ಕರ್ನಾಟಕ ಹಾಲು ಒಕ್ಕೂಟದಿಂದ ರೈತರಿಗೆ ಸಿಹಿ ಸುದ್ದಿ ನೀಡಿದ್ದು, ಡೈರಿಗಳಿಗೆ ಪೂರೈಕೆ ಮಾಡುವ ಹಾಲಿಗೆ ದರವನ್ನು(KMF Milk) ಹೆಚ್ಚಳ ಮಾಡಿ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ.
ಸಾಮಾನ್ಯವಾಗಿ ಮಳೆಗಾಲಕ್ಕೆ ಹೋಲಿಕೆ ಮಾಡಿದರೆ ಬೇಸಿಗೆ ಸಮಯದಲ್ಲಿ ಹಾಲಿನ ಇಳುವರಿಯು ಕಡಿಮೆಯಿರುತ್ತದೆ ಇದನ್ನು ಗಮನದಲ್ಲಿಟ್ಟುಕೊಂಡು ರೈತರಿಗೆ ಅರ್ಥಿಕವಾಗಿ ನೆರವು ನೀಡಲು ಕರ್ನಾಟಕ ಹಾಲು ಒಕ್ಕೂಟದಿಂದ ಸಭೆಯನ್ನು ನಡೆಸಿ ಪ್ರತಿ ಲೀಟರ್ ಹಾಲಿಗೆ(KMF Milk Price Hike) ಇಂತಿಷ್ಟು ದರವನ್ನು ಹೆಚ್ಚಳ ಮಾಡಲು ಮುಂದಾಗಿದೆ.
ಪ್ರಸ್ತುತ ಹಾಲಿನ ದರ ಎಷ್ಟು? ಏರಿಕೆ ಮಾಡಿರುವ ದರ(KMF Milk Price Hike News) ವಿವರ ಸೇರಿದಂತೆ ರಾಜ್ಯ ಸರಕಾರದಿಂದ ಪ್ರತಿ ಲೀಟರ್ ಗೆ ನೀಡುವ ರೂ 5 ಸಹಾಯಧನವನ್ನು ರೈತರಿಗೆ ಜಮಾ ಅಗಿರುವುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳುವುದು ಹೇಗೆ ಎನ್ನುವ ಮಾಹಿತಿಯನ್ನು ಸಹ ಈ ಅಂಕಣದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: Ayushman card-ಆಯುಷ್ಮಾನ್ ಭಾರತ್ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?
KMF Milk Price Hike-ಪ್ರತಿ ಲೀಟರ್ ಹಾಲಿಗೆ ₹2 ರೂ ಹೆಚ್ಚಳ:
ಕರ್ನಾಟಕ ಹಾಲು ಒಕ್ಕೂಟದ ಬಹುತೇಕ ಎಲ್ಲಾ ಒಕ್ಕೂಟ ವ್ಯಾಪ್ತಿಯಲ್ಲಿಯು ಹಾಲಿನ ದರವನ್ನು ಏರಿಕೆ ಮಾಡಲು ನಿರ್ಣಯ ಕೈಕೊಂಡಿದ್ದು, ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಹಾಲು ಒಕ್ಕೂಟದ 453ನೇ ಆಡಳಿತ ಮಂಡಳಿ ಸಭೆಯಲ್ಲಿ ರೈತರಿಂದ ಡೈರಿಗಳ ಮೂಲಕ ಖರೀದಿ ಮಾಡುವ ಪ್ರತಿ ಲೀಟರ್ ಹಾಲಿಗೆ ₹2 ರೂ(milk price hike) ಹೆಚ್ಚಳ ಮಾಡಲು ನಿರ್ಣಯ ಕೈಗೊಳ್ಳಲಾಗಿದೆ.
ಆರ್ಥಿಕ ಪರಿಸ್ಥಿತಿಯನ್ನು ಅವಲೋಕಿಸಿ ಹಾಲು ಖರೀದಿ ದರವನ್ನು ಕಾಲಕಾಲಕ್ಕೆ ಪರಿಷ್ಕರಿಸುತ್ತಿದ್ದು, ಬೇಸಿಗೆ ಹಂಗಾಮಿನಲ್ಲಿ ರೈತರಿಗೆ ತಮ್ಮ ಹೈನುರಾಸುಗಳ ನಿರ್ವಹಣಾ ವೆಚ್ಚವು ಹೆಚ್ಚಿರುವುದರಿಂದ ಉತ್ಪಾದನಾ ವೆಚ್ಚ ಹೆಚ್ಚಳವಾಗಿ ಲಾಭಾಂಶ ಕಡಿಮೆ ಆಗುವುದರಿಂದ ಹಾಲು ಉತ್ಪಾದಕರನ್ನು ಪ್ರೋತ್ಸಾಹಿಸಿ, ಉತ್ತೇಜಿಸುವ ಸಲುವಾಗಿ ದರ ಪರಿಷ್ಕರಿಸಲಾಗಿದೆ ಎಂದು ಸಭೆಯಲ್ಲಿ ತಿಳಿಸಲಾಗಿತ್ತು.
ಒಕ್ಕೂಟದ ಆರ್ಥಿಕ ಪರಿಸ್ಥಿತಿಯನ್ನು ಪರಿಗಣಿಸಿ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ರೈತರಿಂದ ಖರೀದಿಸುವ ಹಾಲು ಖರೀದಿ ದರವನ್ನು ಪ್ರತಿ ಲೀಟರ್ ಗೆ ರೂ. 2.00 ಹೆಚ್ಚಿಸಿ ಪರಿಷ್ಕರಿಸಲು ಒಕ್ಕೂಟದ ಅಧ್ಯಕ್ಷ ಹೆಚ್.ಎನ್. ವಿದ್ಯಾಧರ ಅದ್ಯಕ್ಷತೆಯಲ್ಲಿ ಜ.31 ರಂದು ನಡೆದ ಒಕ್ಕೂಟದ 453ನೇ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನಿಸಿದೆ.
ಇದನ್ನೂ ಓದಿ: Budget 2025-ಕೇಂದ್ರ ಬಜೆಟ್ ರೈತರಿಗೆ ಭರ್ಜರಿ ಸಿಹಿ ಸುದ್ದಿ! ಕೃಷಿ ಸಾಲದ ಮಿತಿ ಹೆಚ್ಚಳ!
ಕೊಬ್ಬಿನಂಶ(milk fat)ದ ಆಧಾರದ ಮೇಲೆ ಹಾಲಿನ ದರ ವಿವರ ಹೀಗಿದೆ:
ಒಕ್ಕೂಟದಿಂದ ಸಂಘಗಳಿಗೆ ಪ್ರಸ್ತುತ ಎಫ್‌ಎಟಿ 4.0%, ಎಸ್‌ಎನ್‌ಎಫ್ 8.50% ಇರುವ ಪ್ರತಿ ಕೆ.ಜಿ. ಹಾಲಿಗೆ 32.09 ರೂ. ಪರಿಷ್ಕೃತ ದರ 34.18 ರೂ. ಸಂಘದಿಂದ ಉತ್ಪಾದಕರಿಗೆ ಪ್ರಸ್ತುತ ಎಫ್‌ಎಟಿ 4.0%, ಎಸ್‌ಎನ್‌ಎಫ್ 8.50% ಇರುವ ಪ್ರತಿ ಲೀ. ಹಾಲಿಗೆ 30.13 ರೂ. ಪರಿಷ್ಕೃತ ದರ 32.22 ರೂ. ಪರಿಷ್ಕೃತ ದರವು ದಿನಾಂಕ: 01-02-2025 ರಿಂದ ದಿನಾಂಕ: 31-03-2025 ರವರೆಗೆ ಜಾರಿಯಲ್ಲಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: RTI Act-ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಉಪಯುಕ್ತ ಮಾಹಿತಿ!
Milk Incentive Status Check-ಹಾಲಿನ ಪ್ರೋತ್ಸಾಹ ಧನದ ಜಮಾ ವಿವರವನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನ:
ರೈತರು ಪೂರೈಕೆ ಮಾಡುವ ಹಾಲಿಗೆ ರಾಜ್ಯ ಸರಕಾರದಿಂದ ಹೆಚ್ಚಿವರಿಯಾಗಿ ರೂ 5/- ಪ್ರೋತ್ಸಾಹ ಧನವನ್ನು ಒದಗಿಸಲಾಗುತ್ತದೆ ಈ ಹಣ ಜಮಾ ಅಗಿರುವ ಪ್ರತಿ ತಿಂಗಳ ವಿವರವನ್ನು ಡಿಬಿಟಿ ಕರ್ನಾಟಕ ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಡು ಈ ಕೆಳಗೆ ತಿಳಿಸಿರುವ ಹಂತಗಳನ್ನು ಅನುಸರಿಸಿ ಚೆಕ್ ಮಾಡಿಕೊಳ್ಳಬಹುದು.
Step-1: ಪ್ರಥಮದಲ್ಲಿ ಈ Milk Incentive status ಲಿಂಕ್ ಮೇಲೆ ಕ್ಲಿಕ್ ಮಾಡಿ ಗೂಗಲ್ ಪ್ಲೇ ಪ್ರವೇಶ ಮಾಡಿ ಅಧಿಕೃತ ಡಿಬಿಟಿ ಕರ್ನಾಟಕ ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.
ಇದನ್ನೂ ಓದಿ: National Horticulture Fair 2025-ರಾಜ್ಯದಲ್ಲಿ 3 ದಿನ ರಾಷ್ಟ್ರೀಯ ತೋಟಗಾರಿಕಾ ಮೇಳ! ಇಲ್ಲಿದೆ ಮೇಳದ ಸಂಪೂರ್ಣ ವಿವರ!
Step-2: ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಂಡ ಬಳಿಕ ಇಲ್ಲಿ ನಿಮ್ಮ ಆಧಾರ್ ಕಾರ್ಡ ಸಂಖ್ಯೆ ಅನ್ನು ಹಾಕಿ ನಿಮ್ಮ ಮೊಬೈಲ್ ನಂಬರ್ ಗೆ ಬರುವ ಒಟಿಪಿ ಅನ್ನು ನಮೂದಿಸಿ ಈ ಅಪ್ಲಿಕೇಶನ್ ಅನ್ನು ತೆರೆಯಲು ನಾಲ್ಕು ಅಂಕಿಯ ಲಾಗಿನ್ ಪಾಸ್ವರ್ಡ್ ಅನ್ನು ರಚನೆ ಮಾಡಿಕೊಳ್ಳಬೇಕು.
Step-3: ರಚನೆ ಮಾಡಿಕೊಂಡಿರುವ ಪಾಸ್ವರ್ಡ್ ಅನ್ನು ಹಾಕಿ “Login” ಅಗಬೇಕು ನಂತರ ಇಲ್ಲಿ ಮುಖಪುಟದಲ್ಲಿ ಕಾಣುವ “ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ” ಆಯ್ಕೆ ಬಟನ್ ಮೇಲೆ ಕ್ಲಿಕ್ ಮಾಡಿ ಯಾವ ಯಾವ ತಿಂಗಳು ಎಷ್ಟು? ಹಣ ಜಮಾ ಅಗಿದೆ ಎನ್ನುವ ವಿವರವನ್ನು ಪಡೆಯಬಹುದು.
ಇಲ್ಲಿ ಯಾವ ಬ್ಯಾಂಕ್ ಖಾತೆಗೆ ಹಣ ಜಮಾ ಅಗಿದೆ? ಎಷ್ಟು ಹಣ ಜಮಾ ಅಗಿದೆ? ಹಣ ಜಮಾ ಅದ ದಿನಾಂಕ, ಯುಟಿಅರ್ ಸಂಖ್ಯೆ ಎಲ್ಲಾ ಮಾಹಿತಿಯನ್ನು ನೋಡಬಹುದು.