Murarji school admission- ಮೊರಾರ್ಜಿ ದೇಸಾಯಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ!

January 13, 2025 | Siddesh
Murarji school admission- ಮೊರಾರ್ಜಿ ದೇಸಾಯಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ!
Share Now:

ಮೊರಾರ್ಜಿ ದೇಸಾಯಿ ಶಾಲೆಯನ್ನು ಸೇರಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿರುವ ಎಲ್ಲಾ ವಸತಿ ಶಾಲೆಗಳಲ್ಲಿ 2025ನೇ ಶೈಕ್ಷಣಿಕ ಸಾಲಿನ 6ನೇ ತರಗತಿ ಪ್ರವೇಶಾತಿಗೆ(murarji school Application) ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

2025-26ನೇ ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ 6ನೇ ತರಗತಿ ಪ್ರವೇಶಕ್ಕೆ ಅಗತ್ಯವಾದ ಪ್ರವೇಶ ಪರೀಕ್ಷೆ ಮತ್ತು ಆನ್‌ಲೈನ್ ಕೌನ್ಸಿಲಿಂಗ್ ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಡೆಸಲಾಗುವುದು ಎಂದು ಅಧಿಕೃತ ಪ್ರಕಟಣೆಯಲ್ಲಿ ಉಲ್ಲೇಕಿಸಲಾಗಿದ್ದು, 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳ ಪೋಷಕರು ತಮ್ಮ ಮಕ್ಕಳನ್ನು 6ನೇ ತರಗತಿಗೆ ವಸತಿ ಶಾಲೆಗಳಿಗೆ ದಾಖಲಿಸಲು ಕೊನೆಯ ದಿನಾಂಕ ಮುಕ್ತಾಯ ಅಗುವುದರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೂಚನೆ ನೀಡಲಾಗಿದೆ.

ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಯಾವ ಕ್ರಮ ಅನುಸರಿಸಬೇಕು? ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲಾತಿಗಳೇನು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ: SSLC ಮತ್ತು PUC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ!

Who Can Apply Murarji school admission-ಅರ್ಜಿಯನ್ನು ಸಲ್ಲಿಸಲು ಅರ್ಹ ವಿದ್ಯಾರ್ಥಿಗಳು:

1) ಅರ್ಜಿದಾರ ವಿದ್ಯಾರ್ಥಿಯು ರಾಜ್ಯ ಸರಕಾರದಿಂದ ಮಾನ್ಯತೆ ಪಡೆದ ಶಾಲೆಯಲ್ಲಿ 5ನೇ ತರಗತಿಯನ್ನು ವ್ಯಾಸಂಗ ಮಾಡುತ್ತಿರಬೇಕು.

2) ವಿದ್ಯಾರ್ಥಿಯು ರಾಜ್ಯದ ಖಾಯಂ ನಿವಾಸಿಯಾಗಿರಬೇಕು.

3) ಅರ್ಜಿದಾರ ವಿದ್ಯಾರ್ಥಿಯ ವಯಸ್ಸು 09 ರಿಂದ 13 ರ ಒಳಗಿರಬೇಕು.

4) ಅರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದವರಾಗಿರಬೇಕು.

ಇದನ್ನೂ ಓದಿ: Borewell- ಇನ್ನು ಮುಂದೆ ಬೋರ್ ವೆಲ್ ಕೊರೆಸಲು ಈ ನಿಯಮ ಪಾಲನೆ ಕಡ್ಡಾಯ!

ಅರ್ಜಿಯನ್ನು ಸಲ್ಲಿಸಲು ಕುಟುಂಬದ ವಾರ್ಷಿಕ ಆದಾಯದ ಮಿತಿ:

1) ಪರಿಶಿಷ್ಟ ಜಾತಿ/ಪ.ಪ ವರ್ಗ ದವರು:- ₹2,50,000/- ರೂ
2) ಹಿಂದುಳಿದ ವರ್ಗ ಪ್ರವರ್ಗ-1:- ₹2,50,000/- ರೂ
3) 2A, 2B, 3A, 3B ವರ್ಗ:- ₹1,00,000/- ರೂ

ಅಧಿಕೃತ ಪ್ರಕಟಣೆ ಪ್ರತಿ:

ಇದನ್ನೂ ಓದಿ: Gruha Jyothi Yojana- ಮನೆಗೆ ಉಚಿತ ವಿದ್ಯುತ್ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ!

Murarji school

ಇದನ್ನೂ ಓದಿ: Bele Parihara Amount-₹48.45 ಕೋಟಿ ಬೆಳೆ ಹಾನಿ ಪರಿಹಾರ ರೈತರ ಖಾತೆಗೆ! ನಿಮಗೆ ಬಂತಾ ಚೆಕ್ ಮಾಡಿ!

Documents for Murarji School Admission-ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು:

A) ವಿದ್ಯಾರ್ಥಿಯ SATS ID
B) ಆಧಾರ್ ಕಾರ್ಡ ಪ್ರತಿ
C) ಜಾತಿ ಮತ್ತ್ಯ್ ಆದಾಯ ಪ್ರಮಾಣ ಪತ್ರ
D) ಮೊಬೈಲ್ ನಂಬರ್
E) ಅಂಕಪಟ್ಟಿ

Last Date for Murarji School Admission-ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ:

ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ಒದಗಿಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ: 25 ಜನವರಿ 2025

ಇದನ್ನೂ ಓದಿ: Asha workers-ಸರಕಾರದಿಂದ ಆಶಾ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ! ಮಾಸಿಕ ವೇತನ ಹೆಚ್ಚಳಕ್ಕೆ ಒಪ್ಪಿಗೆ!

ಪ್ರವೇಶ ಪರೀಕ್ಷೆ ದಿನಾಂಕ: 15 ಫೆಬ್ರವರಿ 2025

How to Apply-ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ವಿದ್ಯಾರ್ಥಿಗಳು ಕೊನೆಯ ದಿನಾಂಕ ಮುಗಿಯುವುದರ ಒಳಗಾಗಿ ಎರಡು ವಿಧಾನವನ್ನು ಅನುಸರಿಸಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿದ್ದು ಒಂದು ಅಗತ್ಯ ದಾಖಲೆಗಳನ್ನು ಸಿದ್ದಪಡಿಸಿಕೊಂಡು ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರವನ್ನು ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದು ಅಥವಾ ಕರ್ನಾಟಕ ಪರೀಕ್ಷೆ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ ಅನ್ನು ಪ್ರವೇಶ ಮಾಡಿ ಸ್ವಂತ ಅರ್ಜಿದಾರರೇ ನೇರವಾಗಿ ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.

Online Application link-ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಲಿಂಕ್- Apply Now
ಹೆಚ್ಚಿನ ಮಾಹಿತಿಯನ್ನು ಪಡೆಯಲು ಸಹಾಯವಾಣಿ-080-23460 460

WhatsApp Group Join Now
Telegram Group Join Now
Siddesh

Siddesh is the founder of KrushikaMitra.com, a trusted Kannada platform dedicated to agriculture, government schemes, student scholarships, and rural development. With a passion for empowering farmers and rural communities, he has published over 2000+ informative articles since 2019, helping thousands of readers stay updated and informed.

Visit Website
Share Now: