಕಲ್ಪಿಸಿಕೊಡಲಾಗುವುದು ಪ್ರತಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿ ಆರಂಭಿಸಲು ತೀರ್ಮಾನ ಮಾಡಲಾಗಿದ್ದು, ಸಾಲ ಪಡೆದು ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ನೊಂದವರ ಪರ ನಮ್ಮ ಸರ್ಕಾರ ನಿಂತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Gruhalakshmi Amount-ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ! ನಿಮಗೆ ಬಂತಾ ಚೆಕ್ ಮಾಡಿ!

Microfinance Meeting Highlights-ಮೈಕ್ರೋ ಫೈನಾನ್ಸ್ ಕಾರ್ಯವೈಖರಿ ಕುರಿತು ಸರಕಾರ ನಡೆಸಿದೆ ಸಭೆಯ ನಿರ್ಣಯಗಳು ಹೀಗಿವೆ:

  • ಮೈಕ್ರೋ ಫೈನಾನ್ಸ್ ಗಳಿಂದ ಸಾಲ ಪಡೆಯುವವರ ಹಿತವನ್ನು ಕಾಪಾಡಲು ಸರ್ಕಾರ ಬದ್ಧವಾಗಿದೆ. ಸಾಲಗಾರರಿಗೆ ಕಿರುಕುಳ ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾಲಗಾರರ ಹಿತವನ್ನು ಕಾಪಾಡುವ ದೃಷ್ಟಿಯಿಂದ ಆದಷ್ಟು ಬೇಗನೆ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ರಚನೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
  • ಬಲವಂತದ ಸಾಲ ವಸೂಲಾತಿ ಮಾಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ, ಈ ಕುರಿತು ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲು ಸಾಧ್ಯವಾಗುವಂತೆ ಕಾನೂನಿನಲ್ಲಿ ಅವಕಾಶ ನೀಡಲಾಗುವುದು.
  • ಈಗಿರುವ ಕಾನೂನು ಇನ್ನಷ್ಟು ಬಲಪಡಿಸಲು ಕ್ರಮವಹಿಸುತ್ತೇವೆ. ಇದರಲ್ಲಿ ಪೊಲೀಸರಿಗೆ ಹೆಚ್ಚಿನ ಅಧಿಕಾರ ನೀಡಲು ಕ್ರಮ ನೋಂದಣಿಯಾಗದ ಲೇವಾದೇವಿಗಾರಕಾರ ಮೇಲೆ ನಿಯಂತ್ರಣಕ್ಕೆ ಹೊಸ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗುವುದು.

ಇದನ್ನೂ ಓದಿ: Mobile Canteen Subsidy-ಮೊಬೈಲ್ ಕ್ಯಾಂಟಿನ್ ಗೆ ₹5 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

  • BANNING OF UNREGULATED LENDING ACTIVITIES ಕುರಿತು ಕೇಂದ್ರ ಸರ್ಕಾರ ಕರಡು ಸಿದ್ಧಪಡಿಸಿದೆ. ಈ ಕುರಿತು ಸಮಗ್ರ ಸಮಾಲೋಚನೆ ನಡೆಸಿ, ಸಾಲದ ಸುಳಿಯಲ್ಲಿ ಸಿಲುಕಿರುವವರ ಹಿತ ಕಾಪಾಡಲು ಕ್ರಮ ವಹಿಸಲಾಗುವುದು. ಕಿರುಕುಳ ತಪ್ಪಿಸಲು ಸೂಕ್ತ ಕಾನೂನು ರಚಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.
  • ಸಾಲ ವಸೂಲಾತಿ ಕುರಿತಾಗಿ ಆರ್‌ಬಿಐ ಹಲವು ಮಾರ್ಗಸೂಚಿ ಹೊರಡಿಸಿದೆ. ಸಂಜೆ 5 ಗಂಟೆ ಬಳಿಕ ಮನೆಗೆ ಸಾಲ ವಸೂಲಾತಿಗೆ ಹೋಗಬಾರದು. ಬೆದರಿಕೆ ಹಾಕಬಾರದು. ವಸೂಲಾತಿಗೆ ಮೂರನೇ ವ್ಯಕ್ತಿಗಳನ್ನು ಬಳಸಿಕೊಳ್ಳಬಾರದು, ಇತ್ಯಾದಿ. ಇದನ್ನು ಉಲ್ಲಂಘಿಸುವವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುತ್ತದೆ.
  • ಒಂದು ಕುಟುಂಬಕ್ಕೆ ಎಷ್ಟು ಸಾಲ ನೀಡಬಹುದು ಎಂಬ ಬಗ್ಗೆ ಅರ್‌ಬಿಐ ಮಿತಿಯಿದೆ. ಇದನ್ನು ಪಾಲಿಸಲಾಗುತ್ತಿದೆಯೇ? ಎಂಬುದನ್ನು ಪರೀಕ್ಷಿಸಿ, ಅನುಷ್ಠಾನಗೊಳಿಸುವ ಕಾರ್ಯ ಮಾಡಲಾಗುವುದು ಎಂದರು.

ಇದನ್ನೂ ಓದಿ: Bele Vime Amount-2 ಲಕ್ಷ ರೈತರ ಖಾತೆಗೆ ₹76 ಕೋಟಿ ಬೆಳೆ ವಿಮೆ ಪರಿಹಾರ ಜಮಾ!

  • ಬೆದರಿಸಿ ಬಲವಂತದ ಸಾಲ ವಸೂಲಾತಿ ಒಪ್ಪಲು ಸಾಧ್ಯವಿಲ್ಲ. ಬಡ ಸಾಲಗಾರರ ಹಿತವನ್ನು ಕಾಪಾಡಲು ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.
  • ಯಾರಾದರೂ ಮೈಕ್ರೋ ಫೈನಾನ್ಸ್ ವ್ಯಕ್ತಿಗಳಿಂದ ಕಿರುಕುಳ ಎದುರಿಸುತ್ತಿದ್ದರೆ ಸ್ಥಳೀಯವಾಗಿ ಪೊಲೀಸರಿಗೆ ದೂರು ನೀಡಬೇಕು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸಭೆ ನಡೆಸಿ ಈ ಕುರಿತ ಜನರಿಗೆ ಸೂಕ್ತ ತಿಳುವಳಿಕೆ ನೀಡಬೇಕು ಹಾಗೂ ಮೈಕ್ರೋ ಫೈನಾನ್ಸ್ ವ್ಯಕ್ತಿಗಳಿಗೆ ಎಚ್ಚರಿಕೆ ನೀಡಬೇಕು.
  • ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳು ನೀಡುತ್ತಿರುವ ಕಿರುಕುಳದ ಬಗ್ಗೆ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಪ್ರತಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿ ಆರಂಭಿಸಲು ಸೂಚನೆ ನೀಡಿದ್ದೇನೆ. ಇಲ್ಲಿ ದೂರು ನೀಡಬಹುದು; ಪೊಲೀಸರು ಸ್ವಯಂಪ್ರೇರಿತರಾಗಿ ದೂರು ದಾಖಲಿಸಲು ಸೂಚನೆ ನೀಡಲಾಗಿದೆ.

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: