MRI Scan-ಸರಕಾರದಿಂದ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ! ಈ ಕಾರ್ಡ ಇದ್ದರೆ ಎಂಆರ್​ಐ ಸ್ಕ್ಯಾನ್ ಉಚಿತ!

January 17, 2025 | Siddesh
MRI Scan-ಸರಕಾರದಿಂದ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ! ಈ ಕಾರ್ಡ ಇದ್ದರೆ ಎಂಆರ್​ಐ ಸ್ಕ್ಯಾನ್ ಉಚಿತ!
Share Now:

ರಾಜ್ಯ ಸರಕಾರದಿಂದ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಆರೋಗ್ಯ ಇಲಾಖೆ ಮತ್ತು ಇತರೆ ಇಲಾಖೆಗಳ ಯೋಜನೆಗಳ ಕುರಿತು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದ್ದು, ಬಿಪಿಎಲ್ ಕಾರ್ಡ ಹೊಂದಿರುವ ಸಾರ್ವಜನಿಕರಿಗೆ ಇನ್ನು ಮುಂದೆ ಎಂಆರ್​ಐ ಸ್ಕ್ಯಾನ್(MRI Scan) ಉಚಿತವಾಗಿ ಮಾಡಿಸಿಕೊಳ್ಳಲು ಅವಕಾಶ ನೀಡಲಾಗಿದೆ.

ಬಿಪಿಎಲ್ ಪಡಿತರ ಚೀಟಿಯನ್ನು(BPL Card) ಹೊಂದಿರುವ ಕುಟುಂಬಗಳು ಎಲ್ಲಾ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನ್ ಮತ್ತು ಎಂಆರ್​ಐ ಸ್ಕ್ಯಾನಿಂಗ್​ ಅನ್ನು ಸಂಪೂರ್ಣ ಉಚಿತವಾಗಿ ಯಾವುದೇ ಶುಲ್ಕ ಪಾವತಿ ಮಾಡದೇ ಈ ಸೇವೆಯನ್ನು ಪಡೆಯಬಹುದು.

ರಾಜ್ಯ ಸರಕಾರದಿಂದ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ(Karnataka Cabinet) ಈ ಕುರಿತು ಅಧಿಕೃತ ತಿರ್ಮಾಣವನ್ನು ತೆಗೆದುಕೊಳ್ಳಲಾಗಿದೆ. ಇದಲ್ಲದೇ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡಿರು ಪ್ರಮುಖ ನಿರ್ಣಾಯಗಳ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ.

ಇದನ್ನೂ ಓದಿ: Gas Safety-ಮನೆಯಲ್ಲಿ ಬಳಕೆ ಮಾಡುವ ಗ್ಯಾಸ್ ಸಿಲಿಂಡರ್ ಕುರಿತು ಈ ಮಾಹಿತಿ ತಪ್ಪದೇ ತಿಳಿಯಿರಿ!

1) 13.3 ಕೋಟಿ ವೆಚ್ಚದಲ್ಲಿ ಆಶಾಕಿರಣ ಯೋಜನೆ ವಿಸ್ತರಣೆ(Karnataka cabinet meeting):

ದೃಷ್ಟಿ ದೋಷ ಉಳ್ಳವರಿಗೆ ಉಚಿತವಾಗಿ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸೆ ಮತ್ತು ಕನ್ನಡಕ ವಿತರಣೆ ಯೋಜನೆ ಇದಾಗಿದೆ.

ಅಂಧತ್ವ ಮುಕ್ತ ಕರ್ನಾಟಕ ನಿರ್ಮಾಣದತ್ತ ಮಹತ್ವದ ಹೆಜ್ಜೆ ಇಟ್ಟಿರುವ ರಾಜ್ಯ ಸರ್ಕಾರವು ಮಹಾತ್ವಾಕಾಂಕ್ಷಿ ಆಶಾಕಿರಣ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ನಿರ್ಧರಿಸಿದೆ.

ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ದಾರವನ್ನು ತೆಗೆದುಕೊಂಡಿದೆ. ಇದಕ್ಕಾಗಿ ₹13.30 ಕೋಟಿ ಮೊತ್ತವನ್ನು ಮೀಸಲಿರಿಸಲು ತೀರ್ಮಾನಿಸಿದೆ. ಈ ಮೂಲಕ ದೃಷ್ಟಿ ದೋಷ ಉಳ್ಳವರಿಗೆ ಉಚಿತವಾಗಿ ಕಣ್ಣಿನ ತಪಾಸಣೆ, ಶಸ್ತ್ರಚಿಕಿತ್ಸೆ ಮತ್ತು ಕನ್ನಡಕಗಳನ್ನು ವಿತರಿಸಲಾಗುತ್ತದೆ.

ಇದನ್ನೂ ಓದಿ: Kisan ID Card-ಪಿಎಂ ಕಿಸಾನ್ ಹಣ ಪಡೆಯಲು ನೂತನ ಐಡಿ ಕಾರ್ಡ! ಇಲ್ಲಿದೆ ಸಂಪೂರ್ಣ ವಿವರ!

MRI Scan

2) ₹285 ಕೋಟಿ ವೆಚ್ಚದಲ್ಲಿ ಮಂಡ್ಯ ಜಿಲ್ಲೆಯ ವಿಶ್ವೇಶ್ವರಯ್ಯ ಫಾರ್ಮ್‌ನಲ್ಲಿ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ ಸ್ಥಾಪನೆಗೆ ತೀರ್ಮಾನ

3) ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅವರಣದಲ್ಲಿ 450 ಹಾಸಿಗೆ ಸಾಮರ್ಥ್ಯದ ಎರಡನೇ ಹಂತದ ಕಟ್ಟಡ ನಿರ್ಮಾಣ ಕಾಮಗಾರಿಗೆ ಹಾಗೂ ವೈದ್ಯಕೀಯ ಉಪಕರಣ ಮತ್ತು ಪೀಠೋಪಕರಣಗಳ ಖರೀದಿಗಾಗಿ ₹7830 ಕೋಟಿ ಅಂದಾಜು ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ

4) ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಧುನಿಕ ಮತ್ತು ವೈಜ್ಞಾನಿಕ ರೀತಿಯಲ್ಲಿ ಶವಸಂಸ್ಕಾರ ಮಾಡಲು ಅನುಕೂಲವಾಗುವಂತೆ 10 ಮಹಾನಗರ ಪಾಲಿಕೆ ಮತ್ತು 24 ನಗರಸಭೆಗಳಲ್ಲಿ ತಲಾ 1 ರಂತೆ 34 ಅಧುನಿಕ ವಿದ್ಯುತ್/ ಅನಿಲ ಚಿತಾಗಾರ ನಿರ್ಮಿಸಲು ನಿರ್ಧಾರ

5) ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಅನೆಕ್ಸ್ ಕಟ್ಟಡಕ್ಕೆ ಅವಶ್ಯವಿರುವ ವೈದ್ಯಕೀಯ ಉಪಕರಣಗಳು ಮತ್ತು ಪೀಠೋಪಕರಣಗಳನ್ನು ₹21.08 ಕೋಟಿ ವೆಚ್ಚದಲ್ಲಿ ಖರೀದಿಸಲು ನಿರ್ಧಾರ.

ಇದನ್ನೂ ಓದಿ: Uchitha Holige Yantra-ಗ್ರಾಮೀಣ ಕೈಗಾರಿಕೆ ಇಲಾಖೆಯಿಂದ ಉಚಿತ ಹೊಲಿಗೆ ಯಂತ್ರ!

6) ಕೇಂದ್ರ ಸರ್ಕಾರದ 15ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ರಾಷ್ಟ್ರೀಯ ವಿಪತ್ತು ಉಪಶಮನ ನಿಧಿ ಅಡಿಯಲ್ಲಿ238 ಕೋಟಿ ಅಂದಾಜು ಮೊತ್ತದಲ್ಲಿ ನಗರ ಪ್ರವಾಹ ಅಪಾಯ ನಿರ್ವಹಣೆ ಕಾರ್ಯಕ್ರಮ ಅನುಷ್ಠಾನಗೊಳಿಸಲು ನಿರ್ಧಾರ

7) ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಅನುಮೋದನೆಯಾಗಿ ಸ್ಥಗಿತಗೊಂಡಿದ್ದ 61,894 ಮನೆಗಳ ನಿರ್ಮಾಣ ಕಾರ್ಯವನ್ನು 12,643 ಕೋಟಿ ವೆಚ್ಚದಲ್ಲಿ ಪುನರಾರಂಭಿಸಲು ನಿರ್ಧಾರ

8) ರಾಜ್ಯದ ವಿವಿಧ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ 7 ಶೀತಲ ಗೃಹಗಳ ನಿರ್ಮಾಣ ಹಾಗೂ ರಾಯಚೂರು ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ನೂತನ ಒಣಮೆಣಸಿನಕಾಯಿ ಮಾರುಕಟ್ಟೆ ನಿರ್ಮಿಸುವ 1118 ಕೋಟಿ ವೆಚ್ಚದ ಕಾಮಗಾರಿಗೆ ಅನುಮೋದನೆ.

ಇದನ್ನೂ ಓದಿ: Solar Subsidy-ಮನೆ ಮೇಲೆ ಸೋಲಾರ್ ಅಳವಡಿಕೆಗೆ ₹78,000 ರೂ ಸಬ್ಸಿಡಿ ಪಡೆಯಲು ಅರ್ಜಿ!

9) 1246 ಕೋಟಿ ವೆಚ್ಚದಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ಹಿಂದುಳಿದ ವರ್ನಗಳ ಕಲ್ಯಾಣ ಇಲಾಖೆಯ 10 ವಸತಿ ಶಾಲೆಗಳಿಗೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ತೀರ್ಮಾನ

10) 2413 ಕೋಟಿ ವೆಚ್ಚದಲ್ಲಿ ಬ್ರಾಂಡ್‌ ಬೆಂಗಳೂರು ಯೋಜನೆ ಅಡಿಯಲ್ಲಿ ಬೆಂಗಳೂರು ಮಹಾನಗರ ಪಾಲಿಕೆಯ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು ಅನುಮೋದನೆ

11) ₹33.07 ಕೋಟಿ ಅಂದಾಜು ಮೊತ್ತದಲ್ಲಿ ಧಾರವಾಡ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯ ಆಸ್ಪತ್ರೆಯಲ್ಲಿ 100 ಹಾಸಿಗೆ ಸಾಮರ್ಥ್ಯದ ನ್ಯೂರೋಲಜಿ ಮತ್ತು ನ್ಯೂರೋ ಸರ್ಜರಿ ವಿಭಾಗದ ಕಟ್ಟಡ ಕಾಮಗಾರಿಗೆ ಅನುಮೋದನೆ

12) ಸಂಜಯ್ ಗಾಂಧಿ ಟ್ರಾಮಾ ಮತ್ತು ಅಸ್ಥಿಚಿಕಿತ್ಸಾ ಸಂಸ್ಥೆಯ ಆವರಣದಲ್ಲಿ ಕ್ರೀಡಾ ಮತ್ತು ರೋಬೋಟಿಕ್ ಶಸ್ತ್ರಚಿಕಿತ್ಸಾ ವಿಭಾಗದ ನೂತನ ಕಟ್ಟಡಕ್ಕೆ ಅವಶ್ಯಕವಿರುವ ವೈದ್ಯಕೀಯ ಉಪಕರಣಗಳು, ಪೀಠೋಪಕರಣಗಳನ್ನು ₹14 ಕೋಟಿ ವೆಚ್ಚದಲ್ಲಿ ಖರೀದಿಸಲು ತೀರ್ಮಾನ

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: