morarji desai application-ಉಚಿತ ವಸತಿ ಶಾಲೆ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ!

morarji desai application-2023: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ವ್ಯಾಪ್ತಿಯಲ್ಲಿರುವ ವಸತಿ ಶಾಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿನ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ವ್ಯಾಪ್ತಿಯಲ್ಲಿರುವ ವಸತಿ ಶಾಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿನ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

2024-25ನೇ ಶೈಕ್ಷಣಿಕ ಸಾಲಿನ 6 ನೇ ತರಗತಿ ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಅರ್ಜಿ ಆಹ್ವಾನಿಸಿದ್ದು ಕೊನೆಯ ದಿನಾಂಕದ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬವುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು? ಅರ್ಜಿ ಸಲ್ಲಿಕೆ ವಿಧಾನ ಹೇಗೆ? ಎಲ್ಲಿ ಅರ್ಜಿ ಸಲ್ಲಿಸಬೇಕು? ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ: Nigamada Yojane-ಸ್ವಯಂ ಉದ್ಯೋಗ ನೇರಸಾಲ, ಸ್ವಾವಲಂಬಿ ಸಾರಥಿ ಯೋಜನೆ ಸೇರಿ ಇತರೆ ಎಲ್ಲಾ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ!

morarji desai application-ಯಾವೆಲ್ಲ ವಸತಿ ಶಾಲೆಗೆ ಅರ್ಜಿ ಆಹ್ವಾನಿಸಲಾಗಿದೆ?

  • ಮೊರಾರ್ಜಿ ದೇಸಾಯಿ ವಸತಿ ಶಾಲೆ
  • ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ
  • ಏಕಲವ್ಯ ಮಾದರಿ ವಸತಿ ಶಾಲೆ
  • ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ
  • ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ
  • ಡಾ| ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ
  • ಮಾಸ್ತಿ ವೆಂಕಟೇಶ ಅಯ್ಯಂಗಾರ್ ವಸತಿ ಶಾಲೆ
  • ಸಂಗೊಳ್ಳಿ ರಾಯಣ್ಣ ವಸತಿ ಶಾಲೆ
  • ಕವಿರನ್ನ ವಸತಿ ಶಾಲೆ
  • ಗಾಂಧಿತತ್ವ ವಸತಿ ಶಾಲೆ
  • ಶ್ರೀ ನಾರಾಯಣ ಗುರು ಮುಂತಾದ ವಸತಿ ಶಾಲೆಗಳಿಗೆ

morarji desai application date-ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 07-12-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-12-2023
ಪ್ರವೇಶ ಪರೀಕ್ಷೆ ನಡೆಯುವ ದಿನಾಂಕ: 18-02-2024

ಇದನ್ನೂ ಓದಿ: Crop information- ಈ ತಂತ್ರಾಶದಲ್ಲಿ ತಾವು ಬೆಳೆದ ಬೆಳೆ ವಿವರ ಇದ್ದಲ್ಲಿ ಮಾತ್ರ ಬೆಳೆ ವಿಮೆ ಪರಿಹಾರ!

morarji desai school-ಎಲ್ಲಿ ಅರ್ಜಿ ಸಲ್ಲಿಸಬೇಕು?

ಉಚಿತ ವಸತಿ ಶಾಲೆಗೆ ಪ್ರವೇಶ ಪಡೆಯಲು 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳ ಪೋಷಕರು ತಮ್ಮ ಮಕ್ಕಳನ್ನು 6ನೇ ತರಗತಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಲ್ಲಿನ ವಸತಿ ಶಾಲೆಗಳಿಗೆ ಪ್ರವೇಶ ಪಡೆಯಲು, ದಿನಾಂಕ: 07-12-2023 ರ ಬೆಳಿಗ್ಗೆ 11.00 ರಿಂದ 31-12-2023 ರವರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಅಥವಾ ಕಾಲೇಜುಗಳ ಮೂಲಕ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಬವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಯಾರೆಲ್ಲ ಅರ್ಜಿ ಸಲ್ಲಿಸಬವುದು?

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಕ್ಕೆ ಸೇರಿದ ಪ್ರವರ್ಗ-1, 2ಎ, 2ಬಿ, 3ಎ, 3ಬಿ ವರ್ಗದ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬವುದು.

morarji application form-ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳು:

ಅಭ್ಯರ್ಥಿಯು ಈಗಾಗಲೇ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಶಾಲೆಯಿಂದ SATS ಸಂಖ್ಯೆ, ಇತ್ತೀಚಿನ ಭಾವಚಿತ್ರ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ಮೂಲ ದಾಖಲಾತಿಗಳನ್ನು ಅಥವಾ ಜೆರಾಕ್ಸ್ ಪ್ರತಿಗಳನ್ನು ತೆಗೆದುಕೊಂಡು ಅರ್ಜಿ ಸಲ್ಲಿಸುವ ಸಮಯದಲ್ಲಿ ಸಂಬಂಧಿಸಿದ ವಸತಿ ಶಾಲೆ / ಕಾಲೇಜಿನ ಮುಖ್ಯಸ್ಥರನ್ನು ಸಂಪರ್ಕಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Food Department-ಹೊಸ ರೇಷನ್ ಕಾರ್ಡ ಅರ್ಜಿ ಸಲ್ಲಿಕೆ ಕುರಿತು ಆಹಾರ ಇಲಾಖೆಯಿಂದ ಮತ್ತೊಂದು ಪತ್ರಿಕಾ ಪ್ರಕಟಣೆ!

ಇದನ್ನೂ ಓದಿ: Post matric scholarship-ರಾಜ್ಯ ಸರಕಾರದಿಂದ ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ! ಮೊಬೈಲ್ ನಲ್ಲೇ ಅರ್ಜಿ ಸಲ್ಲಿಸಬವುದು.

ಆಯ್ಕೆ ವಿಧಾನ ಹೇಗಿರುತ್ತದೆ?

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ ಕಿತ್ತೂರು ರಾಣಿ ಚೆನ್ನಮ್ಮ / ಏಕಲವ್ಯ ಮಾದರಿ / ಅಟಲ್ ಬಿಹಾರಿ ವಾಜಪೇಯಿ / ಶ್ರೀಮತಿ ಇಂದಿರಾ ಗಾಂಧಿ / ಡಾ| ಬಿ.ಆರ್. ಅಂಬೇಡ್ಕರ್ / ಮಾಸ್ತಿ ವೆಂಕಟೇಶ ಅಯ್ಯಂಗಾರ್ / ಸಂಗೊಳ್ಳಿ ರಾಯಣ್ಣ / ಕವಿರನ್ನ / ಗಾಂಧಿತತ್ವ / ಶ್ರೀ ನಾರಾಯಣ ಗುರು ಮುಂತಾದ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ಅಗತ್ಯವಾದ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತದೆ ನಂತರ ಹೆಚ್ಚು ಅಂಕ ಪಡೆದ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ದಪಡಿಸಿ ಬಳಿಕ ಆನ್‌ಲೈನ್ ಕೌನ್ಸಿಲಿಂಗ್‌ ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಡೆಸಿ ವಸತಿ ಶಾಲೆಯಲ್ಲಿ 6 ನೇ ತರಗತಿ ವ್ಯಾಸಂಗಕ್ಕೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

morarji desai exam date 2023-ಪ್ರವೇಶ ಪರೀಕ್ಷೆ ಮಾಹಿತಿ:

ಪ್ರವೇಶ ಪರೀಕ್ಷೆಯು 18 ಫೆಬ್ರವರಿ 2024 ರಂದು ಬೆಳಿಗ್ಗೆ 11-00 ರಿಂದ ಮಧ್ಯಾಹ್ನ 1-00 ರವರೆಗೆ 100 ಅಂಕಗಳಿಗೆ ಪರೀಕ್ಷೆ ನಡೆಯಲಿದೆ.

ಹೆಚ್ಚಿನ ಮಾಹಿತಿ ಪಡೆಯಲು:

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್: https://cetonline.karnataka.gov.in/kea/

ವಸತಿ ಶಾಲೆ ಪ್ರವೇಶದ ಹಿಂದಿನ ವರ್ಷದ ಮಾಹಿತಿ ಕೈಪಿಡಿ ಡೌನ್ಲೋಡ್ ಮಾಡಲು ಲಿಂಕ್: Download Now

ಸಹಾಯವಾಣಿ ಸಂಖ್ಯೆ: 080-23 460 460(Time: 9-30 to 6-00)